ಹಾಸನಾಂಬೆ ಉತ್ಸವ 2026: ವಿವಿಐಪಿ, ಸಾಮಾನ್ಯ ಜನರ ದರ್ಶನ ಯಾವಾಗ? ಇಲ್ಲಿದೆ ಟೈಮಿಂಗ್ಸ್

ವರ್ಷಕ್ಕೊಮ್ಮೆ ಮಾತ್ರ ದರ್ಶನ ಭಾಗ್ಯ ಕರುಣಿಸುವ ಹಾಸನದ ಅಧಿದೇವತೆ ತಾಯಿ ಹಾಸನಾಂಬೆ ಜಾತ್ರಾ ಮಹೋತ್ಸವಕ್ಕೆ ಇಂದು (ಅಕ್ಟೋಬರ್ 29) ಚಾಲನೆ ದೊರೆತಿದೆ. ಆಶ್ವೀಜ ಮಾಸದ ಮೊದಲ ಗುರುವಾರ ಮಧ್ಯಾಹ್ನ 12:28ಕ್ಕೆ ಅರಸು ವಂಶಸ್ಥ ನಂಜರಾಜೆ ಅರಸ್ ಸಂಪ್ರದಾಯದಂತೆ ಗೊನೆಯುಳ್ಳ ಬಾಳೆ ಕಂಬ ಕಡಿದ ನಂತರ ಹಲವು ಗಣ್ಯರ ಸಮ್ಮುಖದಲ್ಲಿ ಶಾಸ್ತ್ರೋಕ್ತವಾಗಿ ದೇವಿಯ ಗರ್ಭಗುಡಿ ಬಾಗಿಲನ್ನು ತೆರೆಯಲಾಯಿತು. ಈ ವೇಳೆ ಹಾಜರಿದ್ದ ನೂರಾರು ಭಕ್ತರು, ಹಾಸನಾಂಬೆಗೆ ಜಯವಾಗಲಿ ಎಂದು ವಿಶೇಷ ಘೋಷವಾಕ್ಯ ಮೊಳಗಿಸಿದರು. ಇನ್ನು ಜನ ಸಾಮಾನ್ಯರಿಗೆ ಹಾಗೂ ವಿವಿಐಪಿಗಳಿಗೆ ಹಾಸನಾಂಬೆಯ ದರ್ಶನಕ್ಕೆ ಸಮಯ ನಿಗದಿಪಡಿಸಲಾಗಿದ್ದು, ಟೈಮಿಂಗ್ಸ್ ಇಲ್ಲಿದೆ.

ಹಾಸನಾಂಬೆ ಉತ್ಸವ 2026: ವಿವಿಐಪಿ, ಸಾಮಾನ್ಯ ಜನರ ದರ್ಶನ ಯಾವಾಗ? ಇಲ್ಲಿದೆ ಟೈಮಿಂಗ್ಸ್
Hasanambe

Updated on: Oct 29, 2026 | 2:45 PM

ಹಾಸನ, (ಅಕ್ಟೋಬರ್ 29): ವರ್ಷಕ್ಕೊಮ್ಮೆ ಭಕ್ತರಿಗೆ ದರ್ಶನ ನೀಡುವ ಹಾಸನದ ಶಕ್ತಿದೇವತೆ ಹಾಸನಾಂಬ ದೇವಿಯ ಜಾತ್ರಾ ಮಹೋತ್ಸವ ಇಂದಿನಿಂದ ಶುರುವಾಗಿದ್ದು, ನವೆಂಬರ್ 11ರವರೆಗೆ ನಡೆಯಲಿದೆ. ಆದ್ರೆ, ಇಂದು ಗರ್ಭಗುಡಿ ಬಾಗಿಲು ತೆರೆಯುವ ಸಂದರ್ಭದಲ್ಲಿ ಸಾರ್ವಜನಿಕರಿಗೆ ದೇವಿ ದರ್ಶನಕ್ಕೆ ಅವಕಾಶವಿರುವುದಿಲ್ಲ. ಹಾಗೇ ಜಾತ್ರೆಯ ಕೊನೆಯ ದಿನ ತಾಯಿಯ ದರ್ಶನ ಇರುವುದಿಲ್ಲ. ಉಳಿದಂತೆ ಅಕ್ಟೋಬರ್ 30ರ ಬೆಳಗ್ಗೆ 6 ಗಂಟೆಯಿಂದ ನವೆಂಬರ್ 10ರವರೆಗೆ ಭಕ್ತರಿಗೆ ದೇವಿ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದೆ. ಭಕ್ತರ ಅನುಕೂಲಕ್ಕಾಗಿ ಜಿಲ್ಲಾಡಳಿತವು 1,000 ಮತ್ತು 300ರ ವಿಶೇಷ ದರ್ಶನದ ಟಿಕೆಟ್ ವ್ಯವಸ್ಥೆ ಮಾಡಿದೆ.

