AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾಡಾನೆ ಹಾವಳಿಗೆ ಬ್ರೇಕ್ ಹಾಕುತ್ತಾ ರೈಲ್ವೆ ಹಳಿ ಬ್ಯಾರಿಕೇಡ್? ಹಾಸನ ಗಡಿಯಲ್ಲಿ 35 ಕಿಮೀ ಭದ್ರಕೋಟೆ ಸಿದ್ಧ!

ಹಾಸನ ಜಿಲ್ಲೆಯಲ್ಲಿ ಕಾಡಾನೆಗಳ ಹಾವಳಿ ತಡೆಯಲು ಕೊಡಗು ಗಡಿಯಲ್ಲಿ 35 ಕಿ.ಮೀ. ಉದ್ದದ ರೈಲ್ವೆ ಹಳಿ ಬ್ಯಾರಿಕೇಡ್ ನಿರ್ಮಾಣ ಪೂರ್ಣಗೊಂಡಿದೆ. ಇದರಿಂದ ಹೊಸ ಆನೆಗಳ ಆಗಮನಕ್ಕೆ ಬ್ರೇಕ್ ಬೀಳಲಿದ್ದರೂ, ಜಿಲ್ಲೆಯಲ್ಲಿರುವ 80ಕ್ಕೂ ಹೆಚ್ಚು ಆನೆಗಳ ಸ್ಥಳಾಂತರಕ್ಕೆ ಬೆಳೆಗಾರರು ಆಗ್ರಹಿಸಿದ್ದಾರೆ. ರೈಲ್ವೆ ಹಳಿ ಬ್ಯಾರಿಕೇಡ್ ಹೇಗೆ ಪ್ರಯೋಜನಕಾರಿ? ಎಲ್ಲೆಲ್ಲಿ ಇದನ್ನು ಹಾಕಲಾಗಿದೆ? ಇಲ್ಲಿದೆ ಮಾಹಿತಿ.

ಕಾಡಾನೆ ಹಾವಳಿಗೆ ಬ್ರೇಕ್ ಹಾಕುತ್ತಾ ರೈಲ್ವೆ ಹಳಿ ಬ್ಯಾರಿಕೇಡ್? ಹಾಸನ ಗಡಿಯಲ್ಲಿ 35 ಕಿಮೀ ಭದ್ರಕೋಟೆ ಸಿದ್ಧ!
ರೈಲ್ವೆ ಹಳಿ ಬ್ಯಾರಿಕೇಡ್Image Credit source: tv9
ಮಂಜುನಾಥ ಕೆಬಿ
| Edited By: |

