Hassan: ತರಕಾರಿ ಅಂಗಡಿಯಲ್ಲೂ ಮದ್ಯ ಮಾರಾಟಕ್ಕೆ ಅವಕಾಶ ನೀಡಿ; ಅಬಕಾರಿ ಅಧಿಕಾರಿಗಳ ವಿರುದ್ಧ ಶಾಸಕ ಶಿವಲಿಂಗೇಗೌಡ ಗರಂ

ಸಿಎಲ್​-7ನಲ್ಲಿ ನಿಯಮ ಉಲ್ಲಂಘನೆ ಮಾಡಿದ್ದಕ್ಕೆ ಹಾಸನದ ದಿಶಾ ಸಭೆಯಲ್ಲಿ ಅಬಕಾರಿ ಇಲಾಖೆ ಅಧಿಕಾರಿಗಳನ್ನು ಸಂಸದ ಪ್ರಜ್ವಲ್ ರೇವಣ್ಣ ಮತ್ತು ಶಾಸಕ ಶಿವಲಿಂಗೇಗೌಡ ಅವರು ತರಾಟೆಗೆ ತೆಗೆದುಕೊಂಡರು.

Hassan: ತರಕಾರಿ ಅಂಗಡಿಯಲ್ಲೂ ಮದ್ಯ ಮಾರಾಟಕ್ಕೆ ಅವಕಾಶ ನೀಡಿ; ಅಬಕಾರಿ ಅಧಿಕಾರಿಗಳ ವಿರುದ್ಧ ಶಾಸಕ ಶಿವಲಿಂಗೇಗೌಡ ಗರಂ
ದಿಶಾ ಸಭೆಯಲ್ಲಿ ಶಾಸಕ ಶಿವಲಿಂಗೇಗೌಡ ಮತ್ತು ಸಂಸದ ಪ್ರಜ್ವಲ್ ರೇವಣ್ಣ
Follow us
TV9 Web
| Updated By: Rakesh Nayak Manchi

Updated on:Feb 01, 2023 | 9:58 PM

ಹಾಸನ: ಲಾಡ್ಜ್​ನಲ್ಲಿ ಅಕ್ರಮ ಮದ್ಯ ಮಾರಾಟದ ವಿಚಾರವಾಗಿ ಅಬಕಾರಿ ಅಧಿಕಾರಿಗಳನ್ನು (Excise officials) ಸಂಸದ ಪ್ರಜ್ವಲ್ ರೇವಣ್ಣ (Prajwal Revanna) ತೀವ್ರ ತರಾಟೆಗೆ ತೆಗೆದುಕೊಂಡರು. ದಿಶಾ ಸಭೆಯಲ್ಲಿ (Disha Meeting) ಮದ್ಯ ಮಾರಾಟದ ಬಗ್ಗೆ ಬಿಸಿ ಬಿಸಿ ಚರ್ಚೆ ನಡೆದಿದ್ದು, ಸಿಎಲ್​-7ನಲ್ಲಿ ನಿಯಮ ಉಲ್ಲಂಘನೆ ಮಾಡಿದ ಹಿನ್ನಲೆ ಅಧಿಕಾರಿಗಳ ವಿರುದ್ಧ ಸಂಸದರು ಗರಂ ಆದರು. ಈ ವೇಳೆ ಸಂಸದ ಪ್ರಜ್ವಲ್ ಮಾತಿಗೆ ದನಿಗೂಡಿಸಿದ ಶಾಸಕ ಶಿವಲಿಂಗೇಗೌಡ (MLA Shivalingegowda), ಜನರನ್ನು ಯಾಮಾರಿಸುತ್ತಿದ್ದೀರಿ, ನಮ್ಮನ್ನು ಏನು ಕುರಿಗಳು ಅಂತಾ ತಿಳಿದುಕೊಂಡಿದ್ದಿರೇನ್ರೀ ಎಂದು ತೀವ್ರ ತರಾಟೆಗೆ ತೆಗೆದುಕೊಂಡರು.

