AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Hassan News: ಐಷಾರಾಮಿ ಜೀವನಕ್ಕಾಗಿ ಮಹಿಳೆಯರ ಸರ ಕದಿಯುತ್ತಿದ್ದ ಕಳ್ಳ ಅಂದರ್; 7 ಮಾಂಗಲ್ಯ ಸರ ವಶಕ್ಕೆ

ಐಷಾರಾಮಿ ಜೀವನಕ್ಕಾಗಿ ಮಹಿಳೆಯರ ಸರ ಕದಿಯುತ್ತಿದ್ದ ಖತರ್ನಾಕ್​ ಸರಗಳ್ಳನನ್ನ ಇದೀಗ ಹಿರಿಸಾವೆ ವೃತ್ತದ ಪೊಲೀಸರು ಕಾರ್ಯಾಚರಣೆ ನಡೆಸಿ ಬಂಧಿಸಿದ್ದಾರೆ. ಬಂಧಿತನಿಂದ 12 ಲಕ್ಷಕ್ಕೂ ಅಧಿಕ ಬೆಲೆ ಬಾಳುವ ಸರವನ್ನ ವಶಕ್ಕೆ ಪಡೆದಿದ್ದಾರೆ.

Hassan News: ಐಷಾರಾಮಿ ಜೀವನಕ್ಕಾಗಿ ಮಹಿಳೆಯರ ಸರ ಕದಿಯುತ್ತಿದ್ದ ಕಳ್ಳ ಅಂದರ್; 7 ಮಾಂಗಲ್ಯ ಸರ ವಶಕ್ಕೆ
ಹಾಸನ
ಕಿರಣ್ ಹನುಮಂತ್​ ಮಾದಾರ್
ಕಿರಣ್ ಹನುಮಂತ್​ ಮಾದಾರ್|

Updated on: Jun 01, 2023 | 2:40 PM

Share

ಹಾಸನ: ಐಷಾರಾಮಿ ಜೀವನಕ್ಕಾಗಿ ಮಹಿಳೆಯರ ಸರ ಕದಿಯುತ್ತಿದ್ದ ಖತರ್ನಾಕ್​ ಸರಗಳ್ಳನನ್ನ ಇದೀಗ ಹಿರಿಸಾವೆ ವೃತ್ತದ ಪೊಲೀಸರು ಕಾರ್ಯಾಚರಣೆ ನಡೆಸಿ ಬಂಧಿಸಿದ್ದಾರೆ. ಹಾಸನ(Hassan) ಜಿಲ್ಲೆಯ, ವಿವಿಧ ಪೊಲೀಸ್ ಠಾಣಾ ವ್ಯಾಪ್ತಿಯ ಹಾಗೂ ಮಂಡ್ಯ ಜಿಲ್ಲೆಯ ಕಿಕ್ಕೇರಿ ಪೊಲೀಸ್ ವ್ಯಾಪ್ತಿಯಲ್ಲಿ ಮಹಿಳೆಯರ ಮಾಂಗಲ್ಯ ಸರಗಳ್ಳತನ ಮಾಡಿದ್ದ ಆರೋಪಿ ಚನ್ನರಾಯಪಟ್ಟಣ ತಾಲ್ಲೂಕಿನ, ಮಾಳೇನಹಳ್ಳಿ ಗ್ರಾಮದ ಸುಧಾಕರ್ (23)ನನ್ನ ಬಂಧಿಸಲಾಗಿದೆ. ಹೌದು ಆತನಿಂದ ಬರೊಬ್ಬರಿ 12,23,000ಲಕ್ಷ ರೂ ಬೆಲೆಯ 211 ಗ್ರಾಂ ತೂಕದ 7 ಚಿನ್ನದ ಮಾಂಗಲ್ಯ ಸರಗಳು ಹಾಗೂ ಕೃತ್ಯಕ್ಕೆ ಬಳಸುತ್ತಿದ್ದ ಪಲ್ಸರ್ ಬೈಕ್​ನ್ನು ವಶಕ್ಕೆ ಪಡೆಯಲಾಗಿದೆ.

