AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಾಸನದಲ್ಲಿ ಮತ್ತೆ ಹೆಚ್​​.ಡಿ.ರೇವಣ್ಣ v/s ಜಿಲ್ಲಾಧಿಕಾರಿ: ಗ್ರಾ.ಪಂ.ಗಳ ಚುನಾವಣೆ ಮೀಸಲು ಸಂಬಂಧ ಜಟಾಪಟಿ

ಹಾಸನದ ಗ್ರಾಮ ಪಂಚಾಯತಿ ಚುನಾವಣೆ ಮೀಸಲಾತಿ ನಿಗದಿ ವಿಚಾರದಲ್ಲಿ ಮಾಜಿ ಸಚಿವ ಹೆಚ್.ಡಿ. ರೇವಣ್ಣ ಹಾಗೂ ಜಿಲ್ಲಾಧಿಕಾರಿ ಕೆ.ಎಸ್. ಲತಾಕುಮಾರಿ ನಡುವೆ ತೀವ್ರ ಜಟಾಪಟಿ ನಡೆದಿದ್ದು, ಶಾಸಕರ ನಡೆಗೆ ಕಾಂಗ್ರೆಸ್ ನಾಯಕರು ಖಂಡನೆ ವ್ಯಕ್ತಪಡಿಸಿದ್ದಾರೆ. ಮತ್ತೊಂದೆಡೆ ಗ್ರಾಮ ಪಂಚಾಯತಿ ಚುನಾವಣೆಗೆ ಅವೈಜ್ಞಾನಿಕವಾಗಿ ಮೀಸಲಾತಿ ನಿಗದಿ ಮಾಡಲಾಗಿದೆ ಎಂದು ಆರೋಪಿಸಿ ಮಾಜಿ ಸಚಿವ ಎಚ್.ಕೆ.ಕುಮಾರಸ್ವಾಮಿ ನೇತೃತ್ವದಲ್ಲಿ ಹಾಸನದಲ್ಲಿ ಜೆಡಿಎಸ್​​ ಬೃಹತ್​​ ಪ್ರತಿಭಟನೆ ನಡೆಸಿದೆ.

ಹಾಸನದಲ್ಲಿ ಮತ್ತೆ ಹೆಚ್​​.ಡಿ.ರೇವಣ್ಣ v/s ಜಿಲ್ಲಾಧಿಕಾರಿ: ಗ್ರಾ.ಪಂ.ಗಳ ಚುನಾವಣೆ ಮೀಸಲು ಸಂಬಂಧ ಜಟಾಪಟಿ
ಹಾಸನದಲ್ಲಿ ಮತ್ತೆ ಹೆಚ್​​.ಡಿ.ರೇವಣ್ಣ vs ಜಿಲ್ಲಾಧಿಕಾರಿImage Credit source: Tv9 Kannada
ಮಂಜುನಾಥ ಕೆಬಿ
| Edited By: |

Updated on: Aug 24, 2026 | 5:05 PM

Share

ಹಾಸನ, ಆಗಸ್ಟ್​​ 24: ಈ ಹಿಂದೆಯೂ ಕೆಲ ಜಿಲ್ಲಾಧಿಕಾರಿಗಳ ಜೊತೆಗೆ ಸಂಘರ್ಷದ ಮೂಲಕ ಸುದ್ದಿಯಾಗಿದ್ದ ಮಾಜಿ ಸಚಿವ, ಶಾಸಕ ಹೆಚ್​.ಡಿ. ರೇವಣ್ಣ ಈಗ ಮತ್ತೆ ಅಂತಹುದ್ದೇ ವಿಚಾರದಲ್ಲಿ ಚರ್ಚೆಗೆ ಗ್ರಾಸವಾಗಿದ್ದಾರೆ. ಗ್ರಾಮ ಪಂಚಾಯತಿ ಚುನಾವಣೆಯ ಮೀಸಲಾತಿ ನಿಗದಿ ವಿಷಯಕ್ಕೆ ಸಂಬಂಧಿಸಿದಂತೆ ರೇವಣ್ಣ ಹಾಗೂ ಹಾಸನ ಜಿಲ್ಲಾಧಿಕಾರಿ ಕೆ.ಎಸ್. ಲತಾಕುಮಾರಿ ನಡುವೆ ತೀವ್ರ ಜಟಾಪಡಿಯೇ ನಡೆದಿದ್ದು, ಶಾಸಕರ ನಡೆಗೆ ಕಾಂಗ್ರೆಸ್​​ನಿಂದ ತೀವ್ರ ಆಕ್ಷೇಪ ವ್ಯಕ್ತವಾಗಿದೆ. ಈ ನಡುವೆಯೂ ರೇವಣ್ಣ ತಮ್ಮ ನಡೆ ಸಮರ್ಥಿಸಿಕೊಂಡಿದ್ದರೆ, ಡಿಸಿ ಕೂಡ ತಮ್ಮ ಮೇಲಿನ ಆರೋಪಗಳಿಗೆ ಖಡಕ್​​ ತಿರುಗೇಟು ನೀಡಿದ್ದಾರೆ.

