ಹಾಸನ: ಸ್ವಲ್ಪ ದಿನಗಳಲ್ಲಿ ಸತ್ಯ ಹೊರ ಬರುತ್ತೆ- ದೇವರಾಜೇಗೌಡ

ಅತ್ಯಾಚಾರ ಆರೋಪ ಕೇಸ್​ನಲ್ಲಿ ವಕೀಲ ದೇವರಾಜೇಗೌಡ(Devaraje Gowda)ರನ್ನು ಚಿತ್ರದುರ್ಗದ ಹಿರಿಯೂರು ಬಳಿ ವಶಕ್ಕೆ ಪಡೆಯಲಾಗಿತ್ತು. ಬಳಿಕ ಮೇ 11ರಂದು 14 ದಿನ ನ್ಯಾಯಾಂಗ ಬಂಧನಕ್ಕೆ ನೀಡಿ ಹಾಸನ ಜಿಲ್ಲೆಯ ಹೊಳೆನರಸೀಪುರ ಜೆಎಂಎಫ್​ಸಿ ಕೋರ್ಟ್​ ಆದೇಶಿಸಿತ್ತು. ಈ ಘಟನೆಗೆ ಸಂಬಂಧಪಟ್ಟಂತೆ ಮಾತನಾಡಿದ ಅವರು, ‘ಸ್ವಲ್ಪ ದಿನಗಳಲ್ಲಿ ಸತ್ಯ ಹೊರ ಬರುತ್ತದೆ ಎಂದು ಹೊಸ ಬಾಂಬ್​ ಸಿಡಿಸಿದ್ದಾರೆ.

ಹಾಸನ: ಸ್ವಲ್ಪ ದಿನಗಳಲ್ಲಿ ಸತ್ಯ ಹೊರ ಬರುತ್ತೆ- ದೇವರಾಜೇಗೌಡ
ದೇವರಾಜೇಗೌಡ
Follow us
ಮಂಜುನಾಥ ಕೆಬಿ
| Updated By: ಕಿರಣ್ ಹನುಮಂತ್​ ಮಾದಾರ್

Updated on:May 17, 2024 | 2:52 PM

ಹಾಸನ, ಮೇ.17: ಅತ್ಯಾಚಾರ ಆರೋಪ ಕೇಸ್​ನಲ್ಲಿ ವಕೀಲ ದೇವರಾಜೇಗೌಡ(Devaraje Gowda) ಬಂಧನವಾಗಿದ್ದು, ಪೊಲೀಸ್ ಕಸ್ಟಡಿ ಮುಗಿಸಿ ಹಾಸನ(Hassan) ಜಿಲ್ಲಾ ಕಾರಾಗೃಹಕ್ಕೆ ದೇವರಾಜೇಗೌಡರನ್ನ ಹಸ್ತಾಂತರ ಮಾಡಲಾಯಿತು. ಈ ವೇಳೆ ಮಾತನಾಡಿದ ಅವರು, ‘ಸ್ವಲ್ಪ ದಿನಗಳಲ್ಲಿ ಸತ್ಯ ಹೊರ ಬರುತ್ತದೆ ಎಂದು ಹೊಸ ಬಾಂಬ್​ ಸಿಡಿಸಿದ್ದಾರೆ. ‘ನಾನು ಸತ್ಯ, ಧರ್ಮದ ಪರ ಹೋರಾಟ ಮಾಡುವ ನಾಯಕ. ಯಾವ ಷಡ್ಯಂತ್ರ ಇದ್ದರೂ ಏನು ಮಾಡಲು ಆಗಲ್ಲ. ಎಲ್ಲರೂ ಕಾನೂನಿನ ಮುಂದೆ ತಲೆಬಾಗಲೇಬೇಕು. ಕಾನೂನಿದೆ, ಸತ್ಯಕ್ಕೆ ಜಯವಿದೆ ತಲೆಕೆಡಿಸಿಕೊಳ್ಳಬೇಡಿ ಎಂದಿದ್ದಾರೆ.

