AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಾಸನದಲ್ಲಿ ವರುಣಾರ್ಭಟ: 15 ಕಡೆ ಭೂಕುಸಿತ, ಬೆಂಗಳೂರು-ಮಂಗಳೂರು ರೈಲ್ವೆ ಮಾರ್ಗ ತಾತ್ಕಾಲಿಕ ಬಂದ್

ಹಾಸನ ಜಿಲ್ಲೆಯ ಮಲೆನಾಡು ಪ್ರದೇಶದಲ್ಲಿ ಭಾರಿ ಮಳೆಯಿಂದಾಗಿ ಏಳು ಕಿಲೋಮೀಟರ್ ವ್ಯಾಪ್ತಿಯಲ್ಲಿ 15 ಕಡೆಗಳಲ್ಲಿ ಭೂಕುಸಿತ ಸಂಭವಿಸಿದೆ. ಇದರಿಂದಾಗಿ ಬೆಂಗಳೂರು-ಮಂಗಳೂರು ರೈಲು ಮಾರ್ಗದಲ್ಲಿ ಪ್ರಯಾಣಿಕರ ಮತ್ತು ಸರಕು ರೈಲುಗಳ ಸಂಚಾರ ತಾತ್ಕಾಲಿಕವಾಗಿ ಸ್ಥಗಿತಗೊಂಡಿದೆ. ರೈಲ್ವೆ ಇಲಾಖೆ ಸಿಬ್ಬಂದಿಯಿಂದ ದುರಸ್ತಿ ಕಾರ್ಯ ನಡೆದಿದೆ.

ಹಾಸನದಲ್ಲಿ ವರುಣಾರ್ಭಟ: 15 ಕಡೆ ಭೂಕುಸಿತ, ಬೆಂಗಳೂರು-ಮಂಗಳೂರು ರೈಲ್ವೆ ಮಾರ್ಗ ತಾತ್ಕಾಲಿಕ ಬಂದ್
ಭಾರೀ ಮಳೆಗೆ ಮಣ್ಣು ಕುಸಿತ
ಮಂಜುನಾಥ ಕೆಬಿ
| Edited By: |

Updated on:Aug 17, 2025 | 9:42 AM

Share

ಹಾಸನ, ಆಗಸ್ಟ್​ 17: ಜಿಲ್ಲೆಯ ಮಲೆನಾಡು ಭಾಗದಲ್ಲಿ ವರುಣಾರ್ಭಟ (rain) ಜೋರಾಗಿದೆ. ಭಾರೀ ಮಳೆಯಿಂದಾಗಿ  7 ಕಿ.ಮೀ ವ್ಯಾಪ್ತಿಯಲ್ಲಿ 15 ಕಡೆಗಳಲ್ಲಿ ಭೂಕುಸಿತ ಉಂಟಾಗಿದೆ. ಸಕಲೇಶಪುರ ತಾಲೂಕಿನ ಎಡಕುಮಾರಿ ಸಮೀಪ ರೈಲ್ವೆ ಹಳಿ ಮೇಲೆ ಮಣ್ಣು ಕುಸಿದಿದ್ದು, ಬೆಂಗಳೂರು ಟು ಮಂಗಳೂರು (Bengaluru t0 Mangaluru) ರೈಲ್ವೆ ಮಾರ್ಗ ತಾತ್ಕಾಲಿಕ ಬಂದ್ ಆಗಿದೆ.

ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನ ಮಾರನಹಳ್ಳಿಯಲ್ಲಿ ಮಳೆ ಅವಾಂತರ ಸೃಷ್ಟಿಸಿದೆ. ರಾಷ್ಟ್ರೀಯ ಹೆದ್ದಾರಿ 75ರಲ್ಲಿ ಭೂಕುಸಿತವಾಗಿದ್ರಿಂದಾಗಿ ಮರ, ಗಿಡಗಳ ಸಮೇತ ಮಣ್ಣು ರಸ್ತೆಗೆ ಕುಸಿಯುತ್ತಿದೆ. ಶಿರಾಡಿಘಾಟ್ ರಸ್ತೆಯಲ್ಲಿ ಸಂಚಾರ ಅಸ್ತವ್ಯಸ್ತ ಉಂಟಾಗಿದೆ.

