AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಎಫ್ಡಿ ಮೇಲೆ ಸಾಲ‌ ಕೊಡಿಸೋದಾಗಿ ಹೇಳಿ ವಂಚನೆ: ಕೋಟಿ ಕೋಟಿ ಹಣ ಸಂಗ್ರಹಿಸಿ ಬ್ಯಾಂಕ್​​ ಮ್ಯಾನೇಜರ್​​ ಎಸ್ಕೇಪ್​!

ಎಫ್‌ಡಿ ಮೇಲೆ ಸಾಲ ಕೊಡಿಸುವುದಾಗಿ ಆಮಿಷವೊಡ್ಡಿ 50ಕ್ಕೂ ಹೆಚ್ಚು ಗ್ರಾಹಕರಿಂದ 3 ಕೋಟಿಗೂ ಹೆಚ್ಚು ಹಣ ಸಂಗ್ರಹಿಸಿ ಹಾಸನದ ಸೂರ್ಯೋದಯ ಸ್ಮಾಲ್ ಫೈನಾನ್ಸ್ ಬ್ಯಾಂಕ್ ಮ್ಯಾನೇಜರ್ ವಂಚಿಸಿರುವ ಆರೋಪ ಕೇಳಿಬಂದಿದೆ. ಗ್ರಾಹಕರು ಎಫ್‌ಡಿ ಮಾಡಿದ್ದ ಹಣಕ್ಕೆ ದಾಖಲೆಯನ್ನೂ ನೀಡದೆ, ಹಣ ಪಡೆದು ಮ್ಯಾನೇಜರ್ ನಾಪತ್ತೆಯಾಗಿದ್ದಾರೆ. ಈ ಹಿನ್ನೆಲೆ ನ್ಯಾಯಕ್ಕಾಗಿ ಸಂತ್ರಸ್ತರು ಪೊಲೀಸ್ ವರಿಷ್ಠಾಧಿಕಾರಿಗೆ ದೂರು ನೀಡಿದ್ದು, ಆರೋಪಿಯನ್ನು ಬಂಧಿಸುವಂತೆ ಆಗ್ರಹಿಸಿದ್ದಾರೆ.

ಎಫ್ಡಿ ಮೇಲೆ ಸಾಲ‌ ಕೊಡಿಸೋದಾಗಿ ಹೇಳಿ ವಂಚನೆ: ಕೋಟಿ ಕೋಟಿ ಹಣ ಸಂಗ್ರಹಿಸಿ ಬ್ಯಾಂಕ್​​ ಮ್ಯಾನೇಜರ್​​ ಎಸ್ಕೇಪ್​!
ಆರೋಪಿ ಹೆಚ್​​.ಎಸ್​.ಪೂಜಾImage Credit source: Tv9 Kannada
ಮಂಜುನಾಥ ಕೆಬಿ
| Edited By: |

Updated on:Feb 28, 2026 | 9:48 AM

Share

ಹಾಸನ, ಫೆಬ್ರವರಿ 28: ನಿಗದಿತ ಠೇವಣಿ ಮೇಲೆ ಸಾಲ‌ ಕೊಡಿಸೋದಾಗಿ ಹೇಳಿ 50ಕ್ಕೂ ಅಧಿಕ ಗ್ರಾಹಕರಿಂದ 3 ಕೋಟಿಗೂ ಹೆಚ್ಚು ಹಣ ಸಂಗ್ರಹ ಮಾಡಿ ವಂಚಿಸಿರುವ ಆರೋಪ ಹಾಸನದ ಖಾಸಗಿ ಬ್ಯಾಂಕ್​​ ವಿರುದ್ಧ ಕೇಳಿಬಂದಿದೆ. ಸೂರ್ಯೋದಯ ಸ್ಮಾಲ್ ಫೈನಾನ್ಸ್​​​ ಬ್ಯಾಂಕ್​ನಲ್ಲಿ ಅಕ್ರಮ ನಡೆದಿದೆ ಎನ್ನಲಾಗಿದ್ದು, ಬ್ಯಾಂಕ್​ ಮ್ಯಾನೇಜರ್ ಹೆಚ್​​.ಎಸ್​.ಪೂಜಾ ವಿರುದ್ಧ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಶುಭಾನ್ವಿತಾಗೆ ದೂರು ನೀಡಲಾಗಿದೆ. ಎಫ್​ಡಿ ಇಡುವಂತೆ ಹೇಳಿ ಕೋಟ್ಯಂತರ ಹಣ ಸಮೇತ ಮ್ಯಾನೇಜರ್​​ ನಾಪತ್ತೆಯಾಗಿರೋದಾಗಿ ಆರೋಪಿಸಲಾಗಿದೆ.

