AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪೋಷಕರ ಜತೆ ಕೂಲಿಗಾಗಿ ಹಾಸನಕ್ಕೆ ಬಂದಿದ್ದ 14 ವರ್ಷದ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ; ಇಬ್ಬರು ಅರೆಸ್ಟ್

ಕೂಲಿ ಕೆಲಸಕ್ಕೆಂದು ಬಂದಿದ್ದ ಪೋಷಕರ ಜತೆ ಇದ್ದ ಬಾಲಕಿ ತೋಟಕ್ಕೆ ಬಂದಿದ್ದಾಗ ತೋಟದ ಮಾಲೀಕ ಹಾಗೂ ಆತನ ಸಂಬಂಧಿಕರು ಸಮೂಹಿಕವಾಗಿ ಬಾಲಕಿಯ ಮೇಲೆ ಅತ್ಯಾಚಾರ ನಡೆಸಿದ್ದಾರೆ.

ಪೋಷಕರ ಜತೆ ಕೂಲಿಗಾಗಿ ಹಾಸನಕ್ಕೆ ಬಂದಿದ್ದ 14 ವರ್ಷದ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ; ಇಬ್ಬರು ಅರೆಸ್ಟ್
ಸಾಂದರ್ಭಿಕ ಚಿತ್ರ
TV9 Web
| Edited By: |

Updated on:Dec 13, 2022 | 2:46 PM

Share

ಹಾಸನ: 14 ವರ್ಷದ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ ನಡೆದಿದ್ದು ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ. ಹಾಸನ ಜಿಲ್ಲೆ ಸಕಲೇಶಪುರ ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ತೋಟದ ಮಾಲೀಕ ಹಾಗೂ ಆತನ ಸಂಬಂಧಿಕರು ಸಮೂಹಿಕವಾಗಿ ಬಾಲಕಿಯ ಮೇಲೆ ಅತ್ಯಾಚಾರ ನಡೆಸಿದ್ದು ಬಾಲಕಿ ಗರ್ಭಿಣಿಯಾದ ಬಳಿಕ ಪ್ರಕರಣ ಬಯಲಾಗಿದೆ. ಸದ್ಯ ಪೊಲೀಸರು ಆರೋಪಿಯನ್ನು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ.

ಕೂಲಿ ಕೆಲಸಕ್ಕೆಂದು ಬಂದಿದ್ದ ಪೋಷಕರ ಜತೆ ಇದ್ದ ಬಾಲಕಿ ತೋಟಕ್ಕೆ ಬಂದಿದ್ದಾಗ ತೋಟದ ಮಾಲೀಕ ಹಾಗೂ ಆತನ ಸಂಬಂಧಿಕರು ಸಮೂಹಿಕವಾಗಿ ಬಾಲಕಿಯ ಮೇಲೆ ಅತ್ಯಾಚಾರ ನಡೆಸಿದ್ದಾರೆ. ಅನಾರೋಗ್ಯ ಹಿನ್ನೆಲೆ ಬಾಲಕಿ ಆಸ್ಪತ್ರೆಗೆ ಹೋಗಿದ್ದಾಗ ಆಕೆ ಗರ್ಭಿಣಿಯಾಗಿರುವುದು ಪತ್ತೆಯಾಗಿದ್ದು ಪ್ರಕರಣ ತಡವಾಗಿ ಬಯಲಾಗಿದೆ. ಇನ್ನು ಸಂತ್ರಸ್ತ ಬಾಲಕಿಗೆ ರಕ್ಷಣೆ ನೀಡಿ ಆರೋಪಿಗಳ ಬಂಧನಕ್ಕೆ ಕ್ರಮ ವಹಿಸಿರೋ ಮಕ್ಕಳ ರಕ್ಷಣಾ ಸಮಿತಿ ಸದಸ್ಯರು, ಪೋಷಕರು ಹಾಗು ಮಕ್ಕಳ ಕಲ್ಯಾಣ ಸಮಿತಿ ಸದಸ್ಯರ ದೂರು ಆಧರಿಸಿ ಪೊಲೀಸರು ಪೋಕ್ಸೋ ಕಾಯ್ದೆಯಡಿ ಇಬ್ಬರನ್ನು ಬಂಧಿಸಿ ತನಿಖೆ ನಡೆಸುತ್ತಿದ್ದಾರೆ.

ಇದನ್ನೂ ಓದಿ: Viral Video: ಹುಡುಗಾಟದ ವಯಸ್ಕರು ರಸ್ತೆ ಮೇಲೆ ಶೇಖರಗೊಂಡಿದ್ದ ನೀರು ತಮ್ಮ ಮೇಲೆ ಚಿಮ್ಮಿಸಿ ಅಂತ ವಾಹನ ಚಾಲಕರನ್ನು ಗೋಗರೆದರು!

