Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಾಸನಾಂಬೆ: ವರ್ಷಕ್ಕೆ ಒಮ್ಮೆಯೇ ಬಾಗಿಲು ತೆರೆಯುವ ಹಾಸನಾಂಬೆ ದೇಗುಲದ ವಿಶೇಷತೆ ಏನು, ಇತಿಹಾಸ ಇಲ್ಲಿದೆ

ಈ ವರ್ಷ ನವೆಂಬರ್ 2ರಂದು ಬಾಗಿಲು ತೆರೆದಿದ್ದು ನವೆಂಬರ್ 15ಕ್ಕೆಬಾಗಿಲು ಮುಚ್ಚಲಿದೆ. ಒಟ್ಟು 14 ದಿನಗಳು ಹಾಸನಾಂಬೆ ದೇಗುಲದ ಬಾಗಿಲು ತೆರೆದಿರಲಿದ್ದು ಭಕ್ತರಿಗೆ ಮೊದಲ ಹಾಗೂ ಕೊನೆಯ ದಿನ ಹೊರತುಪಡಿಸಿ ಉಳಿದ 12 ದಿನಗಳು ದೇವಿ ದರ್ಶನಕ್ಕೆ ಮುಕ್ತ ಅವಕಾಶ ಸಿಗಲಿದೆ.

ಹಾಸನಾಂಬೆ: ವರ್ಷಕ್ಕೆ ಒಮ್ಮೆಯೇ ಬಾಗಿಲು ತೆರೆಯುವ ಹಾಸನಾಂಬೆ ದೇಗುಲದ ವಿಶೇಷತೆ ಏನು, ಇತಿಹಾಸ ಇಲ್ಲಿದೆ
ಹಾಸನಾಂಬೆ ದೇವಸ್ಥಾನ
Follow us
ವಿವೇಕ ಬಿರಾದಾರ
|

Updated on: Nov 02, 2023 | 1:40 PM

ಹಾಸನಾಂಬೆ ಹಾಸನದ ಅಧಿದೇವತೆ, ನಾಡಿನ ಶಕ್ತಿದೇವತೆ, ಬೇಡಿದ ವರವ ನೀಡುವ ಮಹಾತಾಯಿ. ದೀಪಾವಳಿ ಸಮಯ ಬಂತೆಂದರೆ ಹಾಸನಾಂಬೆ(Hasnambe) ದರ್ಶನಕ್ಕೆ ಭಕ್ತರು ಕಾತರಾಗಿರುತ್ತಾರೆ. ವರ್ಷಕ್ಕೆ ಒಮ್ಮೆ ಮಾತ್ರ ದರ್ಶನ ಕರುಣಿಸುವ ಹಾಸನಾಂಬೆಯನ್ನು ಕಣ್ತುಂಬಿಕೊಳ್ಳಬೇಕೆಂದು ರಾಜ್ಯ ಮತ್ತು ಅಂತರಾಜ್ಯದಿಂದ ಭಕ್ತರು ಹಾಸನಕ್ಕೆ (Hassan) ಆಗಮಿಸುತ್ತಾರೆ. ದರ್ಶನ ಸಿಗುವ ಕೆಲವು ದಿನಗಳಲ್ಲಿ ರಾಜ್ಯವಲ್ಲದೆ ಹೊರ ರಾಜ್ಯಗಳಿಂದಲೂ ಲಕ್ಷ ಲಕ್ಷ ಸಂಖ್ಯೆಯಲ್ಲಿ ಭಕ್ತರು ಬಂದು ದೇವಿಯ ಆಶೀರ್ವಾದ ಪಡೆದು ಪುನೀತರಾಗುತ್ತಾರೆ. ಗಣ್ಯಾತಿ ಗಣ್ಯರು, ಸಿನಿಮಾ ಸ್ಟಾರ್​ಗಳು, ರಾಜಕಾರಣಿಗಳು ಕೂಡ ಶಕ್ತಿದೇವಿಗೆ ಶಿರಬಾಗಿ ನಮಿಸಿ ಸುಖ ಸಮೃದ್ಧಿಗಾಗಿ ಮೊರೆಯಿಡುತ್ತಾರೆ. ವರ್ಷಕ್ಕೆ ಒಮ್ಮೆಯೇ ಬಾಗಿಲು ತೆರೆಯುವ ಹಾಸನಾಂಬೆ ದೇಗುಲದ ವಿಶೇಷತೆ ಏನು, ಇದರ ಇತಿಹಾಸ ಏನು ಎಂಬುವುದರ ಕುರಿತು ಇಲ್ಲಿದೆ ಮಾಹಿತಿ.

