ಹಾಸನಾಂಬೆಯ ದರ್ಶನ ಪಡೆದು ಜಿಲ್ಲಾಡಳಿತವನ್ನ ಹಾಡಿ ಹೊಗಳಿದ ದೇವೇಗೌಡ

ಹಾಸನಾಂಬೆ ತಾಯಿ ದರ್ಶನಕ್ಕೆ ಪ್ರತೀವರ್ಷ ಕುಟುಂಬ ಸಮೇತ ಬರುತ್ತೇನೆ. ದೇವಿ ವರ್ಷಕ್ಕೆ ಒಮ್ಮೆ ದರ್ಶನ ನೀಡುತ್ತಾರೆ. ದೇವಿಯ ಗರ್ಭಗುಡಿಯೊಳಗೆ ಹಚ್ಚಿಟ್ಟ ದೀಪ ವರ್ಷ ಆದರು ಆರುವುದಿಲ್ಲ. ಒಂದು ವರ್ಷ ಆನಂದವಾಗಿ ಉರಿಯುತ್ತೆ ಇದು ಇತಿಹಾಸ. ಉತ್ತರದಲ್ಲಿ ವೈಷ್ಣವಿ ಇದೇ ಸ್ವರೂಪದ ದೇವರು ಎಂದು ಮಾಜಿ ಪ್ರಧಾನಿ ಹೆಚ್​​​​ಡಿ ದೇವೇಗೌಡ

Follow us
ಮಂಜುನಾಥ ಕೆಬಿ
| Updated By: ವಿವೇಕ ಬಿರಾದಾರ

Updated on:Nov 03, 2023 | 11:57 AM

ಹಾಸನ ನ.3: ಹಾಸನಾಂಬೆ(Hassanamba) ಸಾರ್ವಜನಿಕ ದರ್ಶನೊತ್ಸವ ಇಂದಿನಿಂದ ಆರಂಭವಾಗಿದೆ. ಇಂದಿನಿಂದ 12 ದಿನಗಳ ಕಾಲ ಬೆಳಿಗ್ಗೆ 6 ರಿಂದ ಸಂಜೆ 6 ಗಂಟೆವರೆಗೆ ಭಕ್ತರು ದರ್ಶನ ಪಡೆಯಲು ಅವಕಾಶ ನೀಡಲಾಗಿದೆ. ದೇವಿಯ ದರ್ಶನ ಪಡೆಯಲು ಮೊದಲ ದಿನವೇ ಭಾರಿ ಸಂಖ್ಯೆಯಲ್ಲಿ ಭಕ್ತರು ಆಗಮಿಸಿದ್ದಾರೆ. ಮಾಜಿ ಪ್ರದಾನಿ ಹೆಚ್​ ಡಿ ದೇವೇಗೌಡ ( HD Devegowda) ಅವರು ಪತ್ನಿ ಚನ್ನಮ್ಮ ಹಾಗೂ ಪುತ್ರಿಯರ ಜೊತೆ ಶುಕ್ರವಾರ  ಹಾಸನಾಂಬೆ ದರ್ಶನ ಪಡೆದರು. ದೇವೇಗೌಡರನ್ನು ಸಕಲ‌ ಸರ್ಕಾರಿ ಗೌರವ ಹಾಗೂ ಮಂಗಳ ವಾದ್ಯಗಳೊಂದಿಗೆ ಜಿಲ್ಲಾಡಳಿತ ಸ್ವಾಗತಿಸಿತು.

ದೇವಿಯ ದರ್ಶನ ಪಡೆದು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು ಹಾಸನಾಂಬೆ ತಾಯಿ ದರ್ಶನಕ್ಕೆ ಪ್ರತೀವರ್ಷ ಕುಟುಂಬ ಸಮೇತ ಬರುತ್ತೇನೆ. ದೇವಿ ವರ್ಷಕ್ಕೆ ಒಮ್ಮೆ ದರ್ಶನ ನೀಡುತ್ತಾರೆ. ದೇವಿಯ ಗರ್ಭಗುಡಿಯೊಳಗೆ ಹಚ್ಚಿಟ್ಟ ದೀಪ ವರ್ಷ ಆದರು ಆರುವುದಿಲ್ಲ. ಒಂದು ವರ್ಷ ಆನಂದವಾಗಿ ಉರಿಯುತ್ತೆ ಇದು ಇತಿಹಾಸ. ಉತ್ತರದಲ್ಲಿ ವೈಷ್ಣವಿ ಇದೇ ಸ್ವರೂಪದ ದೇವರು ಎಂದರು.

