AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಾಸನ ಮೈತ್ರಿ ಅಭ್ಯರ್ಥಿ ಪ್ರಜ್ವಲ್ ರೇವಣ್ಣ ಆಸ್ತಿ ಮೌಲ್ಯ ನಾಲ್ಕು ಪಟ್ಟು ಹೆಚ್ಚಳ; ಎಷ್ಟು ಗೊತ್ತಾ?

ಹಾಸನ ಲೋಕಸಭಾ ಕ್ಷೇತ್ರದ ಬಿಜೆಪಿ ಜೆಡಿಎಸ್ ಮೈತ್ರಿ ಅಭ್ಯರ್ಥಿ ಸಂಸದ ಪ್ರಜ್ವಲ್ ರೇವಣ್ಣ ಅವರು ನಿನ್ನೆ ನಾಮಪತ್ರ ಸಲ್ಲಿಕೆ ಮಾಡಿದ್ದಾರೆ. ನಾಮಪತ್ರದಲ್ಲಿ ಪ್ರಜ್ವಲ್ ಅವರು ತಮ್ಮ ಆಸ್ತಿ ಮೌಲ್ಯಗಳನ್ನು ಘೋಷಿಸಿದ್ದಾರೆ. ತಮ್ಮ ಒಟ್ಟು ಆಸ್ತಿ ಮೌಲ್ಯ 40.94 ಕೋಟಿ ಎಂದು ಘೋಷಿಸಿದ್ದಾರೆ. 2019ರ ಚುನಾವಣೆಯಲ್ಲಿ ಘೋಷಿಸಿದ ಆಸ್ತಿ ಮೌಲ್ಯಕ್ಕೆ ನಾಲ್ಕು ಪಟ್ಟು ಹೆಚ್ಚಳವಾಗಿದೆ.

ಹಾಸನ ಮೈತ್ರಿ ಅಭ್ಯರ್ಥಿ ಪ್ರಜ್ವಲ್ ರೇವಣ್ಣ ಆಸ್ತಿ ಮೌಲ್ಯ ನಾಲ್ಕು ಪಟ್ಟು ಹೆಚ್ಚಳ; ಎಷ್ಟು ಗೊತ್ತಾ?
ಪ್ರಜ್ವಲ್ ರೇವಣ್ಣ
ಮಂಜುನಾಥ ಕೆಬಿ
| Updated By: Rakesh Nayak Manchi|

Updated on: Mar 29, 2024 | 7:26 AM

Share

ಹಾಸನ, ಮಾ.29: ಲೋಕಸಭಾ ಕ್ಷೇತ್ರದ ಬಿಜೆಪಿ ಜೆಡಿಎಸ್ ಮೈತ್ರಿ ಅಭ್ಯರ್ಥಿ ಸಂಸದ ಪ್ರಜ್ವಲ್ ರೇವಣ್ಣ (Prajwal Revanna) ಅವರು ನಿನ್ನೆ ನಾಮಪತ್ರ ಸಲ್ಲಿಕೆ ಮಾಡಿದ್ದಾರೆ. ನಾಮಪತ್ರದಲ್ಲಿ ಪ್ರಜ್ವಲ್ ಅವರು ತಮ್ಮ ಆಸ್ತಿ ಮೌಲ್ಯಗಳನ್ನು (Property Value) ಘೋಷಿಸಿದ್ದಾರೆ. ತಮ್ಮ ಒಟ್ಟು ಆಸ್ತಿ ಮೌಲ್ಯ 40.94 ಕೋಟಿ ಎಂದು ಘೋಷಿಸಿದ್ದಾರೆ. 2019ರ ಚುನಾವಣೆಯಲ್ಲಿ ಘೋಷಿಸಿದ ಆಸ್ತಿ ಮೌಲ್ಯಕ್ಕೆ ನಾಲ್ಕು ಪಟ್ಟು ಹೆಚ್ಚಳವಾಗಿದೆ. 2019 ರ ಲೋಕಸಭಾ ಚುನಾವಣೆ ವೇಳೆ ಸಲ್ಲಿಸಿದ್ದ ಅಫಿಡವಿಟ್‌ನಲ್ಲಿ ಅವರು ತಮ್ಮ ಒಟ್ಟು ಆಸ್ತಿ ಮೌಲ್ಯ 9.78 ಕೋಟಿ ರೂಪಾಯಿ ಎಂದು ಘೋಷಿಸಿದ್ದರು.

