Hassan News: ಚಾಲಕನ ನಿಯಂತ್ರಣ ತಪ್ಪಿ ಮಿನಿ ಬಸ್ ಪಲ್ಟಿ: 12 ಜನರಿಗೆ ಗಾಯ
ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್‌ಗೆ ಡಿಕ್ಕಿ ಹೊಡೆದು ಮಿನಿ ಬಸ್ ಪಲ್ಟಿ ಆಗಿದ್ದು, 12 ಜನರಿಗೆ ಗಾಯಗಳಾಗಿರುವಂತಹ ಘಟನೆ ಹಾಸನ ತಾಲೂಕಿನ ಕಾರೇಕೆರೆ ಗೇಟ್ ಬಳಿ ಅಪಘಾತ ಸಂಭವಿಸಿದೆ.
ಹಾಸನ: ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್‌ಗೆ ಡಿಕ್ಕಿ ಹೊಡೆದು ಮಿನಿ ಬಸ್ (mini bus) ಪಲ್ಟಿ ಆಗಿದ್ದು, 12 ಜನರಿಗೆ ಗಾಯಗಳಾಗಿರುವಂತಹ ಘಟನೆ ಹಾಸನ ತಾಲೂಕಿನ ಕಾರೇಕೆರೆ ಗೇಟ್ ಬಳಿ ಅಪಘಾತ ಸಂಭವಿಸಿದೆ. ಸದ್ಯ ಗಾಯಾಳುಗಳನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಚನ್ನರಾಯಪಟ್ಟಣಕ್ಕೆ ಮದುವೆಗೆ ಹೋಗಿ ಹಿಂದಿರುಗುವಾಗ ಅವಘಡ ನಡೆದಿದೆ. ಸ್ಥಳಕ್ಕೆ ಶಾಂತಿಗ್ರಾಮ ಠಾಣೆ ಪೊಲೀಸರ ಭೇಟಿ ನೀಡಿ ಪರಿಶೀಲನೆ ಮಾಡಿದರು.
ತೆಲುಗು ಸೂಪರ್ ಸ್ಟಾರ್ ಪವನ್ ಕಲ್ಯಾಣ್ ವಿಚಾರವಾಗಿ ನಡೆದಿದ್ದ ಕಿರಿಕ್: ಹಲ್ಲೆ
ಬೆಂಗಳೂರು: ಮೇ 28ರಂದು ಅಮೃತಹಳ್ಳಿಯಲ್ಲಿ ಸ್ನೇಹಿತರ ಪಾರ್ಟಿ ವೇಳೆ ತೆಲುಗು ನಟ ಪವನ್ ಕಲ್ಯಾಣ್ ಬಗ್ಗೆ ಅಸಭ್ಯವಾಗಿ ಮಾತನಾಡಿದ್ದಕ್ಕೆ ರಂಗನಾಥ್ ಮೇಲೆ ಬಾಟಲಿಯಿಂದ ಮನೋಜ್ ಹಲ್ಲೆ ಮಾಡಿದ್ದಾನೆ. ಸದ್ಯ ಪ್ರಸಾದ್ನನ್ನು ಅಮೃತಹಳ್ಳಿ ಠಾಣೆ ಪೊಲೀಸರು ಬಂಧಿಸಿದ್ದಾರೆ. ತಲೆ ಮರೆಸಿಕೊಂಡಿರುವ ಮತ್ತಿಬ್ಬರು ಆರೋಪಿಗಳಿಗಾಗಿ ಪೊಲೀಸರ ಶೋಧ ನಡೆಸಿದ್ದಾರೆ.
