AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಾಸನ: ಹೃದಯಾಘಾತಕ್ಕೆ ಒಂದೇ ದಿನ 3 ಬಲಿ, 40 ದಿನಗಳಲ್ಲಿ 22 ಸಾವು

ಹಾಸನ ಜಿಲ್ಲೆಯನ್ನೇ ಬೆಚ್ಚಿಬೀಳಿಸಿರುವ ಹೃದಯಾಘಾತದ ಭೂತ ಮತ್ತೆ ಮೂವರನ್ನು ಬಲಿ ತೆಗೆದುಕೊಂಡಿದೆ. ಇಂದು ಒಂದೇ ದಿನ ಹೃದಯಾಘಾತದಿಂದ ಮೂವರು ಸಾವಿಗೀಡಾಗಿದ್ದಾರೆ. ಇದರೊಂದಿಗೆ, ಹಾಸನ ಜಿಲ್ಲೆಯಲ್ಲಿ ಕಳೆದ 40 ದಿನಗಳಲ್ಲಿ 21 ಮಂದಿ ಹೃದಯಾಘಾತದಿಂದ ಸಾವನ್ನಪ್ಪಿದಂತಾಗಿದೆ. ಇದು ಭಾರೀ ಆತಂಕಕ್ಕೆ ಕಾರಣವಾಗಿದ್ದು, ಜಿಲ್ಲೆಯಲ್ಲಿ ಏನಾಗ್ತಿದೆ ಎಂದು ಜನರು ಮಾತಾಡಿಕೊಳ್ಳುತ್ತಿದ್ದಾರೆ.

ಹಾಸನ: ಹೃದಯಾಘಾತಕ್ಕೆ ಒಂದೇ ದಿನ 3 ಬಲಿ, 40 ದಿನಗಳಲ್ಲಿ 22 ಸಾವು
Hassan Heart Attack
ಮಂಜುನಾಥ ಕೆಬಿ
| Updated By: ರಮೇಶ್ ಬಿ. ಜವಳಗೇರಾ|

Updated on:Jun 30, 2025 | 5:26 PM

Share

ಹಾಸನ, ಜೂನ್ 30: ಹಾಸನ ಜಿಲ್ಲೆಯಲ್ಲಿ ಹೃದಯಾಘಾತ (Heart Attack) ಸರಣಿ ಮುಂದುವರಿದಿದ್ದು, ಒಂದೇ ದಿನ ಮೂವರು ಮೃತಪಟ್ಟಿದ್ದಾರೆ. ಇದರೊಂದಿಗೆ, ಕಳೆದ 40 ದಿನಗಳಲ್ಲಿ ಹೃದಯಾಘಾತದಿಂದ ಮೃತಪಟ್ಟವರ ಸಂಖ್ಯೆ 21ಕ್ಕೆ ಏರಿಕೆಯಾಗಿದೆ. ಹಾಸನ (Hassan) ಜಿಲ್ಲೆಯ  ಬೇಲೂರಿನ ಜೆಪಿ‌. ಲೇಪಾಕ್ಷಿ (50), ಹೊಳೆನರಸೀಪುರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಇಂಗ್ಲಿಷ್ ಪ್ರಾಧ್ಯಾಪಕ ಮುತ್ತಯ್ಯ (58), ನುಗ್ಗೆಹಳ್ಳಿ ನಾಡಕಚೇರಿ ಡಿ ಗ್ರೂಪ್ ನೌಕರ ಕುಮಾರ್ (53) ಕೂಡ ಹೃದಯಾಘಾತದಿಂದ ಸಾವಿಗೀಡಾಗಿದ್ದಾರೆ.

ಹಾಸನ ಜಿಲ್ಲೆಯ ಚನ್ನರಾಯಪಟ್ಟಣ ತಾಲೂಕಿನ ನುಗ್ಗೆಹಳ್ಳಿ ಗ್ರಾಮದ ನಾಡಕಚೇರಿ ಡಿ ಗ್ರೂಪ್ ನೌಕರ ಕುಮಾರ್​ಗೆ ಭಾನುವಾರ ರಾತ್ರಿ ಮನೆಯಲ್ಲಿ ಮಲಗಿದ್ದ ವೇಳೆ ಎದೆನೋವು ಕಾಣಿಸಿಕೊಂಡಿದೆ. ತಕ್ಷಣವೇ ಅವರನ್ನು ಚನ್ನರಾಯಪಟ್ಟಣ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಅವರು ಮೃತಪಟ್ಟಿದ್ದಾರೆ. ಇವರು ಚನ್ನರಾಯಪಟ್ಟಣ ತಾಲೂಕಿನ ನಲ್ಲೂರು ಗ್ರಾಮದ ನಿವಾಸಿಯಾಗಿದ್ದಾರೆ.

ನಿಯಂತ್ರಣಕ್ಕೆ ಸೂಕ್ತ ಕ್ರಮ: ಸಿಎಂ ಸಿದ್ದರಾಮಯ್ಯ

ಹಾಸನ ಜಿಲ್ಲೆಯಲ್ಲಿ ಹೃದಯಾಘಾತ ಹೆಚ್ಚಾದ ವಿಚಾರವಾಗಿ ಮೈಸೂರಿನಲ್ಲ ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯೆ ನೀಡಿದ್ದು, ಆ ಬಗ್ಗೆ ಪರಿಶೀಲನೆ ನಡೆಸುತ್ತೇನೆ. ಹೃದಯಘಾತ ಹೆಚ್ಚಾಗಲು ಕಾರಣ ಏನು ಎಂಬುದಕ್ಕೆ ತಜ್ಞರ ಮೂಲಕ ಮಾಹಿತಿ ತರಿಸಿಕೊಳ್ಳುತ್ತೇನೆ. ನಿಯಂತ್ರಣಕ್ಕೆ ಸೂಕ್ತ ಕ್ರಮ ಕೈಗೊಳ್ಳುತ್ತೇನೆ ಎಂದು ಭರವಸೆ ನೀಡಿದ್ದಾರೆ.

ಇದನ್ನೂ ಓದಿ
Image
ಹುಬ್ಬಳ್ಳಿ ವಿಮಾನ ನಿಲ್ದಾಣಕ್ಕೆ ಬಾಂಬ್​ ಬೆದರಿಕೆ: ಭದ್ರತೆ ಹೆಚ್ಚಳ
Image
ಮುಸ್ಲಿಂ ವ್ಯಕ್ತಿ ಜೊತೆ ಲಿವಿಂಗ್ ಟುಗೆದರ್: ಮಹಿಳೆ ಶವ ಕಸದ ಲಾರಿಲಿ ಪತ್ತೆ
Image
ಕಾಂಗ್ರೆಸ್ ಗೊಂದಲ, ಬಿಕ್ಕಟ್ಟು ಶಮನಕ್ಕೆ ಇಂದು ಬೆಂಗಳೂರಿಗೆ ಸುರ್ಜೇವಾಲ
Image
ಕೆಪಿಸಿಸಿ ಸಾಮಾಜಿಕ ಮಾಧ್ಯಮ ವಿಭಾಗಕ್ಕೆ ಐಶ್ವರ್ಯಾ ಮಹಾದೇವ್ ನೂತನ ಮುಖ್ಯಸ್ಥೆ

ಎರಡು ದಿನ ಹಿಂದಷ್ಟೇ ಹೃದಯಾಘಾತದಿಂದ ಮೃತಪಟ್ಟಿದ್ದ ಆಟೋ ಚಾಲಕ

ಎರಡು ದಿನಗಳ ಹಿಂದಷ್ಟೇ ಹಾಸನದ ಸಿದ್ದೇಶ್ವರ್ ನಗರದ ನಿವಾಸಿ ಗೋವಿಂದ (37) ಎಂಬವರು ಹೃದಯಾಘಾತದಿಂದ ಮೃತಪಟ್ಟಿದ್ದರು. ಆಟೋ ಚಾಲಕರಾಗಿರುವ ಗೋವಿಂದ ಅವರಿಗೆ ಆಟೋ ಚಲಾಯಿಸುವಾಗ ಎದೆನೋವು ಕಾಣಿಸಿಕೊಂಡಿತ್ತು. ಕೂಡಲೇ ಅವರೇ ಆಟೋ ಚಲಾಯಿಸಿಕೊಂಡು ಜಿಲ್ಲಾಸ್ಪತ್ರೆಗೆ ತೆರಳಿದ್ದರು. ಆದಾಗ್ಯೂ, ಆಸ್ಪತ್ರೆಯಲ್ಲಿ ಹೃದಯಾಘಾತದಿಂದ ಮೃತಪಟ್ಟಿದ್ದರು.

ಏತನ್ಮಧ್ಯೆ, ಹಾಸನ ಜಿಲ್ಲೆಯಲ್ಲಿ ಮತ್ತು ಕರ್ನಾಟಕದ ಇತರ ಕಡೆಗಳಲ್ಲಿ ಯುವಕ ಯುವತಿಯರಲ್ಲೇ ಹೃದಯಾಘಾತ ಪ್ರಕರಣಗಳು ಹೆಚ್ಚುತ್ತಿರುವ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಜತೆ ಚರ್ಚಿಸಲು ಬೆಂಗಳೂರು ಗ್ರಾಮಾಂತರ ಸಂಸದ ಡಾ. ಸಿಎನ್ ಮಂಜುನಾಥ್ ಮುಂದಾಗಿದ್ದಾರೆ. ಹೃದಯಘಾತ ನಿಯಂತ್ರಣಕ್ಕೆ ಸಂಬಂಧಿಸಿ ಸಿಎನ್​ ಮಂಜುನಾಥ್​ ಈಗಾಗಲೇ ಕೇಂದ್ರ ಆರೋಗ್ಯ ಸಚಿವ ಜೆಪಿ ನಡ್ಡಾ ಮತ್ತು ಕರ್ನಾಟಕ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರ ಜೊತೆಯೂ ಚರ್ಚೆ ಮಾಡಿದ್ದಾರೆ.

ಇದನ್ನೂ ಓದಿ: ಎದೆಯುರಿ ಇದ್ದರೆ ಅಸಿಡಿಟಿ ಎನ್ನಬೇಡಿ, ನೀವೇ ಡಾಕ್ಟರ್ ಅಗ್ಬೇಡಿ: ಹೃದಯದ ಆರೋಗ್ಯಕ್ಕೆ ಇಲ್ಲಿದೆ ಟಿಪ್ಸ್

ಮತ್ತೊಂದೆಡೆ, ಎದೆ ನೋವಿನಿಂದ ಬಳಲಿ ಬರುವವರಿಗೆ ಜಯದೇವ ಆಸ್ಪತ್ರೆ ಸಹಯೋಗದೊಂದಿಗೆ ಚಿಕಿತ್ಸೆ ನೀಡುವುದಕ್ಕಾಗಿ ಹಾಸನ‌ ಜಿಲ್ಲೆಯ ಬೇಲೂರು, ಸಕಲೇಶಪುರ, ಆಲೂರು, ಅರಕಲಗೂಡು ಹಾಗು ಚನ್ನರಾಯಪಟ್ಟಣ ತಾಲ್ಲೂಕು ಆಸ್ಪತ್ರೆಗಳಲ್ಲಿ ಸ್ಟೆಮಿ ಯೋಜನೆ ಜಾರಿ ಮಾಡುವಂತೆ ಜಿಲ್ಲಾ ಅರೋಗ್ಯ ಅಧಿಕಾರಿ ಡಾ. ಅನಿಲ್ ಕುಮಾರ್ ಅವರು ಆರೋಗ್ಯ ಇಲಾಖೆಗೆ ಈಗಾಗಲೇ ಮನವಿ ಮಾಡಿದ್ದಾರೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 11:31 am, Mon, 30 June 25