7 KM ವ್ಯಾಪ್ತಿಯಲ್ಲಿ 15 ಕಡೆ ಭೂಕುಸಿತ

ಹಾಸನದ ಸಕಲೇಶಪುರದ 7 ಕಿ.ಮೀ ವ್ಯಾಪ್ತಿಯಲ್ಲೇ 15 ಕಡೆ ಭೂಕುಸಿತವಾಗಿದೆ. ಎಡಕುಮಾರಿ ಸಮೀಪ ಹಳಿ ಮೇಲೆ ಮಣ್ಣು ಕುಸಿದು ಬೆಂಗಳೂರು ಟು ಮಂಗಳೂರು ರೈಲ್ವೆ ಮಾರ್ಗ ತಾತ್ಕಾಲಿಕ ಸ್ಥಗಿತವಾಗಿದೆ.  ಮತ್ತೊಂದೆಡೆ ಇದೇ ಮಾರನಹಳ್ಳಿ ಸಮೇಪ ಕಾರಿನ ಮೇಲೆ ಬೃಹತ್‌ ಮರವೊಂದು ಬಿದ್ದಿದೆ. ಮಳೆ ನಡುವೆಯೂ ಪೊಲೀಸರು ಕಾರಿನಲ್ಲಿದ್ದವರನ್ನ ರಕ್ಷಿಸಿದ್ದಾರೆ.

ಇದನ್ನೂ ಓದಿ: ಶಿರಾಡಿಘಾಟ್ ಜಲಪಾತವೊಂದರ ಬಳಿ ಕೆಳಗೆ ಉರುಳಿಬಿದ್ದ ಕಾರು, ಅದೃಷ್ಟವಶಾತ್ ಪ್ರಯಾಣಿಕರು ಸೇಫ್

ಭಾರಿ ಗಾಳಿ ಮಳೆಗೆ ಚಿಕ್ಕಮಗಳೂರು ಕೊಪ್ಪದ ಭೈರೇದೇವರು ಗ್ರಾಮದಲ್ಲಿ ಮರ ಬಿದ್ದು ಮನೆಗೆ ಹಾನಿಯಾಗಿದೆ. ಭಾಸ್ಕರ್ ಭಟ್ ಎಂಬುವರ ಮನೆಯಲ್ಲಿ ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯವಾಗಿಲ್ಲ. ಮುಂದಿನ ನಾಲ್ಕು ದಿನ ಜಿಲ್ಲೆಯಲ್ಲಿ ಭಾರಿ ಮಳೆ ಮುನ್ಸೂಚನೆಯಿದ್ದು, ಪ್ರವಾಸಿಗರು ಎಚ್ಚರವಹಿಸುವಂತೆ ಜಿಲ್ಲಾಡಳಿತ ಸೂಚಿಸಿದೆ. ಅತ್ತ ಕೋಲಾರ, ವೇಮಗಲ್, ಮಾಲೂರಿನಲ್ಲಿ ಮಳೆಯಾಗಿದೆ. ಆಗಸ್ಟ್ 20ರವರೆಗೆ ರಾಜ್ಯಾದ್ಯಂತ ಮಳೆಯಾಗುವುದಾಗಿ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಮಲಪ್ರಭಾ ನದಿ ನೀರಿನ ರಭಸಕ್ಕೆ ಒಡೆದ ಸೇತುವೆ

ಬಾಗಲಕೋಟೆ ಜಿಲ್ಲೆಯ ಹುನಗುಂದ ತಾಲೂಕಿನ ಬೇವಿನಾಳ, ಸುರಳಿಕಲ್ ಮಧ್ಯೆ, ಮಲಪ್ರಭಾ ನದಿಗೆ ಅಡ್ಡಲಾಗಿ ಬ್ರಿಡ್ಜ್​ ಬಳಿ ತಡೆಗೋಡೆ‌ ಕಟ್ಟಲಾಗಿದೆ. ಆದರೆ ಮಳೆ ಹೆಚ್ಚಾಗಿದ್ದು, ಮಲಪ್ರಭಾ ನದಿಯಿಂದ ನೀರು ಶರವೇಗದಲ್ಲಿ ಮುನ್ನುಗ್ಗುತ್ತಿದೆ. ಇದರಿಂದಾಗಿ ತಡೆಗೋಡೆ ಒಡೆದು ಹೊಲ, ಗದ್ದೆಗಳಿಗೆ ನೀರು ನುಗ್ಗಿದೆ. ಕಬ್ಬು ಸೇರಿದಂತೆ ಇತರೆ ಬೆಳೆಗಳು ಸಂಪೂರ್ಣ ಜಲಾವೃತವಾಗಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 8:52 am, Sun, 17 August 25