Updated on: Apr 09, 2026 | 9:10 AM

Share

ಹಾಸನ, ಏಪ್ರಿಲ್ 9: ಕಳೆದ ಎರಡು ದಶಕಗಳಿಂದ ಹಾಸನ ಜಿಲ್ಲೆಯ ಮಲೆನಾಡು ಭಾಗದ ಜನರ ನಿದ್ದೆಗೆಡಿಸಿರುವ ಕಾಡಾನೆಗಳ ಸಮಸ್ಯೆಗೆ ಕೊನೆಗೂ ತಾಂತ್ರಿಕ ಪರಿಹಾರವೊಂದು ದಕ್ಕಿದೆ. ಕೊಡಗಿನಿಂದ ಹಾಸನಕ್ಕೆ (Hassan) ಲಗ್ಗೆಯಿಡುತ್ತಿದ್ದ ಆನೆ ಹಿಂಡುಗಳನ್ನು ತಡೆಯಲು ನಿರ್ಮಿಸಲಾಗುತ್ತಿದ್ದ ರೈಲ್ವೆ ಹಳಿ ಬ್ಯಾರಿಕೇಡ್ (Railway Track Barricade) ನಿರ್ಮಾಣ ಕಾರ್ಯ ಸಂಪೂರ್ಣಗೊಂಡಿದೆ. ಹಾಸನ ಜಿಲ್ಲೆಯ ಆಲೂರು, ಬೇಲೂರು ಮತ್ತು ಸಕಲೇಶಪುರ ತಾಲ್ಲೂಕುಗಳಲ್ಲಿ ಕಳೆದ 20 ವರ್ಷಗಳಲ್ಲಿ ಕಾಡಾನೆ ದಾಳಿಗೆ ಸುಮಾರು 80ಕ್ಕೂ ಹೆಚ್ಚು ಅಮಾಯಕರು ಪ್ರಾಣ ಕಳೆದುಕೊಂಡಿದ್ದಾರೆ. ಕೋಟ್ಯಂತರ ರೂಪಾಯಿ ಮೌಲ್ಯದ ಬೆಳೆ ನಾಶವಾಗಿದೆ. ಕೊಡಗಿನಿಂದ ವಲಸೆ ಬರುವ ಆನೆಗಳು ಹಾಸನ ಜಿಲ್ಲೆಯ ಕಾಫಿ ತೋಟಗಳಲ್ಲೇ ಬೀಡುಬಿಡುವುದು ಈ ಸಮಸ್ಯೆಗೆ ಮುಖ್ಯ ಕಾರಣವಾಗಿತ್ತು. ಇದನ್ನು ತಡೆಯಲು ಸರ್ಕಾರವು ಹಾಸನ ಮತ್ತು ಕೊಡಗು ಗಡಿಭಾಗದಲ್ಲಿ ಸುಮಾರು 35 ಕಿಲೋಮೀಟರ್ ಉದ್ದದ ರೈಲ್ವೆ ಬ್ಯಾರಿಕೇಡ್ ನಿರ್ಮಾಣಕ್ಕೆ ಚಾಲನೆ ನೀಡಿತ್ತು.

ಮಾಸ್ಟರ್ ಪ್ಲಾನ್ ಸಿದ್ಧ

ಆಲೂರು ಮತ್ತು ಸಕಲೇಶಪುರ ತಾಲ್ಲೂಕಿನ ಗಡಿಭಾಗದಲ್ಲಿ ಈ ಬ್ಯಾರಿಕೇಡ್ ನಿರ್ಮಾಣವಾಗಿದ್ದು, ಇದರಲ್ಲಿ ಆನೆಗಳ ಸಂಚಾರ ನಿಯಂತ್ರಿಸಲು 13 ಪ್ರಮುಖ ಗೇಟ್‌ಗಳನ್ನು ಅಳವಡಿಸಲಾಗಿದೆ. ವಿಶೇಷವಾಗಿ ಬೇಸಿಗೆ ಸಮಯದಲ್ಲಿ ಹೇಮಾವತಿ ಜಲಾಶಯದ ಹಿನ್ನೀರಿನ ಪ್ರದೇಶಗಳಾದ ಕಟ್ಟೆಪುರ, ಶಿರಗಾವರ ಮೂಲಕ ನೀರಿಗಾಗಿ ಬರುವ ಆನೆಗಳಿಗೆ ಇನ್ಮುಂದೆ ಈ ರೈಲ್ವೆ ಹಳಿಗಳ ತಡೆಗೋಡೆ ಅಡ್ಡಿಯಾಗಲಿದೆ.

ಕಾಫಿ ಬೆಳೆಗಾರರ ಆಗ್ರಹವೇನು?

