ಅ.13ರಂದು ತೆರೆಯಲಿದೆ ಹಾಸನಾಂಬೆ ದೇಗುಲದ ಗರ್ಭಗುಡಿ ಬಾಗಿಲು

ವರ್ಷಕೊಮ್ಮೆ ತೆರಯುವ ಹಾಸನಾಂಬೆ ದೇಗುಲದ ಗರ್ಭಗುಡಿ ಬಾಗಿಲನ್ನು ಈ ಭಾರಿ ಅಕ್ಟೋಬರ್​​ 13 ಮಧ್ಯಾಹ್ನ 12.30 ಕ್ಕೆ ತೆರಯಾಲಗುತ್ತದೆ.

ಅ.13ರಂದು ತೆರೆಯಲಿದೆ ಹಾಸನಾಂಬೆ ದೇಗುಲದ ಗರ್ಭಗುಡಿ ಬಾಗಿಲು
ಹಾಸನಾಂಬ ದೇವಿ
Follow us
TV9 Web
| Updated By: ವಿವೇಕ ಬಿರಾದಾರ

Updated on:Oct 10, 2022 | 5:15 PM

ಹಾಸನ: ವರ್ಷಕೊಮ್ಮೆ ತೆರಯುವ ಹಾಸನಾಂಬೆ (Hasanamba) ದೇಗುಲದ ಗರ್ಭಗುಡಿ ಬಾಗಿಲನ್ನು ಈ ಭಾರಿ ಅಕ್ಟೋಬರ್​​ 13 ಮಧ್ಯಾಹ್ನ 12.30 ಕ್ಕೆ ತೆರಯಾಲಗುತ್ತದೆ. ಅ.13ರಿಂದ ಅ.27ರವರೆಗೆ ಹಾಸನಾಂಬೆ ದರ್ಶನಕ್ಕೆ ಅವಕಾಶ ಕಲ್ಪಿಸಲಾಗುತ್ತದೆ. ಇಂದು ತಹಶೀಲ್ದಾರ್ ನಟೇಶ್ ಸಮ್ಮುಖದಲ್ಲಿ ಅರ್ಚಕರು ದೇವಿಯ ಆಭರಣಗಳನ್ನು ಜಿಲ್ಲಾ ಖಜಾನೆಯಿಂದ ದೇಗುಲಕ್ಕೆ ತಂದಿದ್ದಾರೆ. ಪೊಲೀಸ್ ಬಿಗಿ ಬಂದೋಬಸ್ತ್​​​ನಲ್ಲಿ ದೇವಿಯ ಒಡವೆಗಳನ್ನು ಬೆಳ್ಳಿ ರಥದಲ್ಲಿ ದೇವಸ್ಥಾನಕ್ಕೆ ತಂದಿದ್ದಾರೆ.

ಹಾಸನಾಂಬೆ ಇತಿಹಾಸ

ಕುದುರು ಗಂಡಿಯಲ್ಲಿ ಇರುವ ಕ್ರಿ.ಶ.೧೧೪ ವೀರಗಲ್ಲಿನ ಶಾಸನದ ಪ್ರಕಾರ ೧೨ ನೇ ಶತಮಾನದಲ್ಲಿದ್ದ ಪಾಳೆಯಗಾರ ಕೃಷ್ಣಪ್ಪನಾಯಕ ಕಾರ್ಯನಿಮಿತ್ತ ಪ್ರಯಾಣ ಹೊರಟಾಗ ಮೊಲವೊಂದು ಅಡ್ಡ ಬಂದಿತು. ಆಗ ಇದು ಅಪಶಕುನವೆಂದು ಭಾವಿಸುತ್ತಾನೆ. ಆಗ ಪ್ರತ್ಯಕ್ಷಳಾದ ಆದಿಶಕ್ತಿ ಸ್ವರೂಪಿಣಿ ಈ ಸ್ಥಳದಲ್ಲಿ ದೇಗುಲ ಕಟ್ಟು, ನಾನು ಹಾಸನಾಂಬೆ ಎಂದೇ ಹೆಸರಾಗಿ ಇಲ್ಲಿ ನೆಲೆಸುವೆ ಎಂದಳಂತೆ.

