ನಾಪತ್ತೆಯಾಗಿದ್ದ ಬಾಲಕಿ ಕೆರೆಯಲ್ಲಿ ಶವವಾಗಿ ಪತ್ತೆ: ಯುವಕನ ಮೇಲೆ ಅತ್ಯಾಚಾರ ಆರೋಪ

ಬಾಲಕಿ ನಿನ್ನೆ (ಜನವರಿ 27) ಪಕ್ಕದೂರಿನ ಅಂಕವಳ್ಳಿ ಕೆರೆಯಲ್ಲಿ ಶವವಾಗಿ ಪತ್ತೆಯಾಗಿದ್ದಾಳೆ.

  • TV9 Web Team
  • Published On - 10:44 AM, 28 Jan 2021
ನಾಪತ್ತೆಯಾಗಿದ್ದ ಬಾಲಕಿ ಕೆರೆಯಲ್ಲಿ ಶವವಾಗಿ ಪತ್ತೆ: ಯುವಕನ ಮೇಲೆ ಅತ್ಯಾಚಾರ ಆರೋಪ
ಸಾವನ್ನಪ್ಪಿದ ಬಾಲಕಿ

ಹಾಸನ: ರಾತ್ರೋರಾತ್ರಿ ಮನೆಯಿಂದ ನಾಪತ್ತೆಯಾಗಿದ್ದ ಬಾಲಕಿ ಶವವಾಗಿ ಪತ್ತೆಯಾಗಿದ್ದು, ಯುವಕನೊಬ್ಬ ಅತ್ಯಾಚಾರ ಎಸಗಿ ಹತ್ಯೆಗೈದಿರುವ ಆರೋಪ ಕೇಳಿಬಂದಿದೆ.

ಸೋಮವಾರ ರಾತ್ರಿ 11 ಗಂಟೆಯಿಂದ ಕಾಣೆಯಾಗಿದ್ದ ಜಿಲ್ಲೆಯ ಹೊಳೆನರಸೀಪುರ ತಾಲ್ಲೂಕಿನ ಕೆರಗೋಡು ಗ್ರಾಮದ ಬಾಲಕಿ ನಿನ್ನೆ (ಜನವರಿ 27) ಪಕ್ಕದೂರಿನ ಅಂಕವಳ್ಳಿ ಕೆರೆಯಲ್ಲಿ ಶವವಾಗಿ ಪತ್ತೆಯಾಗಿದ್ದಾಳೆ. ಅತ್ಯಾಚಾರ ಎಸಗಿ ಕೊಲೆ ಮಾಡಿದ್ದಾರೆ ಎಂದು ಬಾಲಕಿ ಪೋಷಕರು ಯೋಗೇಶ್ (23)  ಎಂಬಾತನ ವಿರುದ್ಧ ಆರೋಪಿಸಿದ್ದಾರೆ.

ಇನ್​ಸ್ಟಾಗ್ರಾಂನಲ್ಲಿ ಪರಿಚಯವಾದ ಅಪ್ರಾಪ್ತೆ ಮೇಲೆ ಅತ್ಯಾಚಾರ ಎಸಗಿದ ಪಾಪಿಗಳು ಅರೆಸ್ಟ್​