ಪ್ರೇಯಸಿಯನ್ನೇ ಅತ್ಯಾಚಾರಗೈದು ಹತ್ಯೆಗೈದಿದ್ದ ಪ್ರಿಯಕರನಿಗೆ ಜೈಲಲ್ಲೇ ಕೊಳೆಯುವ ಶಿಕ್ಷೆ

ಪ್ರಿಯಕರ ಪ್ರೇಯಸಿ ಮೇಲೆ ಅತ್ಯಾಚಾರಗೈದು ಹತ್ಯೆ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಹಾಸನದ 3ನೇ ಅಧಿಕ ಸಷೆನ್ಸ್ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ತನ್ನ‌ ಹುಟ್ಟು ಹಬ್ಬ ಆಚರಣೆ ಮಾಡಲು ಬಂದ ಪ್ರೇಮಿಯನ್ನ ಅತ್ಯಾಚಾರ ಮಾಡಿ ಬಳಿಕ ಉಸಿರು ಗಟ್ಟಿಸಿ ಕೊಲೆ ಮಾಡಿದ್ದ ಪ್ರಿಯಕರನಿಗೆ ಜೈಲಿನಲ್ಲೇ ಕೊಳೆಯುವ ಶಿಕ್ಷೆ ವಿಧಿಸಿದೆ.

ಪ್ರೇಯಸಿಯನ್ನೇ ಅತ್ಯಾಚಾರಗೈದು ಹತ್ಯೆಗೈದಿದ್ದ ಪ್ರಿಯಕರನಿಗೆ ಜೈಲಲ್ಲೇ ಕೊಳೆಯುವ ಶಿಕ್ಷೆ
Praveen
Edited By:

Updated on: Apr 30, 2026 | 4:37 PM

ಹಾಸನ, (ಏಪ್ರಿಲ್ 30): ಬೇಲೂರು ತಾಲ್ಲೂಕಿನ ಯುವತಿಯನ್ನ ಪ್ರೀತಿಸೋದಾಗಿ (Love) ನಂಬಿಸಿ ಅತ್ಯಾಚಾರ ಎಸಗಿ ಬಳಿಕ ಕೊಲೆ ಮಾಡಿರುವ ಪ್ರಿಯಕರಿನಿಗೆ ಕೋರ್ಟ್​ ಜೀವಾವಧಿ ಶಿಕ್ಷೆ ವಿಧಿಸಿದೆ. ಪ್ರೇಮಿ ಪ್ರವೀಣ್ ಗೆ ಜೀವಾವದಿ ಶಿಕ್ಷೆ ವಿಧಿಸಿ ಹಾಸನದ (Hassan) 3ನೇ ಅಧಿಕ ಸಷೆನ್ಸ್ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಇನ್ನು ಸಾಕ್ಷಿನಾಶ ಆರೋಪದಲ್ಲಿ ಎ2 ತಮ್ಮಣ್ಣಿಗೆ ಎರಡು ವರ್ಷ. ಕಠಿಣ ಜೈಲು ಶಿಕ್ಷೆ ವಿಧಿಸಿದೆ. 2018 ರ ಏಪ್ರಿಲ್ 22ರಂದು ತನ್ನ‌ ಹುಟ್ಟು ಹಬ್ಬ ಆಚರಣೆ ಮಾಡಲು ಬಂದ ಪ್ರೇಯಸಿ ಮೇಲೆ ಅತ್ಯಾಚಾರ ಎಸಗಿ ಬಳಿಕ ಆಕೆಯನ್ನು ಪ್ರವೀಣ್ ಉಸಿರುಗಟ್ಟಿಸಿ ಕೊಲೆ ಮಾಡಿದ್ದ.

2018 ರ ಏಪ್ರಿಲ್ 22 ರಂದು ಹಾಸನ‌ ತಾಲ್ಲೂಕಿನ ಕಲ್ಕೆರೆ ಗ್ರಾಮದ ಬಳಿ ಹಾಡ್ಲಗೆರೆಯ ಪ್ರವೀಣ್, ತನ್ನ ಪ್ರೇಯಸಿ ಮೇಲೆ ಅತ್ಯಾಚಾರ ಎಸಗಿ ಬಳಿಕ ಆಕೆಯನ್ನು ಉಸಿರುಗಟ್ಟಿಸಿ ಕೊಲೆ ಮಾಡಿದ್ದ. ಬಳಿಕ ಹಾಸನ ಗ್ರಾಮಾಂತರ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಿ ಬಳಿಕ ಕೋರ್ಟ್​​ಗೆ ಚಾರ್ಜ್ ಶೀಟ್ ಸಲ್ಲಿಕೆ ಮಾಡಿದ್ದರು. ಬಳಿಕ ಹಾಸನದ 3ನೇ ಅಧಿಕ ಸಷೆನ್ಸ್ ಕೋರ್ಟ್ ಸುದೀರ್ಘ ವಿಚಾರಣೆ ನಡೆಸಿ ಅಂತಿಮವಾಗಿ ಪ್ರಿಯಕರ ಪ್ರವೀಣ್​​ಗೆ ಜೀವಾವಧಿ ಶಿಕ್ಷೆ ಹಾಗೂ ಸಾಕ್ಷಿನಾಶ ಆರೋಪದಲ್ಲಿ ಎ2 ತಮ್ಮಣ್ಣಿಗೆ ಎರಡು ವರ್ಷ ಕಠಿಣ ಜೈಲು ಶಿಕ್ಷೆ ವಿಧಿಸಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಮಂಜುನಾಥ ಕೆಬಿ

ಮಂಜುನಾಥ ಕೆಬಿ ಪತ್ರಿಕೋದ್ಯಮದಲ್ಲಿ ಕಳೆದ 17 ವರ್ಷಗಳಿಂದ ಸೇವೆ ಮಾಡುತ್ತಿದ್ದೇನೆ. ಕರುನಾಡಿನ ಹೆಮ್ಮೆಯ ಸುದ್ದಿ ವಾಹಿನಿ ಟಿವಿ9 ಕನ್ನಡ ಜೊತೆಗೆ 15ನೇ ವರ್ಷದ ಪಯಣ ನನ್ನದು. ಓದಿದ್ದು, ಮೈಸೂರು ವಿವಿಯಲ್ಲಿ ಕಾನೂನು ಪದವಿ, ಎರಡು ವರ್ಷ ವಕೀಲ ವೃತ್ತಿ ಬಳಿಕ ಮಾಧ್ಯಮ ಕ್ಷೇತ್ರಕ್ಕೆ ಆಗಮಿಸಿ ಟಿವಿ9 ವಾಹಿನಿ ಮೂಲಕ ಸಮಸ್ಯೆಗೆ ಧ್ವನಿಯಾಗಿ ಕಾಯಕ. ಕೊಡಗಿನಲ್ಲಿ ಐದುವರೆ ವರ್ಷ ವರದಿಗಾರನಾಗಿ ಕರ್ತವ್ಯ ನಿರ್ವಹಿಸಿದ್ದು, ಇದೀಗ ಹಾಸನದ ಹಿರಿಯ ವರದಿಗಾರನಾಗಿ ಕರ್ತವ್ಯ ನಿರ್ವಹಣೆ ಮಾಡುತ್ತಿದ್ದೇನೆ.

Read More
Loading...
Unable to load recommendations.
Follow Us