ಹಾಸನ: ಜಿಲ್ಲೆಯ ಕೆಲವೆಡೆ ಭೂಮಿ ಕಂಪಿಸಿದ ಅನುಭವ; ಜನರಲ್ಲಿ ಹೆಚ್ಚಿದ ಆತಂಕ

Hassan: ಜನರು ನೀಡಿದ ಮಾಹಿತಿ ಮೇಲೆ‌ ಸ್ಥಳಕ್ಕೆ‌ ಹಳೆಬೀಡು ಪೊಲೀಸರು ಭೇಟಿ ನೀಡಿದ್ದಾರೆ. ಸಂಜೆ 6.10 ರ ಸುಮಾರಿಗೆ ಭೂಮಿ ಕಂಪಿಸಿದ ಅನುಭವ ಆಗಿದೆ. ಈ ಅನುಭವದಿಂದ ಜನರಲ್ಲಿ ಆತಂಕ ಹೆಚ್ಚಾಗಿದೆ.

ಹಾಸನ: ಜಿಲ್ಲೆಯ ಕೆಲವೆಡೆ ಭೂಮಿ ಕಂಪಿಸಿದ ಅನುಭವ; ಜನರಲ್ಲಿ ಹೆಚ್ಚಿದ ಆತಂಕ
ಸಾಂಕೇತಿಕ ಚಿತ್ರ
Follow us
TV9 Web
| Updated By: ganapathi bhat

Updated on:Sep 17, 2021 | 6:43 PM

ಹಾಸನ: ಜಿಲ್ಲೆಯಲ್ಲಿ ಭೂಮಿ ಕಂಪಿಸಿದ ಅನುಭವವಾಗಿದೆ. ಭೂಮಿ ಕಂಪನದಿಂದ ಜನರಲ್ಲಿ ಆತಂಕ ಹೆಚ್ಚಿದೆ. ಹಾಸನ ಜಿಲ್ಲೆ ಬೇಲೂರು ತಾಲ್ಲೂಕಿನ ಹಳೆಬೀಡು ಭಾಗದಲ್ಲಿ ಘಟನೆ ನಡೆದಿದೆ. ಹಳೆಬೀಡು ಸಮೀಪದ ದ್ಯಾವಪ್ಪನಹಳ್ಳಿ, ನಿಂಗಪ್ಪನಕೊಪ್ಪಲು ಸೇರಿ ಹಲವೆಡೆ ಕಂಪನ ಅನುಭವಕ್ಕೆ ಬಂದಿದೆ. ಭೂಮಿ ಕಂಪನದಿಂದ ಜನರು ಮನೆಯ ಹೊರಗೆ ಓಡಿ ಬಂದಿದ್ದಾರೆ. ಜನರು ನೀಡಿದ ಮಾಹಿತಿ ಮೇಲೆ‌ ಸ್ಥಳಕ್ಕೆ‌ ಹಳೆಬೀಡು ಪೊಲೀಸರು ಭೇಟಿ ನೀಡಿದ್ದಾರೆ. ಸಂಜೆ 6.10 ರ ಸುಮಾರಿಗೆ ಭೂಮಿ ಕಂಪಿಸಿದ ಅನುಭವ ಆಗಿದೆ. ಈ ಅನುಭವದಿಂದ ಜನರಲ್ಲಿ ಆತಂಕ ಹೆಚ್ಚಾಗಿದೆ.

ಇದಕ್ಕೂ ಮೊದಲು ರಾಜ್ಯದ ಕೆಲವು ಕಡೆಗಳಲ್ಲಿ ಭೂಮಿ ಕಂಪಿಸಿದ ಅನುಭವ ಉಂಟಾಗಿದೆ. ಭಾರೀ ಸದ್ದಿನೊಂದಿಗೆ ಗದಗ ಹಾಗೂ ವಿಜಯಪುರದ ಕೆಲವೆಡೆ ಭೂಮಿ ಕಂಪಿಸಿದ ಅನುಭವ ಆಗಿತ್ತು. ಭೂಮಿ ನಡುಗಿದ ಅನುಭವಕ್ಕೆ ಜನರು ಬೆಚ್ಚಿಬಿದ್ದಿದ್ದರು.

