AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಕಲೇಶಪುರ: ಪಶ್ಚಿಮ ಘಟ್ಟದ ಕಾಡ್ಗಿಚ್ಚಿಗೆ ಸಿಲುಕಿ ಬೆಂದು ಹೋಗಿದ್ದ ಫಾರೆಸ್ಟ್ ಗಾರ್ಡ್ ಬೆಂಗಳೂರು ಆಸ್ಪತ್ರೆಯಲ್ಲಿ ಸಾವು

ಬೆಂಕಿ ನಂದಿಸಲು ಡಿಆರ್​ಎಫ್​ಒ ಮಂಜುನಾಥ್ ನೇತೃತ್ವದಲ್ಲಿ 6 ಮಂದಿ ಅರಣ್ಯ ಇಲಾಖೆ ಸಿಬ್ಬಂದಿ ಹೋಗಿದ್ದರು. ಘಟನೆಯಲ್ಲಿ ಅರಣ್ಯ ಅಧಿಕಾರಿ, ಸಿಬ್ಬಂದಿ ಗಂಭೀರ ಗಾಯಗೊಂಡಿದ್ದರು.

ಸಕಲೇಶಪುರ: ಪಶ್ಚಿಮ ಘಟ್ಟದ ಕಾಡ್ಗಿಚ್ಚಿಗೆ ಸಿಲುಕಿ ಬೆಂದು ಹೋಗಿದ್ದ ಫಾರೆಸ್ಟ್ ಗಾರ್ಡ್ ಬೆಂಗಳೂರು ಆಸ್ಪತ್ರೆಯಲ್ಲಿ ಸಾವು
ಫಾರೆಸ್ಟ್ ಗಾರ್ಡ್ ಸುಂದರೇಶ್
TV9 Web
| Edited By: |

Updated on:Feb 18, 2023 | 10:08 AM

Share

ಹಾಸನ: ಸಕಲೇಶಪುರ ತಾಲೂಕಿನ ಪಶ್ಚಿಮ ಘಟ್ಟದ ಕಾಡ್ಗಿಚ್ಚಿಗೆ ಸಿಲುಕಿ ಬೆಂದು ಹೋಗಿದ್ದ ಫಾರೆಸ್ಟ್ ಗಾರ್ಡ್ ಮೃತಪಟ್ಟಿದ್ದಾರೆ. ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ರಾತ್ರಿ ಚಿಕಿತ್ಸೆ ಫಲಿಸದೆ ಫಾರೆಸ್ಟ್ ಗಾರ್ಡ್ ಸುಂದರೇಶ್ ಕೊನೆಯುಸಿರೆಳೆದಿದ್ದಾರೆ. ಹಾಸನ ಜಿಲ್ಲೆ ಸಕಲೇಶಪುರ ತಾಲೂಕಿನ ಪಶ್ಚಿಮ ಘಟ್ಟದಲ್ಲಿ ಫೆ.16ರ ಗುರುವಾರ ಮಧ್ಯಾಹ್ನ ಕಾಡುಮನೆ ಎಸ್ಟೇಟ್ ಬಳಿ ಕಾಡ್ಗಿಚ್ಚು ಕಾಣಿಸಿಕೊಂಡಿತ್ತು.

ಬೆಂಕಿ ನಂದಿಸಲು ಡಿಆರ್​ಎಫ್​ಒ ಮಂಜುನಾಥ್ ನೇತೃತ್ವದಲ್ಲಿ 6 ಮಂದಿ ಅರಣ್ಯ ಇಲಾಖೆ ಸಿಬ್ಬಂದಿ ಹೋಗಿದ್ದರು. ಘಟನೆಯಲ್ಲಿ ಅರಣ್ಯ ಅಧಿಕಾರಿ, ಸಿಬ್ಬಂದಿ ಗಂಭೀರ ಗಾಯಗೊಂಡಿದ್ದರು. ವೇಗವಾಗಿ ವ್ಯಾಪಿಸಿದ್ದ ಬೆಂಕಿ ಅರಣ್ಯ ಇಲಾಖೆ ಸಿಬ್ಬಂದಿಯನ್ನೇ ಸುತ್ತುವರೆದಿತ್ತು. ಬೆಂಕಿಗೆ ಸಿಲುಕಿ ಡಿಆರ್​ಎಫ್ ಓ ಮಂಜುನಾಥ್, ಫಾರೆಸ್ಟ್ ಗಾರ್ಡ್ ಸುಂದರೇಶ್ ವಾಚರ್ ಗಳಾದ ತುಂಗೇಶ್ ಮತ್ತು ಮಹೇಶ್​ಗೆ ಗಾಯಗಳಾಗಿದ್ದವು. ಸುಂದರೇಶ್ ಹಾಗೂ ಮಂಜುನಾಥ್ ಬೆಂಕಿಯಲ್ಲಿ ಬಹುತೇಕ ಬೆಂದು ಹೋಗಿದ್ದರು. ರಸ್ತೆ ಸಂಪರ್ಕ ಇಲ್ಲದ ಸ್ಥಳದಿಂದ ಅಡ್ಡೆಯಲ್ಲಿ ಹೊತ್ತು ತಂದು ಅರಣ್ಯ ಇಲಾಖೆ ಸಿಬ್ಬಂದಿ, ಪೊಲೀಸ್ ಹಾಗು ಸ್ಥಳೀಯರು ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಿದ್ದರು.

