AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಾಸನ: ಅಂಬೇಡ್ಕರ್ ವಸತಿ ಶಾಲೆ ಮಕ್ಕಳ‌ ನರಕಯಾತನೆ, ದನದ ಶೆಡ್‌ನಂತಿರುವ ಕಟ್ಟದಲ್ಲಿ 172 ಮಕ್ಕಳು, 5 ವರ್ಷಗಳಿಂದ ಇದೇ ಸ್ಥಿತಿ!

ಹಾಸನದ ಶಾಂತಿಗ್ರಾಮದಲ್ಲಿರುವ ಡಾ. ಬಿ.ಆರ್. ಅಂಬೇಡ್ಕರ್ ವಸತಿ ಶಾಲೆಯ 172 ಮಕ್ಕಳು ಐದು ವರ್ಷಗಳಿಂದ ದನದ ಶೆಡ್‌ನಂತಿರುವ ಕಟ್ಟಡದಲ್ಲಿ ವಾಸಿಸುತ್ತಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಮಕ್ಕಳಿಗೆ ಶೌಚಾಲಯಗಳ ಕೊರತೆ ಸಹ ಇದ್ದು, ಸಂಕಷ್ಟದ ಸ್ಥಿತಿ ಇದೆ ಎಂಬ ಆರೋಪವಿದ್ದು, ಮೂಲಸೌಕರ್ಯಗಳ ಕೊರತೆಯಿಂದ ಮಕ್ಕಳ ಸ್ಥಿತಿ ಕುರಿತು ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಹಾಸನ: ಅಂಬೇಡ್ಕರ್ ವಸತಿ ಶಾಲೆ ಮಕ್ಕಳ‌ ನರಕಯಾತನೆ, ದನದ ಶೆಡ್‌ನಂತಿರುವ ಕಟ್ಟದಲ್ಲಿ 172 ಮಕ್ಕಳು, 5 ವರ್ಷಗಳಿಂದ ಇದೇ ಸ್ಥಿತಿ!
ದನದ ಶೆಡ್‌ನಂತಿರುವ ಕಟ್ಟಡದಲ್ಲಿ ಇರುವ ಮಕ್ಕಳುImage Credit source: tv9
ಮಂಜುನಾಥ ಕೆಬಿ
| Edited By: |

Updated on: Sep 05, 2026 | 11:42 AM

Share

ಮುಖ್ಯಾಂಶಗಳು

  • ಐದು ವರ್ಷಗಳಿಂದ ಶೆಡ್‌ನಲ್ಲೇ ಮಕ್ಕಳ ವಾಸ
  • 172 ಮಕ್ಕಳಿಗೆ ಮೂಲಸೌಕರ್ಯಗಳ ತೀವ್ರ ಕೊರತೆ
  • ಕೂಡಲೇ ಸ್ಥಳಾಂತರಿಸುವಂತೆ ಸಾರ್ವಜನಿಕರ ಆಗ್ರಹ

ಹಾಸನ, ಸೆಪ್ಟೆಂಬರ್ 5: ಹಾಸನ ಜಿಲ್ಲೆಯ ಶಾಂತಿಗ್ರಾಮದಲ್ಲಿರುವ ಸಮಾಜ ಕಲ್ಯಾಣ ಇಲಾಖೆ ವ್ಯಾಪ್ತಿಯ ಡಾ. ಬಿ.ಆರ್. ಅಂಬೇಡ್ಕರ್ ವಸತಿ ಶಾಲೆಯ 172 ಮಕ್ಕಳು ಕಳೆದ ಐದು ವರ್ಷಗಳಿಂದ ದನದ ಶೆಡ್‌ನಂತಿರುವ ಕಟ್ಟಡದಲ್ಲಿ ವಾಸಿಸುತ್ತಿರುವ ಆರೋಪ ಕೇಳಿಬಂದಿದೆ. ಆರರಿಂದ 10ನೇ ತರಗತಿವರೆಗೆ ವ್ಯಾಸಂಗ ಮಾಡುತ್ತಿರುವ ಮಕ್ಕಳ ಪೈಕಿ 92 ಬಾಲಕರು ಹಾಗೂ 80 ಬಾಲಕಿಯರಿದ್ದಾರೆ. ಒಂದೇ ಸ್ಥಳದಲ್ಲಿ ಊಟ, ನಿದ್ರೆ ಹಾಗೂ ಪಾಠ ಕೇಳುವ ಪರಿಸ್ಥಿತಿ ಇದ್ದು, ಕೆಲ ವಿದ್ಯಾರ್ಥಿಗಳು ನೆಲದ ಮೇಲೆಯೇ ಕುಳಿತು ಪಾಠ ಕೇಳಬೇಕಾಗಿದೆ.

