AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಾಸನಾಂಬೆ ದರ್ಶನೋತ್ಸವಕ್ಕೆ ದಿನಾಂಕ ಫಿಕ್ಸ್: ಈ ಬಾರಿ ಹೇಗಿರಲಿದೆ ಉತ್ಸವ? ವಿವರಗಳು ಇಲ್ಲಿವೆ

ಹಾಸನಾಂಬ ದರ್ಶನ ದಿನಾಂಕಗಳು: 2026ರ ಹಾಸನಾಂಬೆ ದರ್ಶನೋತ್ಸವ ಅಕ್ಟೋಬರ್ 29ರಿಂದ ನವೆಂಬರ್ 11ರವರೆಗೆ ನಡೆಯಲಿದೆ. ಈ ಬಾರಿ ಪಾಸ್ ವ್ಯವಸ್ಥೆ ಕಡಿಮೆಗೊಳಿಸಿ ಸಾರ್ವಜನಿಕ ಭಕ್ತರಿಗೆ ದರ್ಶನಕ್ಕೆ ಮೊದಲ ಆದ್ಯತೆ ನೀಡಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆಎಂ ಶಿವಲಿಂಗೇಗೌಡ ತಿಳಿಸಿದ್ದಾರೆ. ದನಗಳ ಜಾತ್ರೆ, ರಂಗೋಲಿ ಸ್ಪರ್ಧೆ ಸೇರಿದಂತೆ ಹಲವು ವಿಶೇಷ ಕಾರ್ಯಕ್ರಮಗಳ ಆಯೋಜನೆಗೂ ಚಿಂತನೆ ನಡೆದಿದೆ.

ಹಾಸನಾಂಬೆ ದರ್ಶನೋತ್ಸವಕ್ಕೆ ದಿನಾಂಕ ಫಿಕ್ಸ್: ಈ ಬಾರಿ ಹೇಗಿರಲಿದೆ ಉತ್ಸವ? ವಿವರಗಳು ಇಲ್ಲಿವೆ
ಹಾಸನಾಂಬೆ (ಕಳೆದ ವರ್ಷದ ಚಿತ್ರ)Image Credit source: tv9
ಮಂಜುನಾಥ ಕೆಬಿ
| Edited By: |

Updated on: Sep 27, 2026 | 7:14 AM

Share

ಮುಖ್ಯಾಂಶಗಳು

  • ಅ.29ರಿಂದ ನ.11ರವರೆಗೆ ಹಾಸನಾಂಬೆ ದರ್ಶನೋತ್ಸವ
  • ಸಾರ್ವಜನಿಕರಿಗೆ ದರ್ಶನಕ್ಕೆ ಮೊದಲ ಆದ್ಯತೆ
  • ಈ ಬಾರಿ ಪಾರದರ್ಶಕ ಉತ್ಸವಕ್ಕೆ ಸಚಿವರ ಭರವಸೆ

ಹಾಸನ, ಸೆಪ್ಟೆಂಬರ್ 27: ಹಾಸನಾಂಬೆ ದರ್ಶನೋತ್ಸವಕ್ಕೆ ದಿನಾಂಕ ನಿಗದಿಯಾಗಿದ್ದು, 2026ರ ಅಕ್ಟೋಬರ್ 29ರಿಂದ ನವೆಂಬರ್ 11ರವರೆಗೆ ಭಕ್ತರಿಗೆ ದರ್ಶನಕ್ಕೆ ಅವಕಾಶ ಇರಲಿದೆ. ಹಾಸನ ವೈದ್ಯಕೀಯ ಕಾಲೇಜಿನ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಕೆಎಂ ಶಿವಲಿಂಗೇಗೌಡ ಅವರು ಹಾಸನಾಂಬೆ ದರ್ಶನೋತ್ಸವ ಹಾಗೂ ಸಿದ್ದೇಶ್ವರ ಸ್ವಾಮಿ ಜಾತ್ರಾ ಮಹೋತ್ಸವದ ಪೋಸ್ಟರ್ ಮತ್ತು ವೆಬ್‌ಸೈಟ್ ಬಿಡುಗಡೆ ಮಾಡಿದರು. ಈ ಬಾರಿಯೂ ಪಾಸ್ ವ್ಯವಸ್ಥೆಯನ್ನು ಅತ್ಯಂತ ಕಡಿಮೆ ಇರಿಸಲಾಗುವುದು ಎಂದು ಸಚಿವರು ತಿಳಿಸಿದರು. ಗಣ್ಯರ ದರ್ಶನಕ್ಕೆ ಕಳೆದ ವರ್ಷದಂತೆ ಸಮಯ ನಿಗದಿ ಮಾಡಲಾಗುತ್ತದೆ. ಸಾರ್ವಜನಿಕ ಭಕ್ತರಿಗೆ ಸಮರ್ಪಕವಾಗಿ ದರ್ಶನ ಕಲ್ಪಿಸುವುದಕ್ಕೆ ಮೊದಲ ಆದ್ಯತೆ ನೀಡಲಾಗುವುದು ಎಂದು ಹೇಳಿದರು.