ಪ್ರಜ್ವಲ್ ರೇವಣ್ಣ ಅವರು ಅಫಿಡವಿಟ್‌ನಲ್ಲಿ ತಮ್ಮ ಒಟ್ಟು ಆಸ್ತಿ ಮೌಲ್ಯ 40.94 ಕೋಟಿ ರೂಪಾಯಿ ಎಂದು ಘೋಷಿಸಿದ್ದಾರೆ. ಈ ಪೈಕಿ 5.44 ಕೋಟಿ ರೂಪಾಯಿ ಮೌಲ್ಯದ ಚರಾಸ್ತಿ, 35.40 ಕೋಟಿ ರೂಪಾಯಿ ಸ್ಥಿರಾಸ್ತಿ ಹೊಂದಿದ್ದಾರೆ. ಅಲ್ಲದೆ, 9.29 ಲಕ್ಷ ನಗದು ಹೊಂದಿರುವುದಾಗಿ ಪ್ರಮಾಣ ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

ಇದನ್ನೂ ಓದಿ: ನಾಮಪತ್ರ ಸಲ್ಲಿಸಿದ ಡಿಕೆ ಸುರೇಶ್‌ 593.04 ಕೋಟಿ ರೂ. ಒಡೆಯ, ಆದ್ರೂ ಒಂದು ಸ್ವಂತ ಕಾರು ಇಲ್ಲ!

ವಿವಿಧ ಬ್ಯಾಂಕ್​ಗಳ ಉಳಿತಾಯ ಖಾತೆಯಲ್ಲಿ 56 ಲಕ್ಷ ನಗದು ಇದ್ದು, 5 ವರ್ಷದಲ್ಲಿ ಕೃಷಿಯಿಂದ 2.75 ಕೋಟಿ ಆದಾಯ ಗಳಿಸಿದ್ದಾರೆ ಎಂದು ಅಫಿಡವಿಟ್‌ನಲ್ಲಿ ತಿಳಿಸಿದ್ದಾರೆ. ಕೃಷಿಯೇತರ ಮೂಲದಿಂದ 1.33 ಕೋಟಿ ಆದಾಯ ಗಳಿಸಿದ್ದು, 31 ಹಸುಗಳು, 4 ಎತ್ತುಗಳು, 1 ಟ್ರ್ಯಾಕ್ಟರ್ ಹೊಂದಿದ್ದಾರೆ.

ಪ್ರಜ್ವಲ್ ರೇವಣ್ಣ ಮಾಡಿದ ಸಾಲ

ಬೆಂಗಳೂರು ನಗರ, ಮೈಸೂರು ಸೇರಿದಂತೆ ವಿವಿಧೆಡೆ ವಾಣಿಜ್ಯ ಕಟ್ಟಡ, ಹೊಳೆನರಸೀಪುರ, ನೆಲಮಂಗಲದಲ್ಲಿ ಆಸ್ತಿ ಹೊಂದಿದ್ದಾರೆ. ಅತ್ತೆ ಅನುಸೂಯಾರಿಂದ 22 ಲಕ್ಷ, ಅತ್ತೆ ಶೈಲಜಾರಿಂದ 10 ಲಕ್ಷ ಸಾಲ ಪಡೆದಿದ್ದು, ತಂದೆ ರೇವಣ್ಣರಿಂದ 86 ಲಕ್ಷ, ಸೋದರ ಸೂರಜ್​ರಿಂದ 1 ಕೋಟಿ ಸಾಲ ಮಾಡಿದ್ದಾರೆ. ಹೀಗೆ ಒಟ್ಟು 4.48 ಕೋಟಿ ಸಾಲ ಹೊಂದಿದ್ದಾರೆ.

ತೆರಿಗೆ ಬಾಕಿ ಉಳಿಸಿಕೊಂಡ ಪ್ರಜ್ವಲ್ ರೇವಣ್ಣ

ಸರ್ಕಾರಕ್ಕೆ 3.4 ಕೋಟಿ ತೆರಿಗೆ ಬಾಕಿ ಉಳಿಸಿಕೊಂಡಿದ್ದಾರೆ. ಈ ಬಗ್ಗೆ ಕಾನೂನು ಹೋರಾಟ ನಡೆಸುತ್ತಿರುವ ಬಗ್ಗೆಯೂ ಉಲ್ಲೇಖ ಮಾಡಿದ್ದಾರೆ. 67 ಲಕ್ಷ ಮೌಲ್ಯದ 1 ಕೆ.ಜಿ. 100 ಗ್ರಾಂ ಚಿನ್ನ ಹೊಂದಿದ್ದಾರೆ. 17.48 ಲಕ್ಷ ಮೌಲ್ಯದ 23 ಕೆ.ಜಿ. ಬೆಳ್ಳಿ, 1.90 ಲಕ್ಷ ಮೌಲ್ಯದ ವಜ್ರಾಭರಣ ಹೊಂದಿದ್ದಾರೆ. ಈ ಬಗ್ಗೆ ನಾಮಪತ್ರ ಸಲ್ಲಿಕೆ ವೇಳೆ ಘೋಷಿಸಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