ಇದನ್ನೂ ಓದಿ: Bangalore Crime: ಹ್ಯಾಂಡ್ಗನ್ ಮಾರಾಟಕ್ಕೆ ಯತ್ನಿಸಿದ ವ್ಯಕ್ತಿಯ ಬಂಧಿಸಿದ ಕಬ್ಬನ್ ಪಾರ್ಕ್ ಪೊಲೀಸರು
ಹೆಂಡ್ತಿಯನ್ನ ಕೊಂದು ತಾನೂ ಆತ್ಮಹತ್ಯೆಗೆ ಶರಣಾದ ಪತಿ
ಹಾವೇರಿ: ಪತ್ನಿಯನ್ನು ಬರ್ಬರವಾಗಿ ಕೊಂದು ಬಳಿಕ ಪತಿ ಸಹ ಆತ್ಮಹತ್ಯಗೆ ಶರಣಾಗಿರುವ ಘಟನೆ ಹಾವೇರಿ ತಾಲೂಕಿನ ಸಂಗೂರು ಗ್ರಾಮದಲ್ಲಿ ನಡೆದಿದೆ. ಪತ್ನಿ ದ್ರಾಕ್ಷಾಯಿಣಿಯನ್ನು ಕೊಲೆಗೈದು ಬಳಿಕ ಪತಿ ಪ್ರಭು ವಾರತಿ(52) ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಪತ್ನಿ ಶೀಲಶಂಕಿಸಿ ನಿತ್ಯ ಗಲಾಟೆ ಮಾಡುತ್ತಿದ್ದ ಪತಿ ಪ್ರಭು, ನಿನ್ನೆಯೂ (ಜೂನ್ 06) ಇದೇ ವಿಷಯಕ್ಕೆ ಪತ್ನಿ ಜೊತೆ ಗಲಾಟೆ ಮಾಡಿದ್ದ.
ಇದನ್ನೂ ಓದಿ: Chikkaballapur News: ಚಿಂತಾಮಣಿಯಲ್ಲಿ ಮುಸ್ಲಿಂ ಯುವಕರಿಂದ ನೈತಿಕ ಪೊಲೀಸ್ಗಿರಿ
ಈ ವೇಳೆ ಮಚ್ಚಿನಿಂದ ಹೆಂಡತಿಯನ್ನು ಕೊಚ್ಚಿ ಕೊಲೆ ಮಾಡಿದ್ದಾನೆ. ನಂತರ ತಾನು ಸಹ ಮನೆ ಮುಂದೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಶರಣಾಗಿದ್ದಾನೆ. ಸ್ಥಳಕ್ಕೆ ಹಾವೇರಿ ಎಸ್ಪಿ ಶಿವಕುಮಾರ್ ಗುಣಾರೆ ಭೇಟಿ, ಪರಿಶೀಲನೆ ನಡೆಸಿದ್ದು, ಈ ಬಗ್ಗೆ ಹಾವೇರಿ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಶೀಲಶಂಕಿಸಿ ಹೆಂಡತಿಯನ್ನು ಕೊಂದ ಪತಿ
ರಾಯಚೂರು: ಜಿಲ್ಲೆಯ ಸಿಂಧನೂರು ಪಟ್ಟಣದಲ್ಲಿ ಸಹ ಪತಿಯೊಬ್ಬ ಶೀಲಶಂಕಿಸಿ ಹೆಂಡತಿಯನ್ನು ಚಾಕುವಿನಿಂದ ಇರಿದು ಕೊಲೆ ಮಾಡಿರುವ ಘಟನೆ ನಡೆದಿದೆ. ನಿನ್ನೆ(ಜೂನ್ 06) ಶೀಲ ಶಂಕಿಸಿ ಸಿದ್ದು ಪತ್ನಿ ಜೊತೆ ಗಲಾಟೆ ಮಾಡಿದ್ದ. ಗಲಾಟೆ ವೇಳೆ ಪತ್ನಿಯ ಕುತ್ತಿಗೆಗೆ ಚಾಕುವಿನಿಂದ ಇರಿದಿದ್ದಾನೆ. ಪರಿಣಾಮ ತೀವ್ರ ರಕ್ತಸ್ರಾವದಿಂದ ಶಿಲ್ಪಾ ಸ್ಥಳದಲ್ಲೇ ಮೃತಪಟ್ಟಿದ್ದಾಳೆ. ಈ ಬಗ್ಗೆ ಸಿಂಧನೂರು ಟೌನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪ್ರಕರಣ ಸಂಬಂಧ ಆರೋಪಿ ಸಿದ್ದುನನ್ನು ಪೊಲೀಸರು ಬಂಧಿಸಿದ್ದಾರೆ.
ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.
Published On - 9:36 pm, Wed, 7 June 23