‘ಎಫ್ಡಿ ಮಾಡಿದ ಹಣಕ್ಕೆ ದಾಖಲೆ ನೀಡಿಲ್ಲ’

ಬ್ಯಾಂಕ್​​ನಲ್ಲಿ ಎಫ್ಡಿ ಇಟ್ಟರೆ 25 ಲಕ್ಷದಿಂದ 1 ಕೋಟಿವರೆಗೂ ಸಾಲ ಕೊಡಿಸುವ ಆಮಿಷವನ್ನು ಗ್ರಾಹಕರಿಗೆ ಬ್ಯಾಂಕ್​ ಮ್ಯಾನೇಜರ್ ಹೆಚ್​​.ಎಸ್​.ಪೂಜಾ ಒಡ್ಡಿದ್ದರು. ಜೊತೆಗೆ 25 ಲಕ್ಷ ಲೋನ್​ಗೆ 10 ಲಕ್ಷ ಸಬ್ಸಿಡಿ ಎಂದು ನಂಬಿಸಿ ಜನರಿಂದ ಹಣ ಸಂಗ್ರಹ ಮಾಡಿದ್ದರು. ಇವರ ಮಾತು ನಂಬಿ ಬ್ಯಾಂಕ್​​ನಲ್ಲಿ ಜನ ಹಣ ಇಟ್ಟಿದ್ದು, ಎಫ್​ಡಿ ಮಾಡಿರುವ ಹಣಕ್ಕೆ ಯಾವುದೇ ದಾಖಲೆಯನ್ನು ಮ್ಯಾನೇಜರ್​​ ನೀಡದ ಆರೋಪವೂ ಕೇಳಿಬಂದಿದೆ. ಗ್ರಾಹಕರು ಹಣ ವಾಪಸ್ ಕೇಳಿದ್ದಕ್ಕೆ ಕೆಲವರಿಗೆ ಚೆಕ್ ನೀಡಿ ಪೂಜಾ ಎಸ್ಕೇಪ್ ಆಗಿದ್ದಾರೆ ಎನ್ನಲಾಗಿದೆ.ಹಾಸನದ ಪೆನ್ಷನ್ ಮೊಹಲ್ಲಾ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಇದನ್ನೂ ಓದಿ: ಬಲವಂತವಾಗಿ ಮಹಿಳೆಯ ಖಾಸಗಿ ಅಂಗಾಂಗ ಮುಟ್ಟಿ ಮೆಡಿಕಲ್ ಚೆಕಪ್; ಹನಿಟ್ರ್ಯಾಪ್ ಮಾಡಿಸಿ ಹಣ ವಸೂಲಿ ಮಾಡ್ತಿದ್ದ ಗ್ಯಾಂಗ್ ಬಂಧನ

ವಿದೇಶಕ್ಕೆ ಪರಾರಿಯಾಗಲು ಆರೋಪಿ ಯತ್ನ?

ಇನ್ನು ಹಣ ಸಂಗ್ರಹದ ಬಳಿಕ ಆರೋಪಿ ಹೆಚ್​​.ಎಸ್​.ಪೂಜಾ ವಿದೇಶಕ್ಕೆ ಪರಾರಿಯಾಗಲು ಯತ್ನಿಸುತ್ತಿದ್ದಾರೆ ಎನ್ನಲಾಗಿದೆ. ದುಬೈಗೆ ಹಾರಲು ಅವರು ವಿಮಾನ ನಿಲ್ದಾಣದಲ್ಲಿ ಓಡಾಡುತ್ತಿರುವ ಮಾಹಿತಿ ಇದ್ದು, ಅವರು ಪರಾರಿಯಾಗಲು ಯಾವುದೇ ಕಾರಣಕ್ಕೂ ಬಿಡಬಾರದು. ಅವರ ಪಾಸ್​​ಪೋರ್ಟ್​​ ರದ್ದು ಮಾಡಿ ವಿದೇಶ ಪ್ರಯಾಣವನ್ನು ತಡೆಯಬೇಕು. ಸಾಲ ಕೊಡಿಸುವ ಆಮಿಷವೊಡ್ಡಿ ಗ್ರಾಹಕರನ್ನು ವಂಚಿಸಿರುವ ಆಕೆಯನ್ನು ಬಂಧಿಸಿ, ತಮಗೆ ನ್ಯಾಯ ಕೊಡಿಸಬೇಕು ಎಂದು ಸೂರ್ಯೋದಯ ಸ್ಮಾಲ್ ಫೈನಾನ್ಸ್​​​ ಬ್ಯಾಂಕ್​​ ಗ್ರಾಹಕರು ಎಸ್ಪಿಗೆ ನೀಡಿರುವ ದೂರಿನಲ್ಲಿ ಆಗ್ರಹಿಸಿದ್ದಾರೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Published On - 9:47 am, Sat, 28 February 26