ಹೇಳಿಕೆ ಸಮರ್ಥಿಸಿಕೊಂಡ ರೇವಣ್ಣ

ಮೀಸಲಾತಿ ಪಟ್ಟಿ ಪ್ರಕಟಣೆಯಲ್ಲಿ ನಿಯಮ ಗಾಳಿಗೆ ತೂರಲಾಗಿದೆ ಎಂಬ ರೇವಣ್ಣ ಅವರ ಆರೋಪಗಳಿಗೆ ಸಾಮಾಜಿಕ ಜಾಲತಾಣದಲ್ಲಿ ಕೆ.ಎಸ್. ಲತಾಕುಮಾರಿ ಅವರು ಉತ್ತರಿಸಿದ್ದು, ನಾವು ನಿಯಮ ಮೀರಿದ್ದರೆ ಕಾನೂನಿನಲ್ಲಿ ಅವಕಾಶವಿದೆ, ಪತ್ರ ಬರೆಯಬಹುದಿತ್ತು. ಆದರೆ ಇಷ್ಟು ತುಚ್ಛವಾಗಿ, ಮಾನಸಿಕವಾಗಿ ನೋವಾಗುವಂತೆ ಮಾತನಾಡುವುದು ಹಿರಿಯ ರಾಜಕಾರಣಿಗೆ ಶೋಭೆಯಲ್ಲ. ಡಿಸಿ ಸ್ಥಾನದಲ್ಲಿದ್ದರೂ ಗೌರವ ಸಿಗುವುದಿಲ್ಲ ಎಂದರೆ ಹೇಗೆ? ಎಂದು ಪ್ರಶ್ನಿಸಿದ್ದರು. ಹೀಗಿದ್ದರೂ ತಮ್ಮ ಹೇಳಿಕೆಯನ್ನು ರೇವಣ್ಣ ಮತ್ತೆ ಸಮರ್ಥಿಸಿಕೊಂಡಿದ್ದಾರೆ. ಅವರು IAS ಮಾಡಿದ್ರೆ ಜನ ನನ್ನನ್ನು 6 ಬಾರಿ ಶಾಸಕರನ್ನಾಗಿ ಮಾಡಿದ್ದಾರೆ. ಜನರಿಗೆ ನೋವಾದಾಗ ನಾನು ಮಾತನಾಡಲೇಬೇಕು. ತಹಶೀಲ್ದಾರ್ ಯಾವ ಆಧಾರದ ಮೇಲೆ ಪಟ್ಟಿ ಕಳುಹಿಸಿದರು? ಎಲ್ಲಾ ತಹಶೀಲ್ದಾರ್‌ಗೆ ಪ್ರಪೋಸಲ್ ಕಳುಹಿಸಲು ಯಾರು ಹೇಳಿದ್ರು? ಎಂದು ಪ್ರಶ್ನಿಸಿದ್ದಾರೆ.

ಇದನ್ನೂ ಓದಿ: ಹಾಸನ ಜಿಲ್ಲಾಧಿಕಾರಿ ವಿರುದ್ಧ ಎಚ್.ಡಿ. ರೇವಣ್ಣ ವಾಗ್ದಾಳಿ: ಕಣ್ಣೀರಿಟ್ಟು ತಿರುಗೇಟು ನೀಡಿದ ಡಿಸಿ ಲತಾ ಕುಮಾರಿ!

