Bribe and Honesty: ಹಾಸನದಲ್ಲಿ ಹೀಗೊಬ್ಬ ಅಧಿಕಾರಿ -ನಾನು ಭ್ರಷ್ಟನಲ್ಲ, ಲಂಚ ಸ್ವೀಕರಿಸುವುದಿಲ್ಲ‌ ಎಂದು ಬೋರ್ಡ್ ಹಾಕಿಕೊಂಡಿದ್ದಾರೆ!

| Updated By: ಸಾಧು ಶ್ರೀನಾಥ್​

Updated on: Nov 07, 2023 | 4:45 PM

Hasan BEO Superintendent: ಈ ಲಂಚಾಸುರಗಳ ಹಾವಳಿಯ ಮಧ್ಯೆ ಹಾಸನದ ಬಿಇಒ ಕಛೇರಿಯ ಅಧೀಕ್ಷಕ ಡಿಎಸ್ ಲೋಕೇಶ್ ಅವರು ತಮ್ಮ ಟೇಬಲ್ ಮೇಲೆ ನಾನು ಭ್ರಷ್ಟನಲ್ಲ‌, ಇಲ್ಲಿ ಲಂಚ ಸ್ವೀಕರಿಸುವುದಿಲ್ಲ ಎಂದು ಬೋರ್ಡ್ ಹಾಕಿಕೊಳ್ಳುವ ಮೂಲಕ ಪ್ರಾಮಾಣಿಕತೆ ಮೆರೆದಿದ್ದಾರೆ.

Bribe and Honesty: ಹಾಸನದಲ್ಲಿ ಹೀಗೊಬ್ಬ ಅಧಿಕಾರಿ -ನಾನು ಭ್ರಷ್ಟನಲ್ಲ, ಲಂಚ ಸ್ವೀಕರಿಸುವುದಿಲ್ಲ‌ ಎಂದು ಬೋರ್ಡ್ ಹಾಕಿಕೊಂಡಿದ್ದಾರೆ!
ನಾನು ಭ್ರಷ್ಟನಲ್ಲ, ಲಂಚ ಸ್ವೀಕರಿಸುವುದಿಲ್ಲ‌ ಎಂದು ಬೋರ್ಡ್ ಹಾಕಿಕೊಂಡಿದ್ದಾರೆ!
Follow us on

ಹಾಸನ, ನವೆಂಬರ್ 7: ನಾನು ಭ್ರಷ್ಟನಲ್ಲ, ಇಲ್ಲಿ ಲಂಚ ಸ್ವೀಕರಿಸುವುದಿಲ್ಲ‌ ಎಂದು ಬೋರ್ಡ್ ಹಾಕಿಕೊಂಡ ಸರ್ಕಾರಿ ಅಧಿಕಾರಿಯೊಬ್ಬರ ಫೋಟೊ ಸಾಮಾಜಿಕ ಜಾಲತಾಣದಲ್ಲಿ ಇದೀಗ ವೈರಲ್ ಆಗಿದೆ. ಎಲ್ಲೆಡೆ ಲಂಚ, 30 %, 40 % , 45 % ಲಂಚ, ಕಮೀಷನ್ (Corruption)​​​ ಎಂಬ ಆರೋಪ-ಪ್ರತ್ಯಾರೋಪಗಳೇ ಕೇಳಿಬರುತ್ತಿರುವ ಈ ಸಂದರ್ಭದಲ್ಲಿ ಮತ್ತು ಅನಾದಿ ಕಾಲದಿಂದಲೂ ಸರ್ಕಾರಿ ಕಛೇರಿಗಳಲ್ಲಿ ಲಂಚ (Bribe) ಇಲ್ಲದೆ ಏನೂ ಕೆಲಸ ಆಗಲ್ಲ, ಒಂದೇ ಒಂದು ಕಡತ ಅಲುಗಾಡಲ್ಲ ಎನ್ನೋ ನೋವು ಜನರಲ್ಲಿ ಬೇರೂರಿದೆ.

ಈ ಲಂಚಾಸುರಗಳ ಹಾವಳಿಯ ಮಧ್ಯೆ ಹಾಸನದ ಬಿಇಒ ಕಛೇರಿಯ ಅಧೀಕ್ಷಕ ಡಿಎಸ್ ಲೋಕೇಶ್ (Hasan BEO Superintendent) ಅವರು ತಮ್ಮ ಟೇಬಲ್ ಮೇಲೆ ನಾನು ಭ್ರಷ್ಟನಲ್ಲ‌, ಇಲ್ಲಿ ಲಂಚ ಸ್ವೀಕರಿಸುವುದಿಲ್ಲ ಎಂದು ಬೋರ್ಡ್ ಹಾಕಿಕೊಳ್ಳುವ ಮೂಲಕ ಪ್ರಾಮಾಣಿಕತೆ (Honesty) ಮೆರೆಯುತ್ತಿದ್ದಾರೆ.

also read:  ಮಾರುವೇಷದಲ್ಲಿ ಬೈಕ್ ಮೇಲೆ RTO ಕಚೇರಿಗೆ ಬಂದ ಶಾಸಕ, ಓಡಿ ಹೋದ ಬ್ರೋಕರುಗಳು, ಚುನಾವಣೆ ಸ್ಪರ್ಧೆಗೆ ಯತ್ನಿಸಿದ್ದ ಇನ್ಸ್​ಪೆಕ್ಟರ್​​ಗೆ ವಾರ್ನಿಂಗ್!

ಎಲ್ಲೆಡೆ ಲಂಚಾವತಾರವೇ ತಾಂಡವವಾಡುತ್ತಿರುವಾಗ ಲೋಕೇಶ್ ಅವರ ಈ ಎದೆಗಾರಿಕೆಯ ಫೋಟೋ ಎಲ್ಲೆಡೆ ವೈರಲ್ ಆಗಿದೆ. ಈ ಹಿಂದೆ ಮಾಜಿ ಪ್ರಧಾನಿ ಅವರ ಆಪ್ತ ಕಾರ್ಯದರ್ಶಿ ಆಗಿ ಕೆಲಸ ಮಾಡಿದ್ದ ಲೋಕೇಶ್ ಅವರು ತಮ್ಮ ಜನಸ್ನೇಹಿ ಕೆಲಸದಿಂದ‌ ಮೆಚ್ಚುಗೆ ಗಳಿಸಿದ್ದರು. ಇದೀಗ ಪ್ರಮೋಷನ್ ಪಡೆದು ಬಿಇಓ ಕಛೇರಿಯ ಅಧೀಕ್ಷರಾಗಿದ್ದು ಅವರು ಕರ್ತವ್ಯ ಆರಂಭಿಸಿದ ದಿನದಿಂದ ಹೀಗೊಂದು ಬೋರ್ಡ್ ಹಾಕಿಕೊಂಡು ಕೆಲಸ ಮಾಡುತ್ತಿರುವುದು ಎಲ್ಲರ ಗಮನ ಸೆಳೆದಿದೆ. ಇಂತಹ ಪ್ರಾಮಾಣಿಕ ಅಧಿಕಾರಿಗಳ ಸಂಖ್ಯೆ ಹೆಚ್ಚಾಗಲಿ ಎಂಬುದೊಂದೇ ಬಡಬೋರೇಗೌಡನ ಆಶಯವಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

 

Published On - 4:41 pm, Tue, 7 November 23