ಪತ್ನಿಗೆ ಮೆಸೇಜ್ ಮಾಡಿದಕ್ಕೆ ಟೈಲರ್​ನನ್ನೇ ಬರ್ಬರವಾಗಿ ಹತ್ಯೆ ಮಾಡಿದ್ದ ಆರೋಪಿ ಅರೆಸ್ಟ್

ಟೈಲರ್​ ಶಾಪ್​ಗೆ ನುಗ್ಗಿ ಎಳೆದೊಯ್ದು ದೊಣ್ಣೆಯಿಂದ ಬಡಿದು ಕೊಲೆ ಮಾಡಲಾಗಿತ್ತು. ಸದ್ಯ ಈ ಪ್ರಕರಣ ಸಂಬಂಧ ಭರತ್, ಅಭಿಷೇಕ್, ಕುಮಾರ್, ಚಿರಂಜೀವಿ, ಅಭಿ ಸೇರಿದಂತೆ ಐವರು ಆರೋಪಿಗಳನ್ನು ಬಂಧಿಸಲಾಗಿದೆ.

ಪತ್ನಿಗೆ ಮೆಸೇಜ್ ಮಾಡಿದಕ್ಕೆ ಟೈಲರ್​ನನ್ನೇ ಬರ್ಬರವಾಗಿ ಹತ್ಯೆ ಮಾಡಿದ್ದ ಆರೋಪಿ ಅರೆಸ್ಟ್
ಪ್ರಾತಿನಿಧಿಕ ಚಿತ್ರ
Follow us
TV9 Web
| Updated By: ಆಯೇಷಾ ಬಾನು

Updated on: Oct 29, 2022 | 11:38 AM

ಹಾಸನ: ಪತ್ನಿಗೆ ಮೆಸೇಜ್ ಮಾಡಿದ್ದ ಟೈಲರ್​ ಮೇಲೆ ಹಲ್ಲೆಗೈದು ಹತ್ಯೆ ಮಾಡಿದ್ದ ಪ್ರಕರಣ ಸಂಬಂಧ ಐವರು ಆರೋಪಿಗಳನ್ನ ಚನ್ನರಾಯಪಟ್ಟಣ ಠಾಣೆ ಪೊಲೀಸರು ಬಂಧಿಸಿದ್ದಾರೆ. ಅ.13ರಂದು ಹಾಸನ ಜಿಲ್ಲೆಯ ಚನ್ನರಾಯಪಟ್ಟಣ ತಾಲೂಕಿನ ಜನಿವಾರ ಗ್ರಾಮದ ಬಳಿ ಟೈಲರ್​ ಗಂಗಾಧರ್(39)​ ಬರ್ಬರ ಹತ್ಯೆ ನಡೆದಿತ್ತು. ಟೈಲರ್​ ಶಾಪ್​ಗೆ ನುಗ್ಗಿ ಎಳೆದೊಯ್ದು ದೊಣ್ಣೆಯಿಂದ ಬಡಿದು ಕೊಲೆ ಮಾಡಲಾಗಿತ್ತು. ಸದ್ಯ ಈ ಪ್ರಕರಣ ಸಂಬಂಧ ಭರತ್, ಅಭಿಷೇಕ್, ಕುಮಾರ್, ಚಿರಂಜೀವಿ, ಅಭಿ ಸೇರಿದಂತೆ ಐವರು ಆರೋಪಿಗಳನ್ನು ಬಂಧಿಸಲಾಗಿದೆ.

ಡೆಲಿವರಿ ಬಾಯ್​​ಗೆ ಚಾಕು ಇರಿದು ಸುಲಿಗೆ ಮಾಡಿದ್ದವರು ಅರೆಸ್ಟ್

​ಡೆಲಿವರಿ ಬಾಯ್​​ಗೆ ಚಾಕು ಇರಿದು ಸುಲಿಗೆ ಮಾಡಿದ್ದ ಸಜ್ಜಾದ್​ ಖಾನ್​, ಸೈಫ್​ ಮೌಲಾನನನ್ನು ಬಂಧಿಸಿದ ಅಶೋಕನಗರ ಠಾಣೆ ಪೊಲೀಸರು; ಅ.10ರಂದು ಮೊಬೈಲ್​​ ಕಿತ್ತುಕೊಂಡು ಚಾಕು ಇರಿದಿದ್ದ ಆರೋಪಿಗಳು; ಆರೋಪಿಗಳ ಬಂಧನ ಬಳಿಕ ಹಲವು ಪ್ರಕರಣಗಳಲ್ಲಿ ಭಾಗಿಯಾಗಿದ್ದ ಪತ್ತೆ; ಚಾಮರಾಜಪೇಟೆ, ವಿಲ್ಸನ್​ ಗಾರ್ಡನ್​, ಕಲಾಸಿಪಾಳ್ಯ ವ್ಯಾಪ್ತಿಯಲ್ಲಿ ಸುಲಿಗೆ ಮಾಡಿದ್ದ ಆರೋಪಿಗಳು