ಜಿಲ್ಲಾಧಿಕಾರಿಗೆ ರೇವಣ್ಣ ಟಾಂಗ್

ಒಬ್ಬ ರಾಜಕಾರಣಿ ಹೇಳಿದಂತೆ ಮೀಸಲಾತಿ ಪಟ್ಟಿ ನಿಗದಿ ಮಾಡಿದ್ದಾರೆ. ಸಮಯ ಬಂದಾಗ ಅವರ ಹೆಸರು ಹೇಳುತ್ತೇನೆ ಎಂದೂ ಹೇಳಿರುವ ರೇವಣ್ಣ, ಡಿಸಿಗೆ ಅಧಿಕಾರ ಇದೆ ಎಂದು ಏನು ಬೇಕಾದರೂ ಮಾಡಬಹುದಾ? ನಾನು ಕಳೆದ ಒಂದೂವರೆ ವರ್ಷದಿಂದ ಅವರ ಕಚೇರಿಗೆ ಹೋಗಿಲ್ಲ. 30 ವರ್ಷ ರಾಜಕೀಯದಲ್ಲಿ ಎಂತೆಂಥಾ ಅಧಿಕಾರಿ ನೋಡಿದ್ದೇನೆ. ನಾನು ಐಎಎಸ್ ಓದಿಲ್ಲ, ಅವರಷ್ಟು ಅನುಭವವಿಲ್ಲ. ಅವರಿಗೆ ನೋವಾಗದಂತೆ ಹೇಗೆ ನಡೆದುಕೊಳ್ಳಬೇಕೆಂದು ಹೇಳಲಿ. ನಾನೊಬ್ಬ ಆರ್ಡಿನರಿ ಶಾಸಕ, ಜನರ ಕೂಲಿ ಮಾಡುತ್ತಿದ್ದೇನೆ ಎಂದು ಹೇಳುವ ಮೂಲಕ ಜಿಲ್ಲಾಧಿಕಾರಿಗಳಿಗೆ ರೇವಣ್ಣ ಟಾಂಗ್​​ ನೀಡಿದ್ದಾರೆ.

ಜೆಡಿಎಸ್​​ ಪ್ರತಿಭಟನೆ

ಮತ್ತೊಂದೆಡೆ ಗ್ರಾಮ ಪಂಚಾಯತಿ ಚುನಾವಣೆಗೆ ಅವೈಜ್ಞಾನಿಕವಾಗಿ ಮೀಸಲಾತಿ ನಿಗದಿ ಮಾಡಲಾಗಿದೆ ಎಂದು ಆರೋಪಿಸಿ ಮಾಜಿ ಸಚಿವ ಎಚ್.ಕೆ.ಕುಮಾರಸ್ವಾಮಿ ನೇತೃತ್ವದಲ್ಲಿ ಹಾಸನದಲ್ಲಿ ಜೆಡಿಎಸ್​​ ಬೃಹತ್​​ ಪ್ರತಿಭಟನೆ ನಡೆಸಿದೆ. ಎನ್‌ಆರ್ ವೃತ್ತದಲ್ಲಿ ಮಾನವ ಸರಪಳಿ ನಿರ್ಮಿಸಿ ಆಕ್ರೋಶ ವ್ಯಕ್ತಪಡಿಸಲಾಗಿದ್ದು, ಜಿಲ್ಲಾಧಿಕಾರಿ ಕಚೇರಿ ಎದುರು ಕೆಲಕಾಲ ರಸ್ತೆ ತಡೆ ನಡೆಸಿದ ಘಟನೆಯೂ ನಡೆದಿದೆ. ಸರ್ಕಾರದ ಅಧಿಸೂಚನೆಯಂತೆ ಗ್ರಾ.ಪಂ. ಸ್ಥಾನಗಳಿಗೆ ಮೀಸಲಾತಿ ನಿಗದಿ ಮಾಡಿಲ್ಲ ಎಂದು ಆರೋಪಿಸಿದ ಪ್ರತಿಭಟನಾಕಾರರು, ನಿಗದಿ ಮಾಡಿರುವ ಮೀಸಲಾತಿಯನ್ನು ಕೂಡಲೇ ರದ್ದು ಮಾಡಿ ವೈಜ್ಞಾನಿಕವಾಗಿ ಮೀಸಲಾತಿ ನಿಗದಿ ಮಾಡುವಂತೆ ಒತ್ತಾಯಿಸಿದ್ದಾರೆ.

