ಕಾಡ್ಗಿಚ್ಚು ನಂದಿಸಲು ಹೋಗಿದ್ದ ನಾಲ್ವರು ಅರಣ್ಯ ಸಿಬ್ಬಂದಿಗೆ ತಗುಲಿದ ಬೆಂಕಿ, 5 ಕಿ.ಮೀ ದೂರದಿಂದ ಹೊತ್ತುತಂದ ಗ್ರಾಮಸ್ಥರು, ಇಬ್ಬರ ಸ್ಥಿತಿ ಗಂಭೀರ

ಕಾಡ್ಗಿಚ್ಚು ನಂದಿಸಲು ಹೋಗಿದ್ದ ನಾಲ್ವರು ಅರಣ್ಯ ಸಿಬ್ಬಂದಿ ಪೈಕಿ ಇಬ್ಬರ ಸ್ಥಿತಿ ಚಿಂತಾಜನಕವಾಗಿರುವಂತಹ ಘಟನೆ ಜಿಲ್ಲೆಯ ಸಕಲೇಶಪುರ ತಾಲೂಕಿನ ಕಾಡುಮನೆ ಎಸ್ಟೇಟ್‌ ಬಳಿ ನಡೆದಿದೆ.

ಕಾಡ್ಗಿಚ್ಚು ನಂದಿಸಲು ಹೋಗಿದ್ದ ನಾಲ್ವರು ಅರಣ್ಯ ಸಿಬ್ಬಂದಿಗೆ ತಗುಲಿದ ಬೆಂಕಿ, 5 ಕಿ.ಮೀ ದೂರದಿಂದ  ಹೊತ್ತುತಂದ ಗ್ರಾಮಸ್ಥರು, ಇಬ್ಬರ ಸ್ಥಿತಿ ಗಂಭೀರ
ಗಾಯಾಳು ಅರಣ್ಯ ಸಿಬ್ಬಂದಿಯನ್ನು ಆಸ್ಪತ್ರಗೆ ಕರೆದುಕೊಂಡು ಬಂದ ಗ್ರಾಮಸ್ಥರು
Follow us
| Updated By: ಗಂಗಾಧರ​ ಬ. ಸಾಬೋಜಿ

Updated on:Feb 16, 2023 | 7:54 PM

ಹಾಸನ: ಕಾಡ್ಗಿಚ್ಚು (Fire Accident) ನಂದಿಸಲು ಹೋಗಿದ್ದ ನಾಲ್ವರು ಅರಣ್ಯ ಸಿಬ್ಬಂದಿ ಪೈಕಿ ಇಬ್ಬರ ಸ್ಥಿತಿ ಚಿಂತಾಜನಕವಾಗಿರುವಂತಹ ಘಟನೆ ಜಿಲ್ಲೆಯ ಸಕಲೇಶಪುರ ತಾಲೂಕಿನ ಕಾಡುಮನೆ ಎಸ್ಟೇಟ್‌ ಬಳಿ ನಡೆದಿದೆ. ಆರ್‌ಆರ್‌ಟಿ ಸಿಬ್ಬಂದಿಯಾದ ತುಂಗೇಶ್‌ ಹಾಗೂ ಮಹೇಶ್‌ಗೆ ಗಾಯಗಳಾಗಿದ್ದು, ಡಿಆರ್‌ಎಫ್‌ಒ ಮಂಜುನಾಥ್‌, ಫಾರೆಸ್ಟರ್‌ ಸುಂದರೇಶ್‌ ಗಂಭೀರ ಗಾಯಗಳಾಗಿದ್ದು ಸ್ಥಿತಿ ಚಿಂತಾಜನಕವಾಗಿದೆ. ಗಾಯಾಳುಗಳನ್ನು ಅರಣ್ಯದಿಂದ 5 ಕಿ.ಮೀ ದೂರ ಗ್ರಾಮಸ್ಥರು ಹೊತ್ತುತಂದಿದ್ದಾರೆ. ಸದ್ಯ ಗಾಯಾಳುಗಳಿಗೆ ಸಕಲೇಶಪುರ ಪಟ್ಟಣದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಕಾಡುಮನೆ ಗ್ರಾಮದ ಮಣಿಬೀಡು ದೇವಸ್ಥಾನದ ಸಮೀಪ ಪಶ್ಚಿಮಘಟ್ಟದ ಕಾಡಿನಲ್ಲಿ ಆಕಸ್ಮಿಕವಾಗಿ ಬೆಂಕಿ ಹೊತ್ತಿಕೊಂಡಿದೆ. ಕಾಡ್ಗಿಚ್ಚನ್ನು ನಂದಿಸಲು ನಾಲ್ವರು ಅರಣ್ಯ ಇಲಾಖೆ ಸಿಬ್ಬಂದಿಗಳು ಹೋಗಿದ್ದು, ಈ ವೇಳೆ ಬೆಂಕಿಯಲ್ಲಿ ಸಿಲುಕಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಸಕಲೇಶಪುರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: ಲೇಔಟ್​ ಪರವಾನಗಿ ನೀಡಲು ಲಂಚಕ್ಕೆ ಕೈಯೊಡ್ಡಿದ ಅಧಿಕಾರಿಗಳು ಲೋಕಾಯುಕ್ತ ಬಲೆಗೆ

