Hassan News: ಕಲುಷಿತ ಆಹಾರ ಸೇವಿಸಿ 25 ವಿದ್ಯಾರ್ಥಿನಿಯರು ಅಸ್ವಸ್ಥ: ಜಿಲ್ಲಾಸ್ಪತ್ರೆಗೆ ಸ್ಥಳಾಂತರ

ಕಲುಷಿತ ಆಹಾರ ಸೇವಿಸಿ 25 ವಿದ್ಯಾರ್ಥಿನಿಯರು ಅಸ್ವಸ್ಥರಾದಂತಹ ಘಟನೆ ಆಲೂರಿನ ಕಿತ್ತೂರು ರಾಣಿ ಚೆನ್ನಮ್ಮ ವಸತಿ ಶಾಲೆಯಲ್ಲಿ ನಡೆದಿದೆ.

Hassan News: ಕಲುಷಿತ ಆಹಾರ ಸೇವಿಸಿ 25 ವಿದ್ಯಾರ್ಥಿನಿಯರು ಅಸ್ವಸ್ಥ: ಜಿಲ್ಲಾಸ್ಪತ್ರೆಗೆ ಸ್ಥಳಾಂತರ
ಕಲುಷಿತ ಆಹಾರ ಸೇವಿಸಿ ಅಸ್ವಸ್ಥಗೊಂಡ 25 ವಿದ್ಯಾರ್ಥಿನಿಯರು.
TV9kannada Web Team

| Edited By: ಗಂಗಾಧರ್​ ಬ. ಸಾಬೋಜಿ

Jul 25, 2022 | 9:11 AM


ಹಾಸನ: ಕಲುಷಿತ ಆಹಾರ (contaminated food) ಸೇವಿಸಿ 25 ವಿದ್ಯಾರ್ಥಿನಿಯರು ಅಸ್ವಸ್ಥರಾದಂತಹ ಘಟನೆ ಆಲೂರಿನ ಕಿತ್ತೂರು ರಾಣಿ ಚೆನ್ನಮ್ಮ ವಸತಿ ಶಾಲೆಯಲ್ಲಿ ನಡೆದಿದೆ. ಜಿಲ್ಲೆಯ ಆಲೂರಿನ ಕಿತ್ತೂರು ರಾಣಿ ಚೆನ್ನಮ್ಮ ವಸತಿ ಶಾಲೆಯಲ್ಲಿ ನಿನ್ನೆ ರಾತ್ರಿ ಊಟ ಸೇವಿಸಿದ ಮಕ್ಕಳಲ್ಲಿ ವಾಂತಿ, ಬೇಧಿ ಹಿನ್ನೆಲೆ ಆಲೂರಿನ ಸರ್ಕಾರಿ ಆಸ್ಪತ್ರೆಯಲ್ಲಿ ವಿದ್ಯಾರ್ಥಿನಿಯರಿಗೆ ಚಿಕಿತ್ಸೆ ನೀಡಿಲಾಗಿದ್ದು, ಚಿಕಿತ್ಸೆ ನಂತರ ಹಾಸನ ಜಿಲ್ಲಾಸ್ಪತ್ರೆಗೆ ಮಕ್ಕಳನ್ನು ಸ್ಥಳಾಂತರ ಮಾಡಲಾಯಿತು. ಹಾಸನ ಎಸ್​ಪಿ ಹರಿರಾಂ ಶಂಕರ್ ಮಕ್ಕಳ ಆರೋಗ್ಯ ವಿಚಾರಿಸಿದರು.