ವರ್ಷಕ್ಕೊಮ್ಮೆ ಅಶ್ವಯುಜ ಮಾಸದ ಹುಣ್ಣಿಮೆಯ ನಂತರ ಬರುವ ಗುರುವಾರ ದೇಗುಲದ ಬಾಗಿಲು ತೆರೆದರೆ ಬಲಿಪಾಡ್ಯಮಿಯ ಮಾರನೆ ದಿನ ಶಾಸ್ತ್ರೋಕ್ತವಾಗಿ ಪೂಜೆ ಸಲ್ಲಿಸಿ ಬಾಗಿಲು ಬಂದ್ ಮಾಡಲಾಗುತ್ತೆ. ಮತ್ತೆ ದೇವಿ ದರ್ಶನ ಸಿಗುವುದು ವರ್ಷ ಕಳೆದ ಬಳಿಕವೆ.

ಈ ವರ್ಷ ನವೆಂಬರ್ 2ರಂದು ಬಾಗಿಲು ತೆರೆದಿದ್ದು ನವೆಂಬರ್ 15ಕ್ಕೆಬಾಗಿಲು ಮುಚ್ಚಲಿದೆ. ಒಟ್ಟು 14 ದಿನಗಳು ಹಾಸನಾಂಬೆ ದೇಗುಲದ ಬಾಗಿಲು ತೆರೆದಿರಲಿದ್ದು ಭಕ್ತರಿಗೆ ಮೊದಲ ಹಾಗೂ ಕೊನೆಯ ದಿನ ಹೊರತುಪಡಿಸಿ ಉಳಿದ 12 ದಿನಗಳು ದೇವಿ ದರ್ಶನಕ್ಕೆ ಮುಕ್ತ ಅವಕಾಶ ಸಿಗಲಿದೆ.

ಹುತ್ತದ ರೂಪದಲ್ಲಿ ನೆಲೆಸಿರೋ ಹಾಸನಾಂಬೆ

ವಾರಣಾಸಿಯಿಂದ ದಕ್ಷಿಣಾಭಿಮುಖವಾಗಿ ವಾಯುವಿಹಾರಕ್ಕೆಂದು ಬಂದ ಸಪ್ತ ಮಾತೃಕೆಯರು ಅಂದರೆ, ಬ್ರಾಹ್ಮೀದೇವಿ, ಮಹೇಶ್ವರಿ, ಕೌಮಾರಿ, ವೈಷ್ಣವಿ, ವಾರಾಹಿ, ಇಂದ್ರಾಣಿ ಮತ್ತು ದುರ್ಗೆ, ಚಾಮುಂಡಿ ಇವರು ಇಲ್ಲಿಗೆ ಬಂದರೆಂದು ಪ್ರತೀತಿ. ಅವರಲ್ಲಿ, ವೈಷ್ಣವಿ, ವಾರಾಹಿ ಮತ್ತು ಇಂದ್ರಾಣಿ ಈ ಮೂವರು ಹುತ್ತದಲ್ಲಿ ನೆಲೆಸಿದ ಸ್ಥಳವೇ ಹಾಸನಾಂಬೆಯ ದೇಗುಲ. (ದೇವನೊಬ್ಬನೇ ಆದರೂ ಆದಿ ಮಹರ್ಷಿಗಳು ಪುರುಷ ಮತ್ತು ಸ್ತ್ರೀ ಎರಡೂ ಶಕ್ತಿರೂಪಗಳನ್ನು ಒಂದಾಗಿ ಕಂಡಿದ್ದಾರೆ. ಹಾಗೆ ಕಂಡ ಸ್ತ್ರೀ ರೂಪಗಳೆ ಸಪ್ತಮಾತೃಕೆಯರು). ಹಾಸನ ನಗರದ ಹೃದಯಭಾಗದಲ್ಲಿರುವ ದೇವಿಕೆರೆಯಲ್ಲಿ, ಬ್ರಾಹ್ಮಿದೇವಿ, ಕೆಂಚಮ್ಮ ದೇವಿ ಹೊಸಕೋಟೆಯಲ್ಲಿ ನೆಲೆಸಿದ್ದಾರೆ.