ಲಾಡ್ಜ್​ನಲ್ಲಿ ಮದ್ಯ ಸೇವನೆ ಮಾಡುತ್ತಿರುವಾಗ ಅಕ್ರಮವಾಗಿ ಮಾರಾಟ ಮಾಡುತ್ತಿರುವ ಆರೋಪದ ಬಗ್ಗೆ ಮಾತನಾಡಿದ ಶಾಸಕರು, ನಿಮಗೆ ನಾಚಿಕೆ ಆಗಲ್ವಾ? ಇಷ್ಟೆಲ್ಲಾ ಮಾಡುವುದಾದರೆ ತರಕಾರಿ ಅಂಗಡಿಯಲ್ಲೂ ಅವಕಾಶ ನೀಡಿ. ಎಷ್ಟು ಬಾರ್ ತೆಗೆದಿದ್ದೇವೆ ಎಂದು ಜಾಹೀರಾತು ನೀಡಿ ಎಂದು ಆಕ್ರೋಶ ವ್ಯಕ್ತಪಡಿಸಿದರು. ಹೊಸ ಬಾರ್​ ತೆರೆಯುವುದನ್ನು ತಡೆಯದಿದ್ದರೆ ರಾಜ್ಯ ಹಾಳಾಗಿಹೋಗುತ್ತದೆ. ಬಾಟಲಿಗೆ ಸಿರೆಂಜ್ ಹಾಕಿ ಎಳೀತಾರೆ, ಅದಕ್ಕೆ ಸ್ಪಿರಿಟ್ ತುಂಬಿಸುತ್ತಾರೆ. ಅದೂ ಒರಿಜಿನಲ್ ಎಣ್ಣೆ ಮಾರಲ್ಲ ಎಲ್ಲಾ ಡ್ಲೂಪ್ಲಿಕೇಟ್ ಎಣ್ಣೆ ಮಾರಾಟ ಮಾಡುತ್ತಿದ್ದಾರೆ. ಸರ್ಕಾರಕ್ಕೆ ಆದಾಯ ಬರುತ್ತದೆ ಎಂದು ಜನರಿಗೆ ವಿಷ ಕುಡಿಸಬೇಡಿ. ಡೂಪ್ಲಿಕೇಟ್​ ಎಣ್ಣೆ ಕುಡಿಸುವ ಬದಲು ವಿಷ ಕುಡಿಸಿ ಎಂದು ಆಕ್ರೋಶ ಹೊರಹಾಕಿದರು.

ಇದನ್ನೂ ಓದಿ: ಮಂಗಳೂರಿನಲ್ಲಿ ನಟಿ ಸಾನ್ಯ ಕಿರಿಕ್ ವಿಚಾರ, ಅಪಸ್ವರ ಎತ್ತಿದವರ ವಿರುದ್ಧ ದೇವರ ಮೊರೆ ಹೋದ ಕಂಬಳ‌‌ ಸಮಿತಿ

ಸಿಎಲ್ 7 ಬಾರ್ ಹೆಚ್ಚಳದಿಂದ ಜನರಿಗೆ ಸಮಸ್ಯೆಯಾಗುತ್ತಿರುವ ಆರೋಪ ಹಾಸನ ಜಿಲ್ಲೆಯಲ್ಲಿ ಕೇಳಿಬಂದಿದೆ. ಈ ಬಗ್ಗೆ ಅಸಮಾಧಾನ ಹೊರಹಾಕಿದ ಸಂಸದ ಮತ್ತು ಶಾಸಕರು, ಅಬಕಾರಿ ಇಲಾಖೆ ಅದಿಕಾರಿಗಳಿಗೆ ಸಖತ್ ಕ್ಲಾಸ್ ತೆಗೆದುಕೊಂಡರು. ಅಲ್ಲದೆ, ಜಿಲ್ಲೆಯಲ್ಲಿ ಎಷ್ಟು ಬಾರ್ ಓಪನ್ ಆಗಿದೆ, ಎಷ್ಟು ಮಾರಾಟ ಆಗಿದೆ ಎಂಬುದರ ಬಗ್ಗೆ ಮಾಹಿತಿ ಕೊಡಿ ಎಂದು ಅಧಿಕಾರಿಗಳನ್ನು ತಾಕೀತು ಮಾಡಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 9:54 pm, Wed, 1 February 23

