AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾಫಿ ಬೆಳೆಗಾರರಿಗೆ ದೀಪಾವಳಿ ಉಡುಗೊರೆ ನೀಡಿದ ಸಿದ್ದರಾಮಯ್ಯ: ವಿದ್ಯುತ್ ಬಿಲ್ ಅಸಲು ಕಟ್ಟಿದರೆ ಬಡ್ಡಿ ಮನ್ನಾ

ಕಾಫಿ ಬೆಳೆಗಾರರು ವಿದ್ಯುತ್ ಬಿಲ್ ಅಸಲು ಕಟ್ಟಿದರೆ ಬಡ್ಡಿ ಮನ್ನಾ ಮಾಡುವುದಾಗಿ ಸಿಎಂ ಸಿದ್ದರಾಮಯ್ಯ ಘೋಷಣೆ ಮಾಡಿದ್ದಾರೆ. ಆ ಮೂಲಕ ಕಾಫಿ ಬೆಳೆಗಾರರಿಗೆ ದೀಪಾವಳಿ ಹಬ್ಬದ ಉಡುಗೊರೆ ನೀಡಿದ್ದಾರೆ. ಹಾಸನ ಜಿಲ್ಲಾ ಪಂಚಾಯಿತ್​ ಸಭಾಂಗಣದಲ್ಲಿ ನಡೆದ ಪ್ರಗತಿಪರಿಶೀಲನಾ ಸಭೆಯಲ್ಲಿ ಸಿಎಂ ಸಿದ್ದರಾಮಯ್ಯ ಘೋಷಣೆ ಮಾಡಿದ್ದಾರೆ.

ಕಾಫಿ ಬೆಳೆಗಾರರಿಗೆ ದೀಪಾವಳಿ ಉಡುಗೊರೆ ನೀಡಿದ ಸಿದ್ದರಾಮಯ್ಯ: ವಿದ್ಯುತ್ ಬಿಲ್ ಅಸಲು ಕಟ್ಟಿದರೆ ಬಡ್ಡಿ ಮನ್ನಾ
ಸಿಎಂ ಸಿದ್ದರಾಮಯ್ಯ
ಮಂಜುನಾಥ ಕೆಬಿ
| Edited By: |

Updated on:Nov 07, 2023 | 7:27 PM

Share

ಹಾಸನ, ನವೆಂಬರ್​​​​​​​ 07: ಕಾಫಿ ಬೆಳೆಗಾರರು ವಿದ್ಯುತ್ ಬಿಲ್ ಅಸಲು ಕಟ್ಟಿದರೆ ಬಡ್ಡಿ ಮನ್ನಾ ಮಾಡುವುದಾಗಿ ಸಿಎಂ ಸಿದ್ದರಾಮಯ್ಯ (Siddaramaiah) ಘೋಷಣೆ ಮಾಡಿದ್ದಾರೆ. ಆ ಮೂಲಕ ಕಾಫಿ ಬೆಳೆಗಾರರಿಗೆ ದೀಪಾವಳಿ ಹಬ್ಬದ ಉಡುಗೊರೆ ನೀಡಿದ್ದಾರೆ. ಹಾಸನ ಜಿಲ್ಲಾ ಪಂಚಾಯಿತ್​ ಸಭಾಂಗಣದಲ್ಲಿ ನಡೆದ ಪ್ರಗತಿಪರಿಶೀಲನಾ ಸಭೆಯಲ್ಲಿ ಸಿಎಂ ಸಿದ್ದರಾಮಯ್ಯ ಘೋಷಣೆ ಮಾಡಿದ್ದಾರೆ. ಅಸಲು ಅಥವಾ ಬಡ್ಡಿ ಮನ್ನಾಗೆ ಸಭೆಯಲ್ಲಿ ಸಕಲೇಶಪುರ ಕ್ಷೇತ್ರದ ಶಾಸಕ ಸಿಮೆಂಟ್ ಮಂಜು ಮನವಿ ಮಾಡಿದ್ದರು. ಆ ಹಿನ್ನೆಲೆ ವಿದ್ಯುತ್ ಬಿಲ್ ಬಾಕಿ ಉಳಿಸಿಕೊಂಡ ಕಾಫಿ ಬೆಳೆಗಾರರಿಗೆ ಸಿಹಿಸುದ್ದಿ ನೀಡಲಾಗಿದೆ.

ವಿದ್ಯುತ್ ಬಿಲ್ ಕಟ್ಟದಿದ್ದಕ್ಕೆ ವಿದ್ಯುತ್ ಸಂಪರ್ಕ ಕಡಿತ ಮಾಡಿದ್ದಾರೆ. ಈ ವೇಳೆ ತೋಟದ ಮನೆಗಳಿಗೆ ವಿದ್ಯುತ್ ಸಂಪರ್ಕ ಕಡಿತ ಮಾಡದಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಸಭೆಯಲ್ಲಿ ಸಿಎಂ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ.

