ಹಾಸನ ಗುತ್ತಿಗೆ ವೈದ್ಯರಿಗೆ ಆರು ತಿಂಗಳಿಂದ ಸಂಬಳ ನೀಡದ ಸರ್ಕಾರ: ಒಪಿಡಿ ಬಂದ್, ಪ್ರತಿಭಟನೆ
ಹಾಸನ ಜಿಲ್ಲೆಯಲ್ಲಿ 51ಕ್ಕೂ ಹೆಚ್ಚು ಗುತ್ತಿಗೆ ಆಧಾರದ ವೈದ್ಯರು ಆರು ತಿಂಗಳಿಂದ ಸಂಬಳ ಪಡೆಯದೆ ಇರುವುದರಿಂದ ಅನಿರ್ದಿಷ್ಟಾವಧಿ ಮುಷ್ಕರ ಆರಂಭಿಸಿದ್ದಾರೆ. ಇದರಿಂದಾಗಿ ಎಲ್ಲಾ ಒಪಿಡಿ ಬಂದ್ ಮಾಡಲಾಗಿದೆ. ಸಂಬಳ ನೀಡುವವರೆಗೂ ಕರ್ತವ್ಯಕ್ಕೆ ಹಾಜರಾಗುವುದಿಲ್ಲ ಎಂದು ವೈದ್ಯರು ಮತ್ತು ಸಿಬ್ಬಂದಿಗಳು ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ.

ಹಾಸನ, ಫೆಬ್ರವರಿ 05: ಪ್ರಾಥಮಿಕ ಹಾಗೂ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಕೆಲಸ ಮಾಡುವ ವೈದ್ಯರಿಗೆ ಸಂಬಳ (salary) ನೀಡದೆ ಇಂದಿನಿಂದ ಒಪಿಡಿ ಬಂದ್ ಮಾಡಿದ ವೈದ್ಯರು ಅನಿರ್ದಿಷ್ಟಾವಧಿ ಹೊರಾಟ ಆರಂಭಿಸಿದ್ದಾರೆ. ಸುಮಾರು 400 ಸಿಬ್ಬಂದಿಗೆ ಸಂಬಳ ನೀಡಿಲ್ಲ ಎಂದು ಆರೋಪ ಮಾಡಿದ್ದು, ಸಂಬಳ ನೀಡುವವರೆಗೆ ಕರ್ತವ್ಯಕ್ಕೆ ಹಾಜರಾಗುವುದಿಲ್ಲ ಎಂದು ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ.
ಸರ್ಕಾರ ಗುತ್ತಿಗೆ ವೈದ್ಯರಿಗೆ ಆರು ತಿಂಗಳಿಂದ ಸಂಬಳ ನೀಡಿಲ್ಲ. ತಿಂಗಳಿಗೆ 60 ಸಾವಿರ ರೂ. ಸಂಬಳ ನಿಗದಿ ಮಾಡಲಾಗಿದೆ. ಆರು ತಿಂಗಳಿಂದ ಸಂಬಳ ನೀಡಿಲ್ಲ ಎಂದು ಡಿಎಚ್ಓ ಕಛೇರಿ ಎದುರು ಪ್ರತಿಭಟನೆ ಮಾಡಲಾಗಿದೆ.
ಇದನ್ನೂ ಓದಿ: ಹಾಸನ: ವೇಗವಾಗಿ ಬಂದು ವಿದ್ಯುತ್ ಕಂಬಕ್ಕೆ ಗುದ್ದಿದ ಕಾರು, ಭಯಾನಕ ವಿಡಿಯೋ ನೋಡಿ
ಜಿಲ್ಲೆಯಲ್ಲಿ ಗ್ರಾಮೀಣ ಭಾಗದಲ್ಲಿ ಕರ್ತವ್ಯ ನಿರ್ವಹಣೆ ಮಾಡುತ್ತಿರುವ 51 ವೈದ್ಯರಿಂದ ಕರ್ತವ್ಯಕ್ಕೆ ಬಹಿಷ್ಕಾರ ಹಾಕಿದ್ದಾರೆ. ವೈದ್ಯರ ಜೊತೆಗೆ ಗುತ್ತಿಗೆ ಆಧಾರದಲ್ಲಿ ಕೆಲಸ ಮಾಡುವ ಸಿಬ್ಬಂದಿಗೂ ಸಂಬಳ ನೀಡದೆ ಸಮಸ್ಯೆ ಉಂಟಾಗಿದೆ.
