ಹಾಸನ: ಕಾಡಾನೆ ದಾಳಿಗೆ ಮತ್ತೊಂದು ಬಲಿ, ಸಂತೆಗೆ ಹೋಗಿ ಬರುತ್ತಿದ್ದ ವೃದ್ಧನ ಕೊಂದ ಒಂಟಿಸಲಗ

ಕಾಡಾನೆ ಹಾಗೂ ಮಾನವನ ಸಂಘರ್ಷಕ್ಕೆ ಕೊನೆಯೇ ಇಲ್ಲದಂತಾಗಿದೆ. ಪಡೆ ಕಟ್ಟಿಕೊಂಡು ಊರಿಗೆ ಲಗ್ಗೆ ಇಡುತ್ತಿರುವ ಗಜಪಡೆಗಳು ಜನರನ್ನು ಕೊಂದು ಘೀಳಿಡುತ್ತಿವೆ. ಹಾಸನ ಜಿಲ್ಲೆಯಲ್ಲಿ ಕಾಡಾನೆ ದಾಳಿಗೆ ಮತ್ತೊಂದು ಬಲಿಯಾಗಿದ್ದು, ಜಿಲ್ಲೆಯ ಜನರು ಬೆಚ್ಚಿಬಿದ್ದಿದ್ದಾರೆ. ಸಂತೆಗೆ ಹೋಗಿ ಬರುತ್ತಿದ್ದ ವೃದ್ಧರೊಬ್ಬರನ್ನು ಒಂಟಿಸಲಗ ಕೊಂದು ಕೆಡವಿದೆ.

ಹಾಸನ: ಕಾಡಾನೆ ದಾಳಿಗೆ ಮತ್ತೊಂದು ಬಲಿ, ಸಂತೆಗೆ ಹೋಗಿ ಬರುತ್ತಿದ್ದ ವೃದ್ಧನ ಕೊಂದ ಒಂಟಿಸಲಗ
ಪುಟ್ಟಯ್ಯ
Follow us
ಮಂಜುನಾಥ ಕೆಬಿ
| Updated By: Ganapathi Sharma

Updated on: Jan 23, 2025 | 7:29 AM

ಹಾಸನ, ಜನವರಿ 23: ಎದೆ ಬಡಿದುಕೊಂಡು ಗೋಳಾಟ, ಪತಿಯ ಶವದೆದರು ಪತ್ನಿಯ ಆಕ್ರಂದನ, ಅಪ್ಪನ ಸ್ಥಿತಿ ನೋಡಿ ಮಗ ಬಿಕ್ಕಿ ಬಿಕ್ಕಿ ಅಳುತ್ತಿದ್ದಾನೆ, ಯಾರೇ ಸಮಾಧಾನ ಮಾಡಿದರೂ ಕಣ್ಣೀರು ನಿಲ್ಲುತ್ತಿಲ್ಲ. ಇಂಥ ಮನಕಲಕುವ ಸನ್ನಿವೇಶ ಕಂಡುಬಂದಿದ್ದು ಹಾಸನ ಜಿಲ್ಲೆ ಆಲೂರು ತಾಲೂಕಿನ ಅಡಿಬೈಲು ಗ್ರಾಮದಲ್ಲಿ. ಇದಕ್ಕೆ ಕಾರಣ ಕಾಡಾನೆ ದಾಳಿ.

