AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಾಸನಾಂಬೆ ಭಕ್ತರಿಗೆ ಗುಡ್‌ನ್ಯೂಸ್: ದರ್ಶನದ ಅವಧಿ ವಿಸ್ತರಣೆ; ಬುಧವಾರ ಮುಂಜಾನೆ 4ಗಂಟೆವರೆಗೂ ಅವಕಾಶ

ಹಾಸನದ ಹಾಸನಾಂಬೆ ದರ್ಶನಕ್ಕೆ ಮಂಗಳವಾರ ರಾತ್ರಿವರೆಗೆ ದರ್ಶನಕ್ಕೆ ಅವಕಾಶವಿತ್ತು. ಆದರೆ ಹಾಸನ ಸುತ್ತಮುತ್ತಲಿನ ಹಳ್ಳಿಗಳ ಜನರ ಮನವಿ ಮೇರೆಗೆ ನಾಳೆ (ಬುಧವಾರ) ಮುಂಜಾನೆ 4 ಗಂಟೆವರೆಗೂ ಹಾಸನಾಂಬೆ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದೆ. ಈ ಕುರಿತಾಗಿ ಜಿಲ್ಲಾ ಉಸ್ತುವಾರಿ ಸಚಿವ ಶಿವಲಿಂಗೇಗೌಡ ಮಾಹಿತಿ ನೀಡಿದ್ದಾರೆ.

ಹಾಸನಾಂಬೆ ಭಕ್ತರಿಗೆ ಗುಡ್‌ನ್ಯೂಸ್: ದರ್ಶನದ ಅವಧಿ ವಿಸ್ತರಣೆ; ಬುಧವಾರ ಮುಂಜಾನೆ 4ಗಂಟೆವರೆಗೂ ಅವಕಾಶ
ಹಾಸನಾಂಬೆ
ಮಂಜುನಾಥ ಕೆಬಿ
| Edited By: |

Updated on:Nov 10, 2026 | 5:04 PM

Share

ಮುಖ್ಯಾಂಶಗಳು

  • ಭಕ್ತರಿಗೆ ಶಕ್ತಿದೇವತೆ ಹಾಸನಾಂಬೆ ದರ್ಶನದ ಅವಧಿ ವಿಸ್ತರಣೆ
  • ಸುತ್ತಮುತ್ತಲಿನ ಹಳ್ಳಿಗಳ ಜನರ ಮನವಿ ಮೇರೆಗೆ ಅವಧಿ ವಿಸ್ತರಣೆ
  • ಟಿವಿ9ಗೆ ಜಿಲ್ಲಾ ಉಸ್ತುವಾರಿ ಸಚಿವ ಶಿವಲಿಂಗೇಗೌಡ ಹೇಳಿಕೆ

ಹಾಸನ, ನವೆಂಬರ್​​ 10: ವರ್ಷಕ್ಕೊಮ್ಮೆ ಮಾತ್ರ ಬಾಗಿಲು ತೆರೆಯುವ ಹಾಸನಾಂಬೆ ದರ್ಶನಕ್ಕೆ ರಾಜ್ಯದ ಮೂಲೆ ಮೂಲೆಯಿಂದ ಲಕ್ಷಾಂತರ ಭಕ್ತರು ಆಗಮಿಸುತ್ತಿದ್ದಾರೆ. ಈಗಾಗಲೇ ಕೇವಲ 12 ದಿನದಲ್ಲಿ 30 ಲಕ್ಷ ಭಕ್ತರು ಹಾಸನಾಂಬೆ ದರ್ಶನ ಪಡೆದಿದ್ದು, ಇನ್ನೂ ಹೆಚ್ಚಿನ ಪ್ರಮಾಣದಲ್ಲಿ ಭಕ್ತರು ಆಗಮಿಸುತ್ತಿದ್ದಾರೆ. ಹೀಗಾಗಿ ನಾಳೆ ಮುಂಜಾನೆ 4 ಗಂಟೆವರೆಗೂ ಹಾಸನಾಂಬೆ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಶಿವಲಿಂಗೇಗೌಡ ಮಾಹಿತಿ ನೀಡಿದ್ದಾರೆ.