ರೇವಣ್ಣ ನಡೆಗೆ ಸಂಸದ ಶ್ರೇಯಸ್‌ ಪಟೇಲ್ ಖಂಡನೆ

ಇನ್ನು ಮೀಸಲಾತಿ ಬಗ್ಗೆ ಹೆಚ್.ಡಿ.ರೇವಣ್ಣ ಆರೋಪ ವಿಚಾರ ಸಂಬಂಧ ಪ್ರತಿಕ್ರಿಯಿಸಿರುವ ಹಾಸನ ಸಂಸದ ಶ್ರೇಯಸ್‌ ಪಟೇಲ್, ಇದು ಸಂಪೂರ್ಣವಾಗಿ ಚುನಾವಣಾ ಆಯೋಗ ಮಾಡುವ ಕೆಲಸ. ಯಾರೂ ಇದರಲ್ಲಿ ಮೂಗು ತೂರಿಸುವಂತಿಲ್ಲ. ಕಾನೂನು ಬದ್ದವಾಗಿ ಮಾಡಿಲ್ಲ ಎಂದರೆ ಅಹವಾಲು ಸಲ್ಲಿಸಲಿ. ಹಿರಿಯ, ಅನುಭವಿ ರಾಜಕಾರಣಿಯಾಗಿರುವ ರೇವಣ್ಣ ಜಿಲ್ಲಾಧಿಕಾರಿ ಸ್ಥಾನಕ್ಕೆ ಗೌರವ ಕೊಡಬೇಕು. ಹಿಂದಿನ ಜಿಲ್ಲಾಧಿಕಾರಿ, ಎಸ್ಪಿ ಬಗ್ಗೆಯೂ ಹೀಗೆಯೇ ಮಾತನಾಡಿದ್ದರು. ಮಹಿಳೆಯರಿಗೆ ಕನಿಷ್ಠ ಗೌರವವನ್ನೂ ಕೊಡಲಿಲ್ಲ‌ ಎಂದರೆ ಜನರೇ ತೀರ್ಮಾನ ಮಾಡಬೇಕು. ಜಿಲ್ಲಾಧಿಕಾರಿ ಬಗ್ಗೆ ಅಸಂಬದ್ಧವಾಗಿ ಮಾತನಾಡುವುದನ್ನು ಖಂಡಿಸುತ್ತೇನೆ ಎಂದವರು ತಿಳಿಸಿದ್ದಾರೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Follow Us
ಮಂಜುನಾಥ ಕೆಬಿ
ಮಂಜುನಾಥ ಕೆಬಿ

ಮಂಜುನಾಥ ಕೆಬಿ ಪತ್ರಿಕೋದ್ಯಮದಲ್ಲಿ ಕಳೆದ 17 ವರ್ಷಗಳಿಂದ ಸೇವೆ ಮಾಡುತ್ತಿದ್ದೇನೆ. ಕರುನಾಡಿನ ಹೆಮ್ಮೆಯ ಸುದ್ದಿ ವಾಹಿನಿ ಟಿವಿ9 ಕನ್ನಡ ಜೊತೆಗೆ 15ನೇ ವರ್ಷದ ಪಯಣ ನನ್ನದು. ಓದಿದ್ದು, ಮೈಸೂರು ವಿವಿಯಲ್ಲಿ ಕಾನೂನು ಪದವಿ, ಎರಡು ವರ್ಷ ವಕೀಲ ವೃತ್ತಿ ಬಳಿಕ ಮಾಧ್ಯಮ ಕ್ಷೇತ್ರಕ್ಕೆ ಆಗಮಿಸಿ ಟಿವಿ9 ವಾಹಿನಿ ಮೂಲಕ ಸಮಸ್ಯೆಗೆ ಧ್ವನಿಯಾಗಿ ಕಾಯಕ. ಕೊಡಗಿನಲ್ಲಿ ಐದುವರೆ ವರ್ಷ ವರದಿಗಾರನಾಗಿ ಕರ್ತವ್ಯ ನಿರ್ವಹಿಸಿದ್ದು, ಇದೀಗ ಹಾಸನದ ಹಿರಿಯ ವರದಿಗಾರನಾಗಿ ಕರ್ತವ್ಯ ನಿರ್ವಹಣೆ ಮಾಡುತ್ತಿದ್ದೇನೆ.

