ನಂದಗೋಡನಹಳ್ಳಿಯಲ್ಲಿ 126 ಮರ ಕಡಿದ ಕೇಸ್​: ಅರಣ್ಯ ಇಲಾಖೆಯ 4 ಅಧಿಕಾರಿಗಳ ಅಮಾನತು

ಹಾಸನ ಜಿಲ್ಲೆಯ ಬೇಲೂರು ತಾಲ್ಲೂಕಿನ ನಂದಗೊಂಡನಹಳ್ಳಿಯಲ್ಲಿ 126 ಮರ ಕಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರು ಅರಣ್ಯ ಇಲಾಖೆಯ ಅಧಿಕಾರಿಗಳನ್ನು ಅಮಾನತು ಮಾಡಲಾಗಿದೆ. ಮೇಲ್ನೋಟಕ್ಕೆ ಕರ್ತವ್ಯಲೋಪ ಆರೋಪ ಹಿನ್ನೆಲೆ ಇಲಾಖಾ ವಿಚಾರಣೆ ಬಾಕಿ ಇರಿಸಿ ನಾಲ್ವರನ್ನು ಅಮಾನತು ಮಾಡಿ ಆದೇಶ ಹೊರಡಿಸಲಾಗಿದೆ.

ನಂದಗೋಡನಹಳ್ಳಿಯಲ್ಲಿ 126 ಮರ ಕಡಿದ ಕೇಸ್​: ಅರಣ್ಯ ಇಲಾಖೆಯ 4 ಅಧಿಕಾರಿಗಳ ಅಮಾನತು
ಪ್ರಾತಿನಿಧಿಕ ಚಿತ್ರ
Follow us
ಮಂಜುನಾಥ ಕೆಬಿ
| Updated By: ಗಂಗಾಧರ​ ಬ. ಸಾಬೋಜಿ

Updated on:Dec 28, 2023 | 9:26 PM

ಹಾಸನ, ಡಿಸೆಂಬರ್ 28: ಜಿಲ್ಲೆಯ ಬೇಲೂರು ತಾಲ್ಲೂಕಿನ ನಂದಗೊಂಡನಹಳ್ಳಿ (Nagondanahalli) ಯಲ್ಲಿ 126 ಮರ ಕಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರು ಅರಣ್ಯ ಇಲಾಖೆಯ ಅಧಿಕಾರಿಗಳನ್ನು ಅಮಾನತು ಮಾಡಲಾಗಿದೆ. ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಡಾ.ಪ್ರಭುಗೌಡ ಬಿರಾದಾರ, ಬೇಲೂರು ವಲಯ ಅರಣ್ಯಾಧಿಕಾರಿ ವಿನಯ್ ಕುಮಾರ್, ಬೇಲೂರು ಉಪ ವಲಯ ಅರಣ್ಯಾಧಿಕಾರಿ ಗುರುರಾಜ್ ಮತ್ತು ಅರಣ್ಯ ಗಸ್ತುಪಾಲಕ ರಾಜಕುಮಾರ್‌ ಅಮಾನತುಗೊಳಗಾದವರು.

ಮೇಲ್ನೋಟಕ್ಕೆ ಕರ್ತವ್ಯಲೋಪ ಆರೋಪ ಹಿನ್ನೆಲೆ ಇಲಾಖಾ ವಿಚಾರಣೆ ಬಾಕಿ ಇರಿಸಿ ನಾಲ್ವರನ್ನು ಅಮಾನತು ಮಾಡಿ ಆದೇಶ ಹೊರಡಿಸಲಾಗಿದೆ. ಐಎಫ್‌ಎಸ್‌ ಅಧಿಕಾರಿ ಹಿನ್ನೆಲೆಯಲ್ಲಿ ನಿಯಮಾನುಸಾರ ಡಿಎಫ್‌ಒ ಮೋಹನ್ ಕುಮಾರ್‌ ವಿರುದ್ಧ ಕ್ರಮಕೈಗೊಳ್ಳಲು ಸೂಚನೆ ನೀಡಲಾಗಿದೆ.