ಸರಗಳ್ಳನ ಚಪ್ಪಲಿ ಗುರುತು ಆದರಿಸಿ ಆರೋಪಿ ಸೆರೆ ಹಿಡಿದ ಪೊಲೀಸರು

ಹೌದು ಈ ಕುಖ್ಯಾತ ಸರಗಳ್ಳ ಸುಧಾಕರ್​ ಎರಡು ತಿಂಗಳಲ್ಲಿ ಬರೊಬ್ಬರಿ ಒಂಭತ್ತು ಕಡೆ ಸರಗಳ್ಳತನ ಮಾಡಿದ್ದನು. ಎಂಟು ಕಡೆ ಕಳ್ಳತನ ಮಾಡಿದ್ರು, ಯಾರ ಕೈಗೂ ಸಿಗದೆ ತಲೆ ಮರೆಸಿಕೊಂಡಿದ್ದ. ಇತನ ಹಿಂದೆ ಬಿದ್ದ ಪೊಲೀಸರು. ಆರೋಪಿ ಸುಧಾಕರ್​ನ ಚಪ್ಪಲಿ ಗುರುತು ಆಧರಿಸಿ ಆರೋಪಿಯನ್ನ ಪೊಲೀಸರು ಸೆರೆ ಹಿಡಿದಿದ್ದಾರೆ.

ಇದನ್ನೂ ಓದಿ:ರಾಮನಗರ: ಅಂತರ್ ಜಿಲ್ಲಾ ಮನೆ, ಸರಗಳ್ಳರ ಬಂಧನ; 20 ಲಕ್ಷ ರೂ ಮೌಲ್ಯದ ಚಿನ್ನಾಭರಣ ವಶ

ಬೆಂಗಳೂರಿನಲ್ಲಿ ಪೊಲೀಸರ ಕಾರ್ಯಾಚರಣೆ; ಮಾದಕ ವಸ್ತು ಸೇವಿಸುತ್ತಿದ್ದ 18 ಜನ ಸೇರಿ 3 ಡ್ರಗ್ ಪೆಡ್ಲರ್​ಗಳ ಬಂಧನ

ಬೆಂಗಳೂರು: ರಾಜ್ಯ ಇತ್ತೀಚೆಗೆ ಡ್ರಗ್ಸ್​ , ಗಾಂಜಾ ಜಾಲಗಳು ಪತ್ತೆಯಾಗುತ್ತಿದ್ದು, ಈ ಹಿನ್ನಲೆ ಕಟ್ಟುನಿಟ್ಟಿನ ಕ್ರಮವಹಿಸಿದ್ದ ಬೆಂಗಳೂರು ಕೇಂದ್ರ ವಿಭಾಗದ ಪೊಲೀಸರು, ಡ್ರಗ್ಸ್ ದಂಧೆ ವಿರುದ್ಧ ವಿಶೇಷ ಕಾರ್ಯಾಚರಣೆ ಮಾಡಿದ್ದಾರೆ. ಹೌದು ಇಂದು(ಜೂ.1) ನಗರದ ವಿವಿಧೆಡೆ ದಾಳಿ ನಡೆಸಿದ್ದ ಪೊಲೀಸರು ಗಾಂಜಾ, ಇತರೆ ಮಾದಕ ವಸ್ತು ಸೇವಿಸುತ್ತಿದ್ದ 18 ಜನ ಸೇರಿ 3 ಡ್ರಗ್ ಪೆಡ್ಲರ್​ಗಳ ಬಂಧಿಸಿದ್ದಾರೆ. ಡ್ರಗ್​ ಪೆಡ್ಲರ್ ಗಳ ಬಳಿಯಿದ್ದ 2.5 ಕೆಜಿ ಗಾಂಜಾ, 11 ಗ್ರಾಂ ಎಂಡಿಎಂಎ, 7 ಗ್ರಾಂ ಹೈಡ್ರಾ ಮ್ಯಾಂಗೋ ವಶಕ್ಕೆ ಪಡೆದಿದ್ದಾರೆ.

