ಹಾಸನ: 14 ವರ್ಷದ ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ, ನಾಲ್ವರು ಅರೆಸ್ಟ್

ಸಕಲೇಶಪುರ ತಾಲೂಕಿನಲ್ಲಿ ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ನಡೆದ ಪ್ರಕರಣಕ್ಕೆ ಸಂಬಂಧಿಸಿ ಸಕಲೇಶಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ನಾಲ್ವರ ವಿರುದ್ದ ಎಫ್​ಐಆರ್​ ದಾಖಲಾಗಿದೆ.

ಹಾಸನ: 14 ವರ್ಷದ ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ, ನಾಲ್ವರು ಅರೆಸ್ಟ್
ಸಾಂದರ್ಭಿಕ ಚಿತ್ರ
Follow us
| Updated By: ಆಯೇಷಾ ಬಾನು

Updated on: Dec 14, 2022 | 10:26 AM

ಹಾಸನ: ಜಿಲ್ಲೆಯ ಸಕಲೇಶಪುರ ತಾಲೂಕಿನಲ್ಲಿ ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ನಡೆದ ಪ್ರಕರಣಕ್ಕೆ ಸಂಬಂಧಿಸಿ ಸಕಲೇಶಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ನಾಲ್ವರ ವಿರುದ್ದ ಎಫ್​ಐಆರ್​ ದಾಖಲಾಗಿದೆ. ಕೂಲಿ ಕೆಲಸಕ್ಕಾಗಿ ಬಂದಿದ್ದ, ಕಾಫಿ ತೋಟದಲ್ಲಿ ಪೋಷಕರೊಂದಿಗೆ ನೆಲೆಸಿದ್ದ ಬಾಲಕಿ ಮೇಲೆ ಮಾಲೀಕ ಸೇರಿ ನಾಲ್ವರು ಕಿರಾತಕರು ನಿರಂತರ ಅತ್ಯಾಚಾರ ನಡೆಸಿರುವ ಆರೋಪದಲ್ಲಿ ನಾಲ್ವರ ವಿರುದ್ಧ ದೂರು ದಾಖಲಿಸಿ ನಾಲ್ವರನ್ನು ಪೊಲೀಸರು ಬಂಧಿಸಿದ್ದಾರೆ.

ಬಾಲಕಿ ಅನಾರೋಗ್ಯದಿಂದ ಆಸ್ಪತ್ರೆಗೆ ಬಂದಾಗ ಪ್ರಕರಣ ಬಯಲಾಗಿದೆ. ಬಾಲಕಿಯನ್ನ ಪುಸಲಾಯಿಸಿ ವಂಚಿಸಿ ಅತ್ಯಾಚಾರ ಎಸಗಲಾಗಿದೆ. ನಾಲ್ವರ ವಿರುದ್ಧವೊ ಪೋಕ್ಸೋ ಸೇರಿ ವಿವಿಧ ಕಾನೂನಿನಡಿ ಕೇಸ್ ದಾಖಲಾಗಿದೆ. ಮಕ್ಕಳ ಕಲ್ಯಾಣ ಸಮಿತಿ ಸಂತ್ರಸ್ತ ಬಾಲಕಿಗೆ ಆಶ್ರಯ ನೀಡಿದೆ.

ಇದನ್ನೂ ಓದಿ: ಭೀಕರ ಕಾರು ಅಪಘಾತ; ಇಂಗ್ಲೆಂಡ್‌ ಮಾಜಿ ನಾಯಕ ಆಂಡ್ರ್ಯೂ ಫ್ಲಿಂಟಾಫ್ ಆಸ್ಪತ್ರೆಗೆ ದಾಖಲು

ಘಟನೆ ಹಿನ್ನೆಲೆ

14 ವರ್ಷದ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ ನಡೆದಿದೆ. ಹಾಸನ ಜಿಲ್ಲೆ ಸಕಲೇಶಪುರ ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ತೋಟದ ಮಾಲೀಕ ಹಾಗೂ ಆತನ ಸಂಬಂಧಿಕರು ಸಮೂಹಿಕವಾಗಿ ಬಾಲಕಿಯ ಮೇಲೆ ಅತ್ಯಾಚಾರ ನಡೆಸಿದ್ದು ಬಾಲಕಿ ಗರ್ಭಿಣಿಯಾದ ಬಳಿಕ ಪ್ರಕರಣ ಬಯಲಾಗಿದೆ. ಸದ್ಯ ಪೊಲೀಸರು ಆರೋಪಿಯನ್ನು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ.