ದೇಗುಲದ ಕಥೆ

ಕಾಶಿಯಿಂದ ದಕ್ಷಿಣಾಭಿಮುಖವಾಗಿ ವಾಯುವಿಹಾರಕ್ಕೆಂದು ಬಂದ ಸಪ್ತ ಮಾತೃಕೆಯರು ಅಂದರೆ, ಬ್ರಾಹ್ಮೀದೇವಿ, ಮಹೇಶ್ವರಿ, ಕೌಮಾರಿ, ವೈಷ್ಣವಿ, ವಾರಾಹಿ, ಇಂದ್ರಾಣಿ ಮತ್ತು ದುರ್ಗೆ, ಚಾಮುಂಡಿ ಇವರು ಇಲ್ಲಿಗೆ ಬಂದರೆಂದು ಪ್ರತೀತಿ ಇದೆ. ಅವರಲ್ಲಿ, ವೈಷ್ಣವಿ, ವಾರಾಹಿ ಮತ್ತು ಇಂದ್ರಾಣಿ ಈ ಮೂವರು ಹುತ್ತದಲ್ಲಿ ನೆಲೆಸಿದ ಸ್ಥಳವೇ ಹಾಸನಾಂಬೆಯ ದೇಗುಲವಾಗಿದೆ. ಹಾಸನ ನಗರದ ಹೃದಯಭಾಗದಲ್ಲಿರುವ ದೇವಿಕೆರೆಯಲ್ಲಿ, ಬ್ರಾಹ್ಮಿದೇವಿ, ಕೆಂಚಮ್ಮ ದೇವಿ ಹೊಸಕೋಟೆಯಲ್ಲಿ ನೆಲೆಸಿದ್ದಾರೆ. ಆದಿಶಕ್ತಿ ಸ್ವರೂಪಿಣಿ ಮಾತೃ ಸ್ವರೂಪಿಣಿಯಾಗಿರುವ ಹಾಸನಾಂಬೆ ಸಿಂಹಾಸನಾಪುರಿಯ ಅಧಿದೇವತೆ ಭವತಾರಿಣಿ, ಅಸುರ ಸಂಹಾರಿಣಿ, ಬೇಡಿದ ವರಕೊಡುವ ಶಕ್ತಿದೇವತೆಯಾಗಿ ಜನಮಾನಸದಲ್ಲಿ ಕಾಣಿಸಿ ಕೊಂಡಿದ್ದಾಳೆ.

ಪ್ರತಿ ವರುಷಕ್ಕೊಮ್ಮೆ ತೆರೆಯುವ ದೇಗುಲದ ಗರ್ಭಗುಡಿ

ಕೃಷ್ಣಪ್ಪ ನಾಯಕನ ಕಾಲದಿಂದಲೂ ಆಶ್ವೀಜ ಮಾಸ ಪೌರ್ಣಮಿಯ ನಂತರ ಬರುವ ಗುರುವಾರದಂದು ಹಾಸನಾಂಬೆಯ ದೇವಾಲಯ ತೆರೆಯಲ್ಪಡುತ್ತದೆ. ಸಹಸ್ರ ಸಂಖ್ಯೆಯಲ್ಲಿ ಭಕ್ತಾದಿಗಳು ದೇವಿಯ ದರ್ಶನ ಪಡೆಯುತ್ತಾರೆ. ಗರ್ಭಗುಡಿಯಲ್ಲಿ ಹುತ್ತದೋಪಾದಿಯಲ್ಲಿರುವ ಆದಿಶಕ್ತಿಸ್ವರೂಪಿಣಿ ಹಾಸನಾಂಬೆಗೆ ಹಿಂದಿನ ವರುಷ ಹಚ್ಚಿಟ್ಟಿದ್ದ ದೀಪವು ಆರದೆ, ಮುಡಿಸಿದ ಹೂ ಬಾಡದೆ ಹಾಗೂ ನೈವೇದ್ಯಕ್ಕಿಟ್ಟ ಅಕ್ಕಿಯು ಅನ್ನವಾಗಿರುವ ವಿಸ್ಮಯ ದೃಶ್ಯವನ್ನು ಕಣ್ತುಂಬಿಕೊಳ್ತುವ ಭಕ್ತಾಗಿಗಳಿಗೆ ಪುನೀತ ಭಾವ.

ಹೀಗೆ ವರ್ಷಕ್ಕೊಮ್ಮೆ ದೇಗುಲದ ಬಾಗಿಲ ಪುರ ಪ್ರಮುಖರಾದ ತಹಸಿಲ್ದಾರರು/ ಕಮೀಷನರ್ ಶಾಸಕರು ಮುಂತಾದವರ ಸಮ್ಮುಖದಲ್ಲಿ ತೆರೆಯಲಾಗುತ್ತದೆ. ಬಲಿಪಾಡ್ಯಮಿಯ ಮಾರನೇ ದಿನ ಬಾಗಿಲು ಅವರೆಲ್ಲರ ಸಮ್ಮುಖದಲ್ಲಿ ದೇವಿಗೆ ದೀಪ, ಅಕ್ಕಿ ನೈವಿದ್ಯಾದಿ ಅಲಂಕಾರಗಳು ಇರುವಂತೆಯೇ ಮುಚ್ಚಲಾಗುತ್ತದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 5:15 pm, Mon, 10 October 22