ಇದನ್ನೂ ಓದಿ: ವರ್ಷ ಕಳೆದರೂ ಇಲ್ಲಿ ದೀಪ ಆರಲ್ಲ, ಹೂ ಬಾಡಲ್ಲ; ಹಾಸನಾಂಬೆ ದೇವಾಲಯದ ಗರ್ಭಗುಡಿ ಬಾಗಿಲು ಓಪನ್

ಜಿಲ್ಲಾಧಿಕಾರಿ ವರ್ಗ ಹಾಸನಾಂಬೆ ಉತ್ಸವವನ್ನು ಅಚ್ಚುಕಟ್ಟಾಗಿ ಮಾಡಿದ್ದಾರೆ. ಹಿಂದೆಂದೂ ಇಷ್ಟೊಂದು ವಿಜೃಂಭಣೆಯ ದೀಪಾಲಂಕಾರ ನಾನು ನೋಡಿರಲಿಲ್ಲ. ವಿದ್ಯುತ್ ದೀಪಾಲಂಕಾರ ಸೊಗಸಾಗಿದೆ. ಜಿಲ್ಲಾ ಉಸ್ತುವಾರಿ ಸಚಿವರು ಕೂಡ ಎಲ್ಲರ ಸಹಕಾರದಿಂದ ಉತ್ತಮವಾಗಿ ಆಯೋಜನೆ ಮಾಡಿದ್ದಾರೆ. ಅರೋಗ್ಯ ಕೊಡು ಎಂದು ದೇವರಲ್ಲಿ ಕೇಳಿಕೊಂಡಿದ್ದೇನೆ. ಮುಂದಿನಬಾರಿ ಆ ತಾಯಿ ದರ್ಶನಕ್ಕೆ ನಡೆದುಕೊಂಡು ಬರುವಷ್ಟು ಶಕ್ತಿ ನೀಡಲಿ. ದೇವೇಗೌಡರಕ್ಕಿಂತ ಮುಂಚೆ ಪುತ್ರ, ಮಾಜಿ ಸಚಿವ ಹೆಚ್​ಡಿ ರೇವಣ್ಣ ಬೆಳ್ಳಂಬೆಳಿಗ್ಗೆ ಹಾಸನಾಂಬೆ ದರ್ಶನ ಪಡೆದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 11:52 am, Fri, 3 November 23