ಇದನ್ನೂ ಓದಿ: ಮರಗಳ ಮಾರಣಹೋಮಕ್ಕೂ‌ ನನಗೂ ಯಾವುದೇ ಸಂಬಂಧವಿಲ್ಲ; ಸಂಸದ ಪ್ರತಾಪ್ ಸಿಂಹ ಸಹೋದರ ವಿಕ್ರಂ ಸಿಂಹ ಸ್ಪಷ್ಟನೆ

ತಹಶೀಲ್ದಾರ್‌ ಮಮತಾ ಸಮಯಪ್ರಜ್ಞೆಯಿಂದ ಪ್ರಕರಣ ಬೆಳಕಿಗೆ ಬಂದಿತ್ತು. ಸರ್ವೆ ನಂಬರ್‌ 16ರಲ್ಲಿದ್ದ ಕೋಟ್ಯಂತರ ಬೆಲೆಬಾಳುವ ಮರ ಕಡಿದಿದ್ದರು. ಅಕ್ರಮವಾಗಿ 126 ಮರಗಳನ್ನು ಕಡಿದು ಸಾಗಿಸಲು ಯತ್ನಿಸಿದ್ದರು. ಅರೇಹಳ್ಳಿ ಠಾಣೆಯಲ್ಲಿ ಹಲವರ ವಿರುದ್ಧ ಪ್ರಕರಣ ದಾಖಲಾಗಿತ್ತು.

ಇದನ್ನೂ ಓದಿ: ಶಿವರಾಮ ಕಾರಂತ ಬಿಡಿಎ ಜಾಗದಲ್ಲಿ ಮರಗಳ ಮೇಲೆ ಪ್ರಭಾವಿಗಳ ಕಣ್ಣು, ನೂರಾರು ಮರಗಳನ್ನು ಕ್ಷಣಾರ್ಧದಲ್ಲಿ ಕೊಚ್ಚಿಹಾಕಿದರು

ಮರಗಳ ಮಾರಣಹೋಮ‌ ಪ್ರಕರಣದಲ್ಲಿ ಇತ್ತೀಚೆಗೆ ಸಂಸದ ಪ್ರತಾಪ್ ಸಿಂಹ ತಮ್ಮ ವಿಕ್ರಂ ಸಿಂಹ ಅವರ ಹೆಸರು ಕೇಳಿಬಂದಿತ್ತು. ಮರಗಳ ಮಾರಣಹೋಮಕ್ಕೂ‌ ನನಗೂ ಯಾವುದೇ ಸಂಬಂಧವಿಲ್ಲ ಎಂದು ಬಳಿಕ ಅವರು ಸ್ಪಷ್ಟನೆ ನೀಡಿದ್ದರು. ನಾನು ಶುಂಠಿ ಬೆಳೆಯಲು ಜುಲೈ 24 ರಿಂದ ಆ ಭೂಮಿಯನ್ನು ಒಂದು ವರ್ಷಕ್ಕೆ ಅಗ್ರಿಮೆಂಟ್ ಮಾಡಿಕೊಂಡಿದ್ದೇನೆ. ಆದರೆ, ಮರಗಳನ್ನು ಕಡಿದಿರುವುದು ನನಗೆ ಗೊತ್ತಿಲ್ಲ ಎಂದು ಹೇಳಿದ್ದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ. 

