AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅ 9ರಿಂದ 23ರವರೆಗೆ ಹಾಸನಾಂಬೆ ಉತ್ಸವ: ಈ ಬಾರಿ ದೇವಿ ದರ್ಶನ ನಿಯಮ ಬದಲಾವಣೆ, ಪಾಸ್ ರದ್ದು

ವರ್ಷಕ್ಕೊಮ್ಮೆ ದರ್ಶನ ನೀಡುವ ಹಾಸನಾಂಬೆ ಉತ್ಸವ ಈ ವರ್ಷ ಅಕ್ಟೋಬರ್ 9 ರಿಂದ 23 ರವರೆಗೆ ನಡೆಯಲಿದೆ. ಹೀಗಾಗಿ ಇಂದು ಹಾಸನ ಜಿಲ್ಲಾ ಪಂಚಾಯತ ಸಭಾಂಗಣದಲ್ಲಿ ಉಸ್ತುವಾರಿ ಸಚಿವ ಕೃಷ್ಣಭೈರೇಗೌಡ ನೇತೃತ್ವದಲ್ಲಿ ದರ್ಶನೋತ್ಸವ ಸಿದ್ಧತೆ ಸಭೆ ಮಾಡಲಾಗಿದೆ. ಗಣ್ಯರು ಮತ್ತು ಭಕ್ತರ ದರ್ಶನದ ವ್ಯವಸ್ಥೆ ಕುರಿತು ಚರ್ಚೆ ಮಾಡಲಾಗಿದೆ. ಸಂಪೂರ್ಣ ಮಾಹಿತಿ ಇಲ್ಲಿದೆ.

ಅ 9ರಿಂದ 23ರವರೆಗೆ ಹಾಸನಾಂಬೆ ಉತ್ಸವ: ಈ ಬಾರಿ ದೇವಿ ದರ್ಶನ ನಿಯಮ ಬದಲಾವಣೆ, ಪಾಸ್ ರದ್ದು
ಹಾಸನಾಂಬೆ ಉತ್ಸವ
ಮಂಜುನಾಥ ಕೆಬಿ
| Updated By: ಗಂಗಾಧರ​ ಬ. ಸಾಬೋಜಿ|

Updated on:Aug 26, 2025 | 3:44 PM

Share

ಹಾಸನ, ಆಗಸ್ಟ್​ 26: ಅಧಿದೇವತೆ, ಬೇಡಿದ ವರವ ನೀಡುವ ಮಹಾತಾಯಿ ಹಾಸನಾಂಬೆ (Hasanamba). ವರ್ಷಕ್ಕೆ ಒಮ್ಮೆ ಮಾತ್ರ ದರ್ಶನ ಕರುಣಿಸುವ ಹಾಸನಾಂಬೆ ಉತ್ಸವಕ್ಕೆ ಇದೀಗ ದಿನಗಣನೆ ಶುರುವಾಗಿದೆ. ಈ ವರ್ಷ ಅಕ್ಟೋಬರ್ 9ರಿಂದ 23ರವರೆಗೆ ಹಾಸನಾಂಬೆ ಉತ್ಸವ ಜರುಗಲಿದೆ. ಮೊದಲ ಹಾಗೂ ಕೊನೆಯ ದಿನ ಹೊರತುಪಡಿಸಿ ಉಳಿದ 13 ದಿನ ಭಕ್ತರಿಗೆ ಹಾಸನಾಂಬೆ ದರುಶನ ಕರುಣಿಸಲಿದ್ದಾಳೆ. ಹೀಗಾಗಿ ಹಾಸನ ಜಿಲ್ಲಾ ಪಂಚಾಯತ ಸಭಾಂಗಣದಲ್ಲಿ ಉಸ್ತುವಾರಿ ಸಚಿವ ಕೃಷ್ಣಭೈರೇಗೌಡ ನೇತೃತ್ವದಲ್ಲಿ ದರ್ಶನೋತ್ಸವ ಸಿದ್ಧತೆ ಸಭೆ ನಡೆಯಿತು. ಶಾಸಕರಾದ ಸ್ವರೂಪ್, ಸಿಮೆಂಟ್ ಮಂಜು, ಶಿವಲಿಂಗೇಗೌಡ ಭಾಗಿಯಾಗಿದ್ದರು.