ಗೃಹಲಕ್ಷ್ಮೀ ಯೋಜನೆ ಬಗ್ಗೆ ಮಾಹಿತಿ ಪಡೆದ ಸಿಎಂ

ಎಲ್ಲ ಫಲಾನುಭವಿಗಳಿಗೆ ಇನ್ನೂ ಯಾಕೆ ‘ಗೃಹಲಕ್ಷ್ಮೀ’ ಹಣ ತಲುಪಿಲ್ಲ ಎಂದು ಅಧಿಕಾರಿಗಳಿಗೆ ತರಾಟೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ತೆಗೆದುಕೊಂಡಿದ್ದಾರೆ. ಜಿಲ್ಲೆಯ ಮೂರು ತಾಲೂಕುಗಳಲ್ಲಿ ಶೇ.90ಕ್ಕಿಂತ ಕಡಿಮೆ ಯಾಕಾಗಿದೆ? ಡಿಸಿ, ಸಿಇಒ‌ ಜೊತೆ ಮಾತಾಡಿ ಎಲ್ಲರ ಖಾತೆಗೆ ಹಣ ಹೋಗುವಂತೆ ಮಾಡಿ‌ ಎಂದು ಅಧಿಕಾರಿಗೆ ಸೂಚಿಸಿದ್ದಾರೆ.

ಇದನ್ನೂ ಓದಿ: ಫಲಾನುಭವಿಗಳಿಗೆ ಇನ್ನೂ ಯಾಕೆ ಗೃಹಲಕ್ಷ್ಮಿ ಹಣ ತಲುಪಿಲ್ಲ? ಹಾಸನದಲ್ಲಿ ಅಧಿಕಾರಿಗಳ ತರಾಟೆಗೆ ತೆಗೆದುಕೊಂಡ ಸಿಎಂ ಸಿದ್ದರಾಮಯ್ಯ

ಜಿಲ್ಲೆಯಲ್ಲಿ 44 ಸಾವಿರ ಮಹಿಳೆಯರಿಗೆ ಗೃಹಲಕ್ಷ್ಮೀ ಯೋಜನೆ ತಲುಪಿಲ್ಲ. ಈ ಬಗ್ಗೆ ಡಿಸಿ, ಜಿ.ಪಂ. ಸಿಇಒ ಪರಿಶೀಲನೆ ಮಾಡಬೇಕು. ಸರ್ಕಾರ ಹಣ ಕೊಡಲು ತಯಾರಿರುವಾಗ ನೀವು ಅದನ್ನು ಗಮನಿಸಬೇಕು. ಗೃಹಜ್ಯೋತಿ ಯೋಜನೆಗೂ 63 ಸಾವಿರ ಗ್ರಾಹಕರ ನೋಂದಣಿ ಆಗಬೇಕು. ಎಲ್ಲವನ್ನೂ ಗಮನಿಸಿ ಅವರು ಅರ್ಹರಿದ್ದರೆ ಮಾಡಿ ಇಲ್ಲವಾದರೆ ಕೈಬಿಡಿ ಎಂದು ಹೇಳಿದ್ದಾರೆ.

ರಾಜ್ಯದಲ್ಲಿ ಖಾಲಿ ಇರುವ ಎಲ್ಲಾ ವೈದ್ಯರ ಹುದ್ದೆಗಳ ಭರ್ತಿಗೆ ಕ್ರಮ

ರಾಜ್ಯದಲ್ಲಿ ಖಾಲಿ ಇರುವ ಎಲ್ಲಾ ವೈದ್ಯರ ಹುದ್ದೆಗಳ ಭರ್ತಿಗೆ ಕ್ರಮಗೊಳ್ಳಲಾಗುವುದು. ರಾಜ್ಯದ ಎಲ್ಲ ಜಿಲ್ಲೆಯಲ್ಲಿ ಖಾಲಿ ಇರುವ ವೈದ್ಯರ ಹುದ್ದೆ ಭರ್ತಿಗೆ ಕ್ರಮ ಕೈಗೊಳ್ಳಲಾಗುವುದು. ಬಹಳ ಅಧಿಕಾರಿಗಳು ತಮ್ಮ ಕೇಂದ್ರ ಸ್ಥಾನದಲ್ಲಿ ಇರುವುದಿಲ್ಲ. ಯಾವುದೇ ಅಧಿಕಾರಿಗಳು ತಮ್ಮ ಕೇಂದ್ರ ಸ್ಥಾನದಲ್ಲಿ ಇರಬೇಕು. ಅದರಲ್ಲೂ ವೈದ್ಯರು ರೌಂಡ್​ ದಿ ಕ್ಲಾಕ್ ಕೆಲಸ ಮಾಡಬೇಕೆಂದು ಎಂದಿದ್ದಾರೆ.