ಪುಟ್ಟಯ್ಯ (75) ಎಂಬವರು ಕೂಲಿ ಕೆಲಸ ಮುಗಿಸಿಕೊಂಡು ಪಕ್ಕದ ಮಗ್ಗೆ ಗ್ರಾಮದಲ್ಲಿ ಸಂತೆಗೆ ಹೋಗಿದ್ದರು. ದಿನಸಿ ಮತ್ತು ಚಿಕನ್ ಖರೀದಿ ಮಾಡಿಕೊಂಡು ಮನೆಗೆ ವಾಪಸ್ ಆಗುತ್ತಿದ್ದರು. ಕಾಫಿತೋಟದಲ್ಲಿ ನಡೆದುಕೊಂಡು ಬರುತ್ತಿದ್ದಾಗ ಒಂಟಿಸಲಗ ವೃದ್ಧ ಪುಟ್ಟಯ್ಯ ಮೇಲೆ ದಾಳಿ ಮಾಡಿ ಕೊಂದು ಹಾಕಿದೆ. ರಾತ್ರಿಯಾದರೂ ಪುಟ್ಟಣಯ್ಯ ಮನೆಗೆ ಬರಲಿಲ್ಲ ಎಂದು ಮನೆಯವರು ಹುಡುಕಾಡಿದ್ದಾರೆ. ಬಳಿಕ ಕಾಫಿ ತೋಟದಲ್ಲಿ ಶವ ಪತ್ತೆಯಾಗಿದ್ದು ಮನೆಯವರು, ಸಂಬಂಧಿಕರ ಆಕ್ರಂದನ ಮುಗಿಲು ಮುಟ್ಟಿತ್ತು.

ಆಲೂರು, ಸಕಲೇಶಪುರ ಭಾಗದಲ್ಲಿ ಹೆಚ್ಚಿದ ಕಾಡಾನೆ ಕಾಟ

ಹಾಸನ ಜಿಲ್ಲೆಯ ಆಲೂರು, ಸಕಲೇಶಪುರ ಹಾಗೂ ಬೇಲೂರು ಭಾಗದಲ್ಲಿ ಕಾಡಾನೆಗಳ ಕಾಟ ವಿಪರೀತವಾಗಿದೆ. ಈಗ ಎಲ್ಲೆಡೆ ಕಾಫಿ ಕಟಾವು ನಡೆಯುತ್ತಿದ್ದು ಕಾರ್ಮಿಕರು ಕೆಲಸಕ್ಕೆ ಬರಲು ಭಯಪಡುವ ವಾತಾವರಣ ನಿರ್ಮಾಣವಾಗಿದೆ. ಇಟಿಎಫ್, ಆರ್​​​ಆರ್​​ಟಿ ತಂಡಗಳಿದ್ದರೂ ಕೂಡ ಕಾಡಾನೆಗಳ ದಾಳಿ ತಡೆಯಲು ಆಗುತ್ತಿಲ್ಲ.

ಹಾಸನ ಜಿಲ್ಲೆಯಲ್ಲಿ ಕಾಡಾನೆ ದಾಳಿಗೆ 79 ಸಾವು

ಹಾಸನ ಜಿಲ್ಲೆಯಲ್ಲಿ ಈವರೆಗೆ ಕಾಡಾನೆ ದಾಳಿಗೆ 79 ಜನರು ಬಲಿಯಾಗಿದ್ದಾರೆ. ಅಹಾರ ಅರಸಿ ಬಂದ ವೇಳೆ ನಾನಾ ಕಾರಣಗಳಿಂದಾಗಿ 50 ಕ್ಕೂ ಹೆಚ್ಚಿನ ಸಂಖ್ಯೆಯಲ್ಲಿ ಕಾಡಾನೆಗಳೂ ಮೃತಪಟ್ಟಿವೆ. ಎರಡು ದಶಕಗಳಿಂದ ಜನರನ್ನು ಬೆಂಬಿಡದೆ ಕಾಡುತ್ತಿರುವ ಸಮಸ್ಯೆಗೆ ಸರ್ಕಾರ ಪರಿಹಾರ ಹುಡುಕಿಲ್ಲ ಎಂಬ ಆರೋಪ ಕೇಳಿಬಂದಿದೆ.