ಭಕ್ತರಿಗೆ ಸಮಯ ನಿಗದಿ ಮಾಡುವಂತೆ ಸಚಿವ ಕೃಷ್ಣಬೈರೇಗೌಡ ಸಲಹೆ

ಸಭೆಯಲ್ಲಿ ಮಾತನಾಡಿದ ಉಸ್ತುವಾರಿ ಸಚಿವ ಕೃಷ್ಣಬೈರೇಗೌಡ, ರಾಜ್ಯದ ಮೂಲೆ ಮೂಲೆಯಿಂದ ಜನರು ಹಾಸನಾಂಬೆ ದರ್ಶನಕ್ಕೆ ಬರುತ್ತಾರೆ. ಆದರೆ ವಿವಿಐಪಿ, ವಿಐಪಿ ಭಕ್ತರ ಕಾರಣದಿಂದ ಜನರಿಗೆ ದರ್ಶನಕ್ಕೆ ಸಮಸ್ಯೆ ಆಗುತ್ತದೆ. ಅವರನ್ನು ಗಂಟೆಗಟ್ಟಲೇ ನಿಲ್ಲಿಸಿ ಜನರಿಗೆ ತೊಂದರೆ ಕೊಡುವುದು ಸರಿಯಲ್ಲ. ಹಾಗಾಗಿ ಈ ಗಣ್ಯ ಸಂಸ್ಕೃತಿ ತಡೆಯಲು ಸಹಕರಿಸಿ ಎಂದು ಮನವಿ ಮಾಡಿದರು.

ಇದನ್ನೂ ಓದಿ: ಹಾಸನಾಂಬೆ ದೇಗುಲ ಕ್ಲೋಸ್: 18 ಲಕ್ಷಕ್ಕೂ ಅಧಿಕ ಭಕ್ತರಿಂದ ದರ್ಶನ, ಕೋಟ್ಯಾಂತರ ರೂ. ಆದಾಯ

ಇದನ್ನೂ ಓದಿ
Image
ಹಾಸನಾಂಬೆ ದೇಗುಲ ಕ್ಲೋಸ್: ಲಕ್ಷಾಂತರ ಭಕ್ತರಿಂದ ದರ್ಶನ,ಕೋಟ್ಯಾಂತರ ರೂ.ಆದಾಯ
Image
ಹಾಸನಾಂಬ ದೇವಿ ದರ್ಶನ ಅಂತ್ಯ: ದಾಖಲೆಯ 20 ಲಕ್ಷ ಭಕ್ತರಿಂದ ದರ್ಶನ
Image
ಹಾಸನಾಂಬೆ ದರ್ಶನದ ಅವ್ಯವಸ್ಥೆ: ಡಿಸಿ ವಿರುದ್ಧ ತನಿಖೆ ಆಗ್ರಹಿಸಿದ ರೇವಣ್ಣ
Image
ಹಾಸನಾಂಬ ದೇಗುಲದ ಇತಿಹಾಸ, ಸಪ್ತ ಮಾತೃಕೆಯರು ನೆಲೆಸಿದ ಕ್ಷೇತ್ರದ ಮಾಹಿತಿ

