ಹಾಸನದ ಮಂಜುನಾಥ ಆಸ್ಪತ್ರೆಯಲ್ಲಿ ಅಗ್ನಿ ಅವಘಡ: ರೋಗಿಗಳು ಬಚಾವ್​

ವಿದ್ಯುತ್ ಶಾರ್ಟ್​ ಸರ್ಕ್ಯೂಟ್​ನಿಂದ ಖಾಸಗಿ ಆಸ್ಪತ್ರೆಯ ಎಕ್ಸ್‌ರೇ ರೂಂನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾಗಿರುವಂತಹ ಘಟನೆ ನಗರದ ಶಂಕರಮಠ ರಸ್ತೆಯಲ್ಲಿರುವ ಮಂಜುನಾಥ ಆಸ್ಪತ್ರೆಯಲ್ಲಿ ನಡೆದಿದೆ. ಕೂಡಲೇ ರೋಗಿಗಳನ್ನ ಕುಟುಂಬಸ್ಥರು ಹೊರ ಕರೆತಂದಿದ್ದಾರೆ. ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ.

ಹಾಸನದ ಮಂಜುನಾಥ ಆಸ್ಪತ್ರೆಯಲ್ಲಿ ಅಗ್ನಿ ಅವಘಡ: ರೋಗಿಗಳು ಬಚಾವ್​
ಆಸ್ಪತ್ರೆಯಲ್ಲಿ ಬೆಂಕಿ
Follow us
ಮಂಜುನಾಥ ಕೆಬಿ
| Updated By: ಗಂಗಾಧರ​ ಬ. ಸಾಬೋಜಿ

Updated on:Jan 21, 2024 | 1:43 PM

ಹಾಸನ, ಜನವರಿ 21: ವಿದ್ಯುತ್ ಶಾರ್ಟ್​ ಸರ್ಕ್ಯೂಟ್ (Fire accident) ​ನಿಂದ ಖಾಸಗಿ ಆಸ್ಪತ್ರೆಯ ಎಕ್ಸ್‌ರೇ ರೂಂನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾಗಿರುವಂತಹ ಘಟನೆ ನಗರದ ಶಂಕರಮಠ ರಸ್ತೆಯಲ್ಲಿರುವ ಮಂಜುನಾಥ ಆಸ್ಪತ್ರೆಯಲ್ಲಿ ನಡೆದಿದೆ. ಕೂಡಲೇ ರೋಗಿಗಳನ್ನ ಕುಟುಂಬಸ್ಥರು ಹೊರ ಕರೆತಂದಿದ್ದಾರೆ. ಬೆಂಕಿ ಕಾಣಿಸಿಕೊಂಡಿದ್ದರಿಂದ ರೋಗಿಗಳು ಗಾಬರಿಗೊಂಡಿದ್ದಾರೆ. ಕೂಡಲೇ ಕಿಟಕಿ ಗ್ಲಾಸ್‌ಗಳನ್ನ ಆಸ್ಪತ್ರೆ ಸಿಬ್ಬಂದಿ ಒಡೆದಿದ್ದಾರೆ. ಸ್ಥಳಕ್ಕೆ ಅಗ್ನಿಶಾಮಕ ದಳ ಆಗಮಿಸಿ ಬೆಂಕಿ ನಂದಿಸಿದ್ದಾರೆ.

ವೈದ್ಯರ ನಿರ್ಲಕ್ಷ್ಯಕ್ಕೆ ಮಹಿಳೆ ಸಾವು ಆರೋಪ: ಪ್ರತಿಭಟನೆ

ಜಿಲ್ಲೆಯ ಸಕಲೇಶಪುರ ತಾಲ್ಲೂಕಿನ ಬಾಳ್ಳುಪೇಟೆ ಗ್ರಾಮದ ಜೆ.ಪಿ.ನಗರದಲ್ಲಿ ವೈದ್ಯರ ನಿರ್ಲಕ್ಷ್ಯಕ್ಕೆ ಮಹಿಳೆ ಸಾವನ್ನಪ್ಪಿರುವುದಾಗಿ ಕುಟುಂಬಸ್ಥರಿಂದ ವೈದ್ಯರ ವಿರುದ್ಧ ಆರೋಪ ಮಾಡಲಾಗಿದೆ. ನೇತ್ರಾವತಿ (31) ಗರ್ಭ ಕೋಶ ಶಸ್ತ್ರ ಚಿಕಿತ್ಸೆ ವೇಳೆ ವೇಳೆ ಮಹಿಳೆ ನೇತ್ರಾವತಿ ಮೃತಪಟ್ಟಿದ್ದಾರೆ. ಸಕಲೇಶಪುರ ತಾಲ್ಲೂಕು ಆಸ್ಪತ್ರೆಯಲ್ಲಿ ನೇತ್ರಾವತಿ ನೋಂದಣಿ ಮಾಡಿಸಿಕೊಂಡಿದ್ದರು.