ಘಟನೆ ವಿವರ

ಇನ್ನು ವಕೀಲ ದೇವರಾಜೇಗೌಡರನ್ನ ಚಿತ್ರದುರ್ಗದ ಹಿರಿಯೂರು ಬಳಿ ವಶಕ್ಕೆ ಪಡೆಯಲಾಗಿತ್ತು. ಬಳಿಕ ವಿಚಾರಣೆ ನಡೆಸಿ ಮೇ 11ರಂದು 14 ದಿನ ನ್ಯಾಯಾಂಗ ಬಂಧನಕ್ಕೆ ನೀಡಿ ಹಾಸನ ಜಿಲ್ಲೆಯ ಹೊಳೆನರಸೀಪುರ ಜೆಎಂಎಫ್​ಸಿ ಕೋರ್ಟ್​ ಆದೇಶಿಸಿತ್ತು. ನಂತರ ಪೊಲೀಸರು ಹೆಚ್ಚಿನ ವಿಚಾರಣೆಗಾಗಿ 4 ದಿನ ಕಸ್ಟಡಿಗೆ ಅನುಮತಿ ಪಡೆದಿದ್ದರು. ಸೋಮವಾರದಿಂದ ಪೊಲೀಸ್ ಕಸ್ಟಡಿಯಲ್ಲಿದ್ದ ಆರೋಪಿ ದೇವರಾಜೇಗೌಡರ ವಿಚಾರಣೆ ಮುಕ್ತಾಯ ಹಿನ್ನೆಲೆ ಇಂದು(ಮೇ.17) ಕೋರ್ಟ್‌ಗೆ ಹಾಜರುಪಡಿಸಲಾಗಿತ್ತು. ಇನ್ನು ಮೇ 24ರವರೆಗೂ JMFC ಕೋರ್ಟ್​​ ನ್ಯಾಯಾಂಗ ಬಂಧನಕ್ಕೆ ನೀಡಿದ್ದು, ಇಂದು ದೇವರಾಜೇಗೌಡ ಪರ ವಕೀಲರು ಜಾಮೀನಿಗೆ ಅರ್ಜಿ ಸಲ್ಲಿಸಲಿದ್ದಾರೆ.

ಇದನ್ನೂ ಓದಿ:ಹೆಚ್ಚಿನ ವಿಚಾರಣೆಗಾಗಿ ವಕೀಲ ದೇವರಾಜೇಗೌಡನನ್ನು ವಶಕ್ಕೆ ಪಡೆದ ಹೊಳೆನರಸೀಪುರ ಪೊಲಿಸರು

ಪ್ರಜ್ವಲ್​ ರೇವಣ್ಣ ಪ್ರಕರಣದ ನಡುವೆಯೇ ವಕೀಲ ದೇವರಾಜೇಗೌಡ ತನಗೆ ಲೈಂಗಿಕ ಕಿರುಕುಳ ನೀಡಿದ್ದಾರೆ ಎಂದು ಏಪ್ರಿಲ್ 1 ರಂದು ಸಂತ್ರಸ್ತೆ ಮಹಿಳೆಯೊಬ್ಬರು ಹೊಳೆನರಸೀಪುರ ನಗರ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಇದೇ ದೂರಿನ ಆಧಾರದ ಮೇಲೆ ಪೊಲೀಸರು ದೇವರಾಜೇಗೌಡರ ಬೆನ್ನು ಬಿದ್ದಿದ್ದರು. ಬಳಿಕ ದೇವರಾಜೇಗೌಡರ ಮೊಬೈಲ್​ ಟ್ರ್ಯಾಪ್​ ಮಾಡಿ ಪೊಲೀಸರು ಬಂಧಿಸಲು ಮುಂದಾಗಿದ್ದರು. ಆದರೆ ವಕೀಲ ದೇವರಾಜೇಗೌಡ ತಾವಾಗಿಯೇ ಪೊಲೀಸರಿಗೆ ಸಿಕ್ಕಿದ್ದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 2:46 pm, Fri, 17 May 24

