AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಾಸನ ಎಸ್​ಪಿ ಸಮ್ಮುಖದಲ್ಲೇ ಕಾನ್ಸ್​​ಟೇಬಲ್ ಮೇಲೆ ಡಿವೈಎಸ್ಪಿ ಹಲ್ಲೆ, ಆಸ್ಪತ್ರೆಗೆ ದಾಖಲು

ಪೊಲೀಸ್ ಕಾನ್ಸ್​​ಟೇಬಲ್ ಮೇಲೆ ಹಾಸನ ಉಪವಿಭಾಗದ ಉಪ ಪೊಲೀಸ್ ವರಿಷ್ಠಾಧಿಕಾರಿ (ಡಿವೈಎಸ್ಪಿ) ಹಲ್ಲೆ ನಡೆಸಿರುವ ಆರೋಪ ಕೇಳಿಬಂದಿದ್ದು, ಹಲ್ಲೆಯಿಂದ ಗಾಯಗೊಂಡ ಕಾನ್ಸ್​​ಟೇಬಲ್ ವೇಣುಗೋಪಾಲ್ ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ಹಾಸನ ಎಸ್​ಪಿ ಸಮ್ಮುಖದಲ್ಲೇ ಕಾನ್ಸ್​​ಟೇಬಲ್ ಮೇಲೆ ಡಿವೈಎಸ್ಪಿ ಹಲ್ಲೆ, ಆಸ್ಪತ್ರೆಗೆ ದಾಖಲು
ಹಾಸನ ಎಸ್​ಪಿ ಸಮ್ಮುಖದಲ್ಲೇ ಕಾನ್ಸ್​​ಟೇಬಲ್ ಮೇಲೆ ಡಿವೈಎಸ್ಪಿ ಹಲ್ಲೆ, ಆಸ್ಪತ್ರೆಗೆ ದಾಖಲು
TV9 Web
| Edited By: ಸಾಧು ಶ್ರೀನಾಥ್​|

Updated on:Jun 24, 2022 | 6:53 PM

Share

ಹಾಸನ: ಕ್ಷುಲ್ಲಕ‌ ಕಾರಣಕ್ಕೆ ಪೊಲೀಸ್ ಕಾನ್ಸ್​​ಟೇಬಲ್ ಮೇಲೆ ಹಾಸನ ಉಪವಿಭಾಗದ ಉಪ ಪೊಲೀಸ್ ವರಿಷ್ಠಾಧಿಕಾರಿ (ಡಿವೈಎಸ್ಪಿ) ಹಲ್ಲೆ ನಡೆಸಿರುವ ಆರೋಪ ಕೇಳಿಬಂದಿದ್ದು, ಹಲ್ಲೆಯಿಂದ ಗಾಯಗೊಂಡ ಕಾನ್ಸ್​​ಟೇಬಲ್ ವೇಣುಗೋಪಾಲ್ ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ನಿನ್ನೆ ಹಾಸನ ನಗರ ಠಾಣೆಗೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ (ಎಸ್ಪಿ) ಭೇಟಿ ವೇಳೆ, ಎಸ್ಪಿ ಸಮ್ಮುಖದಲ್ಲೇ ಹಲ್ಲೆ ನಡೆದಿದೆ.

ಹಾಸನ ಉಪವಿಭಾಗದ ಡಿವೈಎಸ್ಪಿ ಉದಯಭಾಸ್ಕರ್ ವಿರುದ್ದ ಹಲ್ಲೆ ಆರೋಪ ಕೇಳಿಬಂದಿದೆ. ಗುರುವಾರ ಸಂಜೆ ಹಾಸನ ನಗರ ಠಾಣೆಯಲ್ಲಿ ಘಟನೆ ನಡೆದಿದೆ. ಎಸ್ಪಿ ಠಾಣೆ ಭೇಟಿ ಬೇಳೆ, ರೈಫಲ್ ಕ್ಲೀನ್ ಮಾಡಿ ತೋರಿಸಲು ಕಾನ್ಸ್​​ಟೇಬಲ್ ವೇಣುಗೆ ಡಿವೈಎಸ್ಪಿ ಉದಯಭಾಸ್ಕರ್ ಹೇಳಿದ್ದಾರೆ. ಈ ವೇಳೆ ರೈಫಲ್ ಕ್ಲೀನ್ ಹಂತಗಳಲ್ಲಿ ವೇಣುಗೋಪಾಲ್ ತಪ್ಪು ಮಾಡಿದ್ದಾರೆ ಎನ್ನಲಾಗಿದೆ. ಅದಕ್ಕೆ ಡಿವೈಎಸ್ಪಿಯಿಂದ ಹಲ್ಲೆ ನಡೆದಿದೆ. ಹಲ್ಲೆಯಿಂದ ಕುಸಿದು ಬಿದ್ದಿದ್ದ ವೇಣುಗೋಪಾಲ್ ಅವರನ್ನು ತಕ್ಷಣ ಹಾಸನದ ವೈದ್ಯಕೀಯ ಆಸ್ಪತ್ರೆಗೆ ಕರೆದೊಯ್ದು ಚಿಕಿತ್ಸೆ ನೀಡಲಾಗಿದೆ. ಹಾಸನ ನಗರ ಬಡಾವಣೆ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಬೆಂಗಳೂರು ಪೊಲೀಸ್ ಕಾನ್ಸ್‌ಟೇಬಲ್ ವರ್ಗಾವಣೆ ಪ್ರಕ್ರಿಯೆಯಲ್ಲಿ ಬದಲಾವಣೆ; ಒಂದೇ ಸ್ಥಳದಲ್ಲಿ ಕನಿಷ್ಠ ಸೇವಾವಧಿ 6 ವರ್ಷದಿಂದ 5 ವರ್ಷಕ್ಕೆ ಬದಲಾಯಿಸಿ ಆದೇಶ