ಜನರ ಮನವಿ ಮೇರೆಗೆ ಅವಧಿ ವಿಸ್ತರಣೆ ಎಂದ ಸಚಿವ ಶಿವಲಿಂಗೇಗೌಡ

ನಗರದಲ್ಲಿ ಟಿವಿ9 ಜೊತೆಗೆ ಮಾತನಾಡಿದ ಸಚಿವ ಶಿವಲಿಂಗೇಗೌಡ, ‘ಇಂದು ರಾತ್ರಿ 8 ಗಂಟೆಯಿಂದ 10 ಗಂಟೆವರೆಗೂ ನೈವೇದ್ಯ ಸಮಯ ಇರಲಿದೆ. ಆನಂತರ ನಾಳೆ (ಬುಧವಾರ) ಮುಂಜಾನೆ 4 ಗಂಟೆವರೆಗೂ ದರ್ಶನ ಪಡೆಯಬಹುದು. ಹಾಸನ ಸುತ್ತಮುತ್ತಲಿನ ಹಳ್ಳಿಗಳ ಜನರ ಮನವಿ ಮೇರೆಗೆ ಅವಧಿ ವಿಸ್ತರಣೆ ಮಾಡಲಾಗಿದೆ’ ಎಂದು ಅವರು ಹೇಳಿದರು.

ಇದನ್ನೂ ಓದಿ: ಹಾಸನಾಂಬೆ ದರ್ಶನಕ್ಕೆ ಇಂದೇ ಕೊನೆಯ ದಿನ: ನಾಳೆ ಮಧ್ಯಾಹ್ನ 12 ಗಂಟೆಗೆ ಗರ್ಭಗುಡಿಯ ಬಾಗಿಲು ಕ್ಲೋಸ್​

‘ಇಂದು ಹಬ್ಬ ಮುಗಿಸಿ ದರ್ಶನ ಪಡೆಯುವ ಇಚ್ಛೆ ಭಕ್ತರಿಗೆ ಇದೆ. ದರ್ಶನ ಮುಕ್ತಾಯವಾದರೆ ಮತ್ತೆ ಒಂದು ವರ್ಷ ಅವಕಾಶ ಸಿಗಲ್ಲ. ಹೀಗಾಗಿ ಚರ್ಚಿಸಿ ಹಾಸನಾಂಬೆ ದರ್ಶನದ ಅವಧಿ ವಿಸ್ತರಣೆ ಮಾಡಿದ್ದೇವೆ’ ಎಂದು ಸಚಿವ ಶಿವಲಿಂಗೇಗೌಡ ತಿಳಿಸಿದ್ದಾರೆ.

LIVE TV

ಮುಂದಿನ ವರ್ಷ ಮತ್ತಷ್ಟು ಉತ್ತಮ ಮಾಡುತ್ತೇವೆ ಎಂದ ಸಚಿವ

‘2026ರ ಹಾಸನಾಂಬೆ ದರ್ಶನೋತ್ಸವ ಯಶಸ್ವಿಯಾಗಿ ನಡೆದಿದೆ. ಸುಮಾರು 30 ಲಕ್ಷ ಭಕ್ತರು ದರ್ಶನ ಮಾಡಿದ್ದಾರೆ. ಮುಂದಿನ ವರ್ಷ ಮತ್ತಷ್ಟು ಉತ್ತಮವಾಗಿ ದರ್ಶನೋತ್ಸವ ಮಾಡುತ್ತೇವೆ. ಇಲ್ಲಿ ಜಾಗ ಚಿಕ್ಕದಾಗಿದೆ, ವಿಸ್ತರಣೆ ಮಾಡಬೇಕಿದೆ. ದಿನದ 24 ಗಂಟೆಯೂ ದರ್ಶನಕ್ಕೆ ಅರ್ಚಕರು ಸಹಕಾರ ನೀಡಿದ್ದಾರೆ. ನಾನು ಉತ್ತಮವಾಗಿ ಕೆಲಸ ಮಾಡುವುದನ್ನು ಸಹಿಸದೆ ಏನೂ ಬಿಡುಗಡೆ ಮಾಡಿದ್ದಾರೆ. ಅದನ್ನು ಹಾಸನಾಂಬೆ ಪಾದಕ್ಕೆ ಹಾಕಿದ್ದೇನೆ, ತಾಯಿಯೇ ನೋಡಿಕೊಳ್ಳಲಿ’ ಎಂದರು.