92 ಬಾಲಕರಿಗೆ ಕೇವಲ ಐದು ಶೌಚಾಲಯ

92 ಬಾಲಕರಿಗೆ ಕೇವಲ ಐದು ಶೌಚಾಲಯಗಳಿದ್ದು, ಬಾಲಕಿಯರಿಗೂ ಅಗತ್ಯ ಮೂಲಸೌಕರ್ಯಗಳ ಕೊರತೆ ಇದೆ. ಗಾಳಿ ಮತ್ತು ಬೆಳಕಿನ ಕೊರತೆಯಿರುವ ಕಟ್ಟಡದಲ್ಲೇ ಮಕ್ಕಳು ವಾಸಿಸುತ್ತಿದ್ದಾರೆ ಎನ್ನಲಾಗಿದೆ. ಮಕ್ಕಳ ವಾಸ್ತವ್ಯಕ್ಕಾಗಿ ತಿಂಗಳಿಗೆ 1.08 ಲಕ್ಷ ರೂ. ಬಾಡಿಗೆ ಪಾವತಿಸಲಾಗುತ್ತಿದೆ ಎಂದು ತಿಳಿದುಬಂದಿದೆ. ಹೊಸ ಕಟ್ಟಡ ನಿರ್ಮಾಣವಾಗುತ್ತಿದ್ದು, ಪರ್ಯಾಯ ಜಾಗ ಸಿಗದ ಹಿನ್ನೆಲೆಯಲ್ಲಿ ಈ ವ್ಯವಸ್ಥೆ ಮುಂದುವರಿದಿದೆ ಎಂದು ಶಾಲೆಯ ಪ್ರಾಂಶುಪಾಲರು ಹಾಗೂ ಸಿಬ್ಬಂದಿ ತಿಳಿಸಿದ್ದಾರೆ.