Follow Us
ಅಶ್ಲೀಲ ಕಮೆಂಟ್ ಮಾಡಿದವರಿಗೆ 7 ವರ್ಷ ಜೈಲು ಶಿಕ್ಷೆ ಸಾಧ್ಯತೆ: ಶಾಕಿಂಗ್ ವಿಷಯ
ಅಶ್ಲೀಲ ಕಮೆಂಟ್ ಮಾಡಿದವರಿಗೆ 7 ವರ್ಷ ಜೈಲು ಶಿಕ್ಷೆ ಸಾಧ್ಯತೆ: ಶಾಕಿಂಗ್ ವಿಷಯ
ಇದೆಂಥಾ ಪ್ರಶ್ನೆ? ಪತ್ರಕರ್ತರ ಪ್ರಶ್ನೆಗೆ ಕೆರಳಿದ ಇಶಾನ್ ಕಿಶನ್
ಇದೆಂಥಾ ಪ್ರಶ್ನೆ? ಪತ್ರಕರ್ತರ ಪ್ರಶ್ನೆಗೆ ಕೆರಳಿದ ಇಶಾನ್ ಕಿಶನ್
ಒಳಮೀಸಲಾತಿ ಜಟಾಪಟಿ: ಸಭೆಯಲ್ಲಿ ಮಹತ್ವದ ತೀರ್ಮಾನ
ಒಳಮೀಸಲಾತಿ ಜಟಾಪಟಿ: ಸಭೆಯಲ್ಲಿ ಮಹತ್ವದ ತೀರ್ಮಾನ
ಅಶ್ಲೀಲ ಕಮೆಂಟ್ ಪ್ರಕರಣ: ರಮ್ಯಾ ಹಠ ಹಿಡಿದು ಕೇಸ್ ಹಾಕಿದ್ದಕ್ಕೆ ಇದೇ ಕಾರಣ
ಅಶ್ಲೀಲ ಕಮೆಂಟ್ ಪ್ರಕರಣ: ರಮ್ಯಾ ಹಠ ಹಿಡಿದು ಕೇಸ್ ಹಾಕಿದ್ದಕ್ಕೆ ಇದೇ ಕಾರಣ
ಆರ್​ ಅಶೋಕ್‌ ಹೇಳಿದ ಮನಕಲಕುವ ಸತ್ಯ ಘಟನೆಗೆ ಸದನವೇ ನಿಶ್ಯಬ್ದ
ಆರ್​ ಅಶೋಕ್‌ ಹೇಳಿದ ಮನಕಲಕುವ ಸತ್ಯ ಘಟನೆಗೆ ಸದನವೇ ನಿಶ್ಯಬ್ದ
ಯುಗಾದಿ ವರ್ಷ ಭವಿಷ್ಯ; ಈ ರಾಶಿಗೆ ಆರ್ಥಿಕ ಪ್ರಗತಿ ಮತ್ತು ಆಕಸ್ಮಿಕ ಧನಯೋಗ
ಯುಗಾದಿ ವರ್ಷ ಭವಿಷ್ಯ; ಈ ರಾಶಿಗೆ ಆರ್ಥಿಕ ಪ್ರಗತಿ ಮತ್ತು ಆಕಸ್ಮಿಕ ಧನಯೋಗ
ಅಶ್ಲೀಲ ಕಮೆಂಟ್ ಕೇಸು, ನ್ಯಾಯಾಲಯಕ್ಕೆ ಬಂದ ನಟಿ ರಮ್ಯಾ: ವಿಡಿಯೋ
ಅಶ್ಲೀಲ ಕಮೆಂಟ್ ಕೇಸು, ನ್ಯಾಯಾಲಯಕ್ಕೆ ಬಂದ ನಟಿ ರಮ್ಯಾ: ವಿಡಿಯೋ
ಯುಗಾದಿ ವರ್ಷ ಭವಿಷ್ಯ; ವೃಶ್ಚಿಕ ರಾಶಿಗೆ ಈ ವರ್ಷ ಹೇಗಿರಲಿದೆ?
ಯುಗಾದಿ ವರ್ಷ ಭವಿಷ್ಯ; ವೃಶ್ಚಿಕ ರಾಶಿಗೆ ಈ ವರ್ಷ ಹೇಗಿರಲಿದೆ?
ಬೆಂಗಳೂರಿನಲ್ಲಿ ತಲೆ ಎತ್ತಲಿದೆ ಅಂತಾರಾಷ್ಟ್ರೀಯ ಮಟ್ಟದ ಬಸ್​ ನಿಲ್ದಾಣ
ಬೆಂಗಳೂರಿನಲ್ಲಿ ತಲೆ ಎತ್ತಲಿದೆ ಅಂತಾರಾಷ್ಟ್ರೀಯ ಮಟ್ಟದ ಬಸ್​ ನಿಲ್ದಾಣ
ಶಾರ್ಟ್​ ಸರ್ಕೂಟ್​ನಿಂದ ಹೊತ್ತಿ ಉರಿದ ಕೊಳ್ಳೇಗಾಲ ಸಿಪಿಐ ಕಚೇರಿ!
ಶಾರ್ಟ್​ ಸರ್ಕೂಟ್​ನಿಂದ ಹೊತ್ತಿ ಉರಿದ ಕೊಳ್ಳೇಗಾಲ ಸಿಪಿಐ ಕಚೇರಿ!