ಹಾಸನ: ಹೃದಯಾಘಾತದಿಂದ 11 ವರ್ಷದ ಬಾಲಕ ಸಾವು
ಹಾಸನದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಎಂಟನೇ ತರಗತಿ ಓದುತ್ತಿದ್ದ ಸಚಿನ್ಗೆ ನಿನ್ನೆ ಇದ್ದಕ್ಕಿದ್ದಂತೆ ಎದೆ ನೋವು ಕಾಣಿಸಿಕೊಂಡಿತ್ತು. ಎದೆ ನೋವಿನಿಂದ ಶಾಲೆಗೆ ಹೋಗದೆ ಮನೆಯಲ್ಲೇ ಇದ್ದ. ಮನೆಯಲ್ಲಿರುವಾಗ ಏಕಾಏಕಿ ಹೃದಯಾಘಾತವಾಗಿ ಕೊನೆಯುಸಿರೆಳೆದಿದ್ದಾನೆ.
ಹಾಸನ, ಸೆ.21: ಹೃದಯಾಘಾತದಿಂದ (Heart Attack) 11 ವರ್ಷದ ಬಾಲಕ ಮೃತಪಟ್ಟ (Death) ಘಟನೆ ಹಾಸನ ಜಿಲ್ಲೆ ಆಲೂರು ತಾಲೂಕಿನ ಚನ್ನಾಪುರ ಗ್ರಾಮದಲ್ಲಿ ನಡೆದಿದೆ. ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಎಂಟನೇ ತರಗತಿ ಓದುತ್ತಿದ್ದ ಸಚಿನ್ಗೆ ನಿನ್ನೆ ಇದ್ದಕ್ಕಿದ್ದಂತೆ ಎದೆ ನೋವು ಕಾಣಿಸಿಕೊಂಡಿತ್ತು. ಎದೆ ನೋವಿನಿಂದ ಶಾಲೆಗೆ ಹೋಗದೆ ಮನೆಯಲ್ಲೇ ಇದ್ದ. ಮನೆಯಲ್ಲಿರುವಾಗ ಏಕಾಏಕಿ ಹೃದಯಾಘಾತವಾಗಿ ಕೊನೆಯುಸಿರೆಳೆದಿದ್ದಾನೆ.
ಮಲಗಿದ್ದ ಮಗನನ್ನು ಮಾತನಾಡಿಸಲು ಕಾವ್ಯಶ್ರೀ ಮುಂದಾದಾಗ ಮಗ ಮಾತನಾಡಿಲ್ಲ. ಎಚ್ಚರವೂ ಆಗಿಲ್ಲ. ಇದರಿಂದ ಗಾಬರಿಗೊಂಡ ಪೋಷಕರು ತಕ್ಷಣವೇ ಆಲೂರು ಸರ್ಕಾರಿ ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಪರೀಕ್ಷೆ ನಡೆಸಿದ ವೈದ್ಯರು ಬಾಲಕ ಮೃತಪಟ್ಟಿರುವುದನ್ನು ದೃಢ ಪಡಿಸಿದ್ದಾರೆ. ಚಿಕ್ಕವಯಸ್ಸಿನಲ್ಲೇ ಬಾಲಕ ಹೃದಯಾಘಾತಕ್ಕೆ ಬಲಿಯಾಗಿರುವುದು ಸಾರ್ವಜನಿಕ ವಲಯದಲ್ಲಿ ಆತಂಕಕ್ಕೆ ಮನೆ ಮಾಡಿಕೊಟ್ಟಿದೆ.
