ಹನಿ ಟ್ಯ್ರಾಪ್ ಮೂಲಕ​ ಕಾಡಾನೆಗಳ ಸೆರೆಗೆ ಮುಂದಾದ ಅರಣ್ಯ ಇಲಾಖೆ: ಹೆಣ್ಣಾನೆಗಳಿಗೆ ರೇಡಿಯೋ ಕಾಲರ್ ಅವಳವಡಿಕೆ

ಹಾಸನ ಜಿಲ್ಲೆಯಲ್ಲಿ ಕಾಡಾನೆಗಳ ಉಪಟಳ ಮಿತಿಮೀರಿದ ಹಿನ್ನೆಲೆ ಕಾಡಾನೆಗಳನ್ನು ಸೆರೆಹಿಡಿಯಲು ಅರಣ್ಯ ಇಲಾಖೆ ಹನಿ ಟ್ಯ್ರಾಪ್​ ಮೊರೆ ಹೋಗಿದೆ. ಹೌದು ಮೂರು ಹೆಣ್ಣಾನೆಗಳಿಗೆ ರೇಡಿಯೋ ಕಾಲರ್ ಅಳವಡಿಸಲು ಅರಣ್ಯ ಇಲಾಖೆ ಸಿದ್ದತೆ ನಡೆಸಿದೆ.

ಹನಿ ಟ್ಯ್ರಾಪ್ ಮೂಲಕ​ ಕಾಡಾನೆಗಳ ಸೆರೆಗೆ ಮುಂದಾದ ಅರಣ್ಯ ಇಲಾಖೆ: ಹೆಣ್ಣಾನೆಗಳಿಗೆ ರೇಡಿಯೋ ಕಾಲರ್ ಅವಳವಡಿಕೆ
ಆನೆಗೆ ರೇಡಿಯೋ ಕಾಲರ್ ಅವಳವಡಿಕೆ
Follow us
ವಿವೇಕ ಬಿರಾದಾರ
|

Updated on: May 15, 2023 | 2:45 PM

ಹಾಸನ: ಜಿಲ್ಲೆಯಲ್ಲಿ ಕಾಡಾನೆಗಳ (Elephant) ಉಪಟಳ ಮಿತಿಮೀರಿದ ಹಿನ್ನೆಲೆ ಕಾಡಾನೆಗಳನ್ನು ಸೆರೆಹಿಡಿಯಲು ಅರಣ್ಯ ಇಲಾಖೆ ಹನಿ ಟ್ಯ್ರಾಪ್ (Honey Trap)​ ಮೊರೆ ಹೋಗಿದೆ. ಹೌದು ಮೂರು ಹೆಣ್ಣಾನೆಗಳಿಗೆ ರೇಡಿಯೋ ಕಾಲರ್ ( Radio collar) ಅಳವಡಿಸಲು ಅರಣ್ಯ ಇಲಾಖೆ (Forest Department) ಸಿದ್ದತೆ ನಡೆಸಿದೆ. ಹೆಣ್ಣಾನೆ ಮೋಹಕ್ಕೆ ಬಿದ್ದು, ಕಾಡಾನೆಗಳು ಸೆರೆ ಸಿಗುವ ಸಾಧ್ಯತೆ ಇದೆ. ಹೀಗಾಗಿ ಇಂದಿನಿಂದ ಮೇ.25 ರವರೆಗೆ ಸಕಲೇಶಪುರ, ಬೇಲೂರು ವಲಯಗಳಲ್ಲಿ ರೇಡಿಯೋ ಕಾಲರ್ ಅಳವಡಿಕೆ ಕಾರ್ಯಾಚರಣೆ ನಡೆಯಲಿದೆ. ಇನ್ನು ರೇಡಿಯೋ ಕಾಲರ್ ಅಳವಡಿಕೆಗೆ ಸಾಕಾನೆಗಳನ್ನು ಬಳಸಿಕೊಳ್ಳಲಾಗಿದ್ದು, ಮತ್ತಿಗೋಡು ಆನೆ ಶಿಬಿರದಿಂದ ಅಭಿಮನ್ಯು ಮತ್ತು ಮಹೇಂದ್ರ ಹಾಗೂ ದುಬಾರೆ ಆನೆ ಶಿಬಿರದಿಂದ ಅಜ್ಜಯ್ಯ, ಪ್ರಶಾಂತ ಮತ್ತು ವಿಕ್ರಮ ಆನೆಗಳನ್ನು ಕರೆಸಿಕೊಳ್ಳಲಾಗಿದೆ.