ಪ್ರೇಮಿ ಜೊತೆಗಿದ್ದ ವಿಚ್ಚೇದಿತ ಮಹಿಳೆ ಅನುಮಾನಾಸ್ಪದ ಸಾವು

ಇನ್ನು ಮತ್ತೊಂದೆಡೆ ಹಾಸನ ಜಿಲ್ಲೆ ಹೊಳೆನರಸೀಪುರ ತಾಲೂಕಿನ ಪಾರಸನಹಳ್ಳಿಯಲ್ಲಿ ಪ್ರೇಮಿ ಜೊತೆಗಿದ್ದ ವಿಚ್ಚೇದಿತ ಮಹಿಳೆ ಅನುಮಾನಾಸ್ಪದ ರೀತಿಯಲ್ಲಿ ಮೃತಪಟ್ಟಿದ್ದಾರೆ. ಪ್ರೇಮಿಯ ವಿರುದ್ಧ ಪ್ರೇಯಸಿಯನ್ನು ಕೊಂದು ಶವವನ್ನು ಕಬ್ಬಿನ ಗದ್ದೆಯಲ್ಲಿ ಹೂತ ಹಾಕಿರುವ ಆರೋಪ ಕೇಳಿ ಬಂದಿದೆ.ಮಗಳನ್ನು ಕೊಲೆ ಮಾಡಿ ಹೂತು ಹಾಕಿದ್ದಾನೆಂದು ಪೋಷಕರು ಆರೋಪ ಮಾಡಿದ್ದಾರೆ. ಅರಕಲಗೂಡು ತಾಲೂಕು ಮೂಲದ ಕಾವ್ಯ (25) ಮೃತಪಟ್ಟ ಮಹಿಳೆ

ಕಾವ್ಯಳನ್ನು ಮದುವೆಯಾಗುವುದಾಗಿ ಜೊತೆಗಿಟ್ಟುಕೊಂಡಿದ್ದ ಪ್ರಿಯಕರ ಅವಿನಾಶ್ ವಿರುದ್ಧ ಪೋಷಕರು ಆರೋಪ ಮಾಡಿದ್ದಾರೆ. ತಹಸೀಲ್ದಾರ್ ಕೃಷ್ಣಮೂರ್ತಿ ಸಮ್ಮುಖದಲ್ಲಿ ಪೊಲೀಸರು ಶವ ಹೊರ ತೆಗೆದು ಮರಣೋತ್ತರ ಪರೀಕ್ಷೆಗೆ ಕಳಿಸಿದ್ದಾರೆ. ಎರಡು ವರ್ಷಗಳ ಹಿಂದೆ ಬಿಬಿಎಂ ಓದುವಾಗ ಪ್ರೀತಿಸಿ ಮದುವೆಯಾಗಿದ್ದ ಕಾವ್ಯ ನಂತರ ಸಂಸಾರದಲ್ಲಿ ಹೊಂದಾಣಿಕೆ ಬಾರದ ಕಾರಣ ಗಂಡನಿಂದ ವಿಚ್ಚೇಧನ ಪಡೆದಿದ್ದಳು. ಬಳಿಕ ಪಾರಸನಹಳ್ಳಿಯ ಅವಿನಾಶ್‌ನನ್ನು ಪ್ರೀತಿಸಿ ಆತನ ಮನೆಯಲ್ಲೇ ವಾಸವಾಗಿದ್ದಳು. ಕಳೆದ ಹದಿನೈದು ದಿನಗಳಿಂದ ಇದ್ದಕ್ಕಿದ್ದಂತೆ ಕಾವ್ಯ ಕಾಣೆಯಾಗಿದ್ದು ಕಾವ್ಯಳನ್ನು ಕೊಲೆಮಾಡಿ ಹೂತು ಹಾಕಿರೊದಾಗಿ ಹೇಳಲಾಗುತ್ತಿದೆ. ಅವಿನಾಶ್‌ನನ್ನು ವಶಕ್ಕೆ ಪಡೆದು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

