ಬೇಲೂರಿನಲ್ಲಿ ಗಣೇಶ ವಿಗ್ರಹಕ್ಕೆ ಚಪ್ಪಲಿ ಹಾರ ಹಾಕಿದ ಕಿಡಿಗೇಡಿಗಳು: ಹೊಟ್ಟೆಗೇನು​​ ತಿಂತಾರೆ ಎಂದ ಜನ

Updated By: ಗಂಗಾಧರ​ ಬ. ಸಾಬೋಜಿ

Updated on: Sep 21, 2025 | 8:37 AM

ಬೇಲೂರಿನ ಶ್ರೀ ವರಸಿದ್ಧಿ ವಿನಾಯಕ ದೇವಾಲಯದಲ್ಲಿ ಗಣೇಶನ ವಿಗ್ರಹಕ್ಕೆ ಚಪ್ಪಲಿ ಹಾರ ಹಾಕಿದ ಘಟನೆ ಭಕ್ತರಲ್ಲಿ ಆಕ್ರೋಶಕ್ಕೆ ಕಾರಣವಾಗಿದೆ. ಇಂದು ಬೆಳಗ್ಗೆ ಈ ಕೃತ್ಯ ಬೆಳಕಿಗೆ ಬಂದಿದೆ. ಕಿಡಿಗೇಡಿಗಳ ಈ ನೀಚ ಕೃತ್ಯಕ್ಕೆ ಸಾರ್ವಜನಿಕರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ ಮತ್ತು ಆರೋಪಿಗಳ ಬಂಧನಕ್ಕೆ ಒತ್ತಾಯಿಸಿದ್ದಾರೆ.

ಹಾಸನ, ಸೆಪ್ಟೆಂಬರ್​ 21: ಗಣೇಶ ವಿಗ್ರಹಕ್ಕೆ ಚಪ್ಪಲಿ ಹಾರ ಹಾಕಿ ಕಿಡಿಗೇಡಿಗಳು ವಿಕೃತಿ ಮೆರೆದಿರುವಂತಹ ಘಟನೆ ಜಿಲ್ಲೆಯ ಬೇಲೂರಿನ ಪುರಸಭೆ ಆವರಣದ ಶ್ರೀವರಸಿದ್ಧಿ ವಿನಾಯಕ ದೇಗುಲದಲ್ಲಿ ನಡೆದಿದೆ. ಘಟನೆ ಕಂಡು ಇಂದು ಮುಂಜಾನೆ ದೇವರ ದರ್ಶನಕ್ಕೆ ಹೋಗಿದ್ದ ಭಕ್ತರಿಗೆ ಆಘಾತ ಎದುರಾಗಿದೆ. ಕಿಡಿಗೇಡಿಗಳ ಕೃತ್ಯಕ್ಕೆ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.

Published on: Sep 21, 2025 08:34 AM