ಕೂಲಿ ಕೆಲಸಕ್ಕೆಂದು ಬಂದಿದ್ದ ಪೋಷಕರ ಜತೆ ಇದ್ದ ಬಾಲಕಿ ತೋಟಕ್ಕೆ ಬಂದಿದ್ದಾಗ ತೋಟದ ಮಾಲೀಕ ಹಾಗೂ ಆತನ ಸಂಬಂಧಿಕರು ಸಮೂಹಿಕವಾಗಿ ಬಾಲಕಿಯ ಮೇಲೆ ಅತ್ಯಾಚಾರ ನಡೆಸಿದ್ದಾರೆ. ಅನಾರೋಗ್ಯ ಹಿನ್ನೆಲೆ ಬಾಲಕಿ ಆಸ್ಪತ್ರೆಗೆ ಹೋಗಿದ್ದಾಗ ಆಕೆ ಗರ್ಭಿಣಿಯಾಗಿರುವುದು ಪತ್ತೆಯಾಗಿದ್ದು ಪ್ರಕರಣ ತಡವಾಗಿ ಬಯಲಾಗಿದೆ. ಇನ್ನು ಸಂತ್ರಸ್ತ ಬಾಲಕಿಗೆ ರಕ್ಷಣೆ ನೀಡಿ ಆರೋಪಿಗಳ ಬಂಧನಕ್ಕೆ ಕ್ರಮ ವಹಿಸಿರೋ ಮಕ್ಕಳ ರಕ್ಷಣಾ ಸಮಿತಿ ಸದಸ್ಯರು, ಪೋಷಕರು ಹಾಗು ಮಕ್ಕಳ ಕಲ್ಯಾಣ ಸಮಿತಿ ಸದಸ್ಯರ ದೂರು ಆಧರಿಸಿ ಪೊಲೀಸರು ಪೋಕ್ಸೋ ಕಾಯ್ದೆಯಡಿ ಆರೋಪಿಗಳನ್ನು ಬಂಧಿಸಿದ್ದಾರೆ.

ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

ತಾಜಾ ಸುದ್ದಿ
ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್ ವೇ ದಾಟಿ ಕಾರಿಗೆ ಡಿಕ್ಕಿ ಹೊಡೆದ KSRTC ಬಸ
ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್ ವೇ ದಾಟಿ ಕಾರಿಗೆ ಡಿಕ್ಕಿ ಹೊಡೆದ KSRTC ಬಸ
ನಿನ್ನೆ ದೆಹಲಿಯಲ್ಲಿದ್ದ ಕೇಂದ್ರ ಸಚಿವ ಸೋಮಣ್ಣರಿಂದ ಇಂದು ಬೆಂಗಳೂರಲ್ಲಿ ಸಭೆ
ನಿನ್ನೆ ದೆಹಲಿಯಲ್ಲಿದ್ದ ಕೇಂದ್ರ ಸಚಿವ ಸೋಮಣ್ಣರಿಂದ ಇಂದು ಬೆಂಗಳೂರಲ್ಲಿ ಸಭೆ
ದೈವ ಕ್ಷೇತ್ರದಲ್ಲಿ ಪವಾಡ; ಆಫ್ ಮಾಡಿದ್ದರೂ ತನ್ನಂತಾನೆ ಚಲಿಸಿದ ಆಟೋ
ದೈವ ಕ್ಷೇತ್ರದಲ್ಲಿ ಪವಾಡ; ಆಫ್ ಮಾಡಿದ್ದರೂ ತನ್ನಂತಾನೆ ಚಲಿಸಿದ ಆಟೋ
ಸಿಎಂ/ಡಿಸಿಎಂ ಅಗಬೇಕೆನ್ನುವವರು ಮತ್ತೊಮ್ಮೆ ಚುನಾವಣೆ ಎದುರಿಸಲಿ:ಡಿಕೆ ಸುರೇಶ್
ಸಿಎಂ/ಡಿಸಿಎಂ ಅಗಬೇಕೆನ್ನುವವರು ಮತ್ತೊಮ್ಮೆ ಚುನಾವಣೆ ಎದುರಿಸಲಿ:ಡಿಕೆ ಸುರೇಶ್
ಶಿವಕುಮಾರ್ ಸಿಎಂ ಆಗಬೇಕು ಎಂದಷ್ಟೇ ಹೇಳಿದ್ದು: ಚಂದ್ರಶೇಖರನಾಥ ಸ್ವಾಮೀಜಿ
ಶಿವಕುಮಾರ್ ಸಿಎಂ ಆಗಬೇಕು ಎಂದಷ್ಟೇ ಹೇಳಿದ್ದು: ಚಂದ್ರಶೇಖರನಾಥ ಸ್ವಾಮೀಜಿ
ಸೋಲಿಗೆ ಮಾಧ್ಯಮಗಳ ಮೇಲೆ ಗೂಬೆ ಕೂರಿಸುವ ಪ್ರಯತ್ನ ಮಾಡಿದ ಡಿಕೆ ಸುರೇಶ್
ಸೋಲಿಗೆ ಮಾಧ್ಯಮಗಳ ಮೇಲೆ ಗೂಬೆ ಕೂರಿಸುವ ಪ್ರಯತ್ನ ಮಾಡಿದ ಡಿಕೆ ಸುರೇಶ್
ಹಣವನ್ನು ಗಾಳಿಯಲ್ಲಿ ತೂರಿ ಹುಟ್ಟುಹಬ್ಬ ಆಚರಿಸಿಕೊಂಡ ಹುಬ್ಬಳ್ಳಿಯ ಯುವಕ
ಹಣವನ್ನು ಗಾಳಿಯಲ್ಲಿ ತೂರಿ ಹುಟ್ಟುಹಬ್ಬ ಆಚರಿಸಿಕೊಂಡ ಹುಬ್ಬಳ್ಳಿಯ ಯುವಕ
ಯುವಕರ ನೆಚ್ಚಿನ ಸ್ಟೈಲಿಶ್ ಕ್ಯಾಸಿಯೋ G Shock ಸ್ಮಾರ್ಟ್​ವಾಚ್ ಬಿಡುಗಡೆ
ಯುವಕರ ನೆಚ್ಚಿನ ಸ್ಟೈಲಿಶ್ ಕ್ಯಾಸಿಯೋ G Shock ಸ್ಮಾರ್ಟ್​ವಾಚ್ ಬಿಡುಗಡೆ
‘ಎಲ್ಲರಿಗೂ ನೋವಿದೆ’; ದರ್ಶನ್ ಪ್ರಕರಣದಲ್ಲಿ ಸುಮಲತಾ, ರಾಕ್​ಲೈನ್ ಮೌನ ಏಕೆ?
‘ಎಲ್ಲರಿಗೂ ನೋವಿದೆ’; ದರ್ಶನ್ ಪ್ರಕರಣದಲ್ಲಿ ಸುಮಲತಾ, ರಾಕ್​ಲೈನ್ ಮೌನ ಏಕೆ?
ಮನೆಯಲ್ಲಿ ಚಪ್ಪಲಿ ಹಾಕಿಕೊಂಡು ಓಡಾಡಬಾರದು, ಈ ಬಗ್ಗೆ ಆಧ್ಯಾತ್ಮದಲ್ಲೇನಿದೆ?
ಮನೆಯಲ್ಲಿ ಚಪ್ಪಲಿ ಹಾಕಿಕೊಂಡು ಓಡಾಡಬಾರದು, ಈ ಬಗ್ಗೆ ಆಧ್ಯಾತ್ಮದಲ್ಲೇನಿದೆ?