Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಾಲೆ ಯಾವಾಗ ಆರಂಭ ಮಾಡುತ್ತೀರಾ? ಶಿಕ್ಷಣ ಸಚಿವ ಬಿ.ಸಿ.ನಾಗೇಶ್​ಗೆ ಬಾಲಕನ ಪ್ರಶ್ನೆ; ವಿಡಿಯೋ ವೈರಲ್

ನಿನ್ನೆ (ಆಗಸ್ಟ್ 29) ಹಾಸನ ಜಿಲ್ಲೆಯ ಅರಸೀಕೆರೆಯಲ್ಲಿರುವ ಉದ್ಯಮಿ ದತ್ತಾತ್ರೇಯ ಅವರ ಮನೆಗೆ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಭೇಟಿ ನೀಡಿದ್ದರು. ಈ ವೇಳೆ ಉದ್ಯಮಿ ದತ್ತಾತ್ರೇಯ ಅವರ ಮೊಮ್ಮಗ ಶಿಕ್ಷಣ ಸಚಿವರಿಗೆ ಪ್ರಶ್ನೆ ಮಾಡಿದ್ದಾನೆ.

ಶಾಲೆ ಯಾವಾಗ ಆರಂಭ ಮಾಡುತ್ತೀರಾ? ಶಿಕ್ಷಣ ಸಚಿವ ಬಿ.ಸಿ.ನಾಗೇಶ್​ಗೆ ಬಾಲಕನ ಪ್ರಶ್ನೆ; ವಿಡಿಯೋ ವೈರಲ್
ಶಿಕ್ಷಣ ಸಚಿವರಿಗೆ ಪ್ರಶ್ನಿಸಿದ ಬಾಲಕ
Follow us
TV9 Web
| Updated By: sandhya thejappa

Updated on:Aug 30, 2021 | 10:09 AM

ಹಾಸನ: ಕೊರೊನಾ ಕಾರಣದಿಂದ ಶಾಲೆಗಳನ್ನು ಸಂಪೂರ್ಣ ಬಂದ್ ಮಾಡಲಾಗಿತ್ತು. ಸದ್ಯ ಕೊರೊನಾ ನಿಯಂತ್ರಣಕ್ಕೆ ಬಂದ ಕಾರಣ 9 ಮತ್ತು 10 ನೇ ತರಗತಿಯನ್ನು ಆರಂಭಿಸಲಾಗಿದೆ. ಆದರೆ 1ರಿಂದ 8ನೇ ತರಗತಿ ಇನ್ನು ಆರಂಭವಾಗಿಲ್ಲ. ಅನಿವಾರ್ಯವಾಗಿ ಶಿಕ್ಷಕರು ಆಫ್ಲೈನ್ ಮೂಲಕ ಮಕ್ಕಳಿಗೆ ಪಾಠ ಹೇಳುತ್ತಿದ್ದಾರೆ. ಆದರೆ ಗುಣಮಟ್ಟದ ಶಿಕ್ಷಣ ಆಫ್​ಲೈನ್ ಮೂಲಕ ಮಕ್ಕಳಿಗೆ ಸಿಗುತ್ತಿಲ್ಲ. ಹೀಗಾಗಿ ಶಾಲೆಗಳನ್ನು ಪುನಾರಂಭಿಸಲು ಶಿಕ್ಷಕರು, ಮಕ್ಕಳು, ಕೆಲ ಪೋಷಕರು ಒತ್ತಾಯಿಸುತ್ತಿದ್ದಾರೆ. ಈ ನಡುವೆ ಶಾಲೆ ಯಾವಾಗ ಆರಂಭ ಮಾಡುತ್ತೀರಿ ಎಂದು ಬಾಲಕನೊಬ್ಬ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ರವರಿಗೆ ಪ್ರಶ್ನಿಸಿದ್ದು, ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ನಿನ್ನೆ (ಆಗಸ್ಟ್ 29) ಹಾಸನ ಜಿಲ್ಲೆಯ ಅರಸೀಕೆರೆಯಲ್ಲಿರುವ ಉದ್ಯಮಿ ದತ್ತಾತ್ರೇಯ ಅವರ ಮನೆಗೆ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಭೇಟಿ ನೀಡಿದ್ದರು. ಈ ವೇಳೆ ಉದ್ಯಮಿ ದತ್ತಾತ್ರೇಯ ಅವರ ಮೊಮ್ಮಗ ಶಿಕ್ಷಣ ಸಚಿವರಿಗೆ ಪ್ರಶ್ನೆ ಮಾಡಿದ್ದಾನೆ. ಶಾಲೆಯನ್ನು ಯಾವಾಗ ಪ್ರಾರಂಭಿಸುತ್ತೀರಾ ಎಂದು ಪ್ರಶ್ನಿಸಿದ ಬಾಲಕನಿಗೆ, ಶಾಲೆ ಯಾವಾಗ ಆರಂಭಿಸಬೇಕು ನೀನೇ ಹೇಳು ಅಂತ ಶಿಕ್ಷಣ ಸಚಿವರು ಮರು ಪ್ರಶ್ನೆ ಮಾಡಿದ್ದಾರೆ. ಅದಕ್ಕೆ ಬಾಲಕ ನಾಳೆ ಅಂತ ಹೇಳುತ್ತಾನೆ. ಅವಾಗ ಗ್ಯಾರಂಟಿನಾ.. ನಾಳೆಯಿಂದ ನೀನು ಶಾಲೆಗೆ ಹೋಗುತ್ತೀಯಾ ಅಂತ ಶಿಕ್ಷಣ ಸಚಿವರು ಕೇಳಿದ್ದಾರೆ. ಈ ವೇಳೆ ಬಾಲಕ ಹೌದು ಅಂತ ಉತ್ತರಿಸಿದ್ದಾನೆ. ಸದ್ಯ ಬಾಲಕ ಮತ್ತು ಶಿಕ್ಷಣ ಸಚಿವರು ಮಾತನಾಡಿರುವ ವಿಡಿಯೋ ಸೋಶಿಯಲ್ ಮಿಡಿಯಾದಲ್ಲಿ ವೈರಲ್ ಆಗಿದೆ.

