ಹಾಸನಾಂಬೆಯ ದರ್ಶನ ಪಡೆದು ಜಿಲ್ಲಾಡಳಿತವನ್ನ ಹಾಡಿ ಹೊಗಳಿದ ದೇವೇಗೌಡ

ಹಾಸನಾಂಬೆ ತಾಯಿ ದರ್ಶನಕ್ಕೆ ಪ್ರತೀವರ್ಷ ಕುಟುಂಬ ಸಮೇತ ಬರುತ್ತೇನೆ. ದೇವಿ ವರ್ಷಕ್ಕೆ ಒಮ್ಮೆ ದರ್ಶನ ನೀಡುತ್ತಾರೆ. ದೇವಿಯ ಗರ್ಭಗುಡಿಯೊಳಗೆ ಹಚ್ಚಿಟ್ಟ ದೀಪ ವರ್ಷ ಆದರು ಆರುವುದಿಲ್ಲ. ಒಂದು ವರ್ಷ ಆನಂದವಾಗಿ ಉರಿಯುತ್ತೆ ಇದು ಇತಿಹಾಸ. ಉತ್ತರದಲ್ಲಿ ವೈಷ್ಣವಿ ಇದೇ ಸ್ವರೂಪದ ದೇವರು ಎಂದು ಮಾಜಿ ಪ್ರಧಾನಿ ಹೆಚ್​​​​ಡಿ ದೇವೇಗೌಡ

ಹಾಸನ ನ.3: ಹಾಸನಾಂಬೆಯ (Hassanamba) ಸಾರ್ವಜನಿಕ ದರ್ಶನೊತ್ಸವ ಇಂದಿನಿಂದ ಆರಂಭವಾಗಿದೆ. ಇಂದಿನಿಂದ 12 ದಿನಗಳ ಕಾಲ ಬೆಳಿಗ್ಗೆ 6 ರಿಂದ ಸಂಜೆ 6 ಗಂಟೆವರೆಗೆ ಭಕ್ತರು ದರ್ಶನ ಪಡೆಯಲು ಅವಕಾಶ ನೀಡಲಾಗಿದೆ. ದೇವಿಯ ದರ್ಶನ ಪಡೆಯಲು ಮೊದಲ ದಿನವೇ ಭಾರಿ ಸಂಖ್ಯೆಯಲ್ಲಿ ಭಕ್ತರು ಆಗಮಿಸಿದ್ದಾರೆ. ಮಾಜಿ ಪ್ರದಾನಿ ಹೆಚ್​ ಡಿ ದೇವೇಗೌಡ ( HD Devegowda) ಅವರು ಪತ್ನಿ ಚನ್ನಮ್ಮ ಹಾಗೂ ಪುತ್ರಿಯರ ಜೊತೆ ಶುಕ್ರವಾರ  ಹಾಸನಾಂಬೆ ದರ್ಶನ ಪಡೆದರು. ದೇವೇಗೌಡರನ್ನು ಸಕಲ‌ ಸರ್ಕಾರಿ ಗೌರವ ಹಾಗೂ ಮಂಗಳ ವಾದ್ಯಗಳೊಂದಿಗೆ ಜಿಲ್ಲಾಡಳಿತ ಸ್ವಾಗತಿಸಿತು.

ದೇವಿಯ ದರ್ಶನ ಪಡೆದು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು ಹಾಸನಾಂಬೆ ತಾಯಿ ದರ್ಶನಕ್ಕೆ ಪ್ರತೀವರ್ಷ ಕುಟುಂಬ ಸಮೇತ ಬರುತ್ತೇನೆ. ದೇವಿ ವರ್ಷಕ್ಕೆ ಒಮ್ಮೆ ದರ್ಶನ ನೀಡುತ್ತಾರೆ. ದೇವಿಯ ಗರ್ಭಗುಡಿಯೊಳಗೆ ಹಚ್ಚಿಟ್ಟ ದೀಪ ವರ್ಷ ಆದರು ಆರುವುದಿಲ್ಲ. ಒಂದು ವರ್ಷ ಆನಂದವಾಗಿ ಉರಿಯುತ್ತೆ ಇದು ಇತಿಹಾಸ. ಉತ್ತರದಲ್ಲಿ ವೈಷ್ಣವಿ ಇದೇ ಸ್ವರೂಪದ ದೇವರು ಎಂದರು.