ಬೆಂಗಳೂರು: ನಗರದಲ್ಲಿ ಪೊಲೀಸ್ ಕಾನ್ಸ್‌ಟೇಬಲ್ ವರ್ಗಾವಣೆ(Police Constable Transfer) ಪ್ರಕ್ರಿಯೆಯಲ್ಲಿ ಬದಲಾವಣೆ ತರಲಾಗಿದೆ. ಒಂದೇ ಸ್ಥಳದಲ್ಲಿ ಕನಿಷ್ಠ ಸೇವಾವಧಿ 6 ವರ್ಷದಿಂದ 5 ವರ್ಷಕ್ಕೆ ಬದಲಾಯಿಸಿ ಬೆಂಗಳೂರು ನಗರ ಪೊಲೀಸ್ ಆಡಳಿತ ವಿಭಾಗದ ಡಿಸಿಪಿ ನಿಶಾ ಜೇಮ್ಸ್ ಆದೇಶ ಹೊರಡಿಸಿದ್ದಾರೆ. ನಗರದ ಕಮಿಷನರೇಟ್ ವ್ಯಾಪ್ತಿಯ ಕಾನ್ಸ್‌ಟೇಬಲ್ ಗಳಿಗೆ ಈ ನೂತನ ಆದೇಶ ಅನ್ವಯವಾಗಲಿದೆ. ಒಂದೇ ಕಡೆಗಳಲ್ಲಿ ಹಲವು ವರ್ಷಗಳಿಂದ ಕಾನ್ಸ್‌ಟೇಬಲ್ಸ್ ಕೆಲಸ ಮಾಡುತ್ತಿದ್ದಾರೆ. ಈ ಹಿನ್ನೆಲೆ ಕನಿಷ್ಠ 6 ವರ್ಷದಿಂದ 5 ವರ್ಷಕ್ಕೆ ಕಡಿತಗೊಳಿಸಿ ಆದೇಶ ಹೊರಡಿಸಲಾಗಿದೆ.

ಬೆಂಗಳೂರು ಜಿಲ್ಲಾಧಿಕಾರಿ ಕಚೇರಿ ಮೇಲೆ ಎಸಿಬಿ ದಾಳಿ ಪ್ರಕರಣ: ವಿಚಾರಣೆಗೊಳಪಟ್ಟ ಡಿಸಿ ಮಂಜುನಾಥ್

ಬೆಂಗಳೂರು: ಬೆಂಗಳೂರು ಜಿಲ್ಲಾಧಿಕಾರಿ ಕಚೇರಿ ಮೇಲೆ ಕಳೆದ ತಿಂಗಳು ಭ್ರಷ್ಟಾಚಾರ ನಿಗ್ರಹ ದಳದ (ಎಸಿಬಿ) ಅಧಿಕಾರಿಗಳು ದಾಳಿ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಡಿಸಿ ಮಂಜುನಾಥ್ ಅವರನ್ನು ಸಹ ವಿಚಾರಣೆಗೊಳಪಡಿಸಲಾಗಿದೆ. ಡಿ.ಸಿ. ಕಚೇರಿ ಮೇಲೆ ಎಸಿಬಿ ದಾಳಿ ಪ್ರಕರಣ ಸಂಬಂಧ ಎರಡು ದಿನಗಳ ಹಿಂದೆ ಮಂಜುನಾಥ್ ವಿಚಾರಣೆ ಎದುರಿಸಿದ್ದಾರೆ.

