Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಕ್ಟೋಬರ್ 13 ರಿಂದ ಇತಿಹಾಸ ಪ್ರಸಿದ್ಧ ಹಾಸನಾಂಬೆ ದೇವಿ ದರ್ಶನ

ಮಹಾಮಾರಿ ಕೊರೊನಾ ಹಿನ್ನೆಲೆ ಕಳೆದ ಮೂರು ವರ್ಷ ಹಾಸನಾಂಬೆ ಉತ್ಸವ ಸರಳವಾಗಿ ನಡೆದಿತ್ತು. ಈ ಬಾರಿ ಅದ್ಧೂರಿಯಾಗಿ ಹಾಸನಾಂಬೆ ಉತ್ಸವ ಆಚರಣೆಗೆ ನಿರ್ಧಾರ ಮಾಡಲಾಗಿದೆ.

ಅಕ್ಟೋಬರ್ 13 ರಿಂದ ಇತಿಹಾಸ ಪ್ರಸಿದ್ಧ ಹಾಸನಾಂಬೆ ದೇವಿ ದರ್ಶನ
Follow us
TV9 Web
| Updated By: ಆಯೇಷಾ ಬಾನು

Updated on:Sep 10, 2022 | 7:04 PM

ಹಾಸನ: ಇತಿಹಾಸನ ಪ್ರಸಿದ್ದ ಹಾಸನಾಂಬೆ ಜಾತ್ರಾ ಮಹೋತ್ಸವ (Hasanamba Temple) ಅಕ್ಟೋಬರ್ 13ರಿಂದ ಅಕ್ಟೋಬರ್ 27ರವರೆಗೆ  ನಡೆಯಲಿದೆ ಎಂದು ಹಾಸನಾಂಬ ದೇಗುಲದ ಬಳಿ ಶಾಸಕ ಪ್ರೀತಂಗೌಡ(Preetham Gowda) ತಿಳಿಸಿದ್ದಾರೆ. ಈ ಬಾರಿ ದೇವಿದರ್ಶನಕ್ಕೆ  ಒಟ್ಟು 15 ದಿನ ಅವಕಾಶ ನೀಡಲಾಗಿದೆ.

ವರ್ಷಕ್ಕೊಮ್ಮೆ ಮಾತ್ರ ದರ್ಶನ ಕರುಣಿಸಲಿರುವ ಹಾಸನಾಂಬ ಜಾತ್ರಾ ಮಹೋತ್ಸವದ ಸಿದ್ದತೆ ಬಗ್ಗೆ ಅಧಿಕಾರಿಗಳ ಜೊತೆ ಸಭೆ ನಡೆಸಿ, ಹಾಸನಾಂಬೆ ದೇಗುಲದಲ್ಲಿ ಪರಿಶೀಲನೆ ನಡೆಸಿದ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಶಾಸಕ ಪ್ರೀತಂಗೌಡ ದೇವಾಲಯ ತೆರೆಯುವ ಬಗ್ಗೆ ಮಾಹಿತಿ ನೀಡಿದ್ರು. ಒಟ್ಟು 15 ದಿನಗಳ ಕಾಲ ಹಾಸನಾಂಬ ದೇವಾಲಯ ಓಪನ್​ ಮಾಡಲಾಗುತ್ತೆ. ಮೊದಲ ಮತ್ತು ಕೊನೆಯ ದಿನ ಸಾರ್ವಜನಿಕರ ದರ್ಶನ ಇರಲ್ಲ. ಗ್ರಹಣ ದಿನ ಸಾರ್ವಜನಿಕರಿಗೆ ದರ್ಶನ ಇರಲ್ಲ ಎಂದರು.

ಮಹಾಮಾರಿ ಕೊರೊನಾ ಹಿನ್ನೆಲೆ ಕಳೆದ ಮೂರು ವರ್ಷ ಹಾಸನಾಂಬೆ ಉತ್ಸವ ಸರಳವಾಗಿ ನಡೆದಿತ್ತು. ಈ ಬಾರಿ ಅದ್ಧೂರಿಯಾಗಿ ಹಾಸನಾಂಬೆ ಉತ್ಸವ ಆಚರಣೆಗೆ ನಿರ್ಧಾರ ಮಾಡಲಾಗಿದೆ. ಆಶ್ವೀಜ ಮಾಸದ ಮೊದಲ‌ ಗುರುವಾರ ಗರ್ಭಗುಡಿ ಬಾಗಿಲು ತೆರೆಯಲಿದೆ. ಹೊರ ಜಿಲ್ಲೆ, ಹೊರ ರಾಜ್ಯಗಳಿಂದ ಆಗಮಿಸಿ ಲಕ್ಷಾಂತರ ಭಕ್ತರು ದರ್ಶನ ಪಡೆಯಲಿದ್ದಾರೆ ಎಂದು ಹಾಸನಾಂಬೆ ದೇಗುಲದ ಬಳಿ ಶಾಸಕ ಪ್ರೀತಂಗೌಡ ತಿಳಿಸಿದರು.