ಬ್ಯಾರಿಕೇಡ್ ನಿರ್ಮಾಣವೇನೋ ಪೂರ್ಣಗೊಂಡಿದೆ, ಇದರಿಂದ ಕೊಡಗಿನಿಂದ ಹೊಸ ಆನೆಗಳು ಬರುವುದು ತಪ್ಪಬಹುದು. ಆದರೆ ಈಗಾಗಲೇ ಹಾಸನದ ಕಾಫಿ ತೋಟಗಳಲ್ಲಿ ಬೀಡುಬಿಟ್ಟಿರುವ 80ಕ್ಕೂ ಹೆಚ್ಚು ಆನೆಗಳ ಕಥೆಯೇನು? ಎಂಬುದು ಸ್ಥಳೀಯ ಬೆಳೆಗಾರರ ಪ್ರಶ್ನೆ. ನಾಡಿನಲ್ಲಿ ಬೀಡುಬಿಟ್ಟಿರುವ ಪುಂಡಾನೆಗಳನ್ನು ಸಂಪೂರ್ಣವಾಗಿ ಸ್ಥಳಾಂತರ ಮಾಡಬೇಕು ಅಥವಾ ಶ್ರೀಲಂಕಾ ಮಾದರಿಯಲ್ಲಿ ಆನೆಧಾಮ ನಿರ್ಮಾಣ ಮಾಡಿ ಶಾಶ್ವತ ಪರಿಹಾರ ನೀಡಬೇಕು ಎಂಬುದು ಜನರ ಒತ್ತಾಯವಾಗಿದೆ.

ಇದನ್ನೂ ಓದಿ: ಕಾಫಿಗೂ ತಟ್ಟಿದ ಯುದ್ಧದ ಬಿಸಿ! ರಫ್ತು ಸ್ಥಗಿತಗೊಂಡು ಕಂಗಾಲಾದ ಬೆಳೆಗಾರ; ಶೇ 20ರಷ್ಟು ಕುಸಿದ ದರ

