AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಾಸನದಲ್ಲಿ ರಿಯಲ್ ಎಸ್ಟೇಟ್ ದಂಧೆಗೆ ಬಡವರು ಬಲಿಪಶು

ಹಾಸನ ತಾಲೂಕಿನ ಕೊಂತಗೌಡನನಹಳ್ಳಿ ಗ್ರಾಮ ಬಳಿಯ ರಾಷ್ಟ್ರೀಯ ಹೆದ್ದಾರಿ 373ಕ್ಕೆ ‌ಹೊಂದಿಕೊಂಡಿರುವ ಸರ್ವೆ ನಂ 2ರಲ್ಲಿ 4.31 ಎಕರೆ ಭೂಮಿಯನ್ನು ಅಕ್ರಮವಾಗಿ ಕಬಳಿಕೆ ಮಾಡಿಕೊಂಡಿರುವ ಆರೋಪ ಕೇಳಿಬಂದಿದೆ. ಕ್ರಮ ಕೈಗೊಳ್ಳುವಂತೆ ಗ್ರಾಮಸ್ಥರು ಒತ್ತಾಯಿಸಿದ್ದಾರೆ.

ಹಾಸನದಲ್ಲಿ ರಿಯಲ್ ಎಸ್ಟೇಟ್ ದಂಧೆಗೆ ಬಡವರು ಬಲಿಪಶು
ಕಬಳಿಸಿಕೊಂಡಿರುವ ಭೂಮಿ
ಮಂಜುನಾಥ ಕೆಬಿ
| Edited By: |

Updated on: Feb 21, 2024 | 9:28 AM

Share

ಹಾಸನ, ಫೆಬ್ರವರಿ 21: ಮೃತಪಟ್ಟ ವ್ಯಕ್ತಿಯ ಹೆಸರಿನಲ್ಲಿದ್ದ ಕೋಟ್ಯಂತರ ರೂಪಾಯಿ ಬೆಲೆ ಬಾಳುವ ಜಮೀನನ್ನು (Land) ಕಬಳಿಸಿ ಲೇಔಟ್ ನಿರ್ಮಾಣ ಮಾಡಿರುವ ಆರೋಪ ಕೇಳಿಬಂದಿದೆ. 1970 ಕ್ಕೂ ಹಿಂದೆ ಸಿದ್ದಯ್ಯ ಎಂಬುವರಿಗೆ ಕುಳುವಾಡಿಕೆ ಹಿನ್ನೆಲೆಯಲ್ಲಿ ಹಾಸನ (Hassan) ತಾಲೂಕಿನ ಕೊಂತಗೌಡನನಹಳ್ಳಿ ಗ್ರಾಮ ಬಳಿಯ ರಾಷ್ಟ್ರೀಯ ಹೆದ್ದಾರಿ 373ಕ್ಕೆ ‌ಹೊಂದಿಕೊಂಡಿರುವ ಸರ್ವೆ ನಂ 2ರಲ್ಲಿ 4.31 ಎಕರೆ ಭೂಮಿ ಮಂಜೂರಾಗಿತ್ತು. ಅವಿವಾಹಿತ ಸಿದ್ದಯ್ಯ ಹಾಗು ಆತನ ಸಹೋದರ ತಿಮ್ಮಯ್ಯ ಮರಣ ನಂತರ, 2015 ರಲ್ಲಿ ಸಿದ್ದಯ್ಯ ಎಂಬ ಬೇರೋಬ್ಬರ ಹೆಸರಿಗೆ ಖಾತೆ ಬದಲಯಿಸಲಾಗಿದೆ. ಅಲ್ಲದೆ ಸಿದ್ದಯ್ಯ ಹಾಗೂ ಆತನ ಇನ್ನೊಬ್ಬ ಸಹೋದರನ‌ ಇಬ್ಬರು ಮಕ್ಕಳ‌ ಹೆಸರಿನಲ್ಲಿ ನಕಲಿ ‌ದಾಖಲೆ‌ (Fake Documents) ಸೃಷ್ಟಿಸಲಾಗಿದೆ.

ಅಧಿಕಾರಿಗಳು ಹಾಗೂ ಭೂ ಮಾಫಿಯಾ ದಂಧೆಕೋರರು ಜಂಟಿಯಾಗಿ ಭೂ ದಂಧೆ ನಡೆಸಿದ್ದಾರೆ ಎಂಬ ಗಂಭೀರ ಆರೋಪ ಕೇಳಿಬಂದಿದೆ. ಈ ಭೂಮಿಯನ್ನು 2017ರಲ್ಲಿ ಕೆ.ಆರ್. ಲಕ್ಷ್ಮಿಕಾಂತ್ ಎಂಬುವರು ಖರೀದಿಸಿದ್ದಾರೆ. ಲಕ್ಷ್ಮಿಕಾಂತ್ ಈಗಾಗಲೇ ಭೂ ಪರಿವರ್ತಿಸಿ ಸುಮಾರು 94 ಸೈಟ್ ನಿರ್ಮಿಸಿ ಮಾರಾಟ ಮಾಡಿದ್ದಾನೆ.