ಸ್ವಿಗ್ಗಿ ಡೆಲಿವರಿ ಬಾಯ್ ಗೆ ಚಾಕುವಿನಿಂದ ಇರಿದು ಸುಲಿಗೆ ಮಾಡಿದ್ದ ಆರೋಪಿಗಳನ್ನು ಅಶೋಕನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ. ಸಜ್ಜಾದ್ ಖಾನ್, ಸೈಫ್ ಮೌಲಾನ ಬಂಧಿತ ಆರೋಪಿಗಳು. ರಾತ್ರಿ ವೇಳೆ ಒಬ್ಬಂಟಿಯಾಗಿ ತೆರಳುವ ಸ್ವಿಗ್ಗಿ ಡೆಲಿವರಿ ಬಾಯ್ಸ್ ಗಳನ್ನೇ ಟಾರ್ಗೇಟ್ ಮಾಡ್ತಿದ್ದ ಆರೋಪಿಗಳು ಕಳೆದ 10 ನೇ ತಾರೀಕಿನಂದು ಒನ್ ಪ್ಲಸ್ ಮೊಬೈಲ್ ಗಾಗಿ ಚಾಕುವಿನಿಂದ ಇರಿದಿದ್ದರು. ಅಪಾಚಿ ಗಾಡಿಯಲ್ಲಿ ಬಂದು ಚಾಕುವಿನಿಂದ ಆರೋಪಿಗಳು ಇರಿದಿದ್ದರು. ದೂರು ದಾಖಲಾಗುತ್ತಿದ್ದಂತೆ ಕಾರ್ಯಾಚರಣೆಗಿಳಿದ ಅಶೊಕ್ ನಗರ ಪೊಲೀಸರು ಆರೋಪಿಗಳನ್ನ ಬಂಧಿಸಿದ್ದಾರೆ. ವಿಚಾರಣೆ ವೇಳೆ ಆರೋಪಿಗಳು ಈ ಹಿಂದೆ ಹಲವು ಪ್ರಕರಣಗಳಲ್ಲಿ ಭಾಗಿಯಾಗಿರೋದು ಪತ್ತೆಯಾಗಿದೆ. ಚಾಮರಾಜಪೇಟೆ, ವಿಲ್ಸನ್ ಗಾರ್ಡನ್, ಕಲಾಸಿಪಾಳ್ಯ ವ್ಯಾಪ್ತಿಯಲ್ಲಿ ಸುಲಿಗೆ ಮಾಡಿದ್ದರು. ಇದನ್ನೂ ಓದಿ: ಕೇಸರಿ ಹೂವು -ಪುರುಷರಿಗೆ ಪ್ರಕೃತಿಯ ಕೊಡುಗೆ: ಪ್ರತಿದಿನ ಕೇಸರಿ ಸೇವಿಸಿ, ಆ ಸಾಮರ್ಥ್ಯ ಹೆಚ್ಚಾಗುವುದು!

ಡಿವೈಡರ್ ಗೆ ಬೈಕ್ ಡಿಕ್ಕಿ ಸವಾರ ಸಾವು

ಮೈಸೂರು: ಟಿ.ನರಸೀಪುರದ ಕಪಿಲಾ ನದಿ ಸೇತುವೆ ಡಿವೈಡರ್​ಗೆ ಬೈಕ್ ಡಿಕ್ಕಿಯಾಗಿ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ನಡೆದಿದೆ. ವಾಟಾಳು ಗ್ರಾಮದ ಚೇತನ್(23) ಮೃತ ದುರ್ದೈವಿ. ಟಿ.ನರಸೀಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕೌಟುಂಬಿಕ ಕಲಹ ಗೃಹಣಿ ಆತ್ಮಹತ್ಯೆ

ರಾಮನಗರ ಜಿಲ್ಲೆ ಕನಕಪುರ ತಾಲೂಕಿನ ಗ್ರಾಮದಲ್ಲಿ ಕೌಟುಂಬಿಕ ಕಲಹ ಹಿನ್ನೆಲೆ ಕೆರೆಗೆ ಹಾರಿ ಗೃಹಣಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಪಲ್ಲವಿ(33) ಮೃತ ದುರ್ದೈವಿ. ಪಲ್ಲವಿ ನಿನ್ನೆ ರಾತ್ರಿ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇಂದು ಅಗ್ನಿಶಾಮಕ ಸಿಬ್ಬಂದಿ ಮೃತದೇಹ ಹೊರತೆಗೆದಿದ್ದಾರೆ. ಸಾತನೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