ಇದನ್ನೂ ಓದಿ: ಬೆಂಗಳೂರು: ಮಾರಕಾಸ್ತ್ರ ಹಿಡಿದು ರೀಲ್ಸ್ ಮಾಡಿದವ ಅರೆಸ್ಟ್, ಅವನ ಮೇಲಿತ್ತು 7 ಪ್ರಕರಣಗಳು

ಶಸ್ತ್ರ ಚಿಕಿತ್ಸೆ ನಡೆಸಿದ ವೈದ್ಯರ ತಂಡ ದಿಢೀರ್ ಜಿಲ್ಲಾಸ್ಪತ್ರೆಗೆ ನೇತ್ರಾವತಿಯನ್ನು ಶಿಫ್ಟ್ ಮಾಡಿದ್ದಾರೆ. ಹಿಮ್ಸ್ ಆಸ್ಪತ್ರೆಯಲ್ಲಿ ನೇತ್ರಾವತಿ ಮೃತಪಟ್ಟಿದ್ದಾರೆ. ಕೂಡಲೇ ಮರಣೋತ್ತರ ಪರೀಕ್ಷೆ ನಡೆಸಿ ಮೃತದೇಹವನ್ನು ಕುಟುಂಬಸ್ಥರಿಗೆ ಹಸ್ತಾಂತರಿಸಲಾಗಿದೆ. ಆರು ತಿಂಗಳ ಹಸುಗೂಸು ಹಾಗೂ ಮೂರು ವರ್ಷದ ಮಗು ಸದ್ಯ ಅನಾಥವಾಗಿದೆ.

ವೈದ್ಯರ ವಿರುದ್ಧ ಕ್ರಮ ಕೈಗೊಳ್ಳುವಂತೆ ಆಗ್ರಹಿಸಲಾಗಿದ್ದು, ಮೃತ ಕುಟುಂಬಕ್ಕೆ ಸೂಕ್ತ ಪರಿಹಾರ ನೀಡುವಂತೆ ಒತ್ತಾಯಿಸಲಾಗಿದೆ. ಮನೆಯ ಬಳಿಯೇ ಶವವಿಟ್ಟು ಕುಟುಂಬಸ್ಥರಿಂದ ಪ್ರತಿಭಟನೆ ಮಾಡಲಾಗಿದೆ.

ಕುಡಿದ ಮತ್ತಿನಲ್ಲಿ ಕುತ್ತಿಗೆ ಕುಯ್ದುಕೊಂಡು ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿ

ನೆಲಮಂಗಲ: ಕುಡಿದ ಮತ್ತಿನಲ್ಲಿ ಕುತ್ತಿಗೆ ಕುಯ್ದುಕೊಂಡು ವ್ಯಕ್ತಿ ಆತ್ಮಹತ್ಯೆಗೆ ಯತ್ನಿಸಿರುವಂತಹ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲೂಕಿನ ಕೆಂಪನಿಂಗನಹಳ್ಳಿಯಲ್ಲಿ ನಡೆದಿದೆ. ಬಸವರಾಜ್(40)ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿ. ನೆಲಮಂಗಲ ಸಾರ್ವಜನಿಕ ಆಸ್ಪತ್ರೆಯಲ್ಲಿ ಬಸವರಾಜ್​ಗೆ ಪ್ರಥಮ ಚಿಕಿತ್ಸೆ ನೀಡಲಾಗಿದೆ.

ಇದನ್ನೂ ಓದಿ: ಗಾಂಜಾ ಮತ್ತಿನಲ್ಲಿ ಮೂವರು ಯುವಕರ ಪುಂಡಾಟ: ಪ್ರಶ್ನೆ ಮಾಡಿದ ಗ್ರಾಮಸ್ಥನ ಕೈ ಕಚ್ಚಿ ಗಾಯ

ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿನ ವಿಕ್ಟೋರಿಯಾ ಅಸ್ಪತ್ರೆಗೆ ರವಾನೆ ಮಾಡಲಾಗಿದೆ. ಪೊಲೀಸರಿಂದ ಸ್ಥಳ ಪರಿಶೀಲನೆ ಮಾಡಿದ್ದು, ಪತ್ನಿ ಶಾಂತಮ್ಮ, ಮಗ ಕುಶಾಲ್ ಮನೆಯಲ್ಲಿ ಇಲ್ಲದಿರುವ ವೇಳೆ ಅವಘಡ ನಡೆದಿದೆ. ಗಾಯಳು ಬಸವರಾಜ್ ಪೇಯಿಂಟ್ ಕೆಲಸ ಮಾಡುತ್ತಿದ್ದ. ನೆಲಮಂಗಲ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.

ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 1:20 pm, Sun, 21 January 24

ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ಪ್ರದೇಶ ಬಿಜೆಪಿ ಅಧ್ಯಕ್ಷರ ಆಯ್ಕೆಗೆ ಪ್ರಕ್ರಿಯೆ ಶುರುವಾಗಲಿದೆ: ಚೌಹಾನ್
ಪ್ರದೇಶ ಬಿಜೆಪಿ ಅಧ್ಯಕ್ಷರ ಆಯ್ಕೆಗೆ ಪ್ರಕ್ರಿಯೆ ಶುರುವಾಗಲಿದೆ: ಚೌಹಾನ್
ಕೇಂದ್ರದಲ್ಲಿ ಮಂತ್ರಿಯಾಗುವ ಮೊದಲು ಚೌಹಾನ್ ಮಧ್ಯ ಪ್ರದೇಶ ಸಿಎಂ ಅಗಿದ್ದರು
ಕೇಂದ್ರದಲ್ಲಿ ಮಂತ್ರಿಯಾಗುವ ಮೊದಲು ಚೌಹಾನ್ ಮಧ್ಯ ಪ್ರದೇಶ ಸಿಎಂ ಅಗಿದ್ದರು
ಜನಪ್ರತಿನಿಧಿಗಳಿಗೆ ಚುನಾವಣೆಯಲ್ಲಿಲ್ಲದ ಭದ್ರತೆ ಗೆದ್ದಮೇಲೆ ಯಾಕೆ ಬೇಕು?
ಜನಪ್ರತಿನಿಧಿಗಳಿಗೆ ಚುನಾವಣೆಯಲ್ಲಿಲ್ಲದ ಭದ್ರತೆ ಗೆದ್ದಮೇಲೆ ಯಾಕೆ ಬೇಕು?
ತಾರೆಯರ ಕಲರವ; ಹೇಗಿದೆ ನೋಡಿ ತಾರಾ-ಸುಧಾರಾಣಿ ಡ್ಯಾನ್ಸ್
ತಾರೆಯರ ಕಲರವ; ಹೇಗಿದೆ ನೋಡಿ ತಾರಾ-ಸುಧಾರಾಣಿ ಡ್ಯಾನ್ಸ್
‘ನಾನು ಕರ್ನಾಟಕದ ಹುಡುಗಿ’; ಪ್ರೀತಿಯಿಂದ ಕನ್ನಡದಲ್ಲೇ ಮಾತನಾಡಿದ ಶಿಲ್ಪಾ
‘ನಾನು ಕರ್ನಾಟಕದ ಹುಡುಗಿ’; ಪ್ರೀತಿಯಿಂದ ಕನ್ನಡದಲ್ಲೇ ಮಾತನಾಡಿದ ಶಿಲ್ಪಾ
ಅಜ್ಜನ ಜಾತ್ರೆ ಸಂಪನ್ನ: ಭಕ್ತರಲ್ಲಿ ಮೂರು ವಚನ ಕೇಳಿದ ಕೊಪ್ಪಳದ ಗವಿಶ್ರೀ
ಅಜ್ಜನ ಜಾತ್ರೆ ಸಂಪನ್ನ: ಭಕ್ತರಲ್ಲಿ ಮೂರು ವಚನ ಕೇಳಿದ ಕೊಪ್ಪಳದ ಗವಿಶ್ರೀ
ಚಿಟ್ಟಾಣಿ ಆಸೆ ಈಡೇರಿಸಲು ಯಕ್ಷಗಾನದಲ್ಲಿ ಅಭಿನಯಿಸಿದ ನಟಿ ಉಮಾಶ್ರೀ
ಚಿಟ್ಟಾಣಿ ಆಸೆ ಈಡೇರಿಸಲು ಯಕ್ಷಗಾನದಲ್ಲಿ ಅಭಿನಯಿಸಿದ ನಟಿ ಉಮಾಶ್ರೀ
Daily Devotional: ಮಾಘ ಸ್ನಾನದ ಹಿಂದಿನ ರಹಸ್ಯ ಹಾಗೂ ಮಹತ್ವ ತಿಳಿಯಿರಿ
Daily Devotional: ಮಾಘ ಸ್ನಾನದ ಹಿಂದಿನ ರಹಸ್ಯ ಹಾಗೂ ಮಹತ್ವ ತಿಳಿಯಿರಿ