ದಂಪತಿ ಮಧ್ಯೆ ಗಲಾಟೆ: ಕಾಲುವೆಗೆ ಹಾರಿದ್ದ ಪತ್ನಿಯನ್ನ ರಕ್ಷಿಸಲು ಹೋಗಿ ಕೊಚ್ಚಿಹೋದ ಪತಿ ಸಾವು
ಹಾಸನದ ಚನ್ನರಾಯಪಟ್ಟಣ ತಾಲೂಕಿನ ನಂಬಿಹಳ್ಳಿ ಬಳಿ ಕೌಟುಂಬಿಕ ಕಲಹ ಹಿನ್ನೆಲೆ ಹೇಮಾವತಿ ಕಾಲುವೆಗೆ ಹಾರಿ ದಂಪತಿ ಆತ್ಮಹತ್ಯೆ ಮಾಡಿಕೊಂಡಿರುವಂತಹ ಘಟನೆ ನಡೆದಿದೆ. ಗಲಾಟೆ ಬಳಿಕ ಪತ್ನಿ ಕಾಲುವೆಗೆ ಹಾರಿದ್ದು, ಆಕೆಯ ರಕ್ಷಣೆಗೆ ಹೋದ ಪತಿ ಕೂಡ ಕಾಲುವೆಯಲ್ಲಿ ಕೊಚ್ಚಿ ಹೋಗಿದ್ದಾರೆ. ಚನ್ನರಾಯಪಟ್ಟಣ ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಹಾಸನ, ನವೆಂಬರ್ 24: ಕೌಟುಂಬಿಕ ಕಲಹ ಹಿನ್ನೆಲೆ ಕಾಲುವೆಗೆ ಹಾರಿ ದಂಪತಿ ಆತ್ಮಹತ್ಯೆ (suicide) ಮಾಡಿಕೊಂಡಿರುವಂತಹ ಘಟನೆ ಹಾಸನ (hassan) ಜಿಲ್ಲೆಯ ಚನ್ನರಾಯಪಟ್ಟಣ ತಾಲ್ಲೂಕಿನ ನಂಬಿಹಳ್ಳಿ ಗ್ರಾಮದಲ್ಲಿ ನಡೆದಿದೆ. ಎರಡು ವರ್ಷಗಳ ಹಿಂದಷ್ಟೇ ಮದುವೆಯಾಗಿದ್ದ ಗೋಪಾಲ್ (27) ಮತ್ತು ದೀಪು (24) ಮೃತ ದಂಪತಿ. ಚನ್ನರಾಯಪಟ್ಟಣ ಟೌನ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.
ನಡೆದದ್ದೇನು?
ನಿನ್ನೆ ಇಬ್ಬರ ನಡುವೆ ಗಲಾಟೆ ಉಂಟಾಗಿದೆ. ಬಳಿಕ ಪತ್ನಿ ಹೇಮಾವತಿ ಕಾಲುವೆಗೆ ಹಾರಿದ್ದಾರೆ. ಪತ್ನಿಯನ್ನು ರಕ್ಷಿಸಲು ಪತಿ ಕೂಡ ಕಾಲುವೆಗೆ ಹಾರಿದ್ದಾರೆ. ದಂಪತಿ ಕಾಲುವೆಯಲ್ಲಿ ಕೊಚ್ಚಿ ಹೋಗಿದ್ದರು. ದಂಪತಿ ಮನೆಗೆ ಬಾರದಿದ್ದರಿಂದ ಕುಟುಂಬಸ್ಥರು ಎಲ್ಲೆಡೆ ಹುಡುಕಾಡಿದ್ದಾರೆ. ಇಂದು ಅಗ್ನಿಶಾಮಕ ದಳದ ಸಿಬ್ಬಂದಿ ನಾಲೆಯಲ್ಲಿ ಶೋಧಕಾರ್ಯ ನಡೆಸಿದ್ದು, ಈ ವೇಳೆ ಗೋಪಾಲ್ ಮೃತದೇಹ ಪತ್ತೆಯಾಗಿದೆ. ದೀಪು ಶವಕ್ಕಾಗಿ ಶೋಧ ಕಾರ್ಯ ಮುಂದುವರೆದಿದೆ.
ಕೆರೆಗೆ ಹಾರಿ ಮಹಿಳೆ ಆತ್ಮಹತ್ಯೆ
ಕೆರೆಗೆ ಹಾರಿ ಮಹಿಳೆ ಆತ್ಮಹತ್ಯೆ ಮಾಡಿಕೊಂಡಿರುವಂತಹ ಘಟನೆ ಕೊಡಗು ಜಿಲ್ಲೆಯ ಪೊನ್ನಂಪೇಟೆ ತಾಲೂಕಿನ ತೂಚಮಕೇರಿ ಗ್ರಾಮದಲ್ಲಿ ನಡೆದಿದೆ. ಸುಮಿತಾ(48) ಆತ್ಮಹತ್ಯೆ ಮಾಡಿಕೊಂಡ ಮಹಿಳೆ. ಮೃತ ಸುಮಿತಾ ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದರು. ಸದ್ಯ ಶ್ರೀಮಂಗಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.
