AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಾಸನಾಂಬೆ ದೇಗುಲ: ಗರ್ಭಗುಡಿ ಬಾಗಿಲಿಗೆ ಪೂಜೆ ವಿಚಾರದ ಬಗ್ಗೆ ಅರ್ಚಕರು, ಸಂಬಂಧಪಟ್ಟವರ ಜೊತೆ ಸಭೆ

ವರ್ಷಕ್ಕೆ ಒಮ್ಮೆ ಮಾತ್ರ ದರ್ಶನ ನೀಡುವ ಹಾಸನಾಂಬೆ ದೇಗುಲದಲ್ಲಿ ಈ ವರ್ಷ ಹೊಸ ರೀತಿಯಲ್ಲಿ ಕಳಸ ಪ್ರತಿಷ್ಠಾಪಿಸಿ ಪೂಜೆ ಮಾಡಲಾಗುತ್ತಿದೆ ಎನ್ನಲಾಗಿತ್ತು. ಹೊಸ ರೀತಿಯ ಪೂಜೆಗೆ ಕೆಲ ಭಕ್ತರು ಆಕ್ಷೇಪಿಸಿದ್ದರು.

ಹಾಸನಾಂಬೆ ದೇಗುಲ: ಗರ್ಭಗುಡಿ ಬಾಗಿಲಿಗೆ ಪೂಜೆ ವಿಚಾರದ ಬಗ್ಗೆ ಅರ್ಚಕರು, ಸಂಬಂಧಪಟ್ಟವರ ಜೊತೆ ಸಭೆ
ಹಾಸನಾಂಬೆ ಕಳಸ ರೂಪದಲ್ಲಿ ಪ್ರತಿಷ್ಠಾಪನೆ
TV9 Web
| Edited By: |

Updated on: Jan 30, 2022 | 3:33 PM

Share

ಹಾಸನ: ಇಲ್ಲಿನ ಹಾಸನಾಂಬೆ ದೇಗುಲದ ಗರ್ಭಗುಡಿ ಬಾಗಿಲಿಗೆ ಪೂಜೆ ವಿಚಾರವಾಗಿ ನಾಳೆ ಅರ್ಚಕರು, ಸಂಬಂಧಪಟ್ಟವರ ಜೊತೆ ಸಭೆ ನಡೆಸುತ್ತೇನೆ. ಪೂಜೆಯ ಹಿನ್ನೆಲೆ, ಅವಶ್ಯಕತೆ ಬಗ್ಗೆ ತೀರ್ಮಾನ ಮಾಡುತ್ತೇವೆ ಎಂದು ಹಾಸನಾಂಬೆ ದೇಗುಲದ ಆಡಳಿತಾಧಿಕಾರಿ ಜಗದೀಶ್ ಭಾನುವಾರ ಹೇಳಿಕೆ ನೀಡಿದ್ದಾರೆ. ಹಣದ ಆಸೆಗೆ ಸಾರ್ವಜನಿಕರಿಗೆ ನಿತ್ಯ ಹಾಸನಾಂಬೆ ದರ್ಶನ ನೀಡಲಾಗುತ್ತಿದೆಯಾ ಎಂಬ ಬಗ್ಗೆ ಪ್ರಶ್ನೆಗಳು ಮೂಡಿದ್ದವು. ಹಾಸನಾಂಬೆ ಗರ್ಭಗುಡಿ ಬಾಗಿಲಿಗೆ ನಿತ್ಯ ಅಲಂಕಾರ ಪೂಜೆ ಮಾಡಲಾಗುತ್ತಿದೆ ಎನ್ನಲಾಗಿತ್ತು.