Published On - 9:25 pm, Thu, 28 December 23

‘ಪುಷ್ಪ 2’ ಟ್ರೇಲರ್​ ಲಾಂಚ್​ನಲ್ಲಿ ಜನಸಾಗರ; ಅಲ್ಲು ಅರ್ಜುನ್ ಕ್ರೇಜ್ ನೋಡಿ
‘ಪುಷ್ಪ 2’ ಟ್ರೇಲರ್​ ಲಾಂಚ್​ನಲ್ಲಿ ಜನಸಾಗರ; ಅಲ್ಲು ಅರ್ಜುನ್ ಕ್ರೇಜ್ ನೋಡಿ
ಮದ್ವೆ ಮನೆಯಲ್ಲಿ ಕಳ್ಳರ ಕೈಚಳಕ: ಚಿನ್ನ, ಹಣ ದೋಚಿದ ಖದೀಮರು!
ಮದ್ವೆ ಮನೆಯಲ್ಲಿ ಕಳ್ಳರ ಕೈಚಳಕ: ಚಿನ್ನ, ಹಣ ದೋಚಿದ ಖದೀಮರು!
BBK 11: ಕಾಂಟ್ರವರ್ಸಿ ಮೂಲಕವೇ ವೈಲ್ಡ್ ಕಾರ್ಡ್​ ಸ್ಪರ್ಧಿ ಎಂಟ್ರಿ
BBK 11: ಕಾಂಟ್ರವರ್ಸಿ ಮೂಲಕವೇ ವೈಲ್ಡ್ ಕಾರ್ಡ್​ ಸ್ಪರ್ಧಿ ಎಂಟ್ರಿ
ಸ್ವಿಮ್ಮಿಂಗ್ ಫುಲ್​ನಲ್ಲಿ ದುರಂತ ಅಂತ್ಯಕಂಡ ಯುವತಿಯರ ಕೊನೆ ಕ್ಷಣದ ವಿಡಿಯೋ!
ಸ್ವಿಮ್ಮಿಂಗ್ ಫುಲ್​ನಲ್ಲಿ ದುರಂತ ಅಂತ್ಯಕಂಡ ಯುವತಿಯರ ಕೊನೆ ಕ್ಷಣದ ವಿಡಿಯೋ!
ಸ್ಕೂಟಿ​ ಡಿಕ್ಕಿಯೊಳಗೆ ಹಾವು ಪ್ರತ್ಯಕ್ಷ, ಬೆಚ್ಚಿಬಿದ್ದ ಚಾಲಕ, ಮುಂದೇನಾಯ್ತು
ಸ್ಕೂಟಿ​ ಡಿಕ್ಕಿಯೊಳಗೆ ಹಾವು ಪ್ರತ್ಯಕ್ಷ, ಬೆಚ್ಚಿಬಿದ್ದ ಚಾಲಕ, ಮುಂದೇನಾಯ್ತು
ಬಿಪಿಎಲ್ ಕಾರ್ಡ್ ರದ್ದು: ಸರ್ಕಾರ ನಡೆ ಸ್ವಾಗತಿಸಿದ ಬಿಜೆಪಿ ಎಂಪಿ ರಾಘವೇಂದ್ರ
ಬಿಪಿಎಲ್ ಕಾರ್ಡ್ ರದ್ದು: ಸರ್ಕಾರ ನಡೆ ಸ್ವಾಗತಿಸಿದ ಬಿಜೆಪಿ ಎಂಪಿ ರಾಘವೇಂದ್ರ
ಬಾಲನಟ ರೋಹಿತ್​ಗೆ ಅಪಘಾತ ಆಗಿದ್ದು ಹೇಗೆ? ಈಗ ಆರೋಗ್ಯ ಹೇಗಿದೆ?
ಬಾಲನಟ ರೋಹಿತ್​ಗೆ ಅಪಘಾತ ಆಗಿದ್ದು ಹೇಗೆ? ಈಗ ಆರೋಗ್ಯ ಹೇಗಿದೆ?
PDO ಪರೀಕ್ಷೆಯಲ್ಲೂ ಎಡವಟ್ಟು, ಅರ್ಧಂಬರ್ಧ ಪ್ರಶ್ನೆ ಪತ್ರಿಕೆ ಕಳುಹಿಸಿದ KPSC
PDO ಪರೀಕ್ಷೆಯಲ್ಲೂ ಎಡವಟ್ಟು, ಅರ್ಧಂಬರ್ಧ ಪ್ರಶ್ನೆ ಪತ್ರಿಕೆ ಕಳುಹಿಸಿದ KPSC
ಎಸ್​ಎಸ್​ಎಲ್​ಸಿಯಲ್ಲಿ ಫೇಲ್ ಆಗಿದ್ದಕ್ಕೆ ವಿಗ್ರಹ ವಿರೂಪಗೊಳಿಸಿದ ಬಾಲಕ
ಎಸ್​ಎಸ್​ಎಲ್​ಸಿಯಲ್ಲಿ ಫೇಲ್ ಆಗಿದ್ದಕ್ಕೆ ವಿಗ್ರಹ ವಿರೂಪಗೊಳಿಸಿದ ಬಾಲಕ
ಪ್ರಧಾನಿ ಮೋದಿಯನ್ನು ಆತ್ಮೀಯತೆಯಿಂದ ಬರಮಾಡಿಕೊಂಡ ನೈಜೀರಿಯಾದ ಜನ
ಪ್ರಧಾನಿ ಮೋದಿಯನ್ನು ಆತ್ಮೀಯತೆಯಿಂದ ಬರಮಾಡಿಕೊಂಡ ನೈಜೀರಿಯಾದ ಜನ