ತಾಯಿ ದರ್ಶನಕ್ಕೆ ಎರಡು ಪ್ರತ್ಯೇಕ ಕೌಂಟರ್‌

ನಾಡಹಬ್ಬದಂತೆಯೇ ಈ ಬಾರಿ ಹಾಸನಾಂಬೆ ಜಾತ್ರಾ ಮಹೋತ್ಸವಕ್ಕೆ ಸಕಲ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ. ಈಗಾಗಲೇ ಭಕ್ತರು ಹಾಸನದತ್ತ ಮುಖ ಮಾಡಿದ್ದಾರೆ. ಈ ಬಾರಿ ಭಕ್ತಾದಿಗಳಲ್ಲಿ ನೂಕು ನುಗ್ಗಲು ಆಗದಂತೆ ಎರಡು ಪ್ರತ್ಯೇಕ ಕೌಂಟರ್‌ಗಳನ್ನು ತೆರೆಯಲಾಗಿದೆ. ಒಂದು ಮಾಮೂಲಿ ಕ್ಯೂ, ಇನ್ನೊಂದು 300 ರೂಪಾಯಿಯ ಕ್ಯೂ ಹಾಗೂ ಮತ್ತೊಂದು 1,000 ರೂಪಾಯಿಯ ಕ್ಯೂ ಇರಲಿದೆ. ಇನ್ನು ಗೋಲ್ಡನ್‌ ಪಾಸ್‌ ಹೊಂದಿರುವ ಜನರು ಬೆಳಗ್ಗೆ ಎಂಟು ಗಂಟೆಯಿಂದ ಹತ್ತು ಗಂಟೆಯ ಒಳಗೆ ತಾಯಿ ದರ್ಶನ ಮುಗಿಸಿಕೊಳ್ಳಬೇಕಿದೆ. ಒಂದು ಗೋಲ್ಡ್‌ ಕಾರ್ಡ್‌ನಲ್ಲಿ ಒಬ್ಬ ವ್ಯಕ್ತಿಗೆ ಮಾತ್ರ ಅವಕಾಶ ದೊರೆಯಲಿದೆ.

ಇದನ್ನೂ ನೋಡಿ: ಹಾಸನಾಂಬ ದರ್ಶನೋತ್ಸವ 2026: ವರ್ಷದ ಬಳಿಕ ತೆರೆದ ದೇಗುಲದ ಗರ್ಭಗುಡಿ

9.5 ಕಿ.ಮೀ. ಬ್ಯಾರಿಕೇಡ್ ವ್ಯವಸ್ಥೆ

ಜಾತ್ರೆಗೆ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಆಗಮಿಸುವ ನಿರೀಕ್ಷೆಯಿರುವುದರಿಂದ ಜನಸಂದಣಿ ನಿಯಂತ್ರಣಕ್ಕೆ ಜಿಲ್ಲಾಡಳಿತ ಕ್ರಮ ಕೈಗೊಂಡಿದೆ. ಭಕ್ತರು ಸರದಿಯಲ್ಲಿ ಸಾಗಲು ಸುಮಾರು 9.5 ಕಿಲೋಮೀಟರ್ ಉದ್ದದ ಬ್ಯಾರಿಕೇಡ್ ವ್ಯವಸ್ಥೆ ಮಾಡಲಾಗಿದೆ. ಇದರಿಂದ ದರ್ಶನದ ವೇಳೆ ಜನರ ಓಡಾಟವನ್ನು ಸುಗಮಗೊಳಿಸುವ ಉದ್ದೇಶ ಹೊಂದಲಾಗಿದೆ. ಇನ್ನು ವಿಐಪಿಗಳ ದರ್ಶನಕ್ಕೆ ಬೆಳಗ್ಗೆ 10:30 ರಿಂದ ಮಧ್ಯಾಹ್ನ 12:30ರವರೆಗೆ ಸಮಯ ನಿಗದಿ ಮಾಡಲಾಗಿದ್ದು, ಜಿಲ್ಲಾಡಳಿತದ ವತಿಯಿಂದಲೇ ವಿಶೇಷ ದರುಶನ ವ್ಯವಸ್ಥೆ ಮಾಡಲಾಗಿದೆ.