ಕೇಂದ್ರದಲ್ಲಿ ಮಂತ್ರಿಯಾಗುವ ಮೊದಲು ಚೌಹಾನ್ ಮಧ್ಯ ಪ್ರದೇಶ ಸಿಎಂ ಅಗಿದ್ದರು
ಕೇಂದ್ರದಲ್ಲಿ ಮಂತ್ರಿಯಾಗುವ ಮೊದಲು ಚೌಹಾನ್ ಮಧ್ಯ ಪ್ರದೇಶ ಸಿಎಂ ಅಗಿದ್ದರು
ಜನಪ್ರತಿನಿಧಿಗಳಿಗೆ ಚುನಾವಣೆಯಲ್ಲಿಲ್ಲದ ಭದ್ರತೆ ಗೆದ್ದಮೇಲೆ ಯಾಕೆ ಬೇಕು?
ಜನಪ್ರತಿನಿಧಿಗಳಿಗೆ ಚುನಾವಣೆಯಲ್ಲಿಲ್ಲದ ಭದ್ರತೆ ಗೆದ್ದಮೇಲೆ ಯಾಕೆ ಬೇಕು?
ತಾರೆಯರ ಕಲರವ; ಹೇಗಿದೆ ನೋಡಿ ತಾರಾ-ಸುಧಾರಾಣಿ ಡ್ಯಾನ್ಸ್
ತಾರೆಯರ ಕಲರವ; ಹೇಗಿದೆ ನೋಡಿ ತಾರಾ-ಸುಧಾರಾಣಿ ಡ್ಯಾನ್ಸ್
‘ನಾನು ಕರ್ನಾಟಕದ ಹುಡುಗಿ’; ಪ್ರೀತಿಯಿಂದ ಕನ್ನಡದಲ್ಲೇ ಮಾತನಾಡಿದ ಶಿಲ್ಪಾ
‘ನಾನು ಕರ್ನಾಟಕದ ಹುಡುಗಿ’; ಪ್ರೀತಿಯಿಂದ ಕನ್ನಡದಲ್ಲೇ ಮಾತನಾಡಿದ ಶಿಲ್ಪಾ
ಅಜ್ಜನ ಜಾತ್ರೆ ಸಂಪನ್ನ: ಭಕ್ತರಲ್ಲಿ ಮೂರು ವಚನ ಕೇಳಿದ ಕೊಪ್ಪಳದ ಗವಿಶ್ರೀ
ಅಜ್ಜನ ಜಾತ್ರೆ ಸಂಪನ್ನ: ಭಕ್ತರಲ್ಲಿ ಮೂರು ವಚನ ಕೇಳಿದ ಕೊಪ್ಪಳದ ಗವಿಶ್ರೀ
ಚಿಟ್ಟಾಣಿ ಆಸೆ ಈಡೇರಿಸಲು ಯಕ್ಷಗಾನದಲ್ಲಿ ಅಭಿನಯಿಸಿದ ನಟಿ ಉಮಾಶ್ರೀ
ಚಿಟ್ಟಾಣಿ ಆಸೆ ಈಡೇರಿಸಲು ಯಕ್ಷಗಾನದಲ್ಲಿ ಅಭಿನಯಿಸಿದ ನಟಿ ಉಮಾಶ್ರೀ
Daily Devotional: ಮಾಘ ಸ್ನಾನದ ಹಿಂದಿನ ರಹಸ್ಯ ಹಾಗೂ ಮಹತ್ವ ತಿಳಿಯಿರಿ
Daily Devotional: ಮಾಘ ಸ್ನಾನದ ಹಿಂದಿನ ರಹಸ್ಯ ಹಾಗೂ ಮಹತ್ವ ತಿಳಿಯಿರಿ
Daily Horoscope: ಈ ರಾಶಿಯವರಿಗೆ ಇಂದು ಆರ್ಥಿಕವಾಗಿ ಲಾಭವಾಗಲಿದೆ
Daily Horoscope: ಈ ರಾಶಿಯವರಿಗೆ ಇಂದು ಆರ್ಥಿಕವಾಗಿ ಲಾಭವಾಗಲಿದೆ
ಪ್ರಿಯಕರನೊಂದಿಗೆ ಹೆಂಡತಿ ಹೋಗುತ್ತಿದ್ದ ಕಾರಿನ ಮೇಲೆ ಹತ್ತಿ ಕುಳಿತ ಗಂಡ!
ಪ್ರಿಯಕರನೊಂದಿಗೆ ಹೆಂಡತಿ ಹೋಗುತ್ತಿದ್ದ ಕಾರಿನ ಮೇಲೆ ಹತ್ತಿ ಕುಳಿತ ಗಂಡ!
ಅಯ್ಯೋ.. ಸಿಸಿಟಿವಿ ರಿಪೇರಿ ಮಾಡಲು ಬಂದಿದ್ದವನ ವಜ್ರದ ಉಂಗುರ ಬಿಡದ ಖದೀಮರು
ಅಯ್ಯೋ.. ಸಿಸಿಟಿವಿ ರಿಪೇರಿ ಮಾಡಲು ಬಂದಿದ್ದವನ ವಜ್ರದ ಉಂಗುರ ಬಿಡದ ಖದೀಮರು