AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಾಸನಾಂಬೆ ದರ್ಶನದಲ್ಲಿ ದಾಖಲೆಯ ಆದಾಯ: ಒಂದೇ ದಿನಕ್ಕೆ 1 ಕೋಟಿಗೂ ಹೆಚ್ಚು ಹಣ ಸಂಗ್ರಹ

ವೀಕೆಂಡ್​ ಹಿನ್ನೆಲೆ ಹಾಸನಾಂಬೆ ದರ್ಶನಕ್ಕೆ ಭಕ್ತಸಾಗರ ಹರಿದು ಬಂದಿದೆ. ಪರಿಣಾಮ ಇಂದು ಒಂದೇ ದಿನ ಒಂದು ಕೋಟಿ ರೂಪಾಯಿಗೂ ಹೆಚ್ಚು ಆದಾಯ ಸಂಗ್ರಹವಾಗಿದೆ. ಕಳೆದ ವರ್ಷ 12 ಕೋಟಿ ರೂ. ಆದಾಯ ಸಂಗ್ರಹವಾಗಿತ್ತು. ಈ ವರ್ಷ 15 ಕೋಟಿಗೂ ಹೆಚ್ಚು ಆದಾಯ ಸಂಗ್ರಹ ನಿರೀಕ್ಷೆ ಇದೆ ಎಂದು ಸಚಿವ ಕೃಷ್ಣಬೈರೇಗೌಡ ಹೇಳಿದ್ದಾರೆ.

ಹಾಸನಾಂಬೆ ದರ್ಶನದಲ್ಲಿ ದಾಖಲೆಯ ಆದಾಯ: ಒಂದೇ ದಿನಕ್ಕೆ 1 ಕೋಟಿಗೂ ಹೆಚ್ಚು ಹಣ ಸಂಗ್ರಹ
ಹಾಸನಾಂಬೆ
ಮಂಜುನಾಥ ಕೆಬಿ
| Edited By: |

Updated on:Oct 11, 2025 | 7:52 PM

Share

ಹಾಸನ, ಅಕ್ಟೋಬರ್​ 11: ವರ್ಷಕ್ಕೊಮ್ಮೆ ಮಾತ್ರ ಬಾಗಿಲು ತೆರೆದು ಭಕ್ತರಿಗೆ ದರ್ಶನ ನೀಡುವ ಹಾಸನಾಂಬೆ (Hasanamba) ಅ.09ರಿಂದ ತನ್ನ ದರ್ಶನ ಆರಂಭಿಸಿದ್ದಾಳೆ. ಮೊದಲ ದಿನವೇ ಭಕ್ತ ಸಾಗರವೇ ಹರಿದು ಬಂದಿತ್ತು. ಲಕ್ಷಕ್ಕೂ ಹೆಚ್ಚು ಭಕ್ತರು (Devotees) ಹಾಸನಾಂಬೆ ದರ್ಶನ ಪಡೆದಿದ್ದಾರೆ. ಇನ್ನು ದಾಖಲೆಯ ಆದಾಯ ಸಂಗ್ರಹವಾಗಿದೆ. ಇಂದು ಒಂದೇ ದಿನ ಒಂದು ಕೋಟಿ ರೂಪಾಯಿಗೂ ಹೆಚ್ಚು ಆದಾಯ ಹಾಸನಾಂಬೆಯ ಬೊಕ್ಕಸಕ್ಕೆ ಹರಿದುಬಂದಿದೆ.

ವರ್ಷಕ್ಕೊಮ್ಮೆ ಮಾತ್ರ ಬಾಗಿಲು ಓಪನ್‌, ವರ್ಷಕ್ಕೊಮ್ಮೆ ಮಾತ್ರ ದರ್ಶನ. ಹೀಗೆ ಪುರಾಣಪ್ರಸಿದ್ಧವಾಗಿರುವ ಹಾಸನಾಂಬೆ ದೇಗುಲದ ಬಾಗಿಲು ಓಪನ್ ಆಗಿದ್ದು, ಸಾರ್ವಜನಿಕರ ದರ್ಶನ ಆರಂಭವಾಗಿದೆ. ಲಕ್ಷಾಂತರ ಭಕ್ತರು ದರ್ಶನಕ್ಕೆ ಆಗಮಿಸುತ್ತಿದ್ದಾರೆ. ಜೊತೆಗೆ ಅಧಿಕ ಆದಾಯವೂ ಸಂಗ್ರಹವಾಗುತ್ತಿದೆ.