ಇದನ್ನೂ ಓದಿ:  ಕಾಡ್ಗಿಚ್ಚು ನಂದಿಸಲು ಹೋಗಿದ್ದ ನಾಲ್ವರು ಅರಣ್ಯ ಸಿಬ್ಬಂದಿಗೆ ತಗುಲಿದ ಬೆಂಕಿ, 5 ಕಿ.ಮೀ ದೂರದಿಂದ ಹೊತ್ತುತಂದ ಗ್ರಾಮಸ್ಥರು, ಇಬ್ಬರ ಸ್ಥಿತಿ ಗಂಭೀರ

ಹಾಸನದಲ್ಲಿ ಪ್ರಾಥಮಿಕ ಚಿಕಿತ್ಸೆ ಬಳಿಕ ಝೀರೊ ಟ್ರಾಫಿಕ್ ಮೂಲಕ ಬೆಂಗಳೂರಿಗೆ ಸ್ಥಳಾಂತರ ಮಾಡಲಾಗಿತ್ತು. ಸಾವು ಬದುಕಿನ ನಡುವೆ ಹೋರಾಟ ನಡೆಸುತ್ತಿದ್ದ ಇಬ್ಬರಲ್ಲಿ ರಾತ್ರಿ ಸುಂದರೇಶ್ ಮೃತಪಟ್ಟಿದ್ದಾರೆ. ಕಾಡು ರಕ್ಷಣೆಗಾಗಿ ತಮ್ಮ ಪ್ರಾಣ ಪಣಕ್ಕಿಟ್ಟು ಹೋರಾಡಿದ ಸಿಬ್ಬಂದಿ ಬದುಕುಳಿಯಲೆಂದು ಸಾವಿರಾರು ಜನರ ಪ್ರಾರ್ಥನೆ ಮಾಡುತ್ತಿದ್ದಾರೆ. ಇಂದು ಸಕಲ ಸರ್ಕಾರಿ ಗೌರವಗಳೊಂದಿಗೆ ಸುಂದರೇಶ್ ಅಂತ್ಯಕ್ರಿಯೆ ನಡೆಯಲಿದೆ. ಸುಂದರೇಶ್ ಮೂಲತಃ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ಮೂಲದವರಾಗಿದ್ದಾರೆ. ಹಾಸನದಲ್ಲಿ ಅರಣ್ಯ ಇಲಾಖೆ ವತಿಯಿಂದ ಗೌರವಾರ್ಪಣೆ ಬಳಿಕ ಹುಟ್ಟೂರಿಗೆ ಮೃತದೇಹ ಸ್ಥಳಾಂತರ ಮಾಡುವ ಸಾಧ್ಯತೆ ಇದೆ.

ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 9:08 am, Sat, 18 February 23