30 ಲಕ್ಷ ಭಕ್ತರಿಂದ ಹಾಸನಾಂಬೆ ದರ್ಶನ: 24.71 ಕೋಟಿ ರೂ ಆದಾಯ ಸಂಗ್ರಹ

ಇನ್ನು ದಾಖಲೆ ಪ್ರಮಾಣದಲ್ಲಿ ಕೇವಲ 12 ದಿನದಲ್ಲಿ 30 ಲಕ್ಷ ಭಕ್ತರಿಂದ ಹಾಸನಾಂಬೆ ದರ್ಶನ ಪಡೆದಿದ್ದಾರೆ. ಕಳೆದ ವರ್ಷಕ್ಕಿಂತ 5 ಲಕ್ಷಕ್ಕೂ ಹೆಚ್ಚು ಭಕ್ತರು ದೇವಿಯ ದರ್ಶನ ಮಾಡಿದ್ದಾರೆ. ಅಕ್ಟೋಬರ್ 29ರಂದು ಹಾಸನಾಂಬೆ ಗರ್ಭಗುಡಿ ಬಾಗಿಲು ತೆರೆದಿತ್ತು. ಇನ್ನು ಟಿಕೆಟ್​, ಲಡ್ಡು ಪ್ರಸಾದ ಮಾರಾಟದಿಂದ 24.71 ಕೋಟಿ ರೂ ಆದಾಯ ಸಂಗ್ರಹವಾಗಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 4:56 pm, Tue, 10 November 26

Follow Us
ಮಂಜುನಾಥ ಕೆಬಿ
ಮಂಜುನಾಥ ಕೆಬಿ

ಮಂಜುನಾಥ ಕೆಬಿ ಪತ್ರಿಕೋದ್ಯಮದಲ್ಲಿ ಕಳೆದ 17 ವರ್ಷಗಳಿಂದ ಸೇವೆ ಮಾಡುತ್ತಿದ್ದೇನೆ. ಕರುನಾಡಿನ ಹೆಮ್ಮೆಯ ಸುದ್ದಿ ವಾಹಿನಿ ಟಿವಿ9 ಕನ್ನಡ ಜೊತೆಗೆ 15ನೇ ವರ್ಷದ ಪಯಣ ನನ್ನದು. ಓದಿದ್ದು, ಮೈಸೂರು ವಿವಿಯಲ್ಲಿ ಕಾನೂನು ಪದವಿ, ಎರಡು ವರ್ಷ ವಕೀಲ ವೃತ್ತಿ ಬಳಿಕ ಮಾಧ್ಯಮ ಕ್ಷೇತ್ರಕ್ಕೆ ಆಗಮಿಸಿ ಟಿವಿ9 ವಾಹಿನಿ ಮೂಲಕ ಸಮಸ್ಯೆಗೆ ಧ್ವನಿಯಾಗಿ ಕಾಯಕ. ಕೊಡಗಿನಲ್ಲಿ ಐದುವರೆ ವರ್ಷ ವರದಿಗಾರನಾಗಿ ಕರ್ತವ್ಯ ನಿರ್ವಹಿಸಿದ್ದು, ಇದೀಗ ಹಾಸನದ ಹಿರಿಯ ವರದಿಗಾರನಾಗಿ ಕರ್ತವ್ಯ ನಿರ್ವಹಣೆ ಮಾಡುತ್ತಿದ್ದೇನೆ.