Published On - 2:14 pm, Tue, 13 December 22

ಸಿರಿಯಾದ ಮಸೀದಿಯಲ್ಲಿ ಪ್ರಾರ್ಥನೆ ವೇಳೆ ಬಾಂಬ್ ಸ್ಫೋಟ; 8 ಜನ ಸಾವು
ಸಿರಿಯಾದ ಮಸೀದಿಯಲ್ಲಿ ಪ್ರಾರ್ಥನೆ ವೇಳೆ ಬಾಂಬ್ ಸ್ಫೋಟ; 8 ಜನ ಸಾವು
ಗಡಿಯಲ್ಲಿ ಸೈನಿಕರಿಗೆ ಸಹಾಯ ಮಾಡಿದ್ದ ಬಾಲಕನಿಗೆ ವಿಶೇಷ ಪುರಸ್ಕಾರ
ಗಡಿಯಲ್ಲಿ ಸೈನಿಕರಿಗೆ ಸಹಾಯ ಮಾಡಿದ್ದ ಬಾಲಕನಿಗೆ ವಿಶೇಷ ಪುರಸ್ಕಾರ
ದೇಶದ ಅತ್ಯುನ್ನತ ಪ್ರಶಸ್ತಿ ಸ್ವೀಕರಿಸಿದ ವೈಭವ್ ಸೂರ್ಯವಂಶಿ
ದೇಶದ ಅತ್ಯುನ್ನತ ಪ್ರಶಸ್ತಿ ಸ್ವೀಕರಿಸಿದ ವೈಭವ್ ಸೂರ್ಯವಂಶಿ
ಫ್ಯಾಮಿಲಿ ನೋಡಿ ಕಣ್ಣೀರಾದ ಬಿಗ್​​ಬಾಸ್ ಮನೆಯ ಟಫ್​ ಮ್ಯಾನ್ ರಘು
ಫ್ಯಾಮಿಲಿ ನೋಡಿ ಕಣ್ಣೀರಾದ ಬಿಗ್​​ಬಾಸ್ ಮನೆಯ ಟಫ್​ ಮ್ಯಾನ್ ರಘು
ಉನ್ನಾವ್ ಅತ್ಯಾಚಾರ ಸಂತ್ರಸ್ತೆಯ ಕುಟುಂಬದಿಂದ ನ್ಯಾಯಾಲಯದೆದುರು ಪ್ರತಿಭಟನೆ
ಉನ್ನಾವ್ ಅತ್ಯಾಚಾರ ಸಂತ್ರಸ್ತೆಯ ಕುಟುಂಬದಿಂದ ನ್ಯಾಯಾಲಯದೆದುರು ಪ್ರತಿಭಟನೆ
‘45’ ಸಿನಿಮಾಕ್ಕೆ ಪೈರಸಿ ಕಾಟ: ನಿರ್ಮಾಪಕ ಹೇಳಿದ್ದೇನು?
‘45’ ಸಿನಿಮಾಕ್ಕೆ ಪೈರಸಿ ಕಾಟ: ನಿರ್ಮಾಪಕ ಹೇಳಿದ್ದೇನು?
ಚಿತ್ರದುರ್ಗ ಬಸ್ ದುರಂತಕ್ಕೆ ಬಿಗ್​​​ ಟ್ವಿಸ್ಟ್
ಚಿತ್ರದುರ್ಗ ಬಸ್ ದುರಂತಕ್ಕೆ ಬಿಗ್​​​ ಟ್ವಿಸ್ಟ್
ಶಾಲೆ ಮಕ್ಕಳಿಗೆ ವಿಮಾನದಲ್ಲಿ ಪ್ರವಾಸ: ಮುಖ್ಯ ಶಿಕ್ಷಕರದ್ದೇ ಎಲ್ಲ ಖರ್ಚು!
ಶಾಲೆ ಮಕ್ಕಳಿಗೆ ವಿಮಾನದಲ್ಲಿ ಪ್ರವಾಸ: ಮುಖ್ಯ ಶಿಕ್ಷಕರದ್ದೇ ಎಲ್ಲ ಖರ್ಚು!
ಮೆಟ್ರೋನಲ್ಲಿ ಮೈಮುಟ್ಟಿ ಅಸಭ್ಯ ವರ್ತನೆ: ಕಾಮುಕನ ಕಿರುಕುಳ ಬಿಚ್ಚಿಟ್ಟ ಯುವತಿ
ಮೆಟ್ರೋನಲ್ಲಿ ಮೈಮುಟ್ಟಿ ಅಸಭ್ಯ ವರ್ತನೆ: ಕಾಮುಕನ ಕಿರುಕುಳ ಬಿಚ್ಚಿಟ್ಟ ಯುವತಿ
ಹನಿಮೂನ್ ಟ್ರಿಪ್ ಅರ್ಧದಲ್ಲೇ ವಾಪಸ್ಸಾಗಿ ನವವಧು ಆತ್ಮಹತ್ಯೆ
ಹನಿಮೂನ್ ಟ್ರಿಪ್ ಅರ್ಧದಲ್ಲೇ ವಾಪಸ್ಸಾಗಿ ನವವಧು ಆತ್ಮಹತ್ಯೆ