450 ಕಿ.ಮೀ ಸ್ಕೇಟಿಂಗ್ ಮಾಡಿ ಅಯೋಧ್ಯೆಯ ರಾಮನ ದರ್ಶನ ಪಡೆದ 9 ವರ್ಷದ ಬಾಲಕಿ!
450 ಕಿ.ಮೀ ಸ್ಕೇಟಿಂಗ್ ಮಾಡಿ ಅಯೋಧ್ಯೆಯ ರಾಮನ ದರ್ಶನ ಪಡೆದ 9 ವರ್ಷದ ಬಾಲಕಿ!
ಸೋಮನಾಥ ದೇವಾಲಯದಲ್ಲಿ ಪ್ರಾರ್ಥನೆ ಸಲ್ಲಿಸಿದ ಪ್ರಧಾನಿ ಮೋದಿ
ಸೋಮನಾಥ ದೇವಾಲಯದಲ್ಲಿ ಪ್ರಾರ್ಥನೆ ಸಲ್ಲಿಸಿದ ಪ್ರಧಾನಿ ಮೋದಿ
ಸೋಮನಾಥ ದೇವಾಲಯಕ್ಕೆ ಆಗಮಿಸಿದ ಪ್ರಧಾನಿ ಮೋದಿಗೆ ಅದ್ದೂರಿ ಸ್ವಾಗತ
ಸೋಮನಾಥ ದೇವಾಲಯಕ್ಕೆ ಆಗಮಿಸಿದ ಪ್ರಧಾನಿ ಮೋದಿಗೆ ಅದ್ದೂರಿ ಸ್ವಾಗತ
ಹೆಚ್​​​ಡಿಕೆ VS ಡಿಕೆಶಿ ಸವಾಲು: ಓಪನ್ ಡಿಬೇಟ್ ಮಾಡೋಣ ಬನ್ನಿ
ಹೆಚ್​​​ಡಿಕೆ VS ಡಿಕೆಶಿ ಸವಾಲು: ಓಪನ್ ಡಿಬೇಟ್ ಮಾಡೋಣ ಬನ್ನಿ
ಶ್ವಾನ ದಾಳಿಯಿಂದ ಶ್ರೇಯಸ್ ಅಯ್ಯರ್ ಜಸ್ಟ್ ಮಿಸ್; ವಿಡಿಯೋ ನೋಡಿ
ಶ್ವಾನ ದಾಳಿಯಿಂದ ಶ್ರೇಯಸ್ ಅಯ್ಯರ್ ಜಸ್ಟ್ ಮಿಸ್; ವಿಡಿಯೋ ನೋಡಿ
ಕಿಚ್ಚನ ಮಾತು ಕೇಳಿ ಕಣ್ಣೀರು ಹಾಕಿದ ಅಶ್ವಿನಿ-ಧ್ರುವಂತ್: ವಿಡಿಯೋ ನೋಡಿ
ಕಿಚ್ಚನ ಮಾತು ಕೇಳಿ ಕಣ್ಣೀರು ಹಾಕಿದ ಅಶ್ವಿನಿ-ಧ್ರುವಂತ್: ವಿಡಿಯೋ ನೋಡಿ
ಬಳ್ಳಾರಿ ಗಲಭೆ ಖಂಡಿಸಿ ಬಿಜೆಪಿಯಿಂದ ಸಮರ: ಜ 17ರಂದು ಪ್ರತಿಭಟನೆ ಎಂದ ರೆಡ್ಡಿ
ಬಳ್ಳಾರಿ ಗಲಭೆ ಖಂಡಿಸಿ ಬಿಜೆಪಿಯಿಂದ ಸಮರ: ಜ 17ರಂದು ಪ್ರತಿಭಟನೆ ಎಂದ ರೆಡ್ಡಿ
ಪ್ರೀತಿ ಮಾಡಲು ಒಪ್ಪದಿದ್ದಕ್ಕೆ ಬೆಂಗಳೂರಿನ ಹುಡುಗಿಗೆ ಕೊಲೆ ಬೆದರಿಕೆ
ಪ್ರೀತಿ ಮಾಡಲು ಒಪ್ಪದಿದ್ದಕ್ಕೆ ಬೆಂಗಳೂರಿನ ಹುಡುಗಿಗೆ ಕೊಲೆ ಬೆದರಿಕೆ
ಮನೆ ಕಟ್ಟಲು ಅಡಿಪಾಯ ತೆಗೆಯುವಾಗ ವೇಳೆ ನಿಧಿ ಪತ್ತೆ
ಮನೆ ಕಟ್ಟಲು ಅಡಿಪಾಯ ತೆಗೆಯುವಾಗ ವೇಳೆ ನಿಧಿ ಪತ್ತೆ
ಎಣ್ಣೆ ಮತ್ತಲ್ಲಿ ಡಿವೈಡರ್​​ ಹಾರಿಸಿದ ಕಾರು ಚಾಲಕ: 8 ಜನ ಜಸ್ಟ್​ ಮಿಸ್!​​
ಎಣ್ಣೆ ಮತ್ತಲ್ಲಿ ಡಿವೈಡರ್​​ ಹಾರಿಸಿದ ಕಾರು ಚಾಲಕ: 8 ಜನ ಜಸ್ಟ್​ ಮಿಸ್!​​