ಈ ಬಗ್ಗೆ ದೇಗುಲಕ್ಕೆ ಭೇಟಿ ನೀಡಿದ ಹಾಸನಾಂಬೆ ದೇಗುಲದ ಆಡಳಿತಾಧಿಕಾರಿ ಜಗದೀಶ್​ ದೇಗುಲದ ಅರ್ಚಕರಿಂದ ಮಾಹಿತಿ ಪಡೆದಿದ್ದಾರೆ. ವರ್ಷಕ್ಕೆ ಒಮ್ಮೆ ಮಾತ್ರ ದರ್ಶನ ನೀಡುವ ಹಾಸನಾಂಬೆ ದೇಗುಲದಲ್ಲಿ ಈ ವರ್ಷ ಹೊಸ ರೀತಿಯಲ್ಲಿ ಕಳಸ ಪ್ರತಿಷ್ಠಾಪಿಸಿ ಪೂಜೆ ಮಾಡಲಾಗುತ್ತಿದೆ ಎನ್ನಲಾಗಿತ್ತು. ಹೊಸ ರೀತಿಯ ಪೂಜೆಗೆ ಕೆಲ ಭಕ್ತರು ಆಕ್ಷೇಪಿಸಿದ್ದರು.

ಹಾಸನಾಂಬೆ ದೇಗುಲದ ದ್ವಾರಕ್ಕೆ ಪೂಜೆ ಮಾಡುತ್ತಿದ್ದೇವೆ. ವಂಶ ಪಾರಂಪರ್ಯವಾಗಿ ಪೂಜೆ ನಡೆದುಕೊಂಡು ಬಂದಿದೆ. ಆದರೆ ಈ ಮೊದಲು ಅಲಂಕಾರವನ್ನು ಮಾಡುತ್ತಿರಲಿಲ್ಲ. ಇದೀಗ ಚೆನ್ನಾಗಿ ಕಾಣಲಿ ಎಂದು ಅಲಂಕಾರ ಮಾಡುತ್ತಿದ್ದೇವೆ. ದೇವಾಲಯ ಬೆಳಗ್ಗೆಯಿಂದ ಸಂಜೆವರೆಗೆ ಓಪನ್ ಇರಲ್ಲ ಎಂದು ಹಾಸನಾಂಬೆ ದೇಗುಲದ ಅರ್ಚಕ ನಾಗರಾಜ್ ಹೇಳಿಕೆ ನೀಡಿದ್ದಾರೆ. ದೇಗುಲದ ಗರ್ಭಗುಡಿ ಬಾಗಿಲಿಗೆ ಪೂಜೆ ವಿಚಾರವಾಗಿ ಸ್ಪಷ್ಟನೆ ನೀಡಲಾಗಿದೆ.

ಇದನ್ನೂ ಓದಿ: ಹಾಸನಾಂಬೆ ದೇಗುಲದ ಗರ್ಭಗುಡಿಯ ಮುಂದೆ ಪ್ರತಿರೂಪವಿಟ್ಟು ಪೂಜೆ; ಅರ್ಚಕರ ನಡೆಗೆ ಭಕ್ತರ ಅಸಮಾಧಾನ

ಇದನ್ನೂ ಓದಿ: ಹಾಸನದಲ್ಲಿ ವೈದ್ಯ ವಿದ್ಯಾರ್ಥಿನಿ ಹಣೆ, ಕುತ್ತಿಗೆಗೆ ಮುತ್ತಿಟ್ಟು ಲೈಂಗಿಕ ದೌರ್ಜನ್ಯ ಎಸಗಿದ ಅಸೋಸಿಯೇಟ್ ಪ್ರೊಫೆಸರ್ ಸಸ್ಪೆಂಡ್