ಹಾಸನಾಂಬೆ ಉತ್ಸವವನ್ನು ಇಡೀ ಜಿಲ್ಲೆಯ ಜನರನ್ನು ಒಳಗೊಂಡ ಹಬ್ಬವನ್ನಾಗಿ ಆಚರಿಸುವ ಉದ್ದೇಶವಿದೆ. ಈ ಬಾರಿ ದನಗಳ ಜಾತ್ರೆ, ರಂಗೋಲಿ ಸ್ಪರ್ಧೆ ಸೇರಿದಂತೆ ಹಲವು ವಿಶೇಷ ಕಾರ್ಯಕ್ರಮಗಳನ್ನು ಆಯೋಜಿಸುವ ಅಭಿಲಾಷೆ ಇದೆ ಎಂದು ಶಿವಲಿಂಗೇಗೌಡ ತಿಳಿಸಿದರು.

ಸಾರ್ವಜನಿಕರಿಗೆ ಮೊದಲ ಆದ್ಯತೆ: ಶಿವಲಿಂಗೇಗೌಡ

ಹಾಸನಾಂಬೆ ದರ್ಶನಕ್ಕೆ ಬರುವ ಸಾರ್ವಜನಿಕರು ಗಂಟೆಗಟ್ಟಲೆ ಸರದಿಯಲ್ಲಿ ನಿಲ್ಲುವ ಪರಿಸ್ಥಿತಿ ನಿರ್ಮಾಣವಾಗಬಾರದು. ಆರು-ಏಳು ಗಂಟೆ ಕ್ಯೂನಲ್ಲಿ ನಿಂತು ಭಕ್ತರು ಅಸಮಾಧಾನ ವ್ಯಕ್ತಪಡಿಸುವಂತಾಗಬಾರದು ಎಂಬ ಕಾರಣಕ್ಕೆ ಸಾರ್ವಜನಿಕರಿಗೆ ಮೊದಲ ಆದ್ಯತೆ ನೀಡಲಾಗುವುದು ಎಂದು ಸಚಿವರು ಹೇಳಿದರು. ಪುಟ್ಟ ಮಕ್ಕಳೊಂದಿಗೆ ಬರುವ ಮಹಿಳಾ ಭಕ್ತರಿಗೆ ವಿಶೇಷ ಸರದಿ ಸಾಲು ಕಲ್ಪಿಸುವ ಬಗ್ಗೆಯೂ ಸಭೆಯಲ್ಲಿ ಚರ್ಚಿಸಲಾಯಿತು.