ನಾನು ಈ ವಿಐಪಿ ಹಾಗೂ ಶಿಷ್ಟಾಚಾರ ಭಕ್ತರಿಗೆ ಸಮಯ ನಿಗದಿ ಮಾಡಿ ಎಂದು ಹೇಳಿದ್ದೆ. ಗೋಲ್ಡ್ ಕಾರ್ಡ್​ಗೆ ಎರಡು ಗಂಟೆ, ಶಿಷ್ಟಾಚಾರಕ್ಕೆ ಎರಡು ಗಂಟೆ ಮಾತ್ರ ಸಮಯ ನಿಗದಿ ಮಾಡಿ ಎಂದು ಸಲಹೆ ನೀಡಲಾಗಿದೆ. ಇದೆಲ್ಲ ಮಾಡಿದರೆ ಜನರಿಗೆ ಅನುಕೂಲ ಆಗುತ್ತೆ ಎನ್ನುವುದಾದರೆ ಈ ಎಲ್ಲಾ ರೀತಿಯ ಬದಲಾವಣೆ ಮಾಡೋಣ ಎಂದು ಸಚಿವ ಕೃಷ್ಣಬೈರೇಗೌಡ ಹೇಳಿದ್ದಾರೆ.

ಪಾಸ್ ವ್ಯವಸ್ಥೆ ಸಂಪೂರ್ಣ ರದ್ದು

ಹಾಸನಾಂಬೆ ದೇವಾಲಯದ ಆಡಳಿತ ಮಂಡಳಿ ಅಧಿಕಾರಿ ಮಾರುತಿ ಮಾತನಾಡಿ, ಹಾಸನಾಂಬೆ ಉತ್ಸವ ವೇಳೆ ದರ್ಶನದ ಪಾಸ್ ವ್ಯವಸ್ಥೆ ಸಂಪೂರ್ಣ ರದ್ದು ಮಾಡಲಾಗುವುದು. ಪಾಸ್ ಬದಲು ಗೋಲ್ಡ್ ಕಾರ್ಡ್ ಬಳಕೆ ಇರಲಿದ್ದು, ಒಂದು ಗೋಲ್ಡ್ ಕಾರ್ಡ್​ಗೆ ಒಬ್ಬರಿಗೆ ಮಾತ್ರ ದರ್ಶನಕ್ಕೆ ಅವಕಾಶವಿದ್ದು, ಮುಂಜಾನೆ 5ರಿಂದ ದರ್ಶನಕ್ಕೆ ಅವಕಾಶವಿರಲಿದೆ ಎಂದು ತಿಳಿಸಿದರು.

ಇದನ್ನೂ ಓದಿ: ಹಾಸನಾಂಬ ದೇಗುಲದ ಇತಿಹಾಸ ಮತ್ತು ಸಪ್ತ ಮಾತೃಕೆಯರು ಇಲ್ಲಿ ನೆಲೆಸಿದ್ದು ಹೇಗೆ? ಇಲ್ಲಿದೆ ಮಾಹಿತಿ

ಉಚಿತ ಪಾಸ್ ಪಡೆದು ದರ್ಶನಕ್ಕೆ ಬರುತ್ತಿದ್ದ ಜನರಿಂದ ಗೊಂದಲವಾಗುತ್ತಿತ್ತು. ಆದ್ದರಿಂದ ಉಚಿತ ಪಾಸ್ ಬದಲು ಕೇವಲ ಗೋಲ್ಡ್ ಕಾರ್ಡ್ ಬಳಕೆ ಮಾಡಲಾಗುವುದು. ಸಿಎಂ, ಡಿಸಿಎಂ, ಸಿಜೆ ಹೊರತುಪಡಿಸಿ ಉಳಿದ ಎಲ್ಲಾ ಗಣ್ಯರಿಗೆ ವೈಯಕ್ತಿಕ ಶಿಷ್ಟಾಚಾರ ಬದಲು ಜಿಲ್ಲಾಡಳಿತ ನಿಯೋಜಿತ ವಾಹನ ಬಳಕೆ ಮಾಡಲಾಗುವುದು. ಕೊನೆಯ 5 ದಿನ ಎಲ್ಲಾ ರೀತಿಯ ಶಿಷ್ಟಾಚಾರ ರದ್ದು ಎಂದು ಹಾಸನಾಂಬೆ ದೇವಾಲಯದ ಆಡಳಿತ ಮಂಡಳಿ ಅಧಿಕಾರಿ ಮಾರುತಿ ಮಾಹಿತಿ ನೀಡಿದರು.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 3:37 pm, Tue, 26 August 25

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