ನಿನ್ನ ರೌಡಿಸಂ ನನ್ನ ಹತ್ರ ಬೇಡ: ರಜತ್​ಗೆ ಖಡಕ್ ಆವಾಜ್ ಹಾಕಿದ ಚೈತ್ರಾ
ನಿನ್ನ ರೌಡಿಸಂ ನನ್ನ ಹತ್ರ ಬೇಡ: ರಜತ್​ಗೆ ಖಡಕ್ ಆವಾಜ್ ಹಾಕಿದ ಚೈತ್ರಾ
ಐತಿಹಾಸಿಕ ಶತಕ ಸಿಡಿಸಿದ ಮಗನನ್ನು ತಬ್ಬಿ ಕಣ್ಣೀರಿಟ್ಟ ನಿತೀಶ್ ಅಪ್ಪ-ಅಮ್ಮ
ಐತಿಹಾಸಿಕ ಶತಕ ಸಿಡಿಸಿದ ಮಗನನ್ನು ತಬ್ಬಿ ಕಣ್ಣೀರಿಟ್ಟ ನಿತೀಶ್ ಅಪ್ಪ-ಅಮ್ಮ
70 ಅಡಿ ಸೇತುವೆ ಮೇಲಿಂದ ಗಂಗಾ ನದಿಗೆ ಹಾರಿದ ಯುವತಿ; ವಿಡಿಯೋ ಇಲ್ಲಿದೆ
70 ಅಡಿ ಸೇತುವೆ ಮೇಲಿಂದ ಗಂಗಾ ನದಿಗೆ ಹಾರಿದ ಯುವತಿ; ವಿಡಿಯೋ ಇಲ್ಲಿದೆ
ಮೋಸ ಮಾಡಿದವರಿಗೆ ಕರ್ಮವಾಗಿ ಕಾಡಲು ಬಂದ ಸುದೀಪ್
ಮೋಸ ಮಾಡಿದವರಿಗೆ ಕರ್ಮವಾಗಿ ಕಾಡಲು ಬಂದ ಸುದೀಪ್
ಹಿಮಾವೃತ ರಸ್ತೆಯಿಂದ ಜಾರಿ ಪ್ರಪಾತಕ್ಕೆ ಬಿದ್ದ ಟ್ರಕ್
ಹಿಮಾವೃತ ರಸ್ತೆಯಿಂದ ಜಾರಿ ಪ್ರಪಾತಕ್ಕೆ ಬಿದ್ದ ಟ್ರಕ್
ಹಾಸನ ಸರ್ಕಾರಿ ಶಾಲೆಯಲ್ಲಿ ಶಿಕ್ಷಕರ ಕೊರತೆ: ವಿದ್ಯಾರ್ಥಿಯ ವಿಡಿಯೋ ವೈರಲ್
ಹಾಸನ ಸರ್ಕಾರಿ ಶಾಲೆಯಲ್ಲಿ ಶಿಕ್ಷಕರ ಕೊರತೆ: ವಿದ್ಯಾರ್ಥಿಯ ವಿಡಿಯೋ ವೈರಲ್
ಗೋಕರ್ಣ, ಮುರುಡೇಶ್ವರಕ್ಕೆ ಪ್ರವಾಸಿಗರ ದಂಡು: ಹೊನ್ನಾವರದಲ್ಲಿ ಟ್ರಾಫಿಕ್ ಜಾಂ
ಗೋಕರ್ಣ, ಮುರುಡೇಶ್ವರಕ್ಕೆ ಪ್ರವಾಸಿಗರ ದಂಡು: ಹೊನ್ನಾವರದಲ್ಲಿ ಟ್ರಾಫಿಕ್ ಜಾಂ
‘ಡೆವಿಲ್’ ಶೂಟಿಂಗ್ ಆರಂಭದ ಬಗ್ಗೆ ಮಾಹಿತಿ ನೀಡಿದ ದರ್ಶನ್ ಸಹೋದರ ದಿನಕರ್
‘ಡೆವಿಲ್’ ಶೂಟಿಂಗ್ ಆರಂಭದ ಬಗ್ಗೆ ಮಾಹಿತಿ ನೀಡಿದ ದರ್ಶನ್ ಸಹೋದರ ದಿನಕರ್
ಚಿನ್ನ ವಂಚನೆ ಕೇಸ್​ನಲ್ಲಿ ಹೆಸರು: ಡಿಕೆ ಸುರೇಶ್ ಹೇಳಿದ್ದೇನು ನೋಡಿ
ಚಿನ್ನ ವಂಚನೆ ಕೇಸ್​ನಲ್ಲಿ ಹೆಸರು: ಡಿಕೆ ಸುರೇಶ್ ಹೇಳಿದ್ದೇನು ನೋಡಿ
ಮಾಜಿ ಪಿಎಂ ಮನಮೋಹನ್ ಸಿಂಗ್​ಗೆ ಅಂತಿಮ ನಮನ ಸಲ್ಲಿಸಿದ ಪ್ರಧಾನಿ ಮೋದಿ
ಮಾಜಿ ಪಿಎಂ ಮನಮೋಹನ್ ಸಿಂಗ್​ಗೆ ಅಂತಿಮ ನಮನ ಸಲ್ಲಿಸಿದ ಪ್ರಧಾನಿ ಮೋದಿ