ಹಾಸನಾಂಬೆ ಇತಿಹಾಸ

12 ನೇ ಶತಮಾನ, ಹಾಸನದ ಚನ್ನಪಟ್ಟಣ ಪಾಳೆಯಗಾರ ಶ್ರೀ ಕೃಷ್ಣಪ್ಪ ನಾಯಕನ ಕಾಲ. ಕೃಷ್ಣಪ್ಪನಾಯಕ ಕಾರ್ಯನಿಮಿತ್ತ ಪ್ರಯಾಣ ಹೊರಟಾಗ ಮೊಲವೊಂದು ಅಡ್ಡ ಬಂದಿತು. ಆಗ ಅದನ್ನು ಅಪಶಕುನವೆಂದು ಭಾವಿಸುತ್ತಾನೆ. ಈ ವೇಳೆ ಪ್ರತ್ಯಕ್ಷಳಾದ ಆದಿಶಕ್ತಿ ಸ್ವರೂಪಿಣಿ-ಈ ಸ್ಥಳದಲ್ಲಿ ದೇಗುಲ ಕಟ್ಟು, ನಾನು ಹಾಸನಾಂಬೆ ಎಂದೇ ಹೆಸರಾಗಿ ಇಲ್ಲಿ ನೆಲೆಸುವೆ ಎಂದಳಂತೆ. (ಕುದುರು ಗಂಡಿಯಲ್ಲಿ ಇರುವ ಕ್ರಿ.ಶ.114 ವೀರಗಲ್ಲಿನ ಶಾಸನದ ಪ್ರಕಾರ)

ದೇಗುಲದ ಕಥೆ ಕಾಶಿ, ವಾರಣಾಸಿಯಿಂದ ದಕ್ಷಿಣಾಭಿಮುಖವಾಗಿ ವಾಯುವಿಹಾರಕ್ಕೆಂದು ಬಂದ ಸಪ್ತ ಮಾತೃಕೆಯರು ಅಂದರೆ, ಬ್ರಾಹ್ಮೀದೇವಿ, ಮಹೇಶ್ವರಿ, ಕೌಮಾರಿ, ವೈಷ್ಣವಿ, ವಾರಾಹಿ, ಇಂದ್ರಾಣಿ ಮತ್ತು ದುರ್ಗೆ, ಚಾಮುಂಡಿ ಇವರು ಇಲ್ಲಿಗೆ ಬಂದರೆಂದು ಪ್ರತೀತಿ. ಅವರಲ್ಲಿ, ವೈಷ್ಣವಿ, ವಾರಾಹಿ ಮತ್ತು ಇಂದ್ರಾಣಿ ಈ ಮೂವರು ದೇವತೆಗಳು ಹುತ್ತದಲ್ಲಿ ನೆಲೆಸಿದ ಸ್ಥಳವೇ ಹಾಸನಾಂಬೆಯ ದೇಗುಲ. (ದೇವನೊಬ್ಬನೇ ಆದರೂ ಆದಿ ಮಹರ್ಷಿಗಳು ಪುರುಷ ಮತ್ತು ಸ್ತ್ರೀ ಎರಡೂ ಶಕ್ತಿರೂಪಗಳನ್ನು ಒಂದಾಗಿ ಕಂಡಿದ್ದಾರೆ. ಹಾಗೆ ಕಂಡ ಸ್ತ್ರೀ ರೂಪಗಳೆ ಸಪ್ತಮಾತೃಕೆಯರು). ಹಾಸನ ನಗರದ ಹೃದಯಭಾಗದಲ್ಲಿರುವ ದೇವಿಕೆರೆಯಲ್ಲಿ, ಬ್ರಾಹ್ಮಿದೇವಿ, ಕೆಂಚಮ್ಮ ದೇವಿ ಹೊಸಕೋಟೆಯಲ್ಲಿ ನೆಲೆಸಿದ್ದಾರೆ. ಆದಿಶಕ್ತಿ ಸ್ವರೂಪಿಣಿ ಮಾತೃ ಸ್ವರೂಪಿಣಿಯಾಗಿರುವ ಹಾಸನಾಂಬೆ ಸಿಂಹಾಸನಾಪುರಿಯ ಅಧಿದೇವತೆ- ಭವತಾರಿಣಿ, ಅಸುರ ಸಂಹಾರಿಣಿ. ಬೇಡಿದ ವರಕೊಡುವ ಶಕ್ತಿದೇವತೆಯಾಗಿ ಜನಮಾನಸದಲ್ಲಿ ಕಾಣಿಸಿ ಕೊಂಡಿದ್ದಾಳೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 6:21 pm, Sat, 10 September 22