ಈ ಬಾರಿ ಪಾರದರ್ಶಕ ಹಾಸನಾಂಬೆ ಉತ್ಸವ: ಸಚಿವ

ಹಾಸನಾಂಬೆ ಉತ್ಸವದ ಹಣಕಾಸು ನಿರ್ವಹಣೆ ಈ ಬಾರಿ ಪಾರದರ್ಶಕವಾಗಿರಲಿದೆ ಎಂದು ಸಚಿವ ಶಿವಲಿಂಗೇಗೌಡ ಹೇಳಿದರು. ಪೈಸಾ ಟು ಪೈಸಾ ಲೆಕ್ಕ ಇರಲಿದೆ ಎಂದು ತಿಳಿಸಿದ ಅವರು, ಹಿಂದಿನ ಅವ್ಯವಹಾರಗಳ ಬಗ್ಗೆ ತಾವು ತನಿಖೆ ಮಾಡಲು ಹೋಗುವುದಿಲ್ಲ ಎಂದರು. ಈ ಬಾರಿ ಯಾವುದೇ ರೀತಿಯ ದುಂದು ವೆಚ್ಚಕ್ಕೆ ಅವಕಾಶ ನೀಡುವುದಿಲ್ಲ ಎಂದು ಸ್ಪಷ್ಟಪಡಿಸಿದರು.

ಉತ್ಸವದ ಸಿದ್ಧತೆ ಕುರಿತು ನಡೆದ ಸಭೆಯಲ್ಲಿ ವಿವಿಧ ಸಲಹೆಗಳನ್ನು ಆಲಿಸಲಾಯಿತು. ಉತ್ಸವದ ಹಿನ್ನೆಲೆ ನಡೆಯುವ ಕಾರ್ಯಕ್ರಮಗಳನ್ನು ಬಸ್ ನಿಲ್ದಾಣದ ಸಮೀಪ ಆಯೋಜಿಸುವ ಬಗ್ಗೆಯೂ ಚರ್ಚೆ ನಡೆಯಿತು. ಕರ್ತವ್ಯಕ್ಕೆ ಆಗಮಿಸುವ ಸಿಬ್ಬಂದಿಗೆ ಎಂಟು ಗಂಟೆಗಳ ಕರ್ತವ್ಯ ನಿರ್ವಹಣೆಗೆ ಅವಕಾಶ ನೀಡಬೇಕು ಹಾಗೂ ಗ್ರಾಮ ಸಹಾಯಕರಿಗೆ ಗೌರವಧನ ನೀಡಬೇಕು ಎಂಬ ಬೇಡಿಕೆಗಳು ಸಭೆಯಲ್ಲಿ ಕೇಳಿಬಂದವು.

LIVE TV

ಹಾಸನಾಂಬೆ ಉತ್ಸವವನ್ನು ಮತ್ತಷ್ಟು ಉತ್ತಮವಾಗಿ ಆಯೋಜಿಸಲು ಸಾರ್ವಜನಿಕರು ಹಾಗೂ ಅಧಿಕಾರಿಗಳಿಂದ ಸಲಹೆಗಳನ್ನು ಪಡೆದು ಕ್ರಮ ಕೈಗೊಳ್ಳುವುದಾಗಿ ಸಚಿವರು ಭರವಸೆ ನೀಡಿದರು.

ಹಾಸನಾಂಬೆ ಉತ್ಸವಕ್ಕೆ ಆಗಮಿಸಲಿರುವ ಸಿಎಂ ಡಿಕೆ ಶಿವಕುಮಾರ್

ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಉತ್ಸವಕ್ಕೆ ಒಂದು ದಿನ ಆಗಮಿಸಲಿದ್ದಾರೆ ಎಂದು ಸಚಿವರು ತಿಳಿಸಿದ್ದು, ಉದ್ಘಾಟನೆ ದಿನವೇ ಆಗಮಿಸುತ್ತಾರೆಯೇ ಎಂಬುದು ಬಳಿಕ ನಿರ್ಧಾರವಾಗಲಿದೆ ಎಂದರು.

