ಹಾಸನ: ಹೃದಯಾಘಾತದಿಂದ ಸಬ್‌ಇನ್ಸ್‌ಪೆಕ್ಟರ್ ಮಾದನಾಯಕ್ (52) ಮೃತಪಟ್ಟಿದ್ದಾರೆ. ಹಾಸನ ನಗರಠಾಣೆ ಅಪರಾಧ ವಿಭಾಗದ ಸಬ್‌ಇನ್ಸ್‌ಪೆಕ್ಟರ್ ಆಗಿದ್ದ ಮಾದನಾಯಕ್ ಪ್ರಕರಣವೊಂದರ ಆರೋಪಿಗಳನ್ನು ಕೋರ್ಟ್‌ಗೆ ಹಾಜರುಪಡಿಸಿ ನಂತರ ಜೈಲಿಗೆ ಬಿಟ್ಟು ಮನೆಗೆ ತೆರಳಿದ್ದರು. ಮನೆಯಲ್ಲಿ ಸ್ನಾನ ಮಾಡುತ್ತಿದ್ದ ವೇಳೆ ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ಸಬ್‌ಇನ್ಸ್‌ಪೆಕ್ಟರ್ ನಿಧನಕ್ಕೆ ಜಿಲ್ಲಾ ಪೊಲೀಸ್ ಇಲಾಖೆ ಕಂಬನಿ ಮಿಡಿದಿದೆ.
ಜೀವನದಲ್ಲಿ ಜಿಗುಪ್ಸೆಗೊಂಡು ವ್ಯಕ್ತಿ ನೇಣಿಗೆ ಶರಣು
ವಿಜಯಪುರ: ಜೀವನದಲ್ಲಿ ಜಿಗುಪ್ಸೆಗೊಂಡು ವ್ಯಕ್ತಿ ನೇಣಿಗೆ ಶರಣಾದ ಘಟನೆ ಬಸವನಬಾಗೇವಾಡಿ ತಾಲೂಕಿನ ದೇಗಿನಾಳ ಗ್ರಾಮದಲ್ಲಿ ನಡೆದಿದೆ. ಸುರೇಶ ಮಾಕೊಂಡ (44) ಮನೆಯಲ್ಲಿ ಯಾರು ಇಲ್ಲದ ಸಮಯ ನೋಡಿ ನೇಣಿಗೆ ಶರಣಾಗಿದ್ದಾರೆ. ಮನಗೂಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಕಾಲುವೆಯಲ್ಲಿ ಈಜಲು ತೆರಳಿದ್ದ ಇಬ್ಬರು ಯುವಕರು ಸಾವು
ಚಾಮರಾಜನಗರ: ಕಾಲುವೆಯಲ್ಲಿ ಈಜಲು ತೆರಳಿದ್ದ ಇಬ್ಬರು ಯುವಕರು ಸಾವನ್ನಪ್ಪಿರುವ ಘಟನೆ ಕೊಳ್ಳೇಗಾಲ ತಾಲೂಕಿನ ಚಿಕ್ಕಲ್ಲೂರು ಗ್ರಾಮದಲ್ಲಿ ನಡೆದಿದೆ. ಚಂದ್ರು(19), ಸುನಿಲ್(27) ಮೃತ ದುರ್ದೈವಿಗಳು. ಮೃತರು ಮಂಡ್ಯ ಜಿಲ್ಲೆಯ ಹಲಗೂರು ನಿವಾಸಿಗಳು ಎಂದು ತಿಳಿದು ಬಂದಿದೆ. ಯುವಕರು ಕುಟುಂಬದವರ ಜತೆ ದೇಗುಲಕ್ಕೆ ಬಂದಿದ್ದಾಗ ಪೂಜೆ ನಂತರ ಕಾಲುವೆಯಲ್ಲಿ ಈಜಲು ತೆರಳಿದ್ದಾಗ ದುರಂತ ಸಂಭವಿಸಿದೆ. ಕೊಳ್ಳೇಗಾಲ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಜಲಪಾತದ ಬಳಿ ಸೆಲ್ಫಿ ತೆಗೆದುಕೊಳ್ಳಲು ಹೋಗಿ ಕಾಲು ಜಾರಿ ಬಿದ್ದು ಯುವಕ ಸಾವು
ರಾಮನಗರ: ಕನಕಪುರ ತಾಲ್ಲೂಕಿನ ಚುಂಚಿಫಾಲ್ಸ್ ಬಳಿ ಯುವಕ ಸೆಲ್ಫಿ ತೆಗೆದುಕೊಳ್ಳಲು ಹೋಗಿ ಕಾಲು ಜಾರಿ ಬಿದ್ದು ಸಾವನ್ನಪ್ಪಿದ್ದಾನೆ. ಪ್ರವೀಣ್ ಚಂದ್ರ (26) ಮೃತ ಯುವಕ. ಮೃತ ಯುವಕ ಬೆಂಗಳೂರಿನ ಶಂಕರಮಠದ ನಿವಾಸಿಯಾಗಿದ್ದು, ಬೆಂಗಳೂರಿನಲ್ಲಿ ಖಾಸಗಿ ಕಂಪನಿಯಲ್ಲಿ ಉದ್ಯೋಗಿಯಾಗಿದ್ದನು. ಪ್ರವೀಣ್ ಚಂದ್ರ ಭಾನುವಾರ ತನ್ನ ಇಬ್ಬರು ಸ್ನೇಹಿತರ ಜೊತೆ ಚುಂಚಿಫಾಲ್ಸ್ಗೆ ಬಂದಿದ್ದನು.
ಈ ವೇಳೆ ಅಪಾಯದ ಸ್ಥಳದಲ್ಲಿ ಸೆಲ್ಪಿ ಕ್ಲಿಕ್ಕಿಸಿಕೊಳ್ಳಲು ಹೋಗಿ ಕಾಲು ಚಾರಿ ಬಿದ್ದು ಸಾವನ್ನಪ್ಪಿದ್ದಾನೆ. ಇಂದು ಚುಂಚಿಪಾಲ್ಸ್ ನಿಂದ ಒಂದು ಕಿಲೋಮೀಟರ್ ದೂರದಲ್ಲಿದೆ ಮೃತ ದೇಹ ಪತ್ತೆಯಾಗಿದೆ. ಸಾತನೂರು ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Published On - 9:25 pm, Tue, 16 August 22