ಹಾಸನ, ನ.16: ವರ್ಷಕ್ಕೊಮ್ಮೆ ದರ್ಶನ ನೀಡುವ ಹಾಸನಾಂಬೆ ಉತ್ಸವ (Hasanamba Utsava) ನಿನ್ನೆ(ನ.15) ತೆರೆ ಕಂಡಿದೆ. ನ.2 ರಿಂದ ಶುರುವಾಗಿ ಬರೊಬ್ಬರಿ 14 ದಿನಗಳವರೆಗೆ ನಡೆಯುವ ಉತ್ಸವದಲ್ಲಿ ಈ ಬಾರಿ ದಾಖಲೆ ಪ್ರಮಾಣದಲ್ಲಿ ಭಕ್ತಾಧಿಗಳು ಆಗಮಿಸಿದ್ದರು. ದೇಶ-ವಿದೇಶಗಳಿಂದಲೂ ಸಾಗರೋಪಾದಿಯಲ್ಲಿ ಹರಿದ ಭಕ್ತ ಗಣ, ದೇವಿಯ ಕೃಪೆಗೆ ಪಾತ್ರರಾದರು. ಇನ್ನು ಕೇವಲ 12 ದಿನಗಳಲ್ಲಿಯೇ 13 ಲಕ್ಷಕ್ಕೂ ಅಧಿಕ ಭಕ್ತರು ಆಗಮಿಸಿ, 5.80 ಕೋಟಿ ರೂ ಆದಾಯ ಹರಿದು ಬಂದಿತ್ತು. ನಿನ್ನೆ ಉತ್ಸವ ತೆರೆ ಕಂಡಿದ್ದು, ಇಂದು ಬೀಗಿ ಪೊಲೀಸ್ ಬಂದೋಬಸ್ತ್ನಲ್ಲಿ ಹುಂಡಿ ಎಣಿಕೆ ಕಾರ್ಯ ನಡೆದು ಮುಕ್ತಾಯವಾಗಿದೆ.
ಹುಂಡಿ ಎಣಿಕೆ ಕಾರ್ಯ ಇದೀಗ ಮುಕ್ತಾಯವಾಗಿದ್ದು, ಹಾಸನಾಂಬೆ ದೇವಿ ಜಾತ್ರಾ ಮಹೋತ್ಸವದ ಇತಿಹಾಸದಲ್ಲೇ ಈ ಬಾರಿ ಗರಿಷ್ಠ ಆದಾಯದ ಮೂಲಕ ದಾಖಲೆ ನಿರ್ಮಾಣವಾಗಿದೆ. ಒಟ್ಟು 8 ಕೋಟಿ 72 ಲಕ್ಷದ 41 ಸಾವಿರದ 531 ರೂ. ದಾಖಲೆಯ ಹಣ ಸಂಗ್ರಹವಾಗಿದೆ. ಅದರಲ್ಲಿ ಕಾಣಿಕೆ ರೂಪದಲ್ಲಿ 62 ಗ್ರಾಂ ಚಿನ್ನ, 161 ಗ್ರಾಂ ಬೆಳ್ಳಿ ಸಂಗ್ರಹವಾದರೆ, ವಿಶೇಷ ದರ್ಶನದ ಸಾವಿರ, ಮುನ್ನೂರು ರೂ. ಟಿಕೆಟ್, ಲಾಡು ಮಾರಾಟದಿಂದಲೇ ಬರೊಬ್ಬರಿ 6 ಕೋಟಿ 17 ಲಕ್ಷದ 34 ರೂ ಸಂಗ್ರಹ, ಇನ್ನು ಹುಂಡಿಯಲ್ಲಿ 2 ಕೋಟಿ 50 ಲಕ್ಷದ 77 ಸಾವಿರದ 497 ರೂಪಾಯಿ ಸಂಗ್ರಹದ ಮೂಲಕ ಒಟ್ಟು 8,72,41,531 ಕೋಟಿ ರೂ. ದಾಖಲೆ ಆದಾಯ ಗಳಿಕೆಯಾಗಿದೆ.
ಇದನ್ನೂ ಓದಿ:ಹಾಸನಾಂಬೆ ಗರ್ಭಗುಡಿ ಬಾಗಿಲು ಬಂದ್, ಮುಂದಿನ ವರ್ಷ ಅಮ್ಮನ ದರ್ಶನೋತ್ಸವಕ್ಕೆ ದಿನಾಂಕವೂ ಫಿಕ್ಸ್
ಈ ವರ್ಷ ಹಾಸನ ಜಿಲ್ಲಾಡಳಿ ಹಾಸನಾಂಬೆ ಉತ್ಸವನ್ನು ಬಹಳ ಅಚ್ಚುಕಟ್ಟಾಗಿ ಮಾಡಿದ್ದು, ಪ್ರಸಕ್ತ ವರ್ಷದ ಹಾಸನಬಾಂಬೆ ಉತ್ಸವ ತೆರೆ ಕಂಡಿದೆ. ಈ ಬಾರಿ ಒಟ್ಟು 14 ಲಕ್ಷ ಭಕ್ತರು ದೇವಿಯ ದರ್ಶನಕ್ಕೆ ಆಗಮಿಸಿದ್ದು, ಒಟ್ಟು 8 ಕೋಟಿಗೂ ಅಧಿಕ ಆದಾಯ ಸಂಗ್ರಹವಾಗಿದೆ. ಇನ್ನು ಮುಂದಿನ ವರ್ಷದ ಹಾಸನಾಂಬೆ ದರ್ಶನೋತ್ಸವಕ್ಕೂ ದಿನಾಂಕವನ್ನು ನಿಗದಿ ಮಾಡಲಾಗಿದ್ದು, 2024ರ ಅಕ್ಟೋಬರ್ 24ರಿಂದ ನವೆಂಬರ್ 3ರ ವರೆಗೆ ಹಾಸನಾಂಬೆ ದರ್ಶನ ಇರಲಿದೆ. ಇದರೊಂದಿಗೆ ಒಟ್ಟು 9 ದಿನಗಳ ಕಾಲ ಹಾಸನಾಂಬೆ ದರ್ಶನಕ್ಕೆ ಭಕ್ತರಿಗೆ ಅವಕಾಶ ನೀಡಲಾಗುತ್ತದೆ.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 4:05 pm, Thu, 16 November 23