ಈ ಕೋತಿ ಚಪಾತಿಯನ್ನೂ ಮಾಡುತ್ತೆ, ಪಾತ್ರೆಯನ್ನೂ ತೊಳೆಯುತ್ತೆ!
ಈ ಕೋತಿ ಚಪಾತಿಯನ್ನೂ ಮಾಡುತ್ತೆ, ಪಾತ್ರೆಯನ್ನೂ ತೊಳೆಯುತ್ತೆ!
ರಜೆಗೆ ಮನೆಗೆ ಹೊರಟಿದ್ದ ಸೈನಿಕ ಕಾಲು ಜಾರಿ ರೈಲಿನಡಿ ಬಿದ್ದು ಸಾವು
ರಜೆಗೆ ಮನೆಗೆ ಹೊರಟಿದ್ದ ಸೈನಿಕ ಕಾಲು ಜಾರಿ ರೈಲಿನಡಿ ಬಿದ್ದು ಸಾವು
ಹೊಸ ವರ್ಷದಂದು ಬೆಂಗಳೂರಿನ ಅಧಿಕಾರಿಗಳಿಗೆ ರಜೆ ಇಲ್ಲ: ಡಿಕೆ ಶಿವಕುಮಾರ್
ಹೊಸ ವರ್ಷದಂದು ಬೆಂಗಳೂರಿನ ಅಧಿಕಾರಿಗಳಿಗೆ ರಜೆ ಇಲ್ಲ: ಡಿಕೆ ಶಿವಕುಮಾರ್
ಈ ಬಾರಿ ಬಿಗ್ ಬಾಸ್ ಟ್ರೋಫಿ ಯಾರಿಗೆ? ಭವಿಷ್ಯ ನುಡಿದ ಐಶ್ವರ್ಯಾ
ಈ ಬಾರಿ ಬಿಗ್ ಬಾಸ್ ಟ್ರೋಫಿ ಯಾರಿಗೆ? ಭವಿಷ್ಯ ನುಡಿದ ಐಶ್ವರ್ಯಾ
ದೋಸೆ ಜೊತೆ ಅವರೇ ಕಾಳಿನ ಹಲವಾರು ತಿಂಡಿಗಳು ಮೇಳದಲ್ಲಿ ಲಭ್ಯ
ದೋಸೆ ಜೊತೆ ಅವರೇ ಕಾಳಿನ ಹಲವಾರು ತಿಂಡಿಗಳು ಮೇಳದಲ್ಲಿ ಲಭ್ಯ
ಹೊಲಗಳಿಗೆ ಕುಟುಂಬವಾಗಿ ತೆರಳಿ ಒಟ್ಟಿಗೆ ಕೂತು ಉಣ್ಣುವುದೇ ಒಂದು ಸಂಭ್ರಮ!
ಹೊಲಗಳಿಗೆ ಕುಟುಂಬವಾಗಿ ತೆರಳಿ ಒಟ್ಟಿಗೆ ಕೂತು ಉಣ್ಣುವುದೇ ಒಂದು ಸಂಭ್ರಮ!
ಬೆಂಗಳೂರು ನಗರದಲ್ಲಿ ಒತ್ತುವರಿ ಮಾಡಿಕೊಳ್ಳುವ ಕಾಯಕ ಎಗ್ಗಿಲ್ಲದೆ ಸಾಗುತ್ತಿದೆ
ಬೆಂಗಳೂರು ನಗರದಲ್ಲಿ ಒತ್ತುವರಿ ಮಾಡಿಕೊಳ್ಳುವ ಕಾಯಕ ಎಗ್ಗಿಲ್ಲದೆ ಸಾಗುತ್ತಿದೆ
ಹಿಮಪಾತದಿಂದ ಮನಾಲಿಯಲ್ಲಿ ಟ್ರಾಫಿಕ್ ಜಾಮ್; ಹಿಮದಲ್ಲೇ ಮುಚ್ಚಿಹೋದ ಕಾರುಗಳು
ಹಿಮಪಾತದಿಂದ ಮನಾಲಿಯಲ್ಲಿ ಟ್ರಾಫಿಕ್ ಜಾಮ್; ಹಿಮದಲ್ಲೇ ಮುಚ್ಚಿಹೋದ ಕಾರುಗಳು
ಮುನಿರತ್ನಗೆ ಒಂದು ನೋಟೀಸ್ ನೀಡುವ ಯೋಗ್ಯತೆ ಬಿಜೆಪಿಗಿಲ್ಲ: ಪ್ರಿಯಾಂಕ್ ಖರ್ಗೆ
ಮುನಿರತ್ನಗೆ ಒಂದು ನೋಟೀಸ್ ನೀಡುವ ಯೋಗ್ಯತೆ ಬಿಜೆಪಿಗಿಲ್ಲ: ಪ್ರಿಯಾಂಕ್ ಖರ್ಗೆ
ಮಹಿಳೆಯರ ವಿಷಯದಲ್ಲಿ ಅವಾಚ್ಯ ಪದಬಳಕೆ ಸಲ್ಲದು: ಬಸವರಾಜ ಹೊರಟ್ಟಿ, ಸಭಾಪತಿ
ಮಹಿಳೆಯರ ವಿಷಯದಲ್ಲಿ ಅವಾಚ್ಯ ಪದಬಳಕೆ ಸಲ್ಲದು: ಬಸವರಾಜ ಹೊರಟ್ಟಿ, ಸಭಾಪತಿ