ಬಿಗ್ ಬಾಸ್ ಮನೆಗೆ ಕಾಲಿಡುತ್ತಲೇ ವಿಶೇಷ ಅಧಿಕಾರ ಪಡೆದ ರಜತ್, ಶೋಭಾ ಶೆಟ್ಟಿ
ಬಿಗ್ ಬಾಸ್ ಮನೆಗೆ ಕಾಲಿಡುತ್ತಲೇ ವಿಶೇಷ ಅಧಿಕಾರ ಪಡೆದ ರಜತ್, ಶೋಭಾ ಶೆಟ್ಟಿ
ಗೋದಾವರಿ ನದಿಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಯುವಕನ ರಕ್ಷಿಸಿದ ಪತ್ರಕರ್ತರು
ಗೋದಾವರಿ ನದಿಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಯುವಕನ ರಕ್ಷಿಸಿದ ಪತ್ರಕರ್ತರು
ಉಗ್ರಂ ಮಂಜು-ಮೋಕ್ಷಿತಾ ನಡುವೆ ದುಷ್ಮನಿ; ತೊಡೆ ತಟ್ಟಿದ ತ್ರಿವಿಕ್ರಮ್
ಉಗ್ರಂ ಮಂಜು-ಮೋಕ್ಷಿತಾ ನಡುವೆ ದುಷ್ಮನಿ; ತೊಡೆ ತಟ್ಟಿದ ತ್ರಿವಿಕ್ರಮ್
ಕೋವಿಡ್ ಹಗರಣ: ಕೆಲ ಅಂತೆ-ಕಂತೆಗಳಿಗೆ ತೆರೆ ಎಳೆದ ಡಾ ಸಿಎನ್​ ಮಂಜುನಾಥ್
ಕೋವಿಡ್ ಹಗರಣ: ಕೆಲ ಅಂತೆ-ಕಂತೆಗಳಿಗೆ ತೆರೆ ಎಳೆದ ಡಾ ಸಿಎನ್​ ಮಂಜುನಾಥ್
ನಮ್ಮ ಸರ್ಕಾರದ ವಿರುದ್ಧ ಯಾವುದೇ ಆರೋಪ ಸಾಬೀತಾಗಿಲ್ಲ: ಚಲುವರಾಯಸ್ವಾಮಿ
ನಮ್ಮ ಸರ್ಕಾರದ ವಿರುದ್ಧ ಯಾವುದೇ ಆರೋಪ ಸಾಬೀತಾಗಿಲ್ಲ: ಚಲುವರಾಯಸ್ವಾಮಿ
ಬಾಗಲಕೋಟೆ: ಸ್ನೇಹಿತನ ಮದುವೆಯಲ್ಲಿ ಕುಣಿದು ಕುಪ್ಪಳಿಸಿದ ವಿದೇಶಿಗರು
ಬಾಗಲಕೋಟೆ: ಸ್ನೇಹಿತನ ಮದುವೆಯಲ್ಲಿ ಕುಣಿದು ಕುಪ್ಪಳಿಸಿದ ವಿದೇಶಿಗರು
ಕುಮಾರಸ್ವಾಮಿ ವಿರುದ್ಧ ಸಾವಿರಾರು ಕೋಟಿ ರೂ. ಗಿಫ್ಟ್​ ಆರೋಪ
ಕುಮಾರಸ್ವಾಮಿ ವಿರುದ್ಧ ಸಾವಿರಾರು ಕೋಟಿ ರೂ. ಗಿಫ್ಟ್​ ಆರೋಪ
ಚನ್ನಪಟ್ಟಣ ಜೊತೆ ದೇವೇಗೌಡರ ನಂಟು, ಮತ್ತೊಮ್ಮೆ ಇಸವಿ ತಪ್ಪು ಹೇಳಿದ ನಿಖಿಲ್
ಚನ್ನಪಟ್ಟಣ ಜೊತೆ ದೇವೇಗೌಡರ ನಂಟು, ಮತ್ತೊಮ್ಮೆ ಇಸವಿ ತಪ್ಪು ಹೇಳಿದ ನಿಖಿಲ್
ಪತ್ನಿ ರೇವತಿಯವರ ಇಚ್ಛೆಯ ಮೇರೆಗೆ ಹರದನಹಳ್ಳಿಗೆ ಭೇಟಿ ನೀಡಿದ ನಿಖಿಲ್
ಪತ್ನಿ ರೇವತಿಯವರ ಇಚ್ಛೆಯ ಮೇರೆಗೆ ಹರದನಹಳ್ಳಿಗೆ ಭೇಟಿ ನೀಡಿದ ನಿಖಿಲ್
ಟೀಮ್ ಇಂಡಿಯಾ ಬೌಲಿಂಗ್ ಕೋಚ್ ಜೊತೆ 'ಲೆಜೆಂಡ್' ಸಿರಾಜ್ ಹುಡುಗಾಟ
ಟೀಮ್ ಇಂಡಿಯಾ ಬೌಲಿಂಗ್ ಕೋಚ್ ಜೊತೆ 'ಲೆಜೆಂಡ್' ಸಿರಾಜ್ ಹುಡುಗಾಟ