ಪತಿ ಕಿರುಕುಳಕ್ಕೆ ಬೇಸತ್ತು ಪತ್ನಿ ಆತ್ಮಹತ್ಯೆ
ಪತಿ ಕಿರುಕುಳಕ್ಕೆ ಬೇಸತ್ತು ಪತ್ನಿ ಆತ್ಮಹತ್ಯೆ ಮಾಡಿಕೊಂಡಿರುವಂತಹ ಘಟನೆ ಗೋವಿಂದರಾಜನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನವಂಬರ್ 22ರಂದು ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ರೇಖಾ ಮಾಯಪ್ಪ ನಂದಿ(25) ಮೃತ ಪತ್ನಿ. ಬಿಬಿಎಂಪಿ ಮಾರ್ಷಲ್ ಆಗಿರುವ ಪತಿ ಮಾಯಪ್ಪ ವಿರುದ್ಧ ಕಿರುಕುಳ ಆರೋಪ ಕೇಳಿಬಂದಿದೆ.
ಇದನ್ನೂ ಓದಿ: ಬೇರೊಬ್ಬನ ಜತೆ ಲವ್ವಿಡವ್ವಿಗೆ ಗಂಡನ ಹತ್ಯೆ: ಸುಪಾರಿ ಹಣ ಕೊಡದೆ ಕಳ್ಳಾಟ, 9 ವರ್ಷದ ಬಳಿಕ ರಹಸ್ಯ ಬಯಲು
ಮಾಯಪ್ಪ ಇತ್ತೀಚೆಗೆ ಕುಡಿದು ಪತ್ನಿಗೆ ಕಿರುಕುಳ ನೀಡುತ್ತಿದ್ದ. ವರದಕ್ಷಿಣೆ ನೀಡುವಂತೆ ಕಿರುಕುಳ ನೀಡಿದ್ದಾಗಿ ಕುಟುಂಬಸ್ಥರು ಆರೋಪಿಸಿದ್ದಾರೆ. ಕುಟುಂಬಸ್ಥರಿಗೆ ಆತನೆ ಕೊಲೆ ಮಾಡಿ ನೇಣು ಹಾಕಿರಬಹುದು ಎಂದು ಅನುಮಾನ ವ್ಯಕ್ತಪಡಿಸಿದ್ದಾರೆ.
ಪೆಟ್ರೋಲ್ ಸುರಿದುಕೊಂಡು ವ್ಯಕ್ತಿ ಆತ್ಮಹತ್ಯೆ
ಪೆಟ್ರೋಲ್ ಸುರಿದುಕೊಂಡು ವ್ಯಕ್ತಿಯೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವಂತಹ ಘಟನೆ ಇತ್ತೀಚೆಗೆ ಕೋಲಾರದಲ್ಲಿ ನಡೆದಿತ್ತು. ಕೋಲಾರ ಜಿಲ್ಲೆಯ ಕೆಜಿಎಫ್ ತಾಲೂಕಿನ ಬೇತಮಂಗಲ ಬಳಿ ಘಟನೆ ನಡೆದಿತ್ತು. ಟೆಂಪೋ ಡ್ರೈವರ್ ಗಿರೀಶ್ (೩೫) ಆತ್ಮಹತ್ಯೆಗೆ ಶರಣಾಗಿದ್ದ ವ್ಯಕ್ತಿ.
ಇದನ್ನೂ ಓದಿ: ಯುವತಿಯನ್ನ ಸ್ನೇಹಿತೆ ರೂಮಿಗೆ ಕರೆದೊಯ್ದು ಕೊಲೆಗೈದ ಯುವಕ, ಆಗಿದ್ದೇನು?
ಇತ್ತೀಚೆಗೆ ಗಿರೀಶ್ ಮಾನಸಿಕ ಖಿನ್ನತೆಗೆ ಒಳಗಾಗಿದ್ದರು ಎನ್ನಲಾಗಿತ್ತು. ಕಳೆದ ರಾತ್ರಿ ಬೇತಮಂಗಲ ಹೊರವಲಯದಲ್ಲಿ ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿತ್ತು. ಸ್ಥಳಕ್ಕೆ ಬೇತಮಂಗಲ ಪೊಲೀಸರು ಭೇಟಿ ನೀಡಿ ಪರಿಶೀಲನೆ ಮಾಡಿದ್ದರು. ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಿದ್ದರು.
ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.
Published On - 4:11 pm, Mon, 24 November 25