Read More
ಪ್ರತಿಭಟನೆಗೆ ಸುಪ್ರೀಂ ಆದೇಶ ಪಾಲಿಸದ ಆರೋಪದ ಮೇಲೆ ನ್ಯಾಯಾಂಗ ನಿಂದನೆ ಅರ್ಜಿ
ಪ್ರತಿಭಟನೆಗೆ ಸುಪ್ರೀಂ ಆದೇಶ ಪಾಲಿಸದ ಆರೋಪದ ಮೇಲೆ ನ್ಯಾಯಾಂಗ ನಿಂದನೆ ಅರ್ಜಿ
ಬೆಳಗಾವಿಯ ಪ್ರಭಾವಿ ರಾಜಕಾರಣಿಗಳ ಒಡೆತನದ ಕ್ಲಬ್, ಹೋಟೆಲ್​ಗಳ ಮೇಲೆ ದಾಳಿ
ಬೆಳಗಾವಿಯ ಪ್ರಭಾವಿ ರಾಜಕಾರಣಿಗಳ ಒಡೆತನದ ಕ್ಲಬ್, ಹೋಟೆಲ್​ಗಳ ಮೇಲೆ ದಾಳಿ
ಇಂದಿನಿಂದ ನವರಾತ್ರಿ ಆರಂಭ; ಹೊಸ ಕೆಲಸ ಆರಂಭಿಸಲು ಒಳ್ಳೆಯ ದಿನ
ಇಂದಿನಿಂದ ನವರಾತ್ರಿ ಆರಂಭ; ಹೊಸ ಕೆಲಸ ಆರಂಭಿಸಲು ಒಳ್ಳೆಯ ದಿನ
ಶಿವಂ ಅಸೋಸಿಯೇಟ್ಸ್ ವಂಚನೆ ಪ್ರಕರಣ: ಇಡಿಯಿಂದ ವರದಿ ಸಲ್ಲಿಕೆ
ಶಿವಂ ಅಸೋಸಿಯೇಟ್ಸ್ ವಂಚನೆ ಪ್ರಕರಣ: ಇಡಿಯಿಂದ ವರದಿ ಸಲ್ಲಿಕೆ
ಅಲೆಮಾರಿ ಕುಟುಂಬಗಳ ಮಕ್ಕಳಿಗಾಗಿ ಗುಡಿಸಲಿನಲ್ಲಿ ಗ್ರಂಥಾಲಯ
ಅಲೆಮಾರಿ ಕುಟುಂಬಗಳ ಮಕ್ಕಳಿಗಾಗಿ ಗುಡಿಸಲಿನಲ್ಲಿ ಗ್ರಂಥಾಲಯ
ಕೊನೆಗೂ ಪೆನ್​ಡ್ರೈವ್​ನಲ್ಲಿ ಏನಿದೆ ಎಂಬ ಗುಟ್ಟು ಬಿಚ್ಚಿಟ್ಟ ಕುಮಾರಸ್ವಾಮಿ
ಕೊನೆಗೂ ಪೆನ್​ಡ್ರೈವ್​ನಲ್ಲಿ ಏನಿದೆ ಎಂಬ ಗುಟ್ಟು ಬಿಚ್ಚಿಟ್ಟ ಕುಮಾರಸ್ವಾಮಿ
ಹಾಸನ ಡಿಸಿ ಮತ್ತು ಜಿಲ್ಲಾ ಸಚಿವರ ಸಂಘರ್ಷ ಶುರುವಾಗಿದೆ ಎಂದು ಹೆಚ್​​ಡಿಕೆ
ಹಾಸನ ಡಿಸಿ ಮತ್ತು ಜಿಲ್ಲಾ ಸಚಿವರ ಸಂಘರ್ಷ ಶುರುವಾಗಿದೆ ಎಂದು ಹೆಚ್​​ಡಿಕೆ
ಸಿಜೆಪಿ ಪ್ರತಿಭಟನೆ ವಿರುದ್ಧ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ವಾಗ್ದಾಳಿ
ಸಿಜೆಪಿ ಪ್ರತಿಭಟನೆ ವಿರುದ್ಧ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ವಾಗ್ದಾಳಿ
‘ಪ್ರೇಮದ ಊರಲಿ’ ಚಿತ್ರಕ್ಕಾಗಿ ನನ್ನ ಸಿನಿಮಾ ರಿಲೀಸ್ ಮುಂದಕ್ಕೆ ಹಾಕಿದ್ದೀನಿ’
‘ಪ್ರೇಮದ ಊರಲಿ’ ಚಿತ್ರಕ್ಕಾಗಿ ನನ್ನ ಸಿನಿಮಾ ರಿಲೀಸ್ ಮುಂದಕ್ಕೆ ಹಾಕಿದ್ದೀನಿ’
ಬಳ್ಳಾರಿ ಸರ್ಕಾರಿ ಆಸ್ಪತ್ರೆಯಲ್ಲಿ ಕರೆಂಟ್ ಕಟ್: ತನಿಖೆ ಮಾಡುತ್ತೇವೆ, ಖಾದರ್
ಬಳ್ಳಾರಿ ಸರ್ಕಾರಿ ಆಸ್ಪತ್ರೆಯಲ್ಲಿ ಕರೆಂಟ್ ಕಟ್: ತನಿಖೆ ಮಾಡುತ್ತೇವೆ, ಖಾದರ್