ಇದನ್ನೂ ಓದಿ: ಮೂರು ವರ್ಷದಿಂದ ಹಾಸನಾಂಬೆ ದರ್ಶನಕ್ಕೆ ಬರುತ್ತಿದ್ದೇವೆ: ವಿಜಯಪುರದ ಮುಸ್ಲಿಂ ವ್ಯಕ್ತಿ ಹೇಳಿದ್ದೇನು ನೋಡಿ

ಇಂದು ಒಂದೇ ದಿನ ಒಂದು ಕೋಟಿ ರೂಪಾಯಿಗೂ ಹೆಚ್ಚು ಆದಾಯ ಸಂಗ್ರಹವಾಗಿದೆ. ವೀಕೆಂಡ್ ಹಿನ್ನೆಲೆ ಟಿಕೆಟ್ ಮಾರಾಟದಿಂದ ದಾಖಲೆ ಆದಾಯ ಸಂಗ್ರಹವಾಗಿದೆ. ಒಂದು ಸಾವಿರ ಮೌಲ್ಯದ ಟಿಕೆಟ್ ಮಾರಾಟದಿಂದ 65 ಲಕ್ಷ ರೂ. ಸಂಗ್ರಹವಾಗಿದ್ದು, 300 ರೂ. ಮೌಲ್ಯದ ಟಿಕೆಟ್ ಮಾರಾಟದಿಂದ 35 ಲಕ್ಷ ರೂ. ಆದಾಯ ಸಂಗ್ರಹವಾಗಿದೆ.

ಈ ವರ್ಷ 15 ಕೋಟಿಗೂ ಹೆಚ್ಚು ಆದಾಯ ಸಂಗ್ರಹ ನಿರೀಕ್ಷೆ ಇದೆ ಎಂದ ಸಚಿವ ಕೃಷ್ಣಬೈರೇಗೌಡ

ಇನ್ನು ಆದಾಯ ಸಂಗ್ರಹದ ಬಗ್ಗೆ ಜಿಲ್ಲಾ ಉಸ್ತುವಾರಿ ಸಚಿವ ಕೃಷ್ಣಬೈರೇಗೌಡ ಮಾಹಿತಿ ನೀಡಿದ್ದು, ಆರಂಭದ ದಿನಗಳಲ್ಲೇ ಹಾಸನಾಂಬೆ ದರ್ಶನದಲ್ಲಿ ದಾಖಲೆ ಆದಾಯ ಸಂಗ್ರಹವಾಗುತ್ತಿದೆ. ನಿನ್ನೆ 67 ಲಕ್ಷ ರೂ. ಆದಾಯ ಸಂಗ್ರಹವಾಗಿತ್ತು. ಕಳೆದ ವರ್ಷ 12 ಕೋಟಿ ರೂಪಾಯಿ ಆದಾಯ ಸಂಗ್ರಹವಾಗಿತ್ತು. ಈ ವರ್ಷ 15 ಕೋಟಿಗೂ ಹೆಚ್ಚು ಆದಾಯ ಸಂಗ್ರಹ ನಿರೀಕ್ಷೆ ಇದೆ ಎಂದು ಹೇಳಿದ್ದಾರೆ.

ಇದನ್ನೂ ಓದಿ: ಮೊದಲ ದಿನವೇ ಹಾಸನಾಂಬೆ ದರ್ಶನಕ್ಕೆ ಹರಿದು ಬಂದ ಭಕ್ತಸಾಗರ

ಇದುವರೆಗೆ 91 ಸಾವಿರ ಭಕ್ತರು ದರ್ಶನ ಪಡೆದಿದ್ದಾರೆ. ಐದಾರು ವರ್ಷಗಳಿಗೆ ಹೋಲಿಸಿದೆ ಇದು ದಾಖಲೆ. ಯಾವುದೇ ಗೊಂದಲವಿಲ್ಲದೆ ದರ್ಶನ ಚೆನ್ನಾಗಿ ನಡೀತಿದೆ. ಪ್ರತಿದಿನ ಕನಿಷ್ಠ 2 ಲಕ್ಷ ಭಕ್ತರು ಬರುವ ಸಾಧ್ಯತೆಯಿದೆ. ಎಲ್ಲರೂ ಅ.18ರೊಳಗೆ ಬಂದು ದರ್ಶನ ಮಾಡಿಕೊಳ್ಳಿ. ಅ.15ಕ್ಕೆ ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿಕೆ ಶಿವಕುಮಾರ್​ ಬಂದು ದರ್ಶನ ಮಾಡುತ್ತಾರೆ ಎಂದು ಸಚಿವ ಕೃಷ್ಣಬೈರೇಗೌಡ ಹೇಳಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 7:51 pm, Sat, 11 October 25