ಈ ಆನೆಗಳನ್ನು ತಾತ್ಕಾಲಿಕವಾಗಿ ಸ್ಥಾಪಿಸಿರುವ ಬೇಲೂರು ವಲಯದ, ಬಿಕ್ಕೋಡು ಸಸ್ಯಕ್ಷೇತ್ರದ ಕ್ಯಾಂಪ್‌ನಲ್ಲಿ ಇರಿಸಲಾಗಿದೆ. ಈ ಕಾರ್ಯಾಚರಣೆಗೆ ಅರಣ್ಯ ಇಲಾಖೆ ಸೂಚನೆಗಳನ್ನು ಪಾಲಿಸಿ ಸಾರ್ವಜನಿಕರು ಸಹಕರಿಸುವಂತೆ ಅರಣ್ಯ ಇಲಾಖೆ ಅಧಿಕಾರಿಗಳು ಮನವಿ ಮಾಡಿದ್ದಾರೆ.

ಇದನ್ನೂ ಓದಿ: ಹೆಚ್ಚಾದ ಆನೆ ಹಾವಳಿ; ಕೋಲಾರ-ಆಂಧ್ರ ಗಡಿಯಲ್ಲಿ ಕಾಡಾನೆ ದಾಳಿಗೆ ಇಬ್ಬರು ಬಲಿ

ಏನಿದು ರೇಡಿಯೋ ಕಾಲರ್

ಆನೆಗಳ ಟ್ರ್ಯಾಕಿಂಗ್‌ಗೆ ರೇಡಿಯೋ ಕಾಲರ್‌ ವ್ಯವಸ್ಥೆ ಸಹಕಾರಿಯಾಗಿದೆ. ಈ ಮೂಲಕ ಪುಂಡಾನೆಗಳ ಚಲನವಲನದ ಮೇಲೆ ನಿಗಾ ಇಡಲು ಅರಣ್ಯ ಇಲಾಖೆ ಹೊಸ ಮಾರ್ಗವನ್ನು ಕಂಡುಕೊಂಡಿದೆ. ಆನೆಗಳ ಹಿಂಡು ಯಾವ ದಿಕ್ಕಿನತ್ತ ಸಂಚರಿಸುತ್ತಿದೆ, ಯಾವ ಪ್ರದೇಶದಲ್ಲಿವೆ ಎನ್ನುವ ಮಾಹಿತಿ ತಿಳಿಯಲು ಅನುಕೂಲವಾಗುವ ವ್ಯವಸ್ಥೆಯೇ ರೇಡಿಯೋ ಕಾಲರ್‌.

ಈ ವ್ಯವಸ್ಥೆಯಡಿ ಆನೆ ಹಿಂಡಿನಲ್ಲಿನ ಒಂದಕ್ಕೆ ಮತ್ತು ತರಿಸುವ ಔಷಧ ನೀಡಿ, ಕುತ್ತಿಗೆಗೆ ಬೆಲ್ಟ್‌ ರೀತಿಯ ಟ್ರ್ಯಾಕರ್‌ ಅಳವಡಿಸಲಾಗುತ್ತದೆ. ಡೆಹ್ರಾಡೂನ್‌ ವನ್ಯಜೀವಿ ಸಂಸ್ಥೆ (ಡಬ್ಲೂತ್ರ್ಯಐಐ), ಜರ್ಮನಿಯ ವನ್ಯಜೀವಿ ಸಂಸ್ಥೆಯೊಂದರ ಸಹಯೋಗದಲ್ಲಿ ಅರಣ್ಯ ಇಲಾಖೆ 2015-16ರಲ್ಲಿ ರೇಡಿಯೋ ಕಾಲರ್‌ ಅಳವಡಿಕೆಗೆ ಯೋಜನೆ ರೂಪಿಸಿತು. ಇದನ್ನು ಮೊದಲ ಬಾರಿಗೆ 2019ರಲ್ಲಿ ಕೊಡಗಿನ ಅರಣ್ಯ ಪ್ರದೇಶದಲ್ಲಿ ಅಳವಡಿಕೆಗೆ ಚಾಲನೆ ದೊರಕಿತು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