ಇದನ್ನೂ ಓದಿ: ವರ್ಷ ಕಳೆದರೂ ಇಲ್ಲಿ ದೀಪ ಆರಲ್ಲ, ಹೂ ಬಾಡಲ್ಲ; ಹಾಸನಾಂಬೆ ದೇವಾಲಯದ ಗರ್ಭಗುಡಿ ಬಾಗಿಲು ಓಪನ್

ಜಿಲ್ಲಾಧಿಕಾರಿ ವರ್ಗ ಹಾಸನಾಂಬೆ ಉತ್ಸವವನ್ನು ಅಚ್ಚುಕಟ್ಟಾಗಿ ಮಾಡಿದ್ದಾರೆ. ಹಿಂದೆಂದೂ ಇಷ್ಟೊಂದು ವಿಜೃಂಭಣೆಯ ದೀಪಾಲಂಕಾರ ನಾನು ನೋಡಿರಲಿಲ್ಲ. ವಿದ್ಯುತ್ ದೀಪಾಲಂಕಾರ ಸೊಗಸಾಗಿದೆ. ಜಿಲ್ಲಾ ಉಸ್ತುವಾರಿ ಸಚಿವರು ಕೂಡ ಎಲ್ಲರ ಸಹಕಾರದಿಂದ ಉತ್ತಮವಾಗಿ ಆಯೋಜನೆ ಮಾಡಿದ್ದಾರೆ. ಅರೋಗ್ಯ ಕೊಡು ಎಂದು ದೇವರಲ್ಲಿ ಕೇಳಿಕೊಂಡಿದ್ದೇನೆ. ಮುಂದಿನಬಾರಿ ಆ ತಾಯಿ ದರ್ಶನಕ್ಕೆ ನಡೆದುಕೊಂಡು ಬರುವಷ್ಟು ಶಕ್ತಿ ನೀಡಲಿ. ದೇವೇಗೌಡರಕ್ಕಿಂತ ಮುಂಚೆ ಪುತ್ರ, ಮಾಜಿ ಸಚಿವ ಹೆಚ್​ಡಿ ರೇವಣ್ಣ ಬೆಳ್ಳಂಬೆಳಿಗ್ಗೆ ಹಾಸನಾಂಬೆ ದರ್ಶನ ಪಡೆದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 11:52 am, Fri, 3 November 23

ಮಂಜುನಾಥ ಕೆಬಿ

ಮಂಜುನಾಥ ಕೆಬಿ ಪತ್ರಿಕೋದ್ಯಮದಲ್ಲಿ ಕಳೆದ 17 ವರ್ಷಗಳಿಂದ ಸೇವೆ ಮಾಡುತ್ತಿದ್ದೇನೆ. ಕರುನಾಡಿನ ಹೆಮ್ಮೆಯ ಸುದ್ದಿ ವಾಹಿನಿ ಟಿವಿ9 ಕನ್ನಡ ಜೊತೆಗೆ 15ನೇ ವರ್ಷದ ಪಯಣ ನನ್ನದು. ಓದಿದ್ದು, ಮೈಸೂರು ವಿವಿಯಲ್ಲಿ ಕಾನೂನು ಪದವಿ, ಎರಡು ವರ್ಷ ವಕೀಲ ವೃತ್ತಿ ಬಳಿಕ ಮಾಧ್ಯಮ ಕ್ಷೇತ್ರಕ್ಕೆ ಆಗಮಿಸಿ ಟಿವಿ9 ವಾಹಿನಿ ಮೂಲಕ ಸಮಸ್ಯೆಗೆ ಧ್ವನಿಯಾಗಿ ಕಾಯಕ. ಕೊಡಗಿನಲ್ಲಿ ಐದುವರೆ ವರ್ಷ ವರದಿಗಾರನಾಗಿ ಕರ್ತವ್ಯ ನಿರ್ವಹಿಸಿದ್ದು, ಇದೀಗ ಹಾಸನದ ಹಿರಿಯ ವರದಿಗಾರನಾಗಿ ಕರ್ತವ್ಯ ನಿರ್ವಹಣೆ ಮಾಡುತ್ತಿದ್ದೇನೆ.

Read More
Loading...
Unable to load recommendations.
Follow Us