ಹಾಸನಾಂಬೆ ಆಶೀರ್ವಾದದಿಂದ ಸಚಿವ ಸ್ಥಾನ ಸಿಕ್ಕಿದೆ: ಶಿವಲಿಂಗೇಗೌಡ

ಹಾಸನಾಂಬೆ ದೇವಿಯ ಬಗ್ಗೆ ಮಾತನಾಡಿದ ಶಿವಲಿಂಗೇಗೌಡ, ಪ್ರತೀ ಬಾರಿ ಹಾಸನಾಂಬೆ ಬಳಿ, ‘ಮುಂದಿನ ಬಾರಿಯಾದರೂ ದೇವಿಯ ಸೇವೆ ಮಾಡುವ ಅವಕಾಶ ಸಿಗಲಿ’ ಎಂದು ಬೇಡಿಕೊಳ್ಳುತ್ತಿದ್ದೆ. ಸ್ವಲ್ಪ ತಡವಾದರೂ ಈಗ ಆ ಅವಕಾಶ ಸಿಕ್ಕಿದೆ. ಹಾಸನಾಂಬೆ ಆಶೀರ್ವಾದದಿಂದಲೇ ಸಚಿವ ಸ್ಥಾನ ಸಿಕ್ಕಿದೆ ಎಂದು ಹೇಳಿದರು.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಮಂಜುನಾಥ ಕೆಬಿ
ಮಂಜುನಾಥ ಕೆಬಿ

ಮಂಜುನಾಥ ಕೆಬಿ ಪತ್ರಿಕೋದ್ಯಮದಲ್ಲಿ ಕಳೆದ 17 ವರ್ಷಗಳಿಂದ ಸೇವೆ ಮಾಡುತ್ತಿದ್ದೇನೆ. ಕರುನಾಡಿನ ಹೆಮ್ಮೆಯ ಸುದ್ದಿ ವಾಹಿನಿ ಟಿವಿ9 ಕನ್ನಡ ಜೊತೆಗೆ 15ನೇ ವರ್ಷದ ಪಯಣ ನನ್ನದು. ಓದಿದ್ದು, ಮೈಸೂರು ವಿವಿಯಲ್ಲಿ ಕಾನೂನು ಪದವಿ, ಎರಡು ವರ್ಷ ವಕೀಲ ವೃತ್ತಿ ಬಳಿಕ ಮಾಧ್ಯಮ ಕ್ಷೇತ್ರಕ್ಕೆ ಆಗಮಿಸಿ ಟಿವಿ9 ವಾಹಿನಿ ಮೂಲಕ ಸಮಸ್ಯೆಗೆ ಧ್ವನಿಯಾಗಿ ಕಾಯಕ. ಕೊಡಗಿನಲ್ಲಿ ಐದುವರೆ ವರ್ಷ ವರದಿಗಾರನಾಗಿ ಕರ್ತವ್ಯ ನಿರ್ವಹಿಸಿದ್ದು, ಇದೀಗ ಹಾಸನದ ಹಿರಿಯ ವರದಿಗಾರನಾಗಿ ಕರ್ತವ್ಯ ನಿರ್ವಹಣೆ ಮಾಡುತ್ತಿದ್ದೇನೆ.