ಹಾಸನ ಜಿಲ್ಲೆಯಲ್ಲಿ ಇಂದಿನಿಂದ 9, 10ನೇ ತರಗತಿ ಆರಂಭವಾಗುತ್ತಿದೆ. ಕೊರೊನಾ ಪಾಸಿಟಿವಿಟಿ ರೇಟ್ ಶೇ.2ಕ್ಕಿಂತ ಹೆಚ್ಚಿದ್ದರಿಂದ ಆಗಸ್ಟ್ 23ಕ್ಕೆ ಶಾಲೆ ಆರಂಭಿಸಲು ಸಾಧ್ಯವಾಗಿರಲಿಲ್ಲ. ಸದ್ಯ ಕೊರೊನಾ ನಿಯಂತ್ರಣಕ್ಕೆ ಬಂದಿದ್ದು, ಇಂದಿನಿಂದ ಜಿಲ್ಲೆಯಲ್ಲಿ ಭೌತಿಕ ತರಗತಿಗಳು ಆರಂಭವಾಗುತ್ತಿದೆ. 269 ಖಾಸಗಿ ಹಾಗೂ 241 ಸರ್ಕಾರಿ ಶಾಲೆಗಳು ಆರಂಭವಾಗುತ್ತಿದ್ದು, ಒಟ್ಟು 44 ಸಾವಿರ ವಿದ್ಯಾರ್ಥಿಗಳು ಶಾಲೆಗೆ ಹಾಜರಾಗಲು ಸಜ್ಜಾಗಿದ್ದಾರೆ.

ಒಂದು ಡೆಸ್ಕ್ನಲ್ಲಿ ಇಬ್ಬರು ವಿದ್ಯಾರ್ಥಿಗಳು, ಒಂದು ಕೊಠಡಿಯಲ್ಲಿ ಗರಿಷ್ಠ 20 ಮಕ್ಕಳೊಂದಿಗೆ ಶಾಲೆ ಆರಂಭಿಸಲಾಗುತ್ತಿದೆ. ಮಕ್ಕಳಿಗೆ ಶಾಲೆಯಲ್ಲಿ ಬಿಸಿ ನೀರು ಪೂರೈಕೆಗೆ ವ್ಯವಸ್ಥೆ ಮಾಡಲಾಗಿದೆ ಅಂತ ಟಿವಿ9ಗೆ ಡಿಸಿಪಿಇ ಪ್ರಕಾಶ್ ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ

1 ರಿಂದ 8ನೇ ತರಗತಿ ಮಕ್ಕಳಿಗೆ ಶಾಲೆ ಆರಂಭಿಸುವ ಕುರಿತು ಮಹತ್ವದ ಸಭೆ: ಚರ್ಚೆಯಾಗಲಿರುವ ಪ್ರಮುಖ ಸಂಗತಿಗಳೇನು?

Krishna Janmashtami 2021: ಸಾಮಾಜಿಕ ಜಾಲತಾಣದಲ್ಲಿ ಪುಟ್ಟ ಕೃಷ್ಣನ ಫೋಟೋಗಳದ್ದೇ ಸದ್ದು

(Hassan Boy questioned to BC Nagesh that When do you start school)