ಇದನ್ನೂ ಓದಿ: ಹಾಸನಾಂಬೆಗೆ ಪ್ರಾರ್ಥನೆ ಸಲ್ಲಿಸುವ ಮೊದಲು ದೇವಸ್ಥಾನದ ಇತಿಹಾಸವನ್ನು ಅರ್ಚಕರಿಂದ ಕೇಳಿ ತಿಳಿದುಕೊಂಡ ಸಿದ್ದರಾಮಯ್ಯ

ಎಷ್ಟು ಕೆರೆಗಳು ಹಾಗೂ ರಸ್ತೆ ಒತ್ತುವರಿ ಆಗಿದೆ ಎಂಬ ಮಾಹಿತಿ ಸಂಗ್ರಹಿಸಿ. ಜಿಲ್ಲೆಯಲ್ಲಿ ಸರ್ಕಾರಿ ಜಮೀನು ಎಷ್ಟಿದೆ ಗೊತ್ತಾ ಅಂತಾ ತಹಶೀಲ್ದಾರ್​ಗೆ ಸಿದ್ದರಾಮಯ್ಯ ಪ್ರಶ್ನೆ ಮಾಡಿದ್ದಾರೆ. ತಾಲೂಕಿನಲ್ಲಿ ಎಲ್ಲೆಲ್ಲಿ ಒತ್ತುವರಿ ಆಗಿದೆ, ಎಷ್ಟು ಸರ್ಕಾರಿ ಭೂಮಿ ಇದೆ ನಿನಗೆ ಈ ಬಗ್ಗೆ ಗೊತ್ತಿದೆಯಾ ಎಂದಿದ್ದಾರೆ. ಈಗ ವರದಿ ಮಾಡಿಸುತ್ತಿದ್ದೇನೆ ಸರ್ ಎಂದು ತಹಶೀಲ್ದಾರ್​ ಉತ್ತರಿಸಿದ್ದಾರೆ.

ನಿಮ್ಮಲ್ಲಿ ಎಷ್ಟು ಕೆರೆಗಳಿವೆ ಗೊತ್ತಿದೆಯಾ ನಿಮಗೆ ಎಂಬ ಸಿಎಂ ಪ್ರಶ್ನೆಗೆ ಉತ್ತರಿಸಲಾಗದೆ ತಹಶೀಲ್ದಾರ್​ ತಡಬಡಾಯಿಸಿದ್ದಾರೆ. ನಿನಗೆ ನಾಚಿಕೆ ಆಗೋದಿಲ್ವಾ ಎಂದು ಗದರಿದ್ದಾರೆ. ತಹಶೀಲ್ದಾರ್ ಏನ್ ಮಾಡೋಕೆ‌, ಇದೆಲ್ಲಾ ಮಾಹಿತಿ ಇಲ್ಲಾ ಅಂದ್ರೆ. ಖಾತೆ ಮಾಡೋಕೆ ಹಣ ವಸೂಲಿ ಮಾಡೋದಕ್ಕೆ ಮಾತ್ರ ಇರೋದಾ ಎಂದು ತರಾಟೆ ತೆಗೆದುಕೊಂಡಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 7:12 pm, Tue, 7 November 23

ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಮೋದಿಯಿಂದ ನಾಳೆ ಉದ್ಘಾಟನೆಯಾಗಲಿದೆ ಅಸ್ಸಾಂನ ಅತಿದೊಡ್ಡ ವಿಮಾನ ನಿಲ್ದಾಣ
ಮೋದಿಯಿಂದ ನಾಳೆ ಉದ್ಘಾಟನೆಯಾಗಲಿದೆ ಅಸ್ಸಾಂನ ಅತಿದೊಡ್ಡ ವಿಮಾನ ನಿಲ್ದಾಣ
ಶಾಲೆಗೆ ಬರುವ ಮಕ್ಕಳನ್ನ ಗಾರೆ ಕೆಲಸಕ್ಕಚ್ಚಿದ ಮೇಸ್ಟ್ರು, ವಿಡಿಯೋ ವೈರಲ್
ಶಾಲೆಗೆ ಬರುವ ಮಕ್ಕಳನ್ನ ಗಾರೆ ಕೆಲಸಕ್ಕಚ್ಚಿದ ಮೇಸ್ಟ್ರು, ವಿಡಿಯೋ ವೈರಲ್
ಸಂಸತ್ ಅಧಿವೇಶನ ಮುಕ್ತಾಯ; ಮೋದಿ ಸೇರಿ ಎಲ್ಲ ಸಂಸದರಿಗೆ ಸ್ಪೀಕರ್ ಟೀ ಪಾರ್ಟಿ
ಸಂಸತ್ ಅಧಿವೇಶನ ಮುಕ್ತಾಯ; ಮೋದಿ ಸೇರಿ ಎಲ್ಲ ಸಂಸದರಿಗೆ ಸ್ಪೀಕರ್ ಟೀ ಪಾರ್ಟಿ