AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಾಸನದಲ್ಲಿ ಕ್ಷುಲ್ಲಕ ಕಾರಣಕ್ಕೆ ಯುವಕರ ಮೇಲೆ ಮಚ್ಚಿನಿಂದ ಹಲ್ಲೆ; ವಿಡಿಯೋ ವೈರಲ್

ಕೈಯಲ್ಲಿ ಕತ್ತಿ ಹಿಡಿದು ರಸ್ತೆಯಲ್ಲಿ ಹಲ್ಲೆ ಮಾಡಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಮೆಕ್ಯಾನಿಕ್ ಶಿರು ಎಂಬಾತನ ಮೇಲೆ ಗಂಭೀರ ಹಲ್ಲೆ ನಡೆದಿದೆ.

ಹಾಸನದಲ್ಲಿ ಕ್ಷುಲ್ಲಕ ಕಾರಣಕ್ಕೆ ಯುವಕರ ಮೇಲೆ ಮಚ್ಚಿನಿಂದ ಹಲ್ಲೆ; ವಿಡಿಯೋ ವೈರಲ್
ಮಚ್ಚಿನಿಂದ ಹಲ್ಲೆ
TV9 Web
| Edited By: |

Updated on: Aug 29, 2021 | 10:11 AM

Share

ಹಾಸನ: ಕ್ಷುಲ್ಲಕ ಕಾರಣಕ್ಕೆ ಮಚ್ಚಿನಿಂದ ಹಲ್ಲೆ ಮಾಡಿರುವ ಘಟನೆ ಹಾಸನ ನಗರದ ರಾಜಕುಮಾರ್ ಬಡಾವಣೆಯ 80 ಅಡಿ ರಸ್ತೆಯಲ್ಲಿ ನಡೆದಿದೆ. ಮೂವರು ಯುವಕರ ಮೇಲೆ ಹಲ್ಲೆ ನಡೆದಿದ್ದು, ಕೈಯಲ್ಲಿ ಕತ್ತಿ ಹಿಡಿದು ರಸ್ತೆಯಲ್ಲಿ ಹಲ್ಲೆ ಮಾಡಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಮೆಕ್ಯಾನಿಕ್ ಶಿರು ಎಂಬಾತನ ಮೇಲೆ ಗಂಭೀರ ಹಲ್ಲೆ ನಡೆದಿದೆ. ಹಲ್ಲೆ ಮಾಡಿದ ಆರೋಪಿ ಶಾಹೀದ್ ಎಂಬುವವನು ಪರಾರಿಯಾಗಿದ್ದಾನೆ.

ಕೈಯಲ್ಲಿ ಕತ್ತಿ ಹಿಡಿದು ರಸ್ತೆಯಲ್ಲಿ ಹಲ್ಲೆ ಮದ್ಯದ ಅಮಲಿನಲ್ಲಿ ಪುಂಡರು ಯುವಕರ ಮೇಲೆ ಹಲ್ಲೆ ಮಾಡಿದ್ದಾರೆ. ಈ ಘಟನೆ ಬೆಂಗಳೂರಿನ ಅಮೃತಹಳ್ಳಿ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಸಿನಿಮೀಯ ರೀತಿಯಲ್ಲಿ ಓಡಿ ಬಂದ ಪುಂಡರು ಕಬ್ಬಿಣದ ರಾಡ್​ನಿಂದ ಯುವಕರಿಗೆ ಹಿಗ್ಗಾಮುಗ್ಗಾ ಹೊಡೆದಿದ್ದಾರೆ. ಹಲ್ಲೆಯಿಂದ ಇಬ್ಬರು ಯುವಕರ ಮುಖಕ್ಕೆ ಗಾಯವಾಗಿದ್ದು, ಹಲ್ಲೆ ನಡೆಸಿರುವ ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ. ಯುವಕರು ಗುರಾಯಿಸಿದರು ಅಂತ ನೆಪ ಹೇಳಿ ಹಲ್ಲೆ ಮಾಡಿದ್ದಾರೆ ಎಂದು ತಿಳಿದುಬಂದಿದೆ. ಕಳೆದ ಎರಡು ದಿನಗಳ ಹಿಂದೆ ಈ ಘಟನೆ ನಡೆದಿದೆ. ಸದ್ಯ ಆರೋಪಿಗಳ ಪತ್ತೆಗಾಗಿ ಪೊಲೀಸರು ಹುಡುಕಾಟ ನಡೆಸುತ್ತಿದ್ದಾರೆ.