ಸಾರ್ವಜನಿಕರ ಆಕ್ರೋಶ

ಮಕ್ಕಳಿಗೆ ಅಗತ್ಯ ಸೌಲಭ್ಯ ಕಲ್ಪಿಸದೆ ಇಂತಹ ಪರಿಸ್ಥಿತಿಯಲ್ಲಿ ವಾಸ್ತವ್ಯಕ್ಕೆ ಅವಕಾಶ ನೀಡಿರುವುದಕ್ಕೆ ಸಮಾಜ ಕಲ್ಯಾಣ ಇಲಾಖೆ ವಿರುದ್ಧ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕೂಡಲೇ ಮಕ್ಕಳನ್ನು ಸುರಕ್ಷಿತ ಹಾಗೂ ಸೂಕ್ತ ಸೌಲಭ್ಯವಿರುವ ಸ್ಥಳಕ್ಕೆ ಸ್ಥಳಾಂತರಿಸುವಂತೆ ಒತ್ತಾಯಿಸಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
‘ಟಾಕ್ಸಿಕ್’ ಸಿನಿಮಾಗಾಗಿ ಯಶ್ ವರ್ಕೌಟ್ ಎಷ್ಟು ಕಠಿಣವಾಗಿತ್ತು ನೋಡಿ
‘ಟಾಕ್ಸಿಕ್’ ಸಿನಿಮಾಗಾಗಿ ಯಶ್ ವರ್ಕೌಟ್ ಎಷ್ಟು ಕಠಿಣವಾಗಿತ್ತು ನೋಡಿ
ಕೃಷ್ಣ ಜನ್ಮಾಷ್ಟಮಿ 2026: ಉಡುಪಿ ಶ್ರೀಕೃಷ್ಣ ಮಠದಲ್ಲಿ ಅರ್ಘ್ಯ ಪ್ರದಾನ
ಕೃಷ್ಣ ಜನ್ಮಾಷ್ಟಮಿ 2026: ಉಡುಪಿ ಶ್ರೀಕೃಷ್ಣ ಮಠದಲ್ಲಿ ಅರ್ಘ್ಯ ಪ್ರದಾನ
ಬೆಂಗಳೂರು: ಅಕ್ರಮವಾಗಿ ಸಾಗಿಸುತ್ತಿದ್ದ ಭಾರಿ ಪ್ರಮಾಣದ ಸ್ಫೋಟಕ ಜಪ್ತಿ
ಬೆಂಗಳೂರು: ಅಕ್ರಮವಾಗಿ ಸಾಗಿಸುತ್ತಿದ್ದ ಭಾರಿ ಪ್ರಮಾಣದ ಸ್ಫೋಟಕ ಜಪ್ತಿ
ಇಂದು ಈ ರಾಶಿಯವರಿಗಿದೆ ಐದು ಗ್ರಹಗಳ ಶುಭಫಲ!
ಇಂದು ಈ ರಾಶಿಯವರಿಗಿದೆ ಐದು ಗ್ರಹಗಳ ಶುಭಫಲ!
ಕಣ್ಣೀರಿಡುತ್ತಾ ಕೆಎಸ್‌ಆರ್‌ಟಿಸಿ ಬಸ್​​ಗೆ ಮುತ್ತನ್ನಿಟ್ಟ ಕೇರಳದ ಚಾಲಕ
ಕಣ್ಣೀರಿಡುತ್ತಾ ಕೆಎಸ್‌ಆರ್‌ಟಿಸಿ ಬಸ್​​ಗೆ ಮುತ್ತನ್ನಿಟ್ಟ ಕೇರಳದ ಚಾಲಕ
ಹಿಮವದ್ ಗೋಪಾಲಸ್ವಾಮಿ ಬೆಟ್ಟಕ್ಕೆ ದಕ್ಷಿಣದ ಗೋವರ್ಧನಗಿರಿ ಎಂದು ಕರೆಯುವುದೇಕೆ
ಹಿಮವದ್ ಗೋಪಾಲಸ್ವಾಮಿ ಬೆಟ್ಟಕ್ಕೆ ದಕ್ಷಿಣದ ಗೋವರ್ಧನಗಿರಿ ಎಂದು ಕರೆಯುವುದೇಕೆ
ಟಿವಿ9 ಇಂಪ್ಯಾಕ್ಟ್: 8 ವರ್ಷದಿಂದ ಆಗದ ಕೆಲಸ ಕೇವಲ ಹತ್ತು ದಿನದಲ್ಲೇ ಆಯ್ತು!
ಟಿವಿ9 ಇಂಪ್ಯಾಕ್ಟ್: 8 ವರ್ಷದಿಂದ ಆಗದ ಕೆಲಸ ಕೇವಲ ಹತ್ತು ದಿನದಲ್ಲೇ ಆಯ್ತು!
ಬಿಗ್ ಬಾಸ್ ಸ್ಪರ್ಧಿಗಳ ವಿಡಿಯೋ ಹಂಚಿಕೊಂಡ ಕಲರ್ಸ್ ಕನ್ನಡ; ಯಾರು ಗೊತ್ತಾಯ್ತಾ
ಬಿಗ್ ಬಾಸ್ ಸ್ಪರ್ಧಿಗಳ ವಿಡಿಯೋ ಹಂಚಿಕೊಂಡ ಕಲರ್ಸ್ ಕನ್ನಡ; ಯಾರು ಗೊತ್ತಾಯ್ತಾ
ದೆಹಲಿಯಲ್ಲಿ ಧಾರಾಕಾರ ಮಳೆ; ರಸ್ತೆಯಲ್ಲಿ ನಿಂತ ನೀರಿನಲ್ಲಿ ಈಜಾಡಿದ ಮಕ್ಕಳು
ದೆಹಲಿಯಲ್ಲಿ ಧಾರಾಕಾರ ಮಳೆ; ರಸ್ತೆಯಲ್ಲಿ ನಿಂತ ನೀರಿನಲ್ಲಿ ಈಜಾಡಿದ ಮಕ್ಕಳು
ವಿಚ್ಛೇದನದ ಬಗ್ಗೆ ಕೇಳಿದ್ದಕ್ಕೆ ದುನಿಯಾ ವಿಜಯ್ ನೀಡಿದ ಪ್ರತಿಕ್ರಿಯೆ ಏನು?
ವಿಚ್ಛೇದನದ ಬಗ್ಗೆ ಕೇಳಿದ್ದಕ್ಕೆ ದುನಿಯಾ ವಿಜಯ್ ನೀಡಿದ ಪ್ರತಿಕ್ರಿಯೆ ಏನು?