ಇದನ್ನೂ ಓದಿ: ಹಾಸನಾಂಬೆ ದರ್ಶನಕ್ಕೆ ಕೌಂಟ್​ ಡೌನ್; ವರ್ಷದ ಬಳಿಕ ಬಾಗಿಲು ತೆರೆಯಲಿದೆ ದೇವಸ್ಥಾನ

ಮೊಲದ ರೂಪದಲ್ಲಿ ದರ್ಶನ ನೀಡಿದ ದೇವಿ

ಕೃಷ್ಣಪ್ಪನಾಯಕ 12 ನೇ ಶತಮಾನದ ಪಾಳೆಗಾರ. ಕೃಷ್ಣಪ್ಪನಾಯಕ ಕಾರ್ಯನಿಮಿತ್ತ ಪ್ರಯಾಣ ಹೊರಟಾಗ ಮೊಲವೊಂದು ಅಡ್ಡ ಬಂದಿತು. ಇದು ಅಪಶಕುನವೆಂದು ಭಾವಿಸುತ್ತಾನೆ. ಪ್ರತ್ಯಕ್ಷಳಾದ ಆದಿಶಕ್ತಿ ಸ್ವರೂಪಿಣಿ-ಈ ಸ್ಥಳದಲ್ಲಿ ದೇಗುಲ ಕಟ್ಟು, ನಾನು ಹಾಸನಾಂಬೆ ಎಂದೇ ಹೆಸರಾಗಿ ಇಲ್ಲಿ ನೆಲೆಸುವೆ ಎಂದಳಂತೆ. ಕೃಷ್ಣಪ್ಪ ನಾಯಕನ ಕಾಲದಿಂದಲೂ ಆಶ್ವೀಜ ಮಾಸ ಪೌರ್ಣಮಿಯ ನಂತರ ಬರುವ ಗುರುವಾರದಂದು ಹಾಸನಾಂಬೆಯ ದೇವಾಲಯ ತೆರೆಯಲ್ಪಡುತ್ತದೆ. ಸಹಸ್ರ ಸಹಸ್ರ ಸಂಖ್ಯೆಯಲ್ಲಿ ಭಕ್ತಾದಿಗಳು ಅಂದು ದರ್ಶನಾಕಾಂಕ್ಷಿಗಳಾಗಿ ಬಂದು ದೇವಿಯ ದರ್ಶನ ಪಡೆಯುತ್ತಾರೆ.

ಪವಾಡಗಳಿಂದಲೇ ಪ್ರಖ್ಯಾತಿಯಾದ ಹಾಸನಾಂಬೆ

ಇಲ್ಲಿಯ ವಿಶೇಷವೇನೆಂದರೇ ಗರ್ಭಗುಡಿಯಲ್ಲಿ ಹುತ್ತದೋಪಾದಿಯಲ್ಲಿರುವ ಆದಿಶಕ್ತಿ ಸ್ವರೂಪಿಣಿ ಹಾಸನಾಂಬೆಗೆ ಹಿಂದಿನ ವರುಷ ಹಚ್ಚಿಟ್ಟಿದ್ದ ದೀಪವು ಆರದೇ, ಮುಡಿಸಿದ ಹೂ ಬಾಡದೇ ಹಾಗೂ ನೈವೇದ್ಯಕ್ಕಿಟ್ಟ ಅಕ್ಕಿಯು ಅನ್ನವಾಗಿದ್ದು, ಪವಾಡವೇ ಸರಿ.

ಹಾಸನಾಂಬೆ ದೇವಿ ಮಡಿವಂತಿಕೆ

ನೈರ್ಮಲ್ಯ, ನೇಮ ನಿಷ್ಠೆಗೆ ಒಲಿವಳೆಂಬದು ಆಚಾರ ವಿಚಾರಗಳಿಂದ ತಿಳಿದು ಬಂದಿದೆ. ವರ್ಷಕ್ಕೊಮ್ಮೆ ಮಾತ್ರ ಭಕ್ತಾದಿಗಳು ಭಯಭಕ್ತಿಯಿಂದ ದೇವಿಯ ದರ್ಶನ ಪಡೆಯಲು ಇಲ್ಲಿಗೆ ಬರುತ್ತಾರೆ. ಅಂದು ಹಾಸನದ ನಗರ ಹಾಸನಾಂಬೆಯ ಜಾತ್ರೆ ನಡೆಯುತ್ತದೆ. ಆಸ್ತಿಕರಿಗೆ ನೋಡಲು ನಯನ ಮನೋಹರವಾಗಿದೆ.