ಇನ್ನಷ್ಟು ಅಪರಾಧ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಎಸ್ ಜಾನಕಿ ಅವರಿಗೆ ಗೌರವ ವಂದನೆ ಸಮರ್ಪಣೆ: ವಿಡಿಯೋ ನೋಡಿ
ಎಸ್ ಜಾನಕಿ ಅವರಿಗೆ ಗೌರವ ವಂದನೆ ಸಮರ್ಪಣೆ: ವಿಡಿಯೋ ನೋಡಿ
ಎಸ್ ಜಾನಕಿ ಅವರಿಗಿದ್ದ ನೋವೇನು? ಭಾರತಿ ವಿಷ್ಣುವರ್ಧನ್ ಮಾತು
ಎಸ್ ಜಾನಕಿ ಅವರಿಗಿದ್ದ ನೋವೇನು? ಭಾರತಿ ವಿಷ್ಣುವರ್ಧನ್ ಮಾತು
ಜಾನಕಮ್ಮ ಸ್ಮಾರಕಕ್ಕೆ ಬೇಡಿಕೆ: ಶೀಘ್ರದಲ್ಲೇ ತೀರ್ಮಾನ ಮಾಡ್ತೀವಿ ಎಂದ ಯತೀಂದ್
ಜಾನಕಮ್ಮ ಸ್ಮಾರಕಕ್ಕೆ ಬೇಡಿಕೆ: ಶೀಘ್ರದಲ್ಲೇ ತೀರ್ಮಾನ ಮಾಡ್ತೀವಿ ಎಂದ ಯತೀಂದ್
‘ಜಾನಕಿ ಹಾಡು ಕೇಳುತ್ತಲೇ ನಮ್ಮ ತಾಯಿ ಪ್ರಾಣ ಬಿಟ್ಟಿದ್ದರು’: ಸಾಧು ಕೋಕಿಲ
‘ಜಾನಕಿ ಹಾಡು ಕೇಳುತ್ತಲೇ ನಮ್ಮ ತಾಯಿ ಪ್ರಾಣ ಬಿಟ್ಟಿದ್ದರು’: ಸಾಧು ಕೋಕಿಲ
ಪ್ರವೀಣ್ ನೆಟ್ಟಾರು ಪ್ರಕರಣ: NIA ಬಲೆಗೆ ಬಿದ್ದ ಮೋಸ್ಟ್ ವಾಂಟೆಡ್ ಆರೋಪಿಗಳು
ಪ್ರವೀಣ್ ನೆಟ್ಟಾರು ಪ್ರಕರಣ: NIA ಬಲೆಗೆ ಬಿದ್ದ ಮೋಸ್ಟ್ ವಾಂಟೆಡ್ ಆರೋಪಿಗಳು
ಎಸ್. ಜಾನಕಿ ಪಾರ್ಥಿವ ಶರೀರ ನೋಡಿ ಬಿಕ್ಕಿ ಬಿಕ್ಕಿ ಅತ್ತ ವಾಣಿ ಹರಿಕೃಷ್ಣ
ಎಸ್. ಜಾನಕಿ ಪಾರ್ಥಿವ ಶರೀರ ನೋಡಿ ಬಿಕ್ಕಿ ಬಿಕ್ಕಿ ಅತ್ತ ವಾಣಿ ಹರಿಕೃಷ್ಣ
ಎಸ್.ಜಾನಕಿಯವರ ಅಂತಿಮ ದರ್ಶನ ಪಡೆದು ಭಾವುಕರಾದ ಗಾಯಕ ವಿಜಯ್ ಪ್ರಕಾಶ್
ಎಸ್.ಜಾನಕಿಯವರ ಅಂತಿಮ ದರ್ಶನ ಪಡೆದು ಭಾವುಕರಾದ ಗಾಯಕ ವಿಜಯ್ ಪ್ರಕಾಶ್
ಎಸ್​​. ಜಾನಕಿ ನಿಧನಕ್ಕೆ ಲಂಡನ್​​ನಿಂದಲೇ ಇಳಯರಾಜ್ ಸಂತಾಪ
ಎಸ್​​. ಜಾನಕಿ ನಿಧನಕ್ಕೆ ಲಂಡನ್​​ನಿಂದಲೇ ಇಳಯರಾಜ್ ಸಂತಾಪ
ಜಾನಕಮ್ಮಗೆ ಮೈಸೂರಿನ ನಂಟು ಹೇಗೆ? ನವೀನ್ ಕೇರ್​ಟೇಕರ್ ಆಗಿದ್ಯಾಕೆ?
ಜಾನಕಮ್ಮಗೆ ಮೈಸೂರಿನ ನಂಟು ಹೇಗೆ? ನವೀನ್ ಕೇರ್​ಟೇಕರ್ ಆಗಿದ್ಯಾಕೆ?
ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ ಯುವ ಕಾಂಗ್ರೆಸ್​​ನಿಂದ ಸೈಕಲ್ ಜಾಥಾ
ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ ಯುವ ಕಾಂಗ್ರೆಸ್​​ನಿಂದ ಸೈಕಲ್ ಜಾಥಾ