ಸರ್ಕಾರದ ವಿರುದ್ಧ ಶಾಸಕ ಸಿಮೆಂಟ್ ಮಂಜು ಆಕ್ರೋಶ

ಮೃತರ ಮನೆಗೆ ಬೇಟಿ ನೀಡಿದ ಸ್ಥಳೀಯ ಶಾಸಕ ಸಿಮೆಂಟ್ ಮಂಜು, ಸರ್ಕಾರ ಸಮಸ್ಯೆಯನ್ನು ಗಂಭಿರವಾಗಿ ಪರಿಗಣಿಸಿಲ್ಲ. ಪ್ರತಿಬಾರಿ ಕೂಡ ಅದಿವೇಶನ ನಡೆದಾಗ ನಮ್ಮ ಭಾಗದ ಸಮಸ್ಯೆ ಹೇಳಿದರೂ ಕೂಡ ಪರಿಹಾರ ಕ್ರಮ ಕೈಗೊಂಡಿಲ್ಲ. ನಮ್ಮ ಜನರು ನಿತ್ಯ ಭಯದಲ್ಲಿ ಜೀವನ ನಡೆಸುತ್ತಿದ್ದು ತುರ್ತಾಗಿ ಸಮಸ್ಯೆಗೆ ಶಾಶ್ವತ ಪರಿಹಾರ ಹುಡುಕಲು ಮುಂದಾಗಿ ಎಂದು ಆಗ್ರಹಿಸಿದ್ದಾರೆ.

ಪರಿಹಾರ ಚೆಕ್ ವಿತರಣೆ ಮಾಡಲು ಅಧಿಕಾರಿಗಳು ಹಿಂದೇಟು ಹಾಕುತ್ತಿರುವ ಬಗ್ಗೆಯೂ ಶಾಸಕರು ಅಸಮಧಾನ ವ್ಯಕ್ತಪಡಿಸಿದರು. ಸ್ಥಳಕ್ಕೆ ಬಂದು ನೊಂದ ಕುಟುಂಬಕ್ಕೆ ಸಾಂತ್ವನ ಹೇಳಿದ ಸಂಸದ ಶ್ರೇಯಸ್ ಪಟೇಲ್, ಈ ಭಾಗದಲ್ಲಿ ಹಲವು ವರ್ಷಗಳಿಂದ ಕಾಡಾನೆಗಳ ಹಾವಳಿ ಇದೆ. ಸಮಸ್ಯೆ ಪರಿಹಾರ ಸಂಬಂಧ ಕೇಂದ್ರ ಸರ್ಕಾರದ ಮಟ್ಟದಲ್ಲಿ ಕೂಡ ಮನವಿ ಮಾಡುವುದಾಗಿ ತಿಳಿಸಿದ್ದಾರೆ.

