ಹಾಸನ: ಇಂದಿನಿಂದ ಐತಿಹಾಸಿಕ ಹಾಸನಾಂಬೆಯ ದರ್ಶನಕ್ಕೆ ಭಕ್ತರಿಗೆ, ಸಾರ್ವಜನಿಕರಿಗೆ ಅವಕಾಶ ನೀಡಲಾಗಿದೆ. ದೇವರ ದರ್ಶನಕ್ಕೆ ಬರುವವರು 2 ಡೋಸ್ ಕೊವಿಡ್ ಲಸಿಕೆ ಹಾಕಿಸಿಕೊಂಡಿರುವುದು ಕಡ್ಡಾಯ. ವ್ಯಾಕ್ಸಿನ್ ಪಡೆದವರಿಗೆ ಮಾತ್ರ ದೇವರ ದರ್ಶನಕ್ಕೆ ಅವಕಾಶ ನೀಡಲಾಗುತ್ತೆ. ಈ ಬಾರಿ ಹಾಸನಾಂಬೆ ದರ್ಶನಕ್ಕೆ ವಿಶೇಷ ಪಾಸ್ ವ್ಯವಸ್ಥೆ ಕೂಡ ಮಾಡಲಾಗಿದ್ದು ₹1000, 300 ವಿಶೇಷ ದರ್ಶನ ಟಿಕೆಟ್ ಮೂಲಕ ಅವಕಾಶ ನೀಡಲಾಗಿದೆ. ಆದ್ರೆ ಮೊದಲ, ಕೊನೆಯ ದಿನ ಸಾರ್ವಜನಿಕರಿಗೆ ಅವಕಾಶವಿಲ್ಲ.
ಪ್ರಸಿದ್ಧ ಹಾಸನಾಂಬೆ ಹಾಗೂ ಸಿದ್ದೇಶ್ವರ ಸ್ವಾಮಿ ಜಾತ್ರಾ ಮಹೋತ್ಸವ ಅ.28ರಿಂದ ನ.6ರವರೆಗೆ ನಡೆಯಲಿದೆ. ಕೊರೊನಾ ಹಿನ್ನೆಲೆಯಲ್ಲಿ ಈ ಬಾರಿ ಸರಳವಾಗಿ ಜಾತ್ರೆ ನಡೆಸಲು ಜಿಲ್ಲಾಡಳಿತ ನಿರ್ಧರಿಸಿದ್ದು, ಹಾಸನಾಂಬೆ ದರ್ಶನಕ್ಕೆ ವಿಶೇಷ ಪಾಸ್ ವ್ಯವಸ್ಥೆ ಮಾಡಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ.ಗೋಪಾಲಯ್ಯ ಹೇಳಿದರು.
ರಾಜ್ಯದಲ್ಲಿ ಕೋವಿಡ್ ತೀವ್ರತೆ ಕಡಿಮೆಯಾಗಿರುವುದರಿಂದ ಹಾಸನಾಂಬೆ ದೇವಿಯ ದರ್ಶನಕ್ಕೆ ಅವಕಾಶ ಕಲ್ಪಿಸಲು ತೀರ್ಮಾನಿಸಲಾಗಿದೆ. ಅ.28 ಮತ್ತು ನ.6 ರಂದು ಹೊರತುಪಡಿಸಿ ಉಳಿದ ದಿನಗಳು ದರ್ಶನಕ್ಕೆ ಅವಕಾಶ ಕಲ್ಪಿಸಲಾಗುವುದು. ದರ್ಶನಕ್ಕೆ ಬರುವವರು ಲಸಿಕೆ ಪಡೆದ ಪ್ರಮಾಣ ಪತ್ರ ಹಾಗೂ ಗುರುತಿನ ಚೀಟಿ ತೋರಿಸುವುದು ಕಡ್ಡಾಯ.@CMofKarnataka pic.twitter.com/WB729dVBDx
— K Gopalaiah (@GopalaiahK) October 26, 2021
ಪ್ರತಿ ವರುಷಕ್ಕೊಮ್ಮೆ ತೆರೆಯುವ ದೇಗುಲದ ಗರ್ಭಗುಡಿ
ಕೃಷ್ಣಪ್ಪ ನಾಯಕನ ಕಾಲದಿಂದಲೂ ಆಶ್ವೀಜ ಮಾಸ ಪೌರ್ಣಮಿಯ ನಂತರ ಬರುವ ಗುರುವಾರದಂದು ಹಾಸನಾಂಬೆಯ ದೇವಾಲಯ ತೆರೆಯಲ್ಪಡುತ್ತದೆ. ಸಹಸ್ರ ಸಹಸ್ರ ಸಂಖ್ಯೆಯಲ್ಲಿ ಭಕ್ತಾದಿಗಳು ಅಂದು ದರ್ಶನಾಕಾಂಕ್ಷಿಗಳಾಗಿ ಬಂದು ದೇವಿಯ ದರ್ಶನ ಪಡೆಯುತ್ತಾರೆ. ಗರ್ಭಗುಡಿಯಲ್ಲಿ ಹುತ್ತದೋಪಾದಿಯಲ್ಲಿರುವ ಆದಿಶಕ್ತಿಸ್ವರೂಪಿಣಿ ಹಾಸನಾಂಬೆಗೆ ಹಿಂದಿನ ವರುಷ ಹಚ್ಚಿಟ್ಟಿದ್ದ ದೀಪವು ಆರದೇ, ಮುಡಿಸಿದ ಹೂ ಬಾಡದೇ ಹಾಗೂ ನೈವೇದ್ಯಕ್ಕಿಟ್ಟ ಅಕ್ಕಿಯು ಅನ್ನವಾಗಿರುವ ವಿಸ್ಮಯ ದೃಶ್ಯವನ್ನು ಕಣ್ತುಂಬಿಕೊಳ್ತುವ ಭಕ್ತರು ಪುನೀತರಾಗುತ್ತಾರೆ. ಹೀಗೆ ವರ್ಷಕ್ಕೊಮ್ಮೆ ದೇಗುಲದ ಬಾಗಿಲ ಪುರ ಪ್ರಮುಖರಾದ ತಹಸಿಲ್ದಾರರು/ ಕಮೀಷನರ್ ಶಾಸಕರು ಮುಂತಾದವರ ಸಮ್ಮುಖದಲ್ಲಿ ತೆರೆಯಲಾಗುತ್ತದೆಯಲ್ಲದೇ, ಬಲಿಪಾಡ್ಯಮಿಯ ಮಾರನೇ ದಿನ ಅವರೆಲ್ಲರ ಸಮ್ಮುಖದಲ್ಲಿ ದೇವಿಗೆ ದೀಪ, ಅಕ್ಕಿ ನೈವೇದ್ಯ ಇಟ್ಟು ಅಲಂಕಾರವನ್ನು ಮಾಡಿ ಮುಚ್ಚಲಾಗುತ್ತದೆ.
ಇದನ್ನೂ ಓದಿ: Hasanamba Temple: ವರ್ಷಕ್ಕೊಮ್ಮೆ ದರ್ಶನ ನೀಡುವ ಹಾಸನಾಂಬೆ ದೇವಾಲಯದ ಮಹತ್ವವೇನು? ತಿಳಿಯಿರಿ ಇದರ ಇತಿಹಾಸ
Published On - 7:24 am, Thu, 28 October 21