ವೃದ್ಧನ ಅಡ್ಡಗಟ್ಟಿ ದರೋಡೆ ರಸ್ತೆಯಲ್ಲಿ ಮನೆಗೆ ನಡೆದುಕೊಂಡು ಹೋಗುತ್ತಿದ್ದ 65 ವರ್ಷದ ವ್ಯಕ್ತಿಯ ಮೇಲೆ ಇದ್ದಕ್ಕಿದ್ದಂತೆ ದಾಳಿ ಮಾಡಿದ ದರೋಡೆಕೋರರು ಅವರ ಬಳಿಯಿದ್ದ ಹಣವನ್ನೆಲ್ಲ ದೋಚಿಕೊಂಡು ಓಡಿಹೋಗಿರುವ ಘಟನೆ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಆ ವ್ಯಕ್ತಿ ನಡೆದುಕೊಂಡು ಹೋಗುವಾಗ ಹಿಂದಿನಿಂದ ಬಹಳ ದೂರ ಹಿಂಬಾಲಿಸಿದ ಇಬ್ಬರು ಅಪರಿಚಿತರು ಆ ವ್ಯಕ್ತಿಯ ಕುತ್ತಿಗೆಯನ್ನು ಹಿಡಿದು, ಆತನ ಕೈಲಿದ್ದ ಬ್ಯಾಗ್ನೊಂದಿಗೆ ಪರಾರಿಯಾಗಿದ್ದಾರೆ. ಬೆಳಗಿನ ಜಾವ 3.30ಕ್ಕೆ ರಾಮ್ ನಿವಾಸ್ ಎಂಬ ವ್ಯಕ್ತಿ ತನ್ನ ಮನೆಗೆ ನಡೆದುಕೊಂಡು ಹೋಗುವಾಗ ಅಪರಿಚಿತರು ದಾಳಿ ನಡೆಸಿದ್ದಾರೆ. ಅವರು ತಮ್ಮ ಮನೆ ತಲುಪುವ ಸ್ವಲ್ಪ ಹೊತ್ತಿನ ಮೊದಲು ಈ ಘಟನೆ ನಡೆದಿದೆ. ಹಿಂದಿನಿಂದ ಬಂದ ಇಬ್ಬರ ರಾಮ್ ಅವರ ಕುತ್ತಿಗೆಯನ್ನು ಹಿಡಿದು, ಅವರ ಕೈಲಿದ್ದ ಬ್ಯಾಗ್ ಕಸಿದುಕೊಂಡು ಓಡಿಹೋಗಿದ್ದಾರೆ. ಈ ಘಟನೆ ರಾಷ್ಟ್ರದ ರಾಜಧಾನಿ ದೆಹಲಿಯಲ್ಲಿ ನಡೆದಿದೆ.

ಇದನ್ನೂ ಓದಿ

ಹಳೇ ಚಾಳಿ ಮುಂದುವರಿಸಿದ ತಾಲಿಬಾನ್​; ಗಾಯಕನ ಹತ್ಯೆ

ಅಮ್ಮನ ಜತೆ ಸರತಿ ಸಾಲಿನಲ್ಲಿ ಸಾಗುತ್ತಿರುವ ಬಾತುಕೋಳಿ ಮರಿಗಳು; ಅಪರೂಪದ ದೃಶ್ಯ ಕ್ಯಾಮರಾದಲ್ಲಿ ಸೆರೆ

(hassan man has assaulted a youth and this Video Viral on social media)

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್