ಹಾಸನ: ಜಿಲ್ಲೆಯ ಹಳೇಬೀಡು ಪೊಲೀಸರು ಕಾರ್ಯಾಚರಣೆ ವೇಳೆ 6 ಅಂತರ್ ಜಿಲ್ಲಾ ಕಳ್ಳರನ್ನು ಬಂಧಿಸಿದ್ದಾರೆ. ಬಂಧಿತರಿಂದ 10 ಅಶೋಕ್ ದೋಸ್ತ್ ಗೂಡ್ಸ್ ವಾಹನ ಮತ್ತು ಎರಡು ಲಾರಿ ವಶಪಡಿಸಿಕೊಳ್ಳಾಗಿದ್ದು, ಈ ವಾಹನಗಳು ಬರೋಬ್ಬರಿ 1.50 ಕೋಟಿ ರೂಪಾಯಿ ಮೌಲ್ಯದ್ದಾಗಿದೆ. ಬಂಧಿತರನ್ನು ಶಾಹಿದ್, ಹಿದಾಯತ್, ಭಾಸ್ಕರ್ ಪೂಜಾರಿ, ಅಬ್ದುಲ್ ಕಲಾಂ, ಅಬ್ದುಲ್ ರಹೀಂ, ಖಾಜಾ ಮೊಹಮ್ಮದ್ ಎಂದು ಗುರುತಿಸಲಾಗಿದೆ.
ಬಂಧಿತರಿಂದ ಕೃತ್ಯಕ್ಕೆ ಬಳಸಿದ್ದ ಒಂದು ಮಹಿಂದ್ರಾ ಪಿಕ್ ಅಪ್, ಒಂದು ಆರ್ ಎಕ್ಸ್ ಬೈಕ್, ಒಂದು ಡಿಯೋ ಬೈಕ್ ಅನ್ನು ವಶಪಡಿಸಿಕೊಳ್ಳಲಾಗಿದೆ. ಆರೋಪಿಗಳು ಶಿವಮೊಗ್ಗ ಜಿಲ್ಲೆಯಲ್ಲಿ ಮೂರು, ಹಾಸನ ಜಿಲ್ಲೆಯಲ್ಲಿ ಎರಡು, ದಾವಣಗೆರೆ, ಹಾವೇರಿ, ಹುಬ್ಬಳ್ಳಿ, ತುಮಕೂರು, ರಾಮನಗರ, ಬೆಂಗಳೂರು ಜಿಲ್ಲೆಯಲ್ಲಿ ತಲಾ ಒಂದು ವಾಹನ ಕಳವು ಮಾಡಿದ್ದರು ಎಂದು ಹಾಸನ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಆರ್.ಶ್ರೀನಿವಾಸ್ ಗೌಡ ಮಾಹಿತಿ ನೀಡಿದ್ದಾರೆ.
ಬೆಂಗಳೂರು:ಬೈಕ್ ಕಳ್ಳರ ಬಂಧನ
ಅನುಮಾನಾಸ್ಪದ ರೀತಿಯಲ್ಲಿ ಓಡಾಡುತ್ತಿದ್ದ ಹಿನ್ನೆಲೆ, ಸಂಜಯನಗರ ಪೊಲೀಸರು, ಇಬ್ಬರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ. ತನಿಖೆ ವೇಳೆ ಕಳ್ಳತನ ಬೆಳಕಿಗೆ ಬಂದಿದ್ದು, ಸದ್ಯ ಬಂಧಿತ ಆರೋಪಿಗಳಿಂದ ಪೊಲೀಸರು 6.22 ಲಕ್ಷ ಬೆಲೆ ಬಾಳುವ105 ಗ್ರಾಂ ಚಿನ್ನಾಭರಣ, 2 ದ್ವಿಚಕ್ರ ವಾಹನ ಮತ್ತು ಹಣ ವಶಕ್ಕೆ ಪಡೆದಿದ್ದಾರೆ. ಹಗಲು ಮತ್ತು ರಾತ್ರಿ ಕಳ್ಳತನ ಮಾಡುತ್ತಿದ್ದ ಇಬ್ಬರು ಸದ್ಯ ಪೊಲೀಸರ ಅತಿಥಿಯಾಗಿದ್ದಾರೆ.
ಒಬ್ಬ ಆರೋಪಿ ಡ್ರೈಫ್ರೂಟ್ಸ್ ಅಂಗಡಿಯಲ್ಲಿ ಹಣ ಮತ್ತು ದ್ವಿಚಕ್ರ ವಾಹನ ಕಳವು ಮಾಡಿಕೊಂಡು ಪರಾರಿಯಾಗಿದ್ದ.
ಮತ್ತೊಬ್ಬ ಆರೋಪಿ ಆಸ್ಪತ್ರೆ ಮುಂಭಾಗದಲ್ಲಿ ನಿಲ್ಲಿಸಿದ್ದ ದ್ವಿಚಕ್ರ ವಾಹನ ಕದ್ದಿದ್ದ. ಇಬ್ಬರ ವಿರುದ್ಧ ಸಂಜಯನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಪೊಲೀಸರು ಗಸ್ತಿನಲ್ಲಿರಬೇಕಾದರೆ ಅನುಮಾನಸ್ಪದ ರೀತಿಯಲ್ಲಿ ಸುತ್ತಾಡುತ್ತಿದ್ದರಿಂದ ಇಬ್ಬರನ್ನು ವಶಕ್ಕೆ ಪಡೆಯಲಾಗಿದೆ.
ಇದನ್ನೂ ಓದಿ:
ಅತ್ತೆಯ ಕರಿಮಣಿ ಸರಕ್ಕೇ ಕನ್ನ, ಸಿಸಿ ಕ್ಯಾಮರಾದಲ್ಲಿ ಸೆರೆ ಆಯ್ತು ಅಳಿಯನ ಕಳ್ಳಾಟ
Bengaluru Police: ಕ್ರಿಮಿನಲ್ ಚಟುವಟಿಕೆ ನಡೆಸುತ್ತಿದ್ದವರ ಮನೆ ಮೇಲೆ ದಾಳಿ; ಒಟ್ಟು 74 ಆರೋಪಿಗಳು ವಶಕ್ಕೆ