ಅರ್ಜಿ ಕ್ಲಿಯರ್ ಮಾಡಲು ಲಂಚಕ್ಕೆ ಬೇಡಿಕೆಯಿಟ್ಟ ಆರೋಪ ಮಂಜುನಾಥ್ ವಿರುದ್ಧ ಕೇಳಿ‌ಬಂದಿತ್ತು. ಮೇ 21ರಂದು ಜಿಲ್ಲಾಧಿಕಾರಿ ಕಚೇರಿ ಮೇಲೆ ಎಸಿಬಿ ಅಧಿಕಾರಿಗಳ ತಂಡವು ದಾಳಿ ನಡೆಸಿತ್ತು. ಉಪ ತಹಶೀಲ್ದಾರ್ ಮತ್ತು ಮ್ಯಾನೇಜರ್ ಮಹೇಶ್ ಗುತ್ತಿಗೆ ನೌಕರ ಚೇತನ್ ರನ್ನ ವಶಕ್ಕೆ ಪಡೆದಿತ್ತು. ದೂರುದಾರರಿಂದ 5 ಲಕ್ಷ ರೂಪಾಯಿ ಲಂಚ ಸ್ವೀಕರಿಸುತ್ತಿದ್ದಾಗಲೇ ವಶಕ್ಕೆ ಪಡೆಯಲಾಗಿತ್ತು. ಇದರಲ್ಲಿ ಮಂಜುನಾಥ್ ಪಾತ್ರದ ಕುರಿತು ಆರೋಪ ಕೇಳಿ ಬಂದ ಹಿನ್ನೆಲೆ ಎಸಿಬಿ ತನಿಖಾ ತಂಡವು ಅವರನ್ನು ವಿಚಾರಣೆಗೊಳಪಡಿಸಿದೆ.

Also Read:

ಸರ್ಕಾರಿ ಶಿಕ್ಷಕರ ಮಕ್ಕಳು ಕಡ್ಡಾಯವಾಗಿ ಕನ್ನಡ ಮಾಧ್ಯಮದಲ್ಲಿ ಕಲಿಯಬೇಕು, ಆಗಲೇ ಎಲ್ಲವೂ ಸರಿ ಹೋಗುವುದು -ಕಸಾಪ ರಾಜ್ಯಾಧ್ಯಕ್ಷ ನಾಡೋಜ ಮಹೇಶ ಜೋಶಿ

Also Read:

ಕಂಪ್ಲಿ ಕೋಟೆಯಲ್ಲಿ ಪಿರಂಗಿ ಗುಂಡುಗಳು ಪತ್ತೆ! ಅವು ಆದಿಲ್ ಶಾಹಿ ಕಾಲದ್ದು ಎಂದರು ಇತಿಹಾಸ ಸಂಶೋಧಕ ಕೋಲ್ಕಾರ್

Published On - 6:03 pm, Fri, 24 June 22

Follow Us
TV9 Web
TV9 Web

TV9 Kannada

Read More
ನಿಮ್ಮ ರಾಶಿಯ ಆರ್ಥಿಕ, ವೃತ್ತಿ ಜಾತಕ ಹೇಗಿದೆ?
ನಿಮ್ಮ ರಾಶಿಯ ಆರ್ಥಿಕ, ವೃತ್ತಿ ಜಾತಕ ಹೇಗಿದೆ?
ಮಂಗಳೂರಿಗೆ ಮರಳಿದ 'ಚಿನ್ನದ ಹುಡುಗಿ' ಪೂವಮ್ಮಗೆ ಅದ್ಧೂರಿ ಸ್ವಾಗತ
ಮಂಗಳೂರಿಗೆ ಮರಳಿದ 'ಚಿನ್ನದ ಹುಡುಗಿ' ಪೂವಮ್ಮಗೆ ಅದ್ಧೂರಿ ಸ್ವಾಗತ
ಆಷಾಢದಲ್ಲೂ ನವದಂಪತಿಯನ್ನು ಒಂದುಗೂಡಿಸುವ ಚಾಮರಾಜೇಶ್ವರ ಜಾತ್ರೆ
ಆಷಾಢದಲ್ಲೂ ನವದಂಪತಿಯನ್ನು ಒಂದುಗೂಡಿಸುವ ಚಾಮರಾಜೇಶ್ವರ ಜಾತ್ರೆ
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಪರೇಷನ್’
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಪರೇಷನ್’
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು
ಚೆನಾಬ್- ಅಂಜಿ ಸೇತುವೆ ಮೇಲೆ 100 ಕಿ.ಮೀ. ವೇಗದಲ್ಲಿ ಚಲಿಸಿದ ವಂದೇ ಭಾರತ್
ಚೆನಾಬ್- ಅಂಜಿ ಸೇತುವೆ ಮೇಲೆ 100 ಕಿ.ಮೀ. ವೇಗದಲ್ಲಿ ಚಲಿಸಿದ ವಂದೇ ಭಾರತ್