ಸಂಬಳವಿಲ್ಲದೇ ಮೆಡಿಕಲ್ ಕಾಲೇಜು ಸಿಬ್ಬಂದಿ ಪರದಾಟ
ಸಂಬಳವಿಲ್ಲದೇ ಹಾವೇರಿ ಮೆಡಿಕಲ್ ಕಾಲೇಜು ಸಿಬ್ಬಂದಿ ಪರದಾಡುತ್ತಿದ್ದಾರೆ. ಸಂಬಳಕ್ಕಾಗಿ ಸರ್ಕಾರದ ಮೊರೆ ಹೋಗಿದ್ದಾರೆ. ಗ್ಯಾರಂಟಿ ಯೋಜನೆಗಳ ಜಾರಿ ಬಳಿಕ ಸರ್ಕಾರದ ಒಂದಿಲ್ಲೊಂದು ಯೋಜನೆಗಳಿಗೆ ಅನುದಾನದ ಕೊರತೆ ಎದುರಾಗುತ್ತಲೇ ಇದೆ. ಈಗ ಮೆಡಿಕಲ್ ಕಾಲೇಜು ಸಿಬ್ಬಂದಿಗೆ ಸಂಬಳ ಕೊಡುವುದಕ್ಕೆ ಸರ್ಕಾರದ ಬಳಿ ಹಣ ಇಲ್ಲವಾ ಎಂಬ ಚರ್ಚೆ ಆರಂಭವಾಗಿದೆ.
ಹಾವೇರಿ ಮೆಡಿಕಲ್ ಕಾಲೇಜು ಸಿಬ್ಬಂದಿಗೆ 3 ತಿಂಗಳಿಂದ ಸಂಬಳನೇ ಆಗಿಲ್ಲ. ಹಾವೇರಿ ಜಿಲ್ಲಾಸ್ಪತ್ರೆ ಹಾಗೂ ಹಾವೇರಿ ಮೆಡಿಕಲ್ ಕಾಲೇಜು ಸಿಬ್ಬಂದಿಗೆ ವೇತನ ಪಾವತಿಸಲು ಸರಕಾರಕ್ಕೆ ಅನುದಾನದ ಕೊರತೆ ಉಂಟಾಗಿದೆಯಾ ಎಂಬ ಮಾತು ಇತ್ತೀಚೆಗೆ ಕೇಳಿಬಂದಿತ್ತು. ಮೂರು ತಿಂಗಳಿಂದ ಸಿಬ್ಬಂದಿಗೆ ವೇತನವನ್ನೇ ನೀಡಿಲ್ಲ.
ಇದನ್ನೂ ಓದಿ: ಏ ಪಾಂಚಾಲಿ! ಕುರುಕ್ಷೇತ್ರ ನಾಟಕದ ಭೀಮನ ಪಾತ್ರದ ಡೈಲಾಗ್ ಹೇಳಿದ ಮಿಂಚಿದ ಶಾಸಕ ಶಿವಲಿಂಗೇಗೌಡ
ವೇತನಕ್ಕಾಗಿಯೇ 10.68 ಕೋಟಿ ರೂ. ಅನುದಾನ ಬಿಡುಗಡೆ ಆಗಬೇಕಿದೆ. 178ಕ್ಕೂ ಹೆಚ್ಚು ಸಿಬ್ಬಂದಿಗಳಿಗೆ ಕಳೆದ ಮೂರು ತಿಂಗಳಿಂದ ಸಂಬಳ ಇಲ್ಲದ ಹಿನ್ನಲೆ ಸಿಬ್ಬಂದಿಗೆ ಆರ್ಥಿಕ ಸಂಕಷ್ಟ ಎದುರಾಗಿದೆ. ಈ ಕುರಿತು ಹಾವೇರಿ ಜಿಲ್ಲಾ ಉಸ್ತುವಾರಿ ಸಚಿವ ಶಿವಾನಂದ ಪಾಟೀಲ್ಗೆ ಪತ್ರ ಬರೆದಿದ್ದ ವೈದ್ಯಕೀಯ ಸಿಬ್ಬಂದಿ ಪತ್ರದಲ್ಲಿ ತಮ್ಮ ನೋವು ಹೇಳಿಕೊಂಡಿದ್ದರು.
ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.
Published On - 3:05 pm, Wed, 5 February 25