Follow Us
Manjunath KB
Manjunath KB
34 ರನ್​ಗಳಿದ್ದಾಗ ಕ್ಯಾಚ್ ಬಿಟ್ಟ ಸಿರಾಜ್; 93 ರನ್ ಚಚ್ಚಿದ ಅಲೆನ್
34 ರನ್​ಗಳಿದ್ದಾಗ ಕ್ಯಾಚ್ ಬಿಟ್ಟ ಸಿರಾಜ್; 93 ರನ್ ಚಚ್ಚಿದ ಅಲೆನ್
9 ಗಂಟೆ ಕಾರ್ಯಾಚರಣೆ ಬಳಿಕ ಬೋರ್​​ವೆಲ್​ನಿಂದ 4 ವರ್ಷದ ಬಾಲಕನ ರಕ್ಷಣೆ!
9 ಗಂಟೆ ಕಾರ್ಯಾಚರಣೆ ಬಳಿಕ ಬೋರ್​​ವೆಲ್​ನಿಂದ 4 ವರ್ಷದ ಬಾಲಕನ ರಕ್ಷಣೆ!
ಬಿಸಿಸಿಐನ ರೋಬೋ ಶ್ವಾನ ಚಂಪಕ್ ಮೇಲೆ ಕೊಹ್ಲಿ ಅಸಮಾಧಾನ
ಬಿಸಿಸಿಐನ ರೋಬೋ ಶ್ವಾನ ಚಂಪಕ್ ಮೇಲೆ ಕೊಹ್ಲಿ ಅಸಮಾಧಾನ
ಲಕ್ಕುಂಡಿಯಲ್ಲಿ ಪತ್ತೆಯಾಗಿದ್ದ ನಿಧಿ ಮೌಲ್ಯ 8 ಕೋಟಿ ರೂ
ಲಕ್ಕುಂಡಿಯಲ್ಲಿ ಪತ್ತೆಯಾಗಿದ್ದ ನಿಧಿ ಮೌಲ್ಯ 8 ಕೋಟಿ ರೂ
ತಮಿಳು ನಟ ಜಯಂ ರವಿ ಕಣ್ಣೀರು, ಆಕ್ರೋಶ: ಆಗಿದ್ದೇನು? ವಿಡಿಯೋ ನೋಡಿ
ತಮಿಳು ನಟ ಜಯಂ ರವಿ ಕಣ್ಣೀರು, ಆಕ್ರೋಶ: ಆಗಿದ್ದೇನು? ವಿಡಿಯೋ ನೋಡಿ
ಝಲ್ಮುರಿ ಇಲ್ಲಿಗೂ ತಲುಪಿತೇ? ಮೋದಿ ಪ್ರಶ್ನೆಗೆ ಭಾರತೀಯ ವಲಸಿಗರ ಕರತಾಡನ
ಝಲ್ಮುರಿ ಇಲ್ಲಿಗೂ ತಲುಪಿತೇ? ಮೋದಿ ಪ್ರಶ್ನೆಗೆ ಭಾರತೀಯ ವಲಸಿಗರ ಕರತಾಡನ
ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ
ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ
ಪ್ರಧಾನಿ ಮೋದಿಗೆ ಹೇಗ್‌ನಲ್ಲಿ ಯುವ ಕಲಾವಿದರಿಂದ ಸಂಗೀತ, ನೃತ್ಯದ ಸ್ವಾಗತ
ಪ್ರಧಾನಿ ಮೋದಿಗೆ ಹೇಗ್‌ನಲ್ಲಿ ಯುವ ಕಲಾವಿದರಿಂದ ಸಂಗೀತ, ನೃತ್ಯದ ಸ್ವಾಗತ
ಭೀಕರ ಅಪಘಾತ; ಫುಟ್‌ಪಾತ್‌ಗೆ ನುಗ್ಗಿದ ಕಾರು, ಮಗು ಸೇರಿ ಮೂವರಿಗೆ ಗಂಭೀರ ಗಾಯ
ಭೀಕರ ಅಪಘಾತ; ಫುಟ್‌ಪಾತ್‌ಗೆ ನುಗ್ಗಿದ ಕಾರು, ಮಗು ಸೇರಿ ಮೂವರಿಗೆ ಗಂಭೀರ ಗಾಯ
ಜೆ.ಪಿ. ಪಾರ್ಕ್ ಫ್ಲೈಓವರ್ ಕೆಳಗೆ ಕಸದ ರಾಶಿ! GBA ನಿದ್ದೆ ಜಾರಿದೆಯೇ?
ಜೆ.ಪಿ. ಪಾರ್ಕ್ ಫ್ಲೈಓವರ್ ಕೆಳಗೆ ಕಸದ ರಾಶಿ! GBA ನಿದ್ದೆ ಜಾರಿದೆಯೇ?