ಇದನ್ನೂ ಓದಿ: ಮಾನವ-ಪ್ರಾಣಿ ಸಂಘರ್ಷ: ಹಾಸನದಲ್ಲಿ 80 ಜನ ಸಾವು, 100ಕ್ಕೂ ಅಧಿಕ ಕಾಡಾನೆಗಳು ಮೃತ

ಬಳಿಕ ಶಾಸಕ ಸಿಮೆಂಟ್ ಮಂಜು ಹಾಗು ಸಂಸದ ಶ್ರೇಯಸ್ ಪಟೇಲ್ ಮೃತ ಪುಟ್ಟಯ್ಯ ಕುಟುಂಬಕ್ಕೆ ಪರಿಹಾರವಾಗಿ ಸರ್ಕಾರ ನೀಡುವ 15 ಲಕ್ಷ ಮೊತ್ತದ ಚೆಕ್ ವಿತರಣೆ ಮಾಡಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ರವಿ ಮಕರ ರಾಶಿಯಲ್ಲಿ, ಚಂದ್ರ ತುಲಾ ರಾಶಿಯಲ್ಲಿ ಸಂಚಾರ: ದಿನ ಭವಿಷ್ಯ ಇಲ್ಲಿದೆ
ರವಿ ಮಕರ ರಾಶಿಯಲ್ಲಿ, ಚಂದ್ರ ತುಲಾ ರಾಶಿಯಲ್ಲಿ ಸಂಚಾರ: ದಿನ ಭವಿಷ್ಯ ಇಲ್ಲಿದೆ
ಒಂದೇ ಓವರ್​ನಲ್ಲಿ 22 ರನ್ ಚಚ್ಚಿದ ಸಂಜು; ವಿಡಿಯೋ
ಒಂದೇ ಓವರ್​ನಲ್ಲಿ 22 ರನ್ ಚಚ್ಚಿದ ಸಂಜು; ವಿಡಿಯೋ
ಅತಿ ಎತ್ತರದ ಮಾನವ ಪಿರಮಿಡ್ ನಿರ್ಮಿಸಿ ಭಾರತೀಯ ಸೇನೆಯಿಂದ ವಿಶ್ವ ದಾಖಲೆ
ಅತಿ ಎತ್ತರದ ಮಾನವ ಪಿರಮಿಡ್ ನಿರ್ಮಿಸಿ ಭಾರತೀಯ ಸೇನೆಯಿಂದ ವಿಶ್ವ ದಾಖಲೆ
ಯಾರು ಬಿಗ್ ಬಾಸ್ ಗೆಲ್ತಾರೆ ಅಂತ ನಾನು ಹೇಳಲ್ಲ: ಪ್ರಥಮ್ ಖಡಕ್ ಮಾತು
ಯಾರು ಬಿಗ್ ಬಾಸ್ ಗೆಲ್ತಾರೆ ಅಂತ ನಾನು ಹೇಳಲ್ಲ: ಪ್ರಥಮ್ ಖಡಕ್ ಮಾತು
ನಿಯೋಗ ಹೊತ್ತು ತಂದಿದ್ದ ಕಬ್ಬನ್ನು ಕಚೇರಿಯಲ್ಲೇ ಮುರಿದು ತಿಂದ ಸಿದ್ದರಾಮಯ್ಯ
ನಿಯೋಗ ಹೊತ್ತು ತಂದಿದ್ದ ಕಬ್ಬನ್ನು ಕಚೇರಿಯಲ್ಲೇ ಮುರಿದು ತಿಂದ ಸಿದ್ದರಾಮಯ್ಯ
ಕೆಡಿಪಿ ಸಭೆಗಳನ್ನು ಹಗುರವಾಗಿ ಪರಿಗಣಿಸುವ ಪ್ರವೃತ್ತಿ ನಿಲ್ಲಬೇಕು
ಕೆಡಿಪಿ ಸಭೆಗಳನ್ನು ಹಗುರವಾಗಿ ಪರಿಗಣಿಸುವ ಪ್ರವೃತ್ತಿ ನಿಲ್ಲಬೇಕು
ಸುದೀಪ್ ಬಿಗ್​ಬಾಸ್ ಬಿಡಲು ಅಸಲಿ ಕಾರಣ ಬಿಚ್ಚಿಟ್ಟ ಪ್ರಥಮ್
ಸುದೀಪ್ ಬಿಗ್​ಬಾಸ್ ಬಿಡಲು ಅಸಲಿ ಕಾರಣ ಬಿಚ್ಚಿಟ್ಟ ಪ್ರಥಮ್
ಬೆಂಗಳೂರಿನ ಈ ಮಾರ್ಗದಲ್ಲಿ ಫುಲ್ ಟ್ರಾಫಿಕ್ ಜಾಮ್..!
ಬೆಂಗಳೂರಿನ ಈ ಮಾರ್ಗದಲ್ಲಿ ಫುಲ್ ಟ್ರಾಫಿಕ್ ಜಾಮ್..!
ಮಂತ್ರಾಲಯ ಸಂಸ್ಕೃತ ಶಾಲೆ ವಿದ್ಯಾರ್ಥಿಗಳು ಸಾವು: ಅಪಘಾತಕ್ಕೆ ಕಾರಣವೇನು?
ಮಂತ್ರಾಲಯ ಸಂಸ್ಕೃತ ಶಾಲೆ ವಿದ್ಯಾರ್ಥಿಗಳು ಸಾವು: ಅಪಘಾತಕ್ಕೆ ಕಾರಣವೇನು?
ಒಬ್ಬನಿಗೆ ಮದುವೆಯಾಗಿ ಕೇವಲ 4 ತಿಂಗಳಾಗಿತ್ತು, ಮತ್ತೊಬ್ಬನ ಪತ್ನಿ ಗರ್ಭಿಣಿ!
ಒಬ್ಬನಿಗೆ ಮದುವೆಯಾಗಿ ಕೇವಲ 4 ತಿಂಗಳಾಗಿತ್ತು, ಮತ್ತೊಬ್ಬನ ಪತ್ನಿ ಗರ್ಭಿಣಿ!