ಟಿಪ್ಪು ವಿರುದ್ಧ ಭಾಷಣ.. ಯತ್ನಾಳ್ ವಿರುದ್ಧ FIR
ಗಣೇಶ ವಿಸರ್ಜನೆ ಕಾರ್ಯಕ್ರಮದಲ್ಲಿ ಪ್ರಚೋದನಕಾರಿ ಹೇಳಿಕೆ ಹಿನ್ನೆಲೆ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ಧ ಎಫ್ ಐ ಆರ್ ದಾಖಲಿಸಲಾಗಿದೆ. ಮೊನ್ನೆ ಜನತಾರಾಜ್ ಗಣೇಶ ವಿಸರ್ಜನೆ ಕಾರ್ಯಕ್ರಮದ ವೇಳೆ ಟಿಪ್ಪು ಸುಲ್ತಾನ್, ಔರಂಗಾಜೇಬ್ ಬಗ್ಗೆ ಅಶ್ಲೀಲ ಪದ ಬಳಸಿ ಯತ್ನಾಳ್ ಭಾಷಣ ಮಾಡಿದ್ರು. ಹೀಗಾಗಿ ಬಾಗಲಕೋಟೆ ಜಿಲ್ಲೆ ಮುಧೋಳ ಪೊಲೀಸರು ಸ್ವಯಂ ದೂರು ದಾಖಲಿಸಿಕೊಂಡಿದ್ದಾರೆ.
ಇದನ್ನೂ ಓದಿ: ನಾನು ಡಿಸಿಪಿ ಮಗ, ಮುಖ್ಯಮಂತ್ರಿ ನನ್ನ ಸಂಬಂಧಿ ಎಂದು ಸೆಕ್ಯೂರಿಟಿ ಸಿಬ್ಬಂದಿ ಮೇಲೆ ಯುವಕನಿಂದ ಹಲ್ಲೆ
ಮಹಾಗಣಪತಿ ವಿಸರ್ಜನೆ.. ಗಸ್ತು ಹೆಚ್ಚಳ
ಇಂದು ತುಮಕೂರು, ಶಿರಾದಲ್ಲಿ ಮಹಾಗಣಪತಿ ವಿಸರ್ಜನೆ ನಡೆಯಲಿದ್ದು, ಅಹಿತಕರ ಘಟನೆ ನಡೆಯದಂತೆ ಪೊಲೀಸ್ ಸಿಬ್ಬಂದಿ ಗಸ್ತು ಹೆಚ್ಚಿಸಲಾಗಿದೆ. ನಗರದ ಪ್ರಮುಖ ರಸ್ತೆಗಳಲ್ಲಿ ಪೊಲೀಸರು ಗಸ್ತು ತಿರುಗುತ್ತಿದ್ದಾರೆ. ತುಮಕೂರಿನ BGS ವೃತ್ತ, ಮಂಡಿಪೇಟೆ, ಅಶೋಕ ರಸ್ತೆ, ಎಂ.ಜಿ.ರಸ್ತೆಯಲ್ಲಿ ಗಸ್ತು ಹೆಚ್ಚಿಸಲಾಗಿದೆ. ಇಂದು ಯಾರೀ ಅಹಿತಕರ ಘಟನೆ ನಡೆಸಿದರೆ ಮುಲಾಜಿಲ್ಲದೇ ಕ್ರಮಕೈಗೊಳ್ಳಿ ಅಂತಾ SP ಅಶೋಕ್.ಕೆ ವೆಂಕಟ್ ಸೂಚಿಸಿದ್ದಾರೆ
2 ದಿನ ಮದ್ಯ ಮಾರಾಟಕ್ಕೆ ನಿಷೇಧ
ಗಣೇಶ ವಿಸರ್ಜನೆ ಹಿನ್ನೆಲೆ 2 ದಿನ ಮದ್ಯ ಮಾರಾಟ ನಿಷೇಧಿಸಲಾಗಿದೆ. ದಾವಣಗೆರೆಯ ಹರಿಹರ ತಾಲೂಕಿನ ಮಲೆಬೆನ್ನೂರು, ಚನ್ನಗಿರಿ ತಾಲೂಕು, ಹೊನ್ನಾಳಿಯಲ್ಲಿ ಮದ್ಯ ಮಾರಾಟ ನಿಷೇಧಿಸಿದ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ. ಇಂದು ಮಲೇಬೆನ್ನೂರು ಮತ್ತು ನಾಳೆ ಚನ್ನಗಿರಿ ತಾಲೂಕು, ಹೊನ್ನಾಳಿಯಲ್ಲಿ ಬೆಳಗ್ಗೆ 6 ರಿಂದ ರಾತ್ರಿ 12 ಗಂಟೆಯವರೆಗೆ ಮದ್ಯ ಮಾರಾಟಕ್ಕೆ ನಿಷೇಧವಿರಲಿದೆ.
ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ
Published On - 10:17 am, Sat, 21 September 24