ನಿರ್ದೇಶಕರ ಪಾಲಿಗೆ ಶಿವಣ್ಣ ಅಪರಂಜಿ; ಕಾರಣ ಕೊಟ್ಟು ವಿವರಿಸಿದ ಉಪೇಂದ್ರ
ನಿರ್ದೇಶಕರ ಪಾಲಿಗೆ ಶಿವಣ್ಣ ಅಪರಂಜಿ; ಕಾರಣ ಕೊಟ್ಟು ವಿವರಿಸಿದ ಉಪೇಂದ್ರ
ಈದ್ ಆಚರಿಸಿದ ಮುಸ್ಲಿಮರ ಮೇಲೆ ಹೂಮಳೆ ಸುರಿಸಿದ ಹಿಂದೂಗಳು
ಈದ್ ಆಚರಿಸಿದ ಮುಸ್ಲಿಮರ ಮೇಲೆ ಹೂಮಳೆ ಸುರಿಸಿದ ಹಿಂದೂಗಳು
ಪವರ್‌ಪ್ಲೇನಲ್ಲೇ ಪವರ್ ಕಳೆದುಕೊಂಡ ಕೆಕೆಆರ್
ಪವರ್‌ಪ್ಲೇನಲ್ಲೇ ಪವರ್ ಕಳೆದುಕೊಂಡ ಕೆಕೆಆರ್
ಉತ್ತರ ಕರ್ನಾಟಕದಲ್ಲಿ ನೀರಿಗಾಗಿ ಹಾಹಾಕಾರ ಈಗಾಗಲೇ ಶುರುವಾಗಿದೆ
ಉತ್ತರ ಕರ್ನಾಟಕದಲ್ಲಿ ನೀರಿಗಾಗಿ ಹಾಹಾಕಾರ ಈಗಾಗಲೇ ಶುರುವಾಗಿದೆ
ಪೊಲೀಸ್ ತಂಡದ ಕಾರ್ಯಕ್ಷಮತೆಗೆ ವ್ಯಾಪಕ ಮೆಚ್ಚುಗೆ, ಅಭಿನಂದಿಸಿದ ಐಜಿಪಿ
ಪೊಲೀಸ್ ತಂಡದ ಕಾರ್ಯಕ್ಷಮತೆಗೆ ವ್ಯಾಪಕ ಮೆಚ್ಚುಗೆ, ಅಭಿನಂದಿಸಿದ ಐಜಿಪಿ
ಸಚಿವ ಎಂಪಿ ಪಾಟೀಲ್​ಗೆ ಚಿನ್ನದ ಉಂಗುರ ತೊಡಿಸಿ ಆಶೀರ್ವದಿಸಿದ ಸ್ವಾಮೀಜಿ
ಸಚಿವ ಎಂಪಿ ಪಾಟೀಲ್​ಗೆ ಚಿನ್ನದ ಉಂಗುರ ತೊಡಿಸಿ ಆಶೀರ್ವದಿಸಿದ ಸ್ವಾಮೀಜಿ
ಪಕ್ಷದ ಸಂಘಟನೆ ವಿಜಯೇಂದ್ರ ನೇತೃತ್ವದಲ್ಲಿ ನಮ್ಮಆದ್ಯತೆಯಾಗಿದೆ: ಶ್ರೀರಾಮುಲು
ಪಕ್ಷದ ಸಂಘಟನೆ ವಿಜಯೇಂದ್ರ ನೇತೃತ್ವದಲ್ಲಿ ನಮ್ಮಆದ್ಯತೆಯಾಗಿದೆ: ಶ್ರೀರಾಮುಲು
ದೇಗುಲದ ಭಕ್ತಿಗೀತೆ ಸೌಂಡ್ ಕಡಿಮೆ ಮಾಡುವಂತೆ ಮುಸ್ಲಿಂ ಯುವಕರಿಂದ ಅವಾಜ್
ದೇಗುಲದ ಭಕ್ತಿಗೀತೆ ಸೌಂಡ್ ಕಡಿಮೆ ಮಾಡುವಂತೆ ಮುಸ್ಲಿಂ ಯುವಕರಿಂದ ಅವಾಜ್
ನೋಯ್ಡಾದಲ್ಲಿ ಬೆಂಕಿ ಅವಘಡ; 3 ಕಾರ್ಖಾನೆಗಳು ಸ್ಥಳದಲ್ಲೇ ಸುಟ್ಟು ಭಸ್ಮ
ನೋಯ್ಡಾದಲ್ಲಿ ಬೆಂಕಿ ಅವಘಡ; 3 ಕಾರ್ಖಾನೆಗಳು ಸ್ಥಳದಲ್ಲೇ ಸುಟ್ಟು ಭಸ್ಮ
ಅಬ್ಬಬ್ಬಾ ಚಿನ್ನವೋ ಚಿನ್ನ...ಬಂಗಾರದಂಗಡಿಯಾದ ದಾವಣಗೆರೆ ಎಸ್ಪಿ ಕಚೇರಿ!
ಅಬ್ಬಬ್ಬಾ ಚಿನ್ನವೋ ಚಿನ್ನ...ಬಂಗಾರದಂಗಡಿಯಾದ ದಾವಣಗೆರೆ ಎಸ್ಪಿ ಕಚೇರಿ!