ಬೆಂಗಳೂರು: ಅರಮನೆ ಮೈದಾನದ 4, 5ನೇ ಗೇಟ್‌ ಮುಂಭಾಗದಲ್ಲಿ ಅಗ್ನಿ ಅವಘಡ

ಬೆಂಗಳೂರು: ನಗರದ ಅರಮನೆ ಮೈದಾನದ 4 ಮತ್ತು 5ನೇ ಗೇಟ್‌ನ ಮುಂಭಾಗದಲ್ಲಿ ಅಗ್ನಿ ಅವಘಡ ಸಂಭವಿಸಿದೆ. ಮೂರು ಕಾರುಗಳಿಗೆ ಬೆಂಕಿ ತಗುಲಿದ್ದು, 2 ಕಾರು ಸಂಪೂರ್ಣ ಬೆಂಕಿಗಾಹುತಿಯಾಗಿದ್ದು, 1 ಕಾರು ಭಾಗಶಃ ಭಸ್ಮವಾಗಿದೆ. ಸ್ಥಳಕ್ಕೆ ಅಗ್ನಿಶಾಮಕ ದಳದ ಸಿಬ್ಬಂದಿ ಆಗಮಿಸಿ ಬೆಂಕಿ ನಂದಿಸಿದ್ದಾರೆ. ಬೆಂಕಿ ಅವಘಡಕ್ಕೆ ನಿಖರವಾದ ಕಾರಣ ತಿಳಿದು ಬಂದಿಲ್ಲ. ಸದಾಶಿವನಗರ ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಇದನ್ನೂ ಓದಿ: How To: ಮೊಬೈಲ್ ಕಳೆದುಹೋಗಿದೆಯೇ? ತಪ್ಪದೇ ಈ ಕೆಲಸ ಮಾಡಿ; ವಿಡಿಯೋ ಶೇರ್ ಮಾಡಿದ ಡಿಜಿಪಿ

ಮನೆಯ ಭಾಗಶಃ ಗೋಡೆ ಹಾಗೂ ಗೋಡೌನ್ ಬೆಂಕಿಗೆ ಆಹುತಿ

ಮನೆಯ ಭಾಗಶಃ ಗೋಡೆ ಹಾಗೂ ಗೋಡೌನ್ ಬೆಂಕಿಗೆ ಆಹುತಿಯಾಗಿರುವ ಘಟನೆ ಚಾಮರಾಜಪೇಟೆ ವಿಠ್ಠಲನಗರದ ಜಿಂಕೆ ಪಾರ್ಕ್ ಬಳಿ ನಡೆದಿದೆ. ಮೊದಲು ಪ್ಲವರ್ ಡೆಕೊರೇಟ್ ಗೋಡೌನ್​ಗೆ ಬೆಂಕಿ ತಗುಲಿದೆ. ನಂತರ ಬೆಂಕಿ ವ್ಯಾಪಿಸಿ ಮೊದಲ ಮಹಡಿಯ ಪ್ಯಾಸೆಜ್​ನಲ್ಲಿದ್ದ ಗ್ಯಾಸ್​ ಸಿಲಿಂಡರ್​​ಗೆ ತಗುಲಿದೆ. ಪರಿಣಾಮ ಸಿಲಿಂಡರ್​ ಸ್ಪೋಟಗೊಂಡಿದ್ದು, ಮನೆಯ ಭಾಗಶಃ ಗೋಡೆ ಸುಟ್ಟು ಕರಕಲಾಗಿದೆ. ಅಧೃಷ್ಟವಶಾವತ್​ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಎರಡು ಅಗ್ನಿ ಶಾಮಕ ವಾಹನ, 20 ಸಿಬ್ಬಂದಿ ಬೆಂಕಿ ನಂದಿಸಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 7:49 pm, Thu, 16 February 23