Read More
ಬೀದಿದೀಪ ನಿರ್ವಹಣೆಯಲ್ಲಿ ಲೋಪ: ಗುತ್ತಿಗೆದಾರರಿಗೆ 13 ಲಕ್ಷ ರೂ ದಂಡ
ಬೀದಿದೀಪ ನಿರ್ವಹಣೆಯಲ್ಲಿ ಲೋಪ: ಗುತ್ತಿಗೆದಾರರಿಗೆ 13 ಲಕ್ಷ ರೂ ದಂಡ
ಬಾಲ್ಕನಿ ತಡೆಗೋಡೆ ಕುಸಿದು ರಸ್ತೆಗೆ ಬಿದ್ದ ವಿದ್ಯಾರ್ಥಿಗಳು
ಬಾಲ್ಕನಿ ತಡೆಗೋಡೆ ಕುಸಿದು ರಸ್ತೆಗೆ ಬಿದ್ದ ವಿದ್ಯಾರ್ಥಿಗಳು
ಪಾಕ್ ಪ್ರಧಾನಿಯ ಸುಳ್ಳು ಹೇಳಿಕೆಗೆ ನಕ್ಕು ತಲೆಯಾಡಿಸಿದ ಭಾರತೀಯ ರಾಜತಾಂತ್ರಿಕ
ಪಾಕ್ ಪ್ರಧಾನಿಯ ಸುಳ್ಳು ಹೇಳಿಕೆಗೆ ನಕ್ಕು ತಲೆಯಾಡಿಸಿದ ಭಾರತೀಯ ರಾಜತಾಂತ್ರಿಕ
ಪ್ರಣಾಳಿಕೆ ಫೈಟ್: BR ಪಾಟೀಲ್​​ ಬೆನ್ನಲ್ಲೇ ಸಿಎಂಗೆ ಬಿಕೆ ಹರಿಪ್ರಸಾದ್ ಪತ್ರ
ಪ್ರಣಾಳಿಕೆ ಫೈಟ್: BR ಪಾಟೀಲ್​​ ಬೆನ್ನಲ್ಲೇ ಸಿಎಂಗೆ ಬಿಕೆ ಹರಿಪ್ರಸಾದ್ ಪತ್ರ
ಕಳ್ಳಾಟ ಆಡಿ ಸಿಕ್ಕಿಬಿದ್ದ ಕಿರಣ್​​ಗೆ ಕಿಚ್ಚನ ಕ್ಲಾಸ್: ವಿಡಿಯೋ ನೋಡಿ
ಕಳ್ಳಾಟ ಆಡಿ ಸಿಕ್ಕಿಬಿದ್ದ ಕಿರಣ್​​ಗೆ ಕಿಚ್ಚನ ಕ್ಲಾಸ್: ವಿಡಿಯೋ ನೋಡಿ
ಬಂಗಾಳದಲ್ಲಿ ಟಿಎಂಸಿ ಶಾಸಕ ಕುನಾಲ್ ಘೋಷ್ ಕಾರಿನ ಮೇಲೆ ಮೊಟ್ಟೆ, ಕಲ್ಲು ತೂರಾಟ
ಬಂಗಾಳದಲ್ಲಿ ಟಿಎಂಸಿ ಶಾಸಕ ಕುನಾಲ್ ಘೋಷ್ ಕಾರಿನ ಮೇಲೆ ಮೊಟ್ಟೆ, ಕಲ್ಲು ತೂರಾಟ
ಮೆಚ್ಚಿನ ಶಿಕ್ಷಕನಿಗೆ ಮಕ್ಕಳ ಕಣ್ಣೀರಿನ ವಿದಾಯ
ಮೆಚ್ಚಿನ ಶಿಕ್ಷಕನಿಗೆ ಮಕ್ಕಳ ಕಣ್ಣೀರಿನ ವಿದಾಯ
ಹಾಲಿನ ದರ ಏರಿಕೆ ಬಗ್ಗೆ ಸಿಎಂ ಡಿಕೆ ಶಿವಕುಮಾರ್ ಹೇಳಿದ್ದಿಷ್ಟು
ಹಾಲಿನ ದರ ಏರಿಕೆ ಬಗ್ಗೆ ಸಿಎಂ ಡಿಕೆ ಶಿವಕುಮಾರ್ ಹೇಳಿದ್ದಿಷ್ಟು
ಪಿತೃಪಕ್ಷದ ಮಹತ್ವವೇನು? ಈ 15 ದಿನಗಳಲ್ಲಿ ಪಿತೃಕಾರ್ಯ ಏಕೆ ಮಾಡಬೇಕು?
ಪಿತೃಪಕ್ಷದ ಮಹತ್ವವೇನು? ಈ 15 ದಿನಗಳಲ್ಲಿ ಪಿತೃಕಾರ್ಯ ಏಕೆ ಮಾಡಬೇಕು?
ವಿಷ್ಣುವರ್ಧನ್ ಅಮೃತ ಮಹೋತ್ಸವ; ಕಾರ್ಯಕ್ರಮದ ವಿವರ ಹೀಗಿದೆ
ವಿಷ್ಣುವರ್ಧನ್ ಅಮೃತ ಮಹೋತ್ಸವ; ಕಾರ್ಯಕ್ರಮದ ವಿವರ ಹೀಗಿದೆ