ಇದನ್ನೂ ಓದಿ: ಉತ್ತರ ಪ್ರದೇಶದ ಪೂರ್ವಾಂಚಲ್ ಎಕ್ಸ್​ಪ್ರೆಸ್​ವೇಯಲ್ಲಿ ಭೀಕರ ಅಪಘಾತ; ಬಸ್​ಗಳು ಡಿಕ್ಕಿ ಹೊಡೆದು 8 ಜನ ಸಾವು

ಬಿಸಿಯೂಟ ಸೇವಿಸಿದ್ದ 40ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಸ್ವಸ್ಥ, ನಾಲ್ವರು ಗಂಭೀರ

ಚಿತ್ರದುರ್ಗ: ಬಿಸಿಯೂಟ (Bisi Uta) ಸೇವಿಸಿದ 40ಕ್ಕೂ ಹೆಚ್ಚು ವಿದ್ಯಾರ್ಥಿಗಳು (ಜುಲೈ 21ರಂದು) ಅಸ್ವಸ್ಥಗೊಂಡಿದ್ದರು. ನಾಲ್ವರು ವಿದ್ಯಾರ್ಥಿಗಳ ಸ್ಥಿತಿ ಗಂಭೀರವಾಗಿತ್ತು. ಚಿತ್ರದುರ್ಗ ತಾಲೂಕಿನ (Chitradurga taluk) ಇಸಾಮುದ್ರ ಗೊಲ್ಲರಹಟ್ಟಿಯ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಈ ಘಟನೆ ನಡೆದಿದೆ. ಅಸ್ವಸ್ಥರಿಗೆ ಭರಮಸಾಗರದ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ನಾಲ್ವರು ವಿದ್ಯಾರ್ಥಿಗಳ ಸ್ಥಿತಿ ಗಂಭೀರವಾಗಿದ್ದು ಅವರನ್ನು ದಾವಣಗೆರೆ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಭರಮಸಾಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿತ್ತು.

ಇದನ್ನೂ ಓದಿ: Droupadi Murmu Swearing-in LIVE: ಪ್ರಮಾಣ ವಚನ ಸ್ವೀಕಾರಕ್ಕೂ ಮುನ್ನ ರಾಜ್​ಘಾಟ್​ಗೆ ಭೇಟಿ ನೀಡಿದ ದ್ರೌಪದಿ ಮುರ್ಮು

ಬಸ್​ ಬಾರದ ಹಿನ್ನೆಲೆ ವಿದ್ಯಾರ್ಥಿಗಳು ಪ್ರತಿಭಟನೆ

ಕೊಪ್ಪಳ: ಸಮಯಕ್ಕೆ ಸರಿಯಾಗಿ‌ ಬಸ್​ ಬಾರದ ಹಿನ್ನೆಲೆ ವಿದ್ಯಾರ್ಥಿಗಳು (students) ಪ್ರತಿಭಟನೆ ಮಾಡಿದ್ದು, ರಸ್ತೆಯಲ್ಲೇ ಓದಲು ಕುಳಿತು ರಸ್ತೆ ತಡೆ ಹಿಡಿದಿರುವಂತಹ ಘಟನೆ ಜಿಲ್ಲೆಯ ಕುಷ್ಟಗಿ ತಾಲೂಕು ಬಾದಿಮನಾಳ ಕ್ರಾಸ್ ಬಳಿ ನಡೆದಿದೆ. ಪ್ರತಿದಿನ 3 ಕಿ.ಮೀ. ನಡೆದು  ವಿದ್ಯಾರ್ಥಿಗಳು ಶಾಲೆಗೆ ಹೋಗುತ್ತಿರುವ ಪರಿಸ್ಥತಿ ನಿರ್ಮಾಣವಾಗಿದ್ದು, ಸಮಯಕ್ಕೆ ಸರಿಯಾಗಿ ಬಸ್​ ಕೂಡ ಬರುವುದಿಲ್ಲ ಎಂದು ಆರೋಪಿಸಿದರು. ಕುಷ್ಟಗಿ ತಾಲೂಕು ಕೋನಾಪೂರ ಗ್ರಾಮದ ವಿದ್ಯಾರ್ಥಿಗಳಿಂದ ಏಕಾಏಕಿ ಬಸ್ ತಡೆದು ಪ್ರತಿಭಟನೆ ಮಾಡಲಾಗಿದೆ.

ತಾಜಾ ಸುದ್ದಿ

Follow us on

Related Stories

Most Read Stories

Click on your DTH Provider to Add TV9 Kannada