ತಾಜಾ ಸುದ್ದಿ
ನೀರಲ್ಲಿ ಕಾರು ಕೊಚ್ಚಿಹೋದರೂ ಅದರಲ್ಲಿದ್ದ ನಾಲ್ವರು ಬದುಕುಳಿದಿದ್ದು ಪವಾಡ
ನೀರಲ್ಲಿ ಕಾರು ಕೊಚ್ಚಿಹೋದರೂ ಅದರಲ್ಲಿದ್ದ ನಾಲ್ವರು ಬದುಕುಳಿದಿದ್ದು ಪವಾಡ
ನಡುರಸ್ತೆಯಲ್ಲೇ ಚೂಪಾದ ಆಯುಧದಿಂದ ಥಳಿಸಿ ಕೊಂದ ಜನರು; ವಿಡಿಯೋ ವೈರಲ್
ನಡುರಸ್ತೆಯಲ್ಲೇ ಚೂಪಾದ ಆಯುಧದಿಂದ ಥಳಿಸಿ ಕೊಂದ ಜನರು; ವಿಡಿಯೋ ವೈರಲ್
ಪ್ರತಾಪ್ ಕುಡಿತದ ದಾಸನಾಗಿದ್ದ, ಮಕ್ಕಳಿಲ್ಲದ ಕೊರಗು ಕಾಡುತಿತ್ತು: ಪಾಟೀಲ್
ಪ್ರತಾಪ್ ಕುಡಿತದ ದಾಸನಾಗಿದ್ದ, ಮಕ್ಕಳಿಲ್ಲದ ಕೊರಗು ಕಾಡುತಿತ್ತು: ಪಾಟೀಲ್
ಜು.12ಕ್ಕೆ ದರ್ಶನ್ ನಟನೆಯ ‘ಶಾಸ್ತ್ರಿ’ ಮರು ಬಿಡುಗಡೆ; ಏನಿದು ಪ್ಲ್ಯಾನ್?
ಜು.12ಕ್ಕೆ ದರ್ಶನ್ ನಟನೆಯ ‘ಶಾಸ್ತ್ರಿ’ ಮರು ಬಿಡುಗಡೆ; ಏನಿದು ಪ್ಲ್ಯಾನ್?
ಉಡುಪಿಯಲ್ಲಿ ಪ್ರವಾಹದ ನೀರಿನಲ್ಲಿ ಸಿಲುಕಿದ್ದ ನಾಯಿಯ ರಕ್ಷಣೆಯ ವಿಡಿಯೋ ವೈರಲ್
ಉಡುಪಿಯಲ್ಲಿ ಪ್ರವಾಹದ ನೀರಿನಲ್ಲಿ ಸಿಲುಕಿದ್ದ ನಾಯಿಯ ರಕ್ಷಣೆಯ ವಿಡಿಯೋ ವೈರಲ್
ರಷ್ಯಾಗೆ ಆಗಮಿಸಿದ ಮೋದಿಗೆ ಭಾರತೀಯರಿಂದ ನೃತ್ಯದ ಮೂಲಕ ಅದ್ದೂರಿ ಸ್ವಾಗತ
ರಷ್ಯಾಗೆ ಆಗಮಿಸಿದ ಮೋದಿಗೆ ಭಾರತೀಯರಿಂದ ನೃತ್ಯದ ಮೂಲಕ ಅದ್ದೂರಿ ಸ್ವಾಗತ
ಮಹಾರಾಷ್ಟ್ರ: ಉಕ್ಕಿದ ಹಿರಣ್ಯಕೇಶಿ ನದಿ, ಬೆಳಗಾವಿ ಗಡಿಭಾಗಕ್ಕೆ ಹರಿದ ನೀರು
ಮಹಾರಾಷ್ಟ್ರ: ಉಕ್ಕಿದ ಹಿರಣ್ಯಕೇಶಿ ನದಿ, ಬೆಳಗಾವಿ ಗಡಿಭಾಗಕ್ಕೆ ಹರಿದ ನೀರು
ದರ್ಶನ್​ರನ್ನು ನೋಡಲು ವಕೀಲನ ಜತೆ ಸೆಂಟ್ರಲ್ ಜೈಲಿಗೆ ಬಂದ ನಿರ್ಮಾಪಕ ಕೆ ಮಂಜು
ದರ್ಶನ್​ರನ್ನು ನೋಡಲು ವಕೀಲನ ಜತೆ ಸೆಂಟ್ರಲ್ ಜೈಲಿಗೆ ಬಂದ ನಿರ್ಮಾಪಕ ಕೆ ಮಂಜು
‘ನನಗೂ ಅಶ್ಲೀಲ ಮೆಸೇಜ್​ಗಳು ಬರುತ್ತವೆ’: ಕಹಿ ಸತ್ಯ ವಿವರಿಸಿದ ನಟಿ ಅಪೂರ್ವಾ
‘ನನಗೂ ಅಶ್ಲೀಲ ಮೆಸೇಜ್​ಗಳು ಬರುತ್ತವೆ’: ಕಹಿ ಸತ್ಯ ವಿವರಿಸಿದ ನಟಿ ಅಪೂರ್ವಾ
ಡಿಸಿಎಂಗಳ ಬಗ್ಗೆ ಕೇಳಿದಾಗ ರಾಜಣ್ಣ ವರಿಷ್ಠರು ತೆಪ್ಪಗಿರಲು ಹೇಳಿದ್ದಾರೆಂದರು
ಡಿಸಿಎಂಗಳ ಬಗ್ಗೆ ಕೇಳಿದಾಗ ರಾಜಣ್ಣ ವರಿಷ್ಠರು ತೆಪ್ಪಗಿರಲು ಹೇಳಿದ್ದಾರೆಂದರು