48 ಗಂಟೆಗಳಲ್ಲಿ ಅಭಿಷೇಕ್ ದಾಖಲೆ ಮುರಿದ ಇಶಾನ್ ಕಿಶನ್
48 ಗಂಟೆಗಳಲ್ಲಿ ಅಭಿಷೇಕ್ ದಾಖಲೆ ಮುರಿದ ಇಶಾನ್ ಕಿಶನ್
ಬಿಗ್ ಬಾಸ್: ಬಂಗಾರದ ಅಂಗಡಿಯಲ್ಲಿ ಕಾವ್ಯಾ ಜೊತೆ ಸೆಲ್ಫಿಗೆ ಮುಗಿಬಿದ್ದ ಜನ
ಬಿಗ್ ಬಾಸ್: ಬಂಗಾರದ ಅಂಗಡಿಯಲ್ಲಿ ಕಾವ್ಯಾ ಜೊತೆ ಸೆಲ್ಫಿಗೆ ಮುಗಿಬಿದ್ದ ಜನ
ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾದ ಅಫ್ಘಾನ್ ಬ್ಯಾಟರ್
ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾದ ಅಫ್ಘಾನ್ ಬ್ಯಾಟರ್
ಅಪರೂಪದ ವಸ್ತು ಪತ್ತೆ:ಲಕ್ಕುಂಡಿ ನೈಜ ಗತವೈಭವ ಈಗ ಆರಂಭ!
ಅಪರೂಪದ ವಸ್ತು ಪತ್ತೆ:ಲಕ್ಕುಂಡಿ ನೈಜ ಗತವೈಭವ ಈಗ ಆರಂಭ!
‘ಈ ಬಂಗಾರದ ಚೈನ್ ನನಗೆ ಅಲ್ವಾ ಸರ್’: ಶಾಕ್ ಆದ ಗಿಲ್ಲಿ ನಟ
‘ಈ ಬಂಗಾರದ ಚೈನ್ ನನಗೆ ಅಲ್ವಾ ಸರ್’: ಶಾಕ್ ಆದ ಗಿಲ್ಲಿ ನಟ
ರಕ್ಷಿತಾ ಶೆಟ್ಟಿ ಕಣ್ಣಲ್ಲಿ ನನ್ನ ಗೆಲುವಿನ ಖುಷಿ ಕಾಣಿಸಿತು: ಗಿಲ್ಲಿ ನಟ
ರಕ್ಷಿತಾ ಶೆಟ್ಟಿ ಕಣ್ಣಲ್ಲಿ ನನ್ನ ಗೆಲುವಿನ ಖುಷಿ ಕಾಣಿಸಿತು: ಗಿಲ್ಲಿ ನಟ
ಬಾಬರ್ ಆಝಂ ತಂಡದಿಂದ ಹೊರಬಿದ್ದ ಬೆನ್ನಲ್ಲೇ ಫೈನಲ್​ಗೇರಿದ ಸಿಡ್ನಿ ಸಿಕ್ಸರ್ಸ್
ಬಾಬರ್ ಆಝಂ ತಂಡದಿಂದ ಹೊರಬಿದ್ದ ಬೆನ್ನಲ್ಲೇ ಫೈನಲ್​ಗೇರಿದ ಸಿಡ್ನಿ ಸಿಕ್ಸರ್ಸ್
ರಾಹುಲ್​​ ನೀಡಿದ್ದ ಭರವಸೆ ಬಗ್ಗೆ ಬೈಕ್​​ ಟ್ಯಾಕ್ಸಿ ರೈಡರ್​​ಗಳು ಏನಂದ್ರು?
ರಾಹುಲ್​​ ನೀಡಿದ್ದ ಭರವಸೆ ಬಗ್ಗೆ ಬೈಕ್​​ ಟ್ಯಾಕ್ಸಿ ರೈಡರ್​​ಗಳು ಏನಂದ್ರು?
ಮತ್ತೊಂದು ಕೆಟ್ಟ ದಾಖಲೆಯೊಂದಿಗೆ ವಿಶ್ವ ಮಟ್ಟದಲ್ಲಿ ಸುದ್ದಿಯಾದ ಬೆಂಗಳೂರು
ಮತ್ತೊಂದು ಕೆಟ್ಟ ದಾಖಲೆಯೊಂದಿಗೆ ವಿಶ್ವ ಮಟ್ಟದಲ್ಲಿ ಸುದ್ದಿಯಾದ ಬೆಂಗಳೂರು
ಸಾಲು ಸಾಲು ರಜೆ ಹಿನ್ನೆಲೆ ಊರಿನತ್ತ ಹೊರಟ ಜನರಿಗೆ ಶಾಕ್​​: ದುಪ್ಪಟ್ಟು ದರ
ಸಾಲು ಸಾಲು ರಜೆ ಹಿನ್ನೆಲೆ ಊರಿನತ್ತ ಹೊರಟ ಜನರಿಗೆ ಶಾಕ್​​: ದುಪ್ಪಟ್ಟು ದರ