Read More
ರೈಲಿನಡಿ ಬಿದ್ದು ಸಾಯುತ್ತಿದ್ದ ಮಹಿಳೆಯ ಜೀವ ಕಾಪಾಡಿದ ಆರ್​ಪಿಎಫ್​ ಸಿಬ್ಬಂದಿ
ರೈಲಿನಡಿ ಬಿದ್ದು ಸಾಯುತ್ತಿದ್ದ ಮಹಿಳೆಯ ಜೀವ ಕಾಪಾಡಿದ ಆರ್​ಪಿಎಫ್​ ಸಿಬ್ಬಂದಿ
ದರ್ಶನ್ ಜೈಲಿನಿಂದ ಬಿಡುಗಡೆಯಾಗಲಿ ಎಂದು ಹಾಸನಾಂಬೆಗೆ ಹರಕೆ ಹೊತ್ತ ಅಭಿಮಾನಿ
ದರ್ಶನ್ ಜೈಲಿನಿಂದ ಬಿಡುಗಡೆಯಾಗಲಿ ಎಂದು ಹಾಸನಾಂಬೆಗೆ ಹರಕೆ ಹೊತ್ತ ಅಭಿಮಾನಿ
ಕೆಎಸ್‌ಆರ್‌ಟಿಸಿ ಲಗೇಜ್ ಶುಲ್ಕ ಹೆಚ್ಚಳ: ಇಂದಿನಿಂದಲೇ ಹೊಸ ದರ ಜಾರಿ
ಕೆಎಸ್‌ಆರ್‌ಟಿಸಿ ಲಗೇಜ್ ಶುಲ್ಕ ಹೆಚ್ಚಳ: ಇಂದಿನಿಂದಲೇ ಹೊಸ ದರ ಜಾರಿ
ಬಿಗ್ ಬಾಸ್ ಕನ್ನಡ: ತಾಂಡವ್, ಗಗನ್ ಸ್ನೇಹದಲ್ಲಿ ಬಿರುಕು; ಇನ್ಮುಂದೆ ಬೇರೆ ಆಟ
ಬಿಗ್ ಬಾಸ್ ಕನ್ನಡ: ತಾಂಡವ್, ಗಗನ್ ಸ್ನೇಹದಲ್ಲಿ ಬಿರುಕು; ಇನ್ಮುಂದೆ ಬೇರೆ ಆಟ
ಮುಂಬೈನಲ್ಲಿ ಪಟಾಕಿ ಅಂಗಡಿಯಲ್ಲಿ ಸ್ಫೋಟ; 16 ವರ್ಷದ ಬಾಲಕ ಸಾವು
ಮುಂಬೈನಲ್ಲಿ ಪಟಾಕಿ ಅಂಗಡಿಯಲ್ಲಿ ಸ್ಫೋಟ; 16 ವರ್ಷದ ಬಾಲಕ ಸಾವು
7 ಮಂದಿ ಕೊಲೆ ಪ್ರಕರಣ: ಆರೋಪಿ ಇಂದುಶೇಖರ್​​ ವಿಚಾರಣೆ ಮತ್ತಷ್ಟು ತೀವ್ರ
7 ಮಂದಿ ಕೊಲೆ ಪ್ರಕರಣ: ಆರೋಪಿ ಇಂದುಶೇಖರ್​​ ವಿಚಾರಣೆ ಮತ್ತಷ್ಟು ತೀವ್ರ
ಮಾದಪ್ಪನ ಬೆಟ್ಟದಲ್ಲಿ ಇಂದು ದೀಪಾವಳಿ ಜಾತ್ರಾ ಮಹೋತ್ಸವ; ಬೆಳಗಿದವು ಲಕ್ಷದೀಪ
ಮಾದಪ್ಪನ ಬೆಟ್ಟದಲ್ಲಿ ಇಂದು ದೀಪಾವಳಿ ಜಾತ್ರಾ ಮಹೋತ್ಸವ; ಬೆಳಗಿದವು ಲಕ್ಷದೀಪ
ಹಾಸನಾಂಬೆ ದರ್ಶನಕ್ಕೆ ಇಂದೇ ಕೊನೆಯ ದಿನ
ಹಾಸನಾಂಬೆ ದರ್ಶನಕ್ಕೆ ಇಂದೇ ಕೊನೆಯ ದಿನ
ಅಣ್ಣಾವ್ರ ಸಂಬಂಧಿಕರ ಮನೆಯಲ್ಲಿ ನಿಗೂಢ ಸ್ಫೋಟ; ಕಿಟಕಿ ಗಾಜುಗಳು ಪುಡಿಪುಡಿ!
ಅಣ್ಣಾವ್ರ ಸಂಬಂಧಿಕರ ಮನೆಯಲ್ಲಿ ನಿಗೂಢ ಸ್ಫೋಟ; ಕಿಟಕಿ ಗಾಜುಗಳು ಪುಡಿಪುಡಿ!
ಬೆಂಗಳೂರಿನ ಅಮೃತಹಳ್ಳಿ ಬಳಿ ಭಾರಿ ಅಗ್ನಿ ಅವಘಡ
ಬೆಂಗಳೂರಿನ ಅಮೃತಹಳ್ಳಿ ಬಳಿ ಭಾರಿ ಅಗ್ನಿ ಅವಘಡ