ರೈಲ್ವೆ ಬ್ಯಾರಿಕೇಡ್ ನಿರ್ಮಾಣದ ಬೆನ್ನಲ್ಲೇ ಈಗ ಅರಣ್ಯ ಇಲಾಖೆಯು ನಾಡಿನಲ್ಲಿರುವ ಆನೆಗಳ ಸ್ಥಳಾಂತರ ಪ್ರಕ್ರಿಯೆಗೂ ತಯಾರಿ ನಡೆಸುತ್ತಿದ್ದು, ಮಲೆನಾಡಿಗರ ಆತಂಕ ದೂರವಾಗಲಿದೆಯೇ ಎಂಬುದನ್ನು ಕಾದುನೋಡಬೇಕಿದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಸ್ಕೂಟಿಯಲ್ಲಿ ಗಾಂಜಾ ಮಾರಲು ಬಂದು ಪೊಲೀಸರ ಕೈಗೆ ಸಿಕ್ಕಿಬಿದ್ದ ಮಹಿಳೆ
ಸ್ಕೂಟಿಯಲ್ಲಿ ಗಾಂಜಾ ಮಾರಲು ಬಂದು ಪೊಲೀಸರ ಕೈಗೆ ಸಿಕ್ಕಿಬಿದ್ದ ಮಹಿಳೆ
ಮಿಥುನ ರಾಶಿಯಲ್ಲಿ ಸೂರ್ಯ, ಚಂದ್ರ ಸಂಚಾರ: ಇಂದಿನ ರಾಶಿ ಭವಿಷ್ಯ ಹೇಗಿದೆ ನೋಡಿ
ಮಿಥುನ ರಾಶಿಯಲ್ಲಿ ಸೂರ್ಯ, ಚಂದ್ರ ಸಂಚಾರ: ಇಂದಿನ ರಾಶಿ ಭವಿಷ್ಯ ಹೇಗಿದೆ ನೋಡಿ
ಎಸ್ ಜಾನಕಿ ಅವರೊಟ್ಟಿಗಿನ ಅನುಬಂಧ ನೆನೆದ ಹಿರಿಯ ನಟ ಶ್ರೀನಾಥ್
ಎಸ್ ಜಾನಕಿ ಅವರೊಟ್ಟಿಗಿನ ಅನುಬಂಧ ನೆನೆದ ಹಿರಿಯ ನಟ ಶ್ರೀನಾಥ್
ಬೆಳೆ ಹಾನಿ ಪರಿಹಾರದ ಬಗ್ಗೆ ಸರ್ಕಾರ ನಿರ್ಧಾರ ಮಾಡುತ್ತದೆ: ಸತೀಶ್ ಜಾರಕಿಹೊಳಿ
ಬೆಳೆ ಹಾನಿ ಪರಿಹಾರದ ಬಗ್ಗೆ ಸರ್ಕಾರ ನಿರ್ಧಾರ ಮಾಡುತ್ತದೆ: ಸತೀಶ್ ಜಾರಕಿಹೊಳಿ
ಹೊಳೆ ದಾಟೋಕೆ ದೊಣ್ಣೆ‌ನಾಯಕನ ಅಪ್ಪಣೆ ಬೇಕೆ: ಖರ್ಗೆಗೆ ಜೋಶಿ ತಿರುಗೇಟು
ಹೊಳೆ ದಾಟೋಕೆ ದೊಣ್ಣೆ‌ನಾಯಕನ ಅಪ್ಪಣೆ ಬೇಕೆ: ಖರ್ಗೆಗೆ ಜೋಶಿ ತಿರುಗೇಟು
ಎಸ್ ಜಾನಕಿ ಅವರಿಗೆ ಗೌರವ ವಂದನೆ ಸಮರ್ಪಣೆ: ವಿಡಿಯೋ ನೋಡಿ
ಎಸ್ ಜಾನಕಿ ಅವರಿಗೆ ಗೌರವ ವಂದನೆ ಸಮರ್ಪಣೆ: ವಿಡಿಯೋ ನೋಡಿ
ಎಸ್ ಜಾನಕಿ ಅವರಿಗಿದ್ದ ನೋವೇನು? ಭಾರತಿ ವಿಷ್ಣುವರ್ಧನ್ ಮಾತು
ಎಸ್ ಜಾನಕಿ ಅವರಿಗಿದ್ದ ನೋವೇನು? ಭಾರತಿ ವಿಷ್ಣುವರ್ಧನ್ ಮಾತು
ಜಾನಕಮ್ಮ ಸ್ಮಾರಕಕ್ಕೆ ಬೇಡಿಕೆ: ಶೀಘ್ರದಲ್ಲೇ ತೀರ್ಮಾನ ಮಾಡ್ತೀವಿ ಎಂದ ಯತೀಂದ್
ಜಾನಕಮ್ಮ ಸ್ಮಾರಕಕ್ಕೆ ಬೇಡಿಕೆ: ಶೀಘ್ರದಲ್ಲೇ ತೀರ್ಮಾನ ಮಾಡ್ತೀವಿ ಎಂದ ಯತೀಂದ್
‘ಜಾನಕಿ ಹಾಡು ಕೇಳುತ್ತಲೇ ನಮ್ಮ ತಾಯಿ ಪ್ರಾಣ ಬಿಟ್ಟಿದ್ದರು’: ಸಾಧು ಕೋಕಿಲ
‘ಜಾನಕಿ ಹಾಡು ಕೇಳುತ್ತಲೇ ನಮ್ಮ ತಾಯಿ ಪ್ರಾಣ ಬಿಟ್ಟಿದ್ದರು’: ಸಾಧು ಕೋಕಿಲ
ಪ್ರವೀಣ್ ನೆಟ್ಟಾರು ಪ್ರಕರಣ: NIA ಬಲೆಗೆ ಬಿದ್ದ ಮೋಸ್ಟ್ ವಾಂಟೆಡ್ ಆರೋಪಿಗಳು
ಪ್ರವೀಣ್ ನೆಟ್ಟಾರು ಪ್ರಕರಣ: NIA ಬಲೆಗೆ ಬಿದ್ದ ಮೋಸ್ಟ್ ವಾಂಟೆಡ್ ಆರೋಪಿಗಳು