ವಿಜಯಪುರ ಜಿಲ್ಲೆಯಲ್ಲಿ ಸೆಪ್ಟೆಂಬರ್ 11 ರಂದು ಮತ್ತೆ ಭೂಕಂಪನದ ಅನುಭವವಾಗಿತ್ತು. ಅದರಿಂದ ಜನ ಆತಂಕಕ್ಕೆ ಒಳಗಾಗಿದ್ದರು. ಮುಂಜಾನೆ 8.18ರ ಸುಮಾರಿಗೆ ಭೂಮಿ ಕಂಪಿಸಿದ ಅನುಭವ ಆಗಿದೆ ಎಂದು ಊರಿನವರು ಹೇಳಿದ್ದರು. ಒಂದೇ ವಾರದಲ್ಲಿ ಎರಡು ಬಾರಿ ಈ ಅನುಭವ ಆಗಿರುವುದು ಸಹಜವಾಗಿ ಭಯಕ್ಕೆ ಕಾರಣವಾಗಿತ್ತು. ಸೆಪ್ಟೆಂಬರ್​ 4ನೇ ತಾರೀಖಿನಂದು ಜಿಲ್ಲೆಯ ವಿವಿಧ ಭಾಗಗಳಲ್ಲಿ ಭೂಕಂಪವಾಗಿತ್ತು. ಅಂದು ರಿಕ್ಟರ್ ಮಾಪನದಲ್ಲಿ 3.9ರಷ್ಟು ತೀವ್ರತೆ ದಾಖಲಾಗಿತ್ತು. ಬಳಿಕ ಸರಿಯಾಗಿ ಒಂದು ವಾರದ ಅಂತರದಲ್ಲಿ ಮತ್ತೆ ಭೂಮಿ ನಡುಗಿದ ಅನುಭವ ಆಗಿತ್ತು.

ಒಂದು ವಾರದ ಹಿಂದೆ ಭೂಕಂಪ ಆಗಿರುವ ಬಗ್ಗೆ ಹಾಗೂ ಅದರ ತೀವ್ರತೆ ಬಗ್ಗೆ ಜಿಲ್ಲಾಡಳಿತ ಹಾಗೂ ಗಣಿ ಮತ್ತು ಭೂವಿಜ್ಞಾನ ಇಲಾಖೆ ಅಧಿಕಾರಿಗಳು ಮಾಹಿತಿ ನೀಡಿದ್ದರು. ಇದೀಗ ಮತ್ತೆ ಹಾಸನದಲ್ಲಿ ಇಂತಹ ಅನುಭವ ಆಗಿದೆ. ಈ ಬಗ್ಗೆ ಹೆಚ್ಚಿನ ವಿವರಗಳು ಇನ್ನಷ್ಟೇ ಲಭಿಸಬೇಕಿದೆ.

ಇದನ್ನೂ ಓದಿ: ಗದಗ: ಭಾರಿ ಶಬ್ದದ ಜೊತೆಗೆ ಭೂಮಿ ನಡುಗಿದ ಅನುಭವ! ಬೆಚ್ಚಿಬಿದ್ದ ಗ್ರಾಮಸ್ಥರು

ಇದನ್ನೂ ಓದಿ: ವಿಜಯಪುರದಲ್ಲಿ ಮತ್ತೆ ನಡುಗಿದ ಭೂಮಿ; ಒಂದು ವಾರದಲ್ಲಿ ಎರಡನೇ ಬಾರಿಗೆ ಭೂಕಂಪನದ ಅನುಭವ

Published On - 6:38 pm, Fri, 17 September 21

ಯಾವ ದೋಷಕ್ಕೆ ನವಗ್ರಹವನ್ನು ಹೇಗೆ ಪ್ರದಕ್ಷಿಣೆ ಹಾಕಬೇಕು? ಇಲ್ಲಿದೆ ನೋಡಿ
ಯಾವ ದೋಷಕ್ಕೆ ನವಗ್ರಹವನ್ನು ಹೇಗೆ ಪ್ರದಕ್ಷಿಣೆ ಹಾಕಬೇಕು? ಇಲ್ಲಿದೆ ನೋಡಿ
ಈ ರಾಶಿಯವರಿಗಿಂದು 6 ಗ್ರಹಗಳ ಶುಭ ಫಲ! ಉಳಿದ ರಾಶಿಗಳ ಫಲಾಫಲವೇನು?
ಈ ರಾಶಿಯವರಿಗಿಂದು 6 ಗ್ರಹಗಳ ಶುಭ ಫಲ! ಉಳಿದ ರಾಶಿಗಳ ಫಲಾಫಲವೇನು?
ನವೆಂಬರ್ ಕೊನೆಯ ವಾರ ಹೇಗಿರಲಿದೆ ನಿಮ್ಮ ರಾಶಿ ಭವಿಷ್ಯ? ಇಲ್ಲಿದೆ ನೋಡಿ
ನವೆಂಬರ್ ಕೊನೆಯ ವಾರ ಹೇಗಿರಲಿದೆ ನಿಮ್ಮ ರಾಶಿ ಭವಿಷ್ಯ? ಇಲ್ಲಿದೆ ನೋಡಿ
ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