ಜಾತ್ರೆಗೆ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಆಗಮಿಸುವ ನಿರೀಕ್ಷೆಯಿರುವುದರಿಂದ ಜನಸಂದಣಿ ನಿಯಂತ್ರಣಕ್ಕೆ ಜಿಲ್ಲಾಡಳಿತ ಕ್ರಮ ಕೈಗೊಂಡಿದೆ. ಭಕ್ತರು ಸರದಿಯಲ್ಲಿ ಸಾಗಲು ಸುಮಾರು 9.5 ಕಿಲೋಮೀಟರ್ ಉದ್ದದ ಬ್ಯಾರಿಕೇಡ್ ವ್ಯವಸ್ಥೆ ಮಾಡಲಾಗಿದೆ. ಇದರಿಂದ ದರ್ಶನದ ವೇಳೆ ಜನರ ಓಡಾಟವನ್ನು ಸುಗಮಗೊಳಿಸುವ ಉದ್ದೇಶ ಹೊಂದಲಾಗಿದೆ.

ಈ ಉತ್ಸವಕ್ಕೆ 30 ಲಕ್ಷಕ್ಕೂ ಹೆಚ್ಚು ಭಕ್ತರು ಆಗಮಿಸುವ ನಿರೀಕ್ಷೆ ಇದ್ದು, ಎರಡು ಸಾವಿರಕ್ಕೂ ಹೆಚ್ಚು ಪೊಲೀಸರನ್ನು ನಿಯೋಜನೆ ಮಾಡಲಾಗಿದೆ. ಇದರ ಜೊತೆಗೆ ಸಿಸಿಟಿವಿ, ಡ್ರೋನ್‌ ಕ್ಯಾಮರಾ ಕಣ್ಗಾವಲು ಇದೆ. ಇನ್ನು ಲಡ್ಡು ಪ್ರಸಾದಕ್ಕೆ 56 ರೂ. ನಿಗದಿಯಾಗಿದ್ದು, ಒಂದು ದೊನ್ನೆ ಪ್ರಸಾದಕ್ಕೆ 17 ರೂಪಾಯಿ ನಿಗದಿಯಾಗಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

ರಮೇಶ್ ಬಿ. ಜವಳಗೇರಾ

ಟಿವಿ9 ಕನ್ನಡದಲ್ಲಿ ಹಿರಿಯ ಉಪ ಸಂಪಾದಕ. ಕಳೆದ 07 ವರ್ಷಗಳಿಂದ ಮಾಧ್ಯಮ ಪ್ರಪಂಚದಲ್ಲಿದ್ದೇನೆ. ಹುಟ್ಟಿ ಬೆಳೆದದ್ದು, ರಾಯಚೂರು ಜಿಲ್ಲೆಯ ಸಿಂಧನೂರಿನ ಜವಳಗೇರಾದಲ್ಲಿ. ಗುಲ್ಬರ್ಗಾ ವಿಶ್ವವಿದ್ಯಾಲಯದಿಂದ ಪತ್ರಿಕೋದ್ಯಮದಲ್ಲಿ ಪದವಿ ಪಡೆದಿದ್ದೇನೆ. ನನ್ನ ವೃತ್ತಿ ಆರಂಭವಾಗಿದ್ದೇ ಡಿಜಿಟಲ್​ ಮಾಧ್ಯಮದಿಂದ. ಒನ್​ ಇಂಡಿಯಾ ಕನ್ನಡ, ಏಷ್ಯಾನೆಟ್ ಸುವರ್ಣ ನ್ಯೂಸ್.ಕಾಂನಲ್ಲಿ ಕೆಲಸ ಮಾಡಿದ್ದೇನೆ. ಕ್ರೈಂ, ರಾಜಕೀಯ ಹಾಗೂ ಪ್ರಚಲಿತ ಸುದ್ದಿ ಬಗ್ಗೆ ಆಸಕ್ತಿ. ಪ್ರವಾಸ ಮಾಡುವುದು, ಸಂಗೀತ ಕೇಳುವುದು ನನ್ನ ಹವ್ಯಾಸಗಳು.

Read More
Loading...
Unable to load recommendations.
Follow Us