ಇದನ್ನೂ ಓದಿ: ಹೆಚ್​ಡಿ ಕೋಟೆ: ಭೂ ಕಬಳಿಕೆ ಆರೋಪ, ನಾಲ್ವರು ಅಧಿಕಾರಿಗಳು ಅಮಾನತು

ಅಕ್ರಮವಾಗಿ ಮಂಜೂರು ಮಾಡಿಸಿಕೊಂಡು ಕೊಟ್ಯಾಂತರ ರೂ. ಆದಯ ಮಾಡಿಕೊಂಡಿದ್ದಾನೆ.‌ ಲಕ್ಷ್ಮೀಕಾಂತ್‌ ಜೊತೆ ದೊಡ್ಡ ದೊಡ್ಡ ಅಧಿಕಾರಿಗಳು ಶಾಮೀಲಾಗಿರುವ ಶಂಕೆ ವ್ಯಕ್ತವಾಗಿದೆ. ಕೂಡಲೇ ಕ್ರಯವನ್ನು ರದ್ದುಗೊಳಿಸುವಂತೆ ಗ್ರಾಮಸ್ಥರ ಒತ್ತಾಯಿಸಿದ್ದು, ಭೂಮಿಯನ್ನು‌ ಗೋಮಾಳವಾಗಿ ಮಾರ್ಪಡಿಸಿ ಗ್ರಾಮಕ್ಕೆ ಅನುಕೂಲ ಮಾಡಿಕೊಡಬೇಕೆಂದು ಮನವಿ ಮಾಡಿದ್ದಾರೆ.

ರಾಜ್ಯದಲ್ಲೇ ಅತಿ ಹೆಚ್ಚು ಸರ್ಕಾರಿ ಭೂಮಿ ಕಬಳಿಕೆ ಚಿಕ್ಕಮಗಳೂರಿನಲ್ಲಿ

ದಕ್ಷಿಣ ಕರ್ನಾಟಕದ ಸರ್ಕಾರಿ ಭೂಮಿ ಒತ್ತುವರಿಯಲ್ಲಿ ಚಿಕ್ಕಮಗಳೂರು ಜಿಲ್ಲೆ ಅಗ್ರಸ್ಥಾನದಲ್ಲಿದೆ.ಜಿಲ್ಲೆಯಾದ್ಯಂತ ಎರಡು ಲಕ್ಷ ಎಕರೆಗೂ ಹೆಚ್ಚು ಸರ್ಕಾರಿ ಭೂಮಿ ಒತ್ತುವರಿಯಾಗಿದ್ದು, ಸಾರ್ವಜನಿಕ ಉದ್ದೇಶಕ್ಕೆ ಭೂಮಿ ಸಿಗುವುದು ಕಷ್ಟವಾಗಿದೆ ಎಂದು ಜಿಲ್ಲಾ ನೋಡಲ್ ಕಾರ್ಯದರ್ಶಿ ರಾಜೇಂದ್ರಕುಮಾರ್ ಕಟಾರಿಯಾ ಹೇಳಿದ್ದರು.ಕಟಾರಿಯಾ ಅವರು ಗುರುವಾರದಿಂದ ಜಿಲ್ಲೆಯಲ್ಲಿ ಮಳೆ ಪೀಡಿತ ಪ್ರದೇಶಗಳಿಗೆ ಎರಡು ದಿನಗಳ ಪ್ರವಾಸ ಕೈಗೊಂಡಿದ್ದರು. ನಂತರ ಅಧಿಕಾರಿಗಳ ಜತೆ ಸಭೆಯಲ್ಲಿ ಮಾತನಾಡಿ, ಗೋಮಾಳ ಜಮೀನು ಸೇರಿದಂತೆ ಹಲವು ಜಮೀನನ್ನು ಖಾಸಗಿ ವ್ಯಕ್ತಿಗಳು ಒತ್ತುವರಿ ಮಾಡಿಕೊಂಡಿದ್ದಾರೆ ಎಂದು ಹೇಳಿದ್ದರು.

ಕಂದಾಯ ಇಲಾಖೆ ಪ್ರಧಾನ ಕಾರ್ಯದರ್ಶಿಯೂ ಆಗಿರುವ ಕಟಾರಿಯಾ ಮಾತನಾಡಿ, ನಿಯಮಾವಳಿ ಉಲ್ಲಂಘಿಸಿ ಅಕ್ರಮವಾಗಿ ಭೂಮಿ ಮಂಜೂರು ಮಾಡಿರುವ 48 ಪ್ರಕರಣಗಳಿವೆ. ಒಂಬತ್ತು ತಹಶೀಲ್ದಾರ್‌ಗಳ ವಿರುದ್ಧ ಎಫ್‌ಐಆರ್‌ ದಾಖಲಿಸಲಾಗಿದೆ. ಅಧಿಕಾರಿಗಳು ತಪ್ಪಿತಸ್ಥರೆಂದು ಕಂಡುಬಂದರೆ ಅವರನ್ನು ಜೈಲಿಗೆ ಹಾಕಲಾಗುವುದು ಎಂದು ಎಚ್ಚರಿಕೆ ನೀಡಿದ್ದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್