Published On - 9:37 am, Mon, 30 August 21

‘ರಾಜ್​ಕುಮಾರ್ ಎಂಬ ಹೆಸರು ಕನ್ನಡ ಸಿನಿಮಾದ ಅಭಿವೃದ್ಧಿಗೆ ಕಾರಣ’: ಬರಗೂರು
‘ರಾಜ್​ಕುಮಾರ್ ಎಂಬ ಹೆಸರು ಕನ್ನಡ ಸಿನಿಮಾದ ಅಭಿವೃದ್ಧಿಗೆ ಕಾರಣ’: ಬರಗೂರು
ಪಹಲ್ಗಾಮ್ ದಾಳಿ ಹಿನ್ನೆಲೆ ದೆಹಲಿಯಲ್ಲಿ ಸರ್ವ ಪಕ್ಷಗಳ ಸಭೆ ಆರಂಭ
ಪಹಲ್ಗಾಮ್ ದಾಳಿ ಹಿನ್ನೆಲೆ ದೆಹಲಿಯಲ್ಲಿ ಸರ್ವ ಪಕ್ಷಗಳ ಸಭೆ ಆರಂಭ
ಅಣ್ಣಾವ್ರ ಹುಟ್ಟುಹಬ್ಬವನ್ನು ಭಿನ್ನವಾಗಿ ಆಚರಿಸಿದ ‘ಸಿಟಿಲೈಟ್ಸ್’ ತಂಡ
ಅಣ್ಣಾವ್ರ ಹುಟ್ಟುಹಬ್ಬವನ್ನು ಭಿನ್ನವಾಗಿ ಆಚರಿಸಿದ ‘ಸಿಟಿಲೈಟ್ಸ್’ ತಂಡ
ಚೆನಾಬ್ ನದಿಗೆ ನಿರ್ಮಿಸಿದ ಬಾಗ್ಲಿಹಾರ್ ಡ್ಯಾಂ ವಿಡಿಯೋ ಇಲ್ಲಿದೆ
ಚೆನಾಬ್ ನದಿಗೆ ನಿರ್ಮಿಸಿದ ಬಾಗ್ಲಿಹಾರ್ ಡ್ಯಾಂ ವಿಡಿಯೋ ಇಲ್ಲಿದೆ
ಪಹಲ್ಗಾಮ್ ಸ್ವರ್ಗದಲ್ಲಿ ತೇಲಾಡುವಾಗ ಉಗ್ರರ ಭೀಕರತೆ ಬಿಚ್ಚಿಟ್ಟ ಪಲ್ಲವಿ
ಪಹಲ್ಗಾಮ್ ಸ್ವರ್ಗದಲ್ಲಿ ತೇಲಾಡುವಾಗ ಉಗ್ರರ ಭೀಕರತೆ ಬಿಚ್ಚಿಟ್ಟ ಪಲ್ಲವಿ
ಚಿತೆಯಲ್ಲಿ ಮಲಗಿದ ಪತಿಯ ಕೈ ಹುಡುಕಿ ಹಿಡಿದ ಪತ್ನಿ: ಹೃದಯ ಹಿಂಡುವ ದೃಶ್ಯ
ಚಿತೆಯಲ್ಲಿ ಮಲಗಿದ ಪತಿಯ ಕೈ ಹುಡುಕಿ ಹಿಡಿದ ಪತ್ನಿ: ಹೃದಯ ಹಿಂಡುವ ದೃಶ್ಯ
ಅಪ್ಪಾಜಿಯ ಸಮಾಧಿಗೆ ಪೂಜೆ ಮಾಡಿ, ಶಿವಣ್ಣ ಹೇಳಿದ್ದು ಹೀಗೆ..
ಅಪ್ಪಾಜಿಯ ಸಮಾಧಿಗೆ ಪೂಜೆ ಮಾಡಿ, ಶಿವಣ್ಣ ಹೇಳಿದ್ದು ಹೀಗೆ..
ಪಹಲ್ಗಾಮ್​ನಲ್ಲಿ ಉಗ್ರರ ಅಟ್ಟಹಾಸವನ್ನು ಎಳೆ ಎಳೆಯಾಗಿ ಬಿಚ್ಚಿಟ್ಟ ಅಭಿಜನ್
ಪಹಲ್ಗಾಮ್​ನಲ್ಲಿ ಉಗ್ರರ ಅಟ್ಟಹಾಸವನ್ನು ಎಳೆ ಎಳೆಯಾಗಿ ಬಿಚ್ಚಿಟ್ಟ ಅಭಿಜನ್
ಕರ್ನಾಟಕದಷ್ಟು ಸುಂದರ ಸ್ಥಳ ಮತ್ತು ಜನ ಬೇರೆಲ್ಲೂ ಇಲ್ಲ: ಮೋನಿಕ ಸತ್ಯ
ಕರ್ನಾಟಕದಷ್ಟು ಸುಂದರ ಸ್ಥಳ ಮತ್ತು ಜನ ಬೇರೆಲ್ಲೂ ಇಲ್ಲ: ಮೋನಿಕ ಸತ್ಯ
ಹಿಂದಿ ಬದಲು ಇಂಗ್ಲಿಷ್​​ನಲ್ಲೇ ಭಯೋತ್ಪಾದನೆ ವಿರುದ್ಧ ಮೋದಿ ಸಂದೇಶ ರವಾನೆ
ಹಿಂದಿ ಬದಲು ಇಂಗ್ಲಿಷ್​​ನಲ್ಲೇ ಭಯೋತ್ಪಾದನೆ ವಿರುದ್ಧ ಮೋದಿ ಸಂದೇಶ ರವಾನೆ