ಹಾಸನ: ಒಂದೇ ಕಾಲೇಜಿನ ಕೇರಳ ಮೂಲದ 21 ವಿದ್ಯಾರ್ಥಿನಿಯರಿಗೆ ಕೊವಿಡ್ ದೃಢ

ವಿದ್ಯಾರ್ಥಿನಿಯರನ್ನು ಕ್ವಾರಂಟೈನ್ ಮಾಡಿರುವ ಲಾಡ್ಜ್ ಸೀಲ್ಡೌನ್ ಮಾಡಲಾಗಿದೆ. ಜಿಲ್ಲೆಗೆ ಸೋಂಕಿನ 3ನೇ ಅಲೆ ಕಾಲಿಟ್ಟಿದೆಯೇ ಎಂಬ ಭೀತಿ ಹಾಸನ ಜಿಲ್ಲೆಯ ಸಾರ್ವಜನಿಕರಿಗೆ ಹುಟ್ಟಿದೆ.

ಹಾಸನ: ಒಂದೇ ಕಾಲೇಜಿನ ಕೇರಳ ಮೂಲದ 21 ವಿದ್ಯಾರ್ಥಿನಿಯರಿಗೆ ಕೊವಿಡ್ ದೃಢ
ಪ್ರಾತಿನಿಧಿಕ ಚಿತ್ರ
Follow us
TV9 Web
| Updated By: guruganesh bhat

Updated on:Aug 05, 2021 | 11:11 PM

ಹಾಸನ: ಜಿಲ್ಲೆಯ ಖಾಸಗಿ ನರ್ಸಿಂಗ್ ಕಾಲೇಜಿನಲ್ಲಿ ಓದುತ್ತಿದ್ದ ಕೇರಳ ಮೂಲದ 21 ವಿದ್ಯಾರ್ಥಿನಿಯರಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ಕೇರಳದಿಂದ ಬಂದಿದ್ದ ನರ್ಸಿಂಗ್ ವಿದ್ಯಾರ್ಥಿನಿಯರಿಗೆ ಕೊವಿಡ್ ಟೆಸ್ಟ್ ಮಾಡಿದಾಗ ಒಂದೇ ಕಾಲೇಜಿನ 21 ವಿದ್ಯಾರ್ಥಿನಿಯರಿಗೆ ಪಾಸಿಟಿವ್ ಇರುವುದು ಪತ್ತೆಯಾಗಿದೆ. ಸೋಂಕಿತರ ಸಂಪರ್ಕದಲ್ಲಿದ್ದ 27 ವಿದ್ಯಾರ್ಥಿನಿಯರನ್ನು ಕ್ವಾರಂಟೈನ್ ಮಾಡಲಾಗಿದೆ. ವಿದ್ಯಾರ್ಥಿನಿಯರನ್ನು ಕ್ವಾರಂಟೈನ್ ಮಾಡಿರುವ ಲಾಡ್ಜ್ ಸೀಲ್ಡೌನ್ ಮಾಡಲಾಗಿದೆ. ಜಿಲ್ಲೆಗೆ ಸೋಂಕಿನ 3ನೇ ಅಲೆ ಕಾಲಿಟ್ಟಿದೆಯೇ ಎಂಬ ಭೀತಿ ಹಾಸನ ಜಿಲ್ಲೆಯ ಸಾರ್ವಜನಿಕರಿಗೆ ಹುಟ್ಟಿದೆ.

ಕರ್ನಾಟಕದಲ್ಲಿ ಗುರುವಾರ ಒಂದೇ ದಿನ 1785 ಮಂದಿಯಲ್ಲಿ ಕೊವಿಡ್ ಸೋಂಕು ದೃಢಪಟ್ಟಿದೆ. 25 ಜನರು ಕೊರೊನಾ ಸೋಂಕಿನಿಂದ ಮೃತಪಟ್ಟಿದ್ದಾರೆ. ಒಟ್ಟು 1651 ಮಂದಿ ಸೋಂಕಿನಿಂದ ಚೇತರಿಸಿಕೊಂಡು ವಿವಿಧ ಜಿಲ್ಲೆಗಳಲ್ಲಿ ಆಸ್ಪತ್ರೆಗಳಿಂದ ಬಿಡುಗಡೆಯಾಗಿದ್ದಾರೆ.

ಕರ್ನಾಟಕದಲ್ಲಿ ಈವರೆಗೆ ಒಟ್ಟು 29,13,512 ಮಂದಿಯಲ್ಲಿ ಕೊರೊನಾ ಸೋಂಕು ದೃಢಪಟ್ಟಿದ್ದು, 28,52,368 ಮಂದಿ ಚೇತರಿಸಿಕೊಂಡಿದ್ದಾರೆ. ರಾಜ್ಯದಲ್ಲಿ 24,414 ಮಂದಿಯಲ್ಲಿ ಕೊರೊನಾ ಸೋಂಕು ಸಕ್ರಿಯವಾಗಿದೆ. ಒಟ್ಟು 36,705 ಮಂದಿ ಸೋಂಕಿನಿಂದ ಮೃತಪಟ್ಟಿದ್ದಾರೆ. ಇಂದಿನ ಸೋಂಕು ಖಚಿತ ಪ್ರಕರಣದ ಸರಾಸರಿ ಶೇ 1.10 ಇದೆ.

ಬೆಂಗಳೂರು ನಗರದಲ್ಲಿ ಗುರುವಾರ 414 ಮಂದಿಯಲ್ಲಿ ಸೋಂಕು ದೃಢಪಟ್ಟಿದ್ದು, ಐವರು ಮೃತಪಟ್ಟಿದ್ದಾರೆ. ನಗರದಲ್ಲಿ ಈವರೆಗೆ ಒಟ್ಟು 12,29,340 ಮಂದಿಯಲ್ಲಿ ಸೋಂಕು ಕಾಣಿಸಿಕೊಂಡಿದ್ದು, ಒಟ್ಟು 15,901 ಜನರು ಸಾವನ್ನಪ್ಪಿದ್ದಾರೆ. ನಗರದಲ್ಲಿ 8560 ಸಕ್ರಿಯ ಪ್ರಕರಣಗಳಿವೆ. ಇಂದು 554 ಮಂದಿ ಸೋಂಕು ಮುಕ್ತರಾಗಿದ್ದಾರೆ.

ಯಾವ ಜಿಲ್ಲೆಯಲ್ಲಿ ಎಷ್ಟು ಮಂದಿಗೆ ಸೋಂಕು? ರಾಜ್ಯದ ಒಟ್ಟು 1785 ಮಂದಿಯಲ್ಲಿ ಗುರುವಾರ ಕೊರೊನಾ ಸೋಂಕು ದೃಢಪಟ್ಟಿತ್ತು. ಬಾಗಲಕೋಟೆ, ಬಳ್ಳಾರಿ 6, ಬೆಳಗಾವಿ 27, ಬೆಂಗಳೂರು ಗ್ರಾಮಾಂತರ 40, ಬೆಂಗಳೂರು ನಗರ 414, ಬೀದರ್ 1, ಚಾಮರಾಜನಗರ 44, ಚಿಕ್ಕಬಳ್ಳಾಪುರ 12, ಚಿಕ್ಕಮಗಳೂರು 97, ಚಿತ್ರದುರ್ಗ 26, ದಕ್ಷಿಣ ಕನ್ನಡ 337, ದಾವಣಗೆರೆ, ಧಾರವಾಡ 10, ಗದಗ 5, ಹಾಸನ 125, ಹಾವೇರಿ 3, ಕಲಬುರಗಿ 9, ಕೊಡಗು 100, ಕೋಲಾರ 57, ಕೊಪ್ಪಳ 7, ಮಂಡ್ಯ 46, ಮೈಸೂರು 105, ರಾಯಚೂರು 7, ರಾಮನಗರ 8, ಶಿವಮೊಗ್ಗ 35, ತುಮಕೂರು 49, ಉಡುಪಿ 134, ಉತ್ತರ ಕನ್ನಡ 60, ವಿಜಯಪುರ 5.

ಯಾವ ಜಿಲ್ಲೆಯಲ್ಲಿ ಎಷ್ಟು ಸಾವು? ಬೆಳಗಾವಿ 3, ಬೆಂಗಳೂರು ನಗರ 5, ಕೋಲಾರ, ದಕ್ಷಿಣ ಕನ್ನಡ 3, ಮಂಡ್ಯ, ರಾಯಚೂರು, ಉಡುಪಿ 2, ಗದಗ, ಹಾವೇರಿ, ಕೊಡಗು, ಕೊಪ್ಪಳ, ಉತ್ತರ ಕನ್ನಡ 1.

ಇದನ್ನೂ ಓದಿ: 

ಮಂಗಗಳ ಮಾರಣಹೋಮ ಪ್ರಕರಣ; ಹೈಕೋರ್ಟ್‌ಗೆ ವರದಿ ಸಲ್ಲಿಸಿದ ಹಾಸನ ಜಿಲ್ಲಾಧಿಕಾರಿ   

ಯಾರು ನೀವು? ಎಲ್ಲಿಂದ ಬಂದವರು? ಕೊಪ್ಪಳ ಪೊಲೀಸರ ಪ್ರಶ್ನೆಗೆ ಉತ್ತರಿಸದೇ ಬ್ಯಾಗ್​ನಲ್ಲಿದ್ದ 17 ಲಕ್ಷ 50 ಸಾವಿರ ಬಿಟ್ಟು ನಾಪತ್ತೆಯಾದ ಅಪರಿಚಿತರು!

(Hassan Covid confirm with 21 students from Kerala all from the same college)

Published On - 10:42 pm, Thu, 5 August 21

ಯಾವ ದೋಷಕ್ಕೆ ನವಗ್ರಹವನ್ನು ಹೇಗೆ ಪ್ರದಕ್ಷಿಣೆ ಹಾಕಬೇಕು? ಇಲ್ಲಿದೆ ನೋಡಿ
ಯಾವ ದೋಷಕ್ಕೆ ನವಗ್ರಹವನ್ನು ಹೇಗೆ ಪ್ರದಕ್ಷಿಣೆ ಹಾಕಬೇಕು? ಇಲ್ಲಿದೆ ನೋಡಿ
ಈ ರಾಶಿಯವರಿಗಿಂದು 6 ಗ್ರಹಗಳ ಶುಭ ಫಲ! ಉಳಿದ ರಾಶಿಗಳ ಫಲಾಫಲವೇನು?
ಈ ರಾಶಿಯವರಿಗಿಂದು 6 ಗ್ರಹಗಳ ಶುಭ ಫಲ! ಉಳಿದ ರಾಶಿಗಳ ಫಲಾಫಲವೇನು?
ನವೆಂಬರ್ ಕೊನೆಯ ವಾರ ಹೇಗಿರಲಿದೆ ನಿಮ್ಮ ರಾಶಿ ಭವಿಷ್ಯ? ಇಲ್ಲಿದೆ ನೋಡಿ
ನವೆಂಬರ್ ಕೊನೆಯ ವಾರ ಹೇಗಿರಲಿದೆ ನಿಮ್ಮ ರಾಶಿ ಭವಿಷ್ಯ? ಇಲ್ಲಿದೆ ನೋಡಿ
ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