Follow Us
ಅಸ್ಸಾಂನ ಬುಡಕಟ್ಟು ಮಹಿಳೆಯ ಪಾದ ಮುಟ್ಟಿ ನಮಸ್ಕರಿಸಿದ ಪ್ರಧಾನಿ ಮೋದಿ!
ಅಸ್ಸಾಂನ ಬುಡಕಟ್ಟು ಮಹಿಳೆಯ ಪಾದ ಮುಟ್ಟಿ ನಮಸ್ಕರಿಸಿದ ಪ್ರಧಾನಿ ಮೋದಿ!
ಅಸ್ಸಾಂನಲ್ಲಿ 19,480 ಕೋಟಿ ರೂ. ಮೌಲ್ಯದ ಯೋಜನೆಗಳನ್ನು ಉದ್ಘಾಟಿಸಿದ ಮೋದಿ
ಅಸ್ಸಾಂನಲ್ಲಿ 19,480 ಕೋಟಿ ರೂ. ಮೌಲ್ಯದ ಯೋಜನೆಗಳನ್ನು ಉದ್ಘಾಟಿಸಿದ ಮೋದಿ
ನೌಕಾ ಡ್ರೋನ್​ಗಳು, ಕ್ಷಿಪಣಿಗಳ ಭೂಗತ ಸುರಂಗದ ವಿಡಿಯೋ ಬಿಡುಗಡೆ ಮಾಡಿದ ಇರಾನ್
ನೌಕಾ ಡ್ರೋನ್​ಗಳು, ಕ್ಷಿಪಣಿಗಳ ಭೂಗತ ಸುರಂಗದ ವಿಡಿಯೋ ಬಿಡುಗಡೆ ಮಾಡಿದ ಇರಾನ್
ಪುನೀತ್ ಇಲ್ಲದೇ ‘ಆಕಾಶ್’ ಸಿನಿಮಾ ನೋಡೋಕೆ ಕಷ್ಟ ಆಗುತ್ತದೆ: ರಾಘಣ್ಣ ಭಾವುಕ
ಪುನೀತ್ ಇಲ್ಲದೇ ‘ಆಕಾಶ್’ ಸಿನಿಮಾ ನೋಡೋಕೆ ಕಷ್ಟ ಆಗುತ್ತದೆ: ರಾಘಣ್ಣ ಭಾವುಕ
13 ವರ್ಷ ನಂತರ ಜೈಲಿನಿಂದ ರಿಲೀಸ್ ಆಗುತ್ತಿದ್ದಂತೆಯೇ ಕೈದಿ ಫುಲ್ ಖುಷ್
13 ವರ್ಷ ನಂತರ ಜೈಲಿನಿಂದ ರಿಲೀಸ್ ಆಗುತ್ತಿದ್ದಂತೆಯೇ ಕೈದಿ ಫುಲ್ ಖುಷ್
ಬೌಲರ್​ಗೆ ಬಾಲ್ ನೀಡಿ ರನೌಟ್ ಆದ ಪಾಕ್ ಬ್ಯಾಟರ್
ಬೌಲರ್​ಗೆ ಬಾಲ್ ನೀಡಿ ರನೌಟ್ ಆದ ಪಾಕ್ ಬ್ಯಾಟರ್
ಯುವಕ ಸ್ಟೇಜ್​​​​ ಮೇಲೇರಿ ಸಿದ್ದರಾಮಯ್ಯಗೆ ಹೇಳಿದ್ದೇನು ಗೊತ್ತಾ?
ಯುವಕ ಸ್ಟೇಜ್​​​​ ಮೇಲೇರಿ ಸಿದ್ದರಾಮಯ್ಯಗೆ ಹೇಳಿದ್ದೇನು ಗೊತ್ತಾ?
ಯುದ್ಧ ಕಾರ್ಮೊಡದ ನಡುವೆ ಯುಎಇಯಿಂದ ಡಾಂಬರು ಹೊತ್ತು ಕಾರವಾರಕ್ಕೆ ಬಂದ ಹಡಗು
ಯುದ್ಧ ಕಾರ್ಮೊಡದ ನಡುವೆ ಯುಎಇಯಿಂದ ಡಾಂಬರು ಹೊತ್ತು ಕಾರವಾರಕ್ಕೆ ಬಂದ ಹಡಗು
ಪಾಕ್ ಕ್ರಿಕೆಟಿಗನ ಖರೀದಿ ಬಗ್ಗೆ ಮೊದಲ ಬಾರಿಗೆ ಪ್ರತಿಕ್ರಿಯಿಸಿದ ಬಿಸಿಸಿಐ
ಪಾಕ್ ಕ್ರಿಕೆಟಿಗನ ಖರೀದಿ ಬಗ್ಗೆ ಮೊದಲ ಬಾರಿಗೆ ಪ್ರತಿಕ್ರಿಯಿಸಿದ ಬಿಸಿಸಿಐ
‘ಆಕಾಶ್’ ಸಿನಿಮಾ ಮರುಬಿಡುಗಡೆ: ಪುನೀತ್ ಕಟೌಟ್​ಗೆ ಹಾಲಿನ ಅಭಿಷೇಕ
‘ಆಕಾಶ್’ ಸಿನಿಮಾ ಮರುಬಿಡುಗಡೆ: ಪುನೀತ್ ಕಟೌಟ್​